ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Fact check: ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ ನಿಜವೇ?

|
Google Oneindia Kannada News

ಕೊಲಂಬೋ ಜುಲೈ 20; ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಕ್ಕೆ ಇಂದು ನೂತನ ಅಧ್ಯಕ್ಷರು ಆಯ್ಕೆಯಾಗಿದ್ದಾರೆ. ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ. ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತ ಪ್ರಭಾವ ಬೀರಿದೆ ಎಂದು ಆರೋಪಿಸಲಾಗಿದೆ. ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯ ಮೇಲೆ ಪ್ರಭಾವ ಬೀರಲು ಭಾರತದ ಪ್ರಯತ್ನಗಳ ವರದಿಗಳನ್ನು ಭಾರತ ಸರ್ಕಾರ ಬುಧವಾರ ನಿರಾಕರಿಸಿದೆ. ಭಾರತೀಯ ಹೈಕಮಿಷನ್ ಇದನ್ನು ಸಂಪೂರ್ಣವಾಗಿ "ಸುಳ್ಳು" ಮತ್ತು "ಆಧಾರರಹಿತ" ಎಂದು ಹೇಳಿದೆ.

ಈ ಸಂಬಂಧ ಬುಧವಾರ ಟ್ವೀಟ್ ಮಾಡಿರುವ ಭಾರತೀಯ ಹೈಕಮಿಷನ್, "ಚುನಾವಣೆಗೆ ಸಂಬಂಧಿಸಿದಂತೆ ಶ್ರೀಲಂಕಾದಲ್ಲಿನ ರಾಜಕೀಯ ನಾಯಕರ ಮೇಲೆ ಪ್ರಭಾವ ಬೀರಲು ಭಾರತದ ಕಡೆಯಿಂದ ರಾಜಕೀಯ ಮಟ್ಟದಲ್ಲಿ ಪ್ರಯತ್ನಗಳು ನಡೆದಿವೆ ಎನ್ನುವ ಆಧಾರರಹಿತ ಹೇಳಿಕೆಯಾಗಿದೆ. ಶ್ರೀಲಂಕಾ ಅಧ್ಯಕ್ಷರ ಬಗ್ಗೆ ನಾವು ಸಂಪೂರ್ಣವಾಗಿ ಊಹಾತ್ಮಕ ಮಾಧ್ಯಮ ವರದಿಗಳನ್ನು ನೋಡಿದ್ದೇವೆ. ಈ ಮಾಧ್ಯಮ ವರದಿಗಳು ಸಂಪೂರ್ಣವಾಗಿ ಸುಳ್ಳು ಎಂದು ನಾವು ಸ್ಪಷ್ಟವಾಗಿ ಹೇಳುತ್ತೇವೆ'' ಎಂದಿದೆ.

ಈ ಮಾಧ್ಯಮ ವರದಿ ಸಂಪೂರ್ಣ ಸುಳ್ಳು ಎಂದು ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ. ಇದು ಸ್ಪಷ್ಟವಾಗಿ ಯಾರೊಬ್ಬರ ಕಲ್ಪನೆಯಾಗಿದೆ. ಪ್ರಜಾಸತ್ತಾತ್ಮಕ ವಿಧಾನಗಳು ಮತ್ತು ಮೌಲ್ಯಗಳು, ಸ್ಥಾಪಿತ ಸಂಸ್ಥೆಗಳು ಮತ್ತು ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿ ಭಾರತವು ಶ್ರೀಲಂಕಾದ ಜನರ ಆಕಾಂಕ್ಷೆಗಳನ್ನು ಬೆಂಬಲಿಸುತ್ತದೆ ಮತ್ತು ಇತರ ಯಾವುದೇ ದೇಶದ ಆಂತರಿಕ ವ್ಯವಹಾರಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನಾವು ಹೇಳಲು ಬಯಸುತ್ತೇವೆ.

Fact check: Indian interference in Sri Lankas presidential election?

ಮತ್ತೊಂದೆಡೆ, ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಆಯ್ಕೆಯ ನಂತರ ರಾಜಧಾನಿ ಕೊಲಂಬೊದಲ್ಲಿ ಮತ್ತೆ ಪ್ರತಿಭಟನೆಗಳು ನಡೆಯುತ್ತಿವೆ. ಈ ಪ್ರತಿಭಟನಾಕಾರರು ರನಿಲ್ ವಿಕ್ರಮಸಿಂಘೆ ಅವರನ್ನು ವಿರೋಧಿಸುತ್ತಿದ್ದಾರೆ. ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ರನಿಲ್ ವಿಕ್ರಮಸಿಂಘೆ, ಡಳಸ್ ಅಳುಗಪೆರುಮ ಮತ್ತು ಎಡಪಂಥೀಯ ಜನತಾ ವಿಮುಕ್ತಿ ಪೆರಮುನ (ಜೆವಿಪಿ) ನಾಯಕ ಅನುರ ಕುಮಾರ ಡಿಸ್ಸನಾಯಕೆ ನಡುವೆ ಪೈಪೋಟಿ ಏರ್ಪಟ್ಟಿತ್ತು.

ಇವರಲ್ಲಿ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ. ಸಂಸತ್ತಿನ ಮತದಾನದಲ್ಲಿ ಅವರು 134 ಮತಗಳನ್ನು ಪಡೆದರು. ಚುನಾವಣೆಯಲ್ಲಿ ಡಳಸ್ ಅಳುಗಪೆರುಮ ಅವರು 82 ಮತಗಳನ್ನು ಪಡೆದರು. 223 ಸದಸ್ಯ ಬಲದ ಸಂಸತ್ತಿನಲ್ಲಿ 4 ಮತಗಳು ರದ್ದಾಗಿದ್ದರೆ 2 ಸಂಸದರು ಮತ ಚಲಾಯಿಸಲಿಲ್ಲ. ಶ್ರೀಲಂಕಾದಲ್ಲಿ 1978 ರಿಂದ ಮೊದಲ ಬಾರಿಗೆ, ಸಂಸದರಿಂದ ರಹಸ್ಯ ಮತದಾನದ ಮೂಲಕ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.

Fact Check

ಕ್ಲೇಮು

ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪವಿದೆ.

ಪರಿಸಮಾಪ್ತಿ

ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪವಿಲ್ಲ ಎಂದು ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ.

Rating

False
ಗಾಗಿ ನಿಮ್ಮ ಮನವಿಯನ್ನು ಕಳಿಸಲು [email protected] ಗೆ ಇಮೇಲ್ ಮಾಡಿ
English summary
Sri Lanka Economic Crisis: Alleged Indian Influence in Sri Lankan Presidential Elections. What is the truth behind this?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X