Fact check; ಕೇಂದ್ರ ಗ್ರಾಮೀಣಾಭಿವೃದ್ಧಿ ಕೆಲಸದ ಸುತ್ತೋಲೆ ನಕಲಿ
ನವದೆಹಲಿ, ಆಗಸ್ಟ್ 24 : ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 2 ಸಾವಿರ ಹುದ್ದೆಗಳ ನೇಮಕಾತಿ ಅರ್ಜಿ ಕರೆಯಲಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ನೇಮಕಾತಿ ಆದೇಶ ನಕಲಿ ಎಂದು ಕೇಂದ್ರ ಸರ್ಕಾರ ಹೇಳಿದೆ.
ಕೇಂದ್ರ ಸರ್ಕಾರದ fact check team ಈ ನೇಮಕಾತಿ ಆದೇಶ ನಕಲಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ನಂಬಬೇಡಿ ಎಂದು ಹೇಳಿದೆ. ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ನೇಮಕಾತಿ ಆದೇಶ ಹೇಳುತ್ತಿದೆ.

ನಕಲಿ ಅಧಿಸೂಚನೆ ಹರಿದಾಡುತ್ತಿದ್ದು, ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವವರು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು ಎಂದು ತಿಳಿಸಲಾಗಿದೆ. ಈಗ ಆ ನೇಮಕಾತಿ ಆದೇಶವೇ ನಕಲಿ ಎಂದು ಸರ್ಕಾರವೇ ಹೇಳಿದ್ದು, ಉದ್ಯೋಗಾಕಾಂಕ್ಷಿಗಳು ಅರ್ಜಿಗಳನ್ನು ಸಲ್ಲಿಸಬಾರದು ಎಂದು ಮನವಿ ಮಾಡಲಾಗಿದೆ.
दावा- ग्रामीण विकास मंत्रालय ने प्रधानमंत्री आवास योजना के तहत पंचायत और ज़िला परिषद के पदो के लिए आवेदन जारी किए हैं#PIBFactCheck: @MoRD_GOI द्वारा ऐसा कोई विज्ञापन जारी नहीं हुआ है। ये विज्ञापन फ़र्ज़ी है । pic.twitter.com/DqPLP9w35w
— PIB Fact Check (@PIBFactCheck) August 23, 2020
ಜಾಹೀರಾತು : ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಡಿ ಜಿಲ್ಲಾ ಮಟ್ಟದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿತ್ತು.

Fact Check
ಕ್ಲೇಮು
ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 2 ಸಾವಿರ ಹುದ್ದೆಗಳ ನೇಮಕಾತಿ ಅರ್ಜಿ
ಪರಿಸಮಾಪ್ತಿ
ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 2 ಸಾವಿರ ಹುದ್ದೆಗಳ ನೇಮಕಾತಿ ಅರ್ಜಿ ಕರೆಯಲಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ನೇಮಕಾತಿ ಆದೇಶ ನಕಲಿ ಎಂದು ಕೇಂದ್ರ ಸರ್ಕಾರ ಹೇಳಿದೆ.












Click it and Unblock the Notifications