ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Fact Check: ಕೋವಿಡ್ 19 ಕುರಿತು ಹೊಸ ಮಾರ್ಗಸೂಚಿ ಪ್ರಕಟಿಸಿತೇ ರಾಜ್ಯ ಸರ್ಕಾರ

|
Google Oneindia Kannada News

ಬೆಂಗಲೂರು, ಏಪ್ರಿಲ್ 20: ಕರ್ನಾಟಕ ಸರ್ಕಾರವು ಕೋವಿಡ್ 19 ಕುರಿತು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಮಾರ್ಗಸೂಚಿ ಏಪ್ರಿಲ್ 20 ರಿಂದ ಮೇ 3ರವರೆಗೆ ಅನ್ವಯವಾಗಲಿದೆ ಎಂದು ಹೇಳಲಾಗಿತ್ತು. ರಾಜ್ಯದಿಂದ ಬೇರೆ ರಾಜ್ಯಗಳಿಗೆ ತೆರಳುವುದಾದರೆ ಯಾವುದೇ ನಿರ್ಬಂಧಗಳಿಲ್ಲ, ಆದರೆ ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವುದಾದರೆ ಕಠಿಣ ನಿಯಮವನ್ನು ಮಾಲಿಸಬೇಕು ಎಂದು ಹೇಳಲಾಗಿತ್ತು.

ಇದೀಗ ಕರ್ನಾಟಕ ಆರೋಗ್ಯ ಇಲಾಖೆಯು ಈ ಕುರಿತು ಸ್ಪಷ್ಟನೆ ನೀಡಿದ್ದು, ರಾಜ್ಯ ಸರ್ಕಾರ ಹೊಸ ಕೋವಿಡ್ 19 ಮಾರ್ಗಸೂಚಿಯನ್ನು ಪ್ರಕಟಿಸಿಲ್ಲ ಇದು ನಕಲಿ ಆದೇಶ ಎಂದು ಹೇಳಿದೆ.

 Karnataka Govt Confirmed That No Circular Has Been Issued Regarding Covid 19 Guidelines

ರಾಜ್ಯದಲ್ಲಿ ನೈಟ್ ಕರ್ಫೂ ಅವಧಿ ವಿಸ್ತರಿಸಲಾಗಿದ್ದು, ನಾಳೆಯಿಂದ ಮೇ 3 ರವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂಬ ಆದೇಶ ನಕಲಿ ಎಂದು ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳಲ್ಲಿ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿ ಎಂಬ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ರವಿಕುಮಾರ್ ಅವರು, ರಾಜ್ಯ ಸರ್ಕಾರ ಅಧಿಕೃತವಾಗಿ ಯಾವುದೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿಲ್ಲ ಮತ್ತು 9 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿ ಎಂಬ ಆದೇಶ ನಕಲಿ ಎಂದು ಹೇಳಿದ್ದಾರೆ.

ನಾಳೆ ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಿಗದಿಯಾಗಿದ್ದು, ಸಭೆಯ ನಂತರ ಮುಖ್ಯಮಂತ್ರಿಗಳು ಅಧಿಕೃತವಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ರವಿಕುಮಾರ್ ತಿಳಿಸಿದ್ದಾರೆ.

ಯಾರೋ ಕಳೆದ ವರ್ಷದ ಮಾರ್ಗಸೂಚಿಸಿ ದಿನಾಂಕ ಬದಲಿಸಿ ಹರಿಬಿಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

Fact Check

ಕ್ಲೇಮು

ಕರ್ನಾಟಕ ಸರ್ಕಾರ ಕೋವಿಡ್ 19 ಕುರಿತು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ

ಪರಿಸಮಾಪ್ತಿ

ರಾಜ್ಯ ಸರ್ಕಾರ ಕೋವಿಡ್ 19 ಕುರಿತು ಯಾವುದೇ ಹೊಸ ಮಾರ್ಗಸೂಚಿ ಪ್ರಕಟಿಸಿಲ್ಲ, ಇದು ನಕಲಿ ಆದೇಶ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

Rating

False
ಗಾಗಿ ನಿಮ್ಮ ಮನವಿಯನ್ನು ಕಳಿಸಲು [email protected] ಗೆ ಇಮೇಲ್ ಮಾಡಿ
English summary
Fact Check: Government of Karnataka has confirmed that no circular has been issued regarding COVID19 guidelines and the article circulated is fake.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X