Fact check: ವಿದ್ಯಾರ್ಥಿಗಳಿಗೆ ಮೋದಿ ಸರ್ಕಾರದಿಂದ ಉಚಿತ ಲ್ಯಾಪ್‌ಟಾಪ್?
ಹೊಸದಿಲ್ಲಿ ಏಪ್ರಿಲ್ 25: ಕೇಂದ್ರದ ನರೇಂದ್ರ ಮೋದಿ ಸರಕಾರವು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿತರಿಸುತ್ತಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳು ಮತ್ತು ವಾಟ್ಸಾಪ್‌ಗಳಲ್ಲಿ ವೈರಲ್ ಆಗುತ್ತಿದೆ. ಈ ಸಂದೇಶದೊಂದಿಗೆ ವೆಬ್‌ಸೈಟ್ ಲಿಂಕ್ ಅನ್ನು ಸಹ ನೀಡಲಾಗಿದೆ. ಈ ಸಂದೇಶದೊಂದಿಗೆ ಫಾರ್ಮ್ ಅನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳನ್ನು ಕೇಳಲಾಗುತ್ತಿದೆ. ಆದರೆ ಈ ಸಂದೇಶದಲ್ಲಿ ಯಾವುದೇ ಸತ್ಯವಿಲ್ಲ ಎಂಬುದು ತಿಳಿದುಬಂದಿದೆ. ಅಂತಹ ಯಾವುದೇ ಯೋಜನೆ ತಮ್ಮ ಕಡೆಯಿಂದ ಬಹಿರಂಗಪಡೆಸಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಈ ವೈರಲ್ ಸಂದೇಶಕ್ಕೆ ಸಂಬಂಧಿಸಿದಂತೆ ಪಿಐಬಿ ಫ್ಯಾಕ್ಟ್ ಚೆಕ್‌ನ ಟ್ವಿಟರ್ ಹ್ಯಾಂಡಲ್‌ನ ಟ್ವೀಟ್‌ನಲ್ಲಿ ಸ್ಪಷ್ಟನೆ ನೀಡಲಾಗಿದೆ. ಭಾರತ ಸರ್ಕಾರವು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದೆ ಎಂಬ ಹೇಳಿಕೆಯೊಂದಿಗೆ ವೆಬ್‌ಸೈಟ್ ಲಿಂಕ್‌ನೊಂದಿಗೆ ಪಠ್ಯ ಸಂದೇಶವನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಈ ಪ್ರಸಾರವಾದ ಲಿಂಕ್ ಸಂಪೂರ್ಣವಾಗಿ ನಕಲಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ನಲ್ಲಿ ಹೇಳಲಾಗಿದೆ. ಸರ್ಕಾರ ಅಂತಹ ಯಾವುದೇ ಯೋಜನೆಯನ್ನು ನಡೆಸುತ್ತಿಲ್ಲ. ಅಂತಹ ಯಾವುದೇ ಸಂದೇಶವನ್ನು ನಂಬಬೇಡಿ ಎಮದು ಹೇಳಲಾಗಿದೆ.
A text message with a website link is circulating with a claim that the Government of India is offering free laptops for all students. #PIBFactCheck:
— PIB Fact Check (@PIBFactCheck) April 25, 2022
▶️The circulated link is #Fake.
▶️The government is not running any such scheme. pic.twitter.com/OkYDOY8ns5

ಉದ್ಯೋಗಗಳು ಮತ್ತು ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಅನೇಕ ರೀತಿಯ ತಪ್ಪು ಸಂದೇಶಗಳು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತವೆ. ಇದರಿಂದ ಅನೇಕ ಜನರು ವಂಚನೆಗೆ ಬಲಿಯಾಗುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರದ ಅಧಿಕೃತ ವೆಬ್‌ಸೈಟ್ ಮತ್ತು ಕಚೇರಿಯಿಂದ ಮಾಹಿತಿಯ ನಂತರವೇ ಅಂತಹ ಯಾವುದೇ ಯೋಜನೆಯ ಬಗ್ಗೆ ವಿಶ್ವಾಸವಿಡಿ. ದೃಢೀಕರಣವನ್ನು ಪರಿಶೀಲಿಸದೆ ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡಬೇಡಿ ಅಥವಾ ಅದರಲ್ಲಿ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಬೇಡಿ ಎಂದು ತಿಳಿಸಲಾಗಿದೆ.

Fact Check
ಕ್ಲೇಮು
ವಿದ್ಯಾರ್ಥಿಗಳಿಗೆ ಮೋದಿ ಸರ್ಕಾರದಿಂದ ಉಚಿತ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದೆ ಎಂದು ಸಂದೇಶ ರವಾನೆ
ಪರಿಸಮಾಪ್ತಿ
ಮೋದಿ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವ ಯೋಜನೆ ಇಲ್ಲ ಎಂದು ಪಿಐಬಿ ಸ್ಪಷ್ಟನೆ ನೀಡಿದೆ.











Click it and Unblock the Notifications