ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Fact check: ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪೊಲೀಸರಿಂದ ವ್ಯಕ್ತಿಗೆ ಥಳಿತ?

|
Google Oneindia Kannada News

ಬೆಳಗಾವಿಯಲ್ಲಿ ಪೊಲೀಸರೊಬ್ಬರು ವ್ಯಕ್ತಿಯೊಬ್ಬನಿಗೆ ಒದೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಈ ದೃಶ್ಯವನ್ನು ಸೆರೆಹಿಡಿಯಲಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಹರಿದಾಡುತ್ತಿದೆ. ವಿಡಿಯೋದ ಶೀರ್ಷಿಕೆಯಲ್ಲಿ ಪೊಲೀಸರು ದೌರ್ಜನ್ಯ ಮತ್ತು ಕಿರುಕುಳ ನೀಡಿದ್ದಾರೆ ಎಂಬ ಆರೋಪ ಮಾಡಿ ಹಂಚಿಕೊಳ್ಳಲಾಗುತ್ತಿದೆ.

ಬೆಳಗಾವಿ ನಗರದ ವಿಡಿಯೊ ಕ್ಲಿಪ್ ಅನ್ನು ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಇದು ಪೊಲೀಸ್ ಅಧಿಕಾರಿಯೊಬ್ಬರು ವ್ಯಕ್ತಿಯ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ತೋರಿಸುತ್ತದೆ. ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಜನರು ಈ ವಿಡಿಯೊವನ್ನು ನೋಡಿದ ಮೇಲೆ ಪೋಲೀಸರ ದೌರ್ಜನ್ಯವನ್ನು ಖಂಡಿಸಿದ್ದಾರೆ.

Fact check: Is it true that the police beat up a person in Chennamma Circle, Belagavi?

ಆದರೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ), ಪ್ರವೀಣ್ ಸೂದ್ ಅವರು ಇದರ 'ವಾಸ್ತವ ಪರಿಶೀಲನೆ' ವರದಿಯನ್ನು ಹಂಚಿಕೊಂಡಿದ್ದಾರೆ. ಇದು ಚಲನಚಿತ್ರ ಶೂಟಿಂಗ್‌ನಲ್ಲಿರುವ ವಿಡಿಯೊ ಎಂದು ಹೇಳಿದ್ದಾರೆ. ಬೆಳಗಾವಿ ನಗರದ ಚೆನ್ನಮ್ಮ ಸರ್ಕಲ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ವ್ಯಕ್ತಿಯನ್ನು ಒದೆಯುವ ವಿಡಿಯೊದ ಬಗ್ಗೆ ಕರ್ನಾಟಕ ರಾಜ್ಯ ಪೊಲೀಸ್ ವಾಸ್ತವಾಂಶ ಪರಿಶೀಲನೆ ಮಾಡಿದ್ದಾರೆ. ಪೋಸ್ಟ್‌ನಲ್ಲಿ ಪೊಲೀಸರು ಅಧಿಕೃತ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ.

Fact check: Is it true that the police beat up a person in Chennamma Circle, Belagavi?

"ಪೊಲೀಸ್ ಅಧಿಕಾರಿಯೊಬ್ಬರು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಈ ವಿಡಿಯೋ "ಹೊಯ್ಸಳ" ಚಿತ್ರದ್ದು. ಇದು ರಾಣಿ ಚೆನ್ನಮ್ಮ ವೃತ್ತದ ಬೆಳಗಾವಿಯಲ್ಲಿ ಚಿತ್ರೀಕರಣಗೊಂಡಿದೆ. ಚಿತ್ರದ ತುಣುಕನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸ್ ಇಲಾಖೆಯನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ. ವಿಡಿಯೋ ವಾಸ್ತವಿಕವಾಗಿಲ್ಲ. ಈ ವಿಡಿಯೋವನ್ನು ಶೇರ್ ಮಾಡದಂತೆ ಬೆಳಗಾವಿ ನಗರ ಪೊಲೀಸರು ಸಾರ್ವಜನಿಕರಲ್ಲಿ ವಿನಂತಿ, ಸ್ಪಷ್ಟಪಡಿಸಿದ್ದಾರೆ' ಎಂದು ಪ್ರವೀಣ್ ಸೂದ್ ಹೇಳಿದ್ದಾರೆ.

ಬೆಳಗಾವಿ ನಗರ ಪೊಲೀಸರ ಟ್ವೀಟ್ ಹೀಗಿದೆ- "ಇದು ಸಾರ್ವಜನಿಕರ ಗಮನಕ್ಕೆ. 'ಹೊಯ್ಸಳ' ಚಿತ್ರದ ಚಿತ್ರೀಕರಣದ ವಿಡಿಯೋವೊಂದು ಹರಿದಾಡುತ್ತಿದ್ದು, ಇದರಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ವ್ಯಕ್ತಿಯನ್ನು ನೆಲಕ್ಕೆ ತಳ್ಳಿ ಒದೆಯುತ್ತಿರುವ ದೃಶ್ಯವಿದೆ. ವಿಡಿಯೋ ಚಿತ್ರೀಕರಣದ್ದಾಗಿದ್ದರಿಂದ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊವನ್ನು ಹಂಚಿಕೊಳ್ಳಬೇಡಿ ಅಥವಾ ಪೋಸ್ಟ್ ಮಾಡಬೇಡಿ. ಪೊಲೀಸ್ ಇಲಾಖೆಯ ಬಗ್ಗೆ ತಪ್ಪು ಕಲ್ಪನೆಯನ್ನು ಮುಡಿಸಬೇಡಿ ಎಂದು ನಾವು ಸಾರ್ವಜನಿಕರಲ್ಲಿ ವಿನಂತಿಸುತ್ತೇವೆ'' ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಈ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Fact Check

ಕ್ಲೇಮು

ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪೊಲೀಸರಿಂದ ವ್ಯಕ್ತಿಗೆ ಥಳಿಸಿದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಪರಿಸಮಾಪ್ತಿ

ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪೊಲೀಸರು ವ್ಯಕ್ತಿಗೆ ಥಳಿಸಿದ ವಿಡಿಯೋ ಸಿನಿಮಾದ್ದಾಗಿದೆ.

Rating

False
ಗಾಗಿ ನಿಮ್ಮ ಮನವಿಯನ್ನು ಕಳಿಸಲು [email protected] ಗೆ ಇಮೇಲ್ ಮಾಡಿ
English summary
A video has been shared claiming that a person was beaten up by the police in Chennamma Circle, Belagavi. What is the truth behind this video?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X