Fact Check: 5ಜಿ ಮೊಬೈಲ್ ಟವರ್‌ನಿಂದ ಕೊರೊನಾ 2ನೇ ಅಲೆ ಹೆಚ್ಚಳ
5ಜಿ ಮೊಬೈಲ್ ಟವರ್ ಗಳ ಪರೀಕ್ಷೆಯಿಂದಾಗಿ ಕೊರೊನಾ ಸೋಂಕಿನ ಎರಡನೇ ಅಲೆ ಹೆಚ್ಚಾಗುತ್ತಿದೆ ಎಂಬ ಕುರಿತು ಹಲವು ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಬಗೆಯ ಸುಳ್ಳು ಮತ್ತು ದಿಕ್ಕು ತಪ್ಪಿಸುವ ಸಂದೇಶಗಳು ಹರಿದಾಡುತ್ತಿರುವುದು ಸಂವಹನ ಸಚಿವಾಲಯದ ದೂರಸಂಪರ್ಕ ಇಲಾಖೆ (ಡಿಒಟಿ) ಗಮನಕ್ಕೆ ಬಂದಿದೆ. ಈ ಸಂದೇಶಗಳು ಸುಳ್ಳು ಮತ್ತು ತಪ್ಪುಗಳಿಂದ ಕೂಡಿವೆ ಎಂದು ಇಲಾಖೆ ಸ್ಪಷ್ಟಪಡಿಸೆ.
ಕೋವಿಡ್-19 ಹರಡುವುದು ಮತ್ತು 5ಜಿ ತಂತ್ರಜ್ಞಾನದ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಸಾರ್ವಜನಿಕರಿಗೆ ಮಾಹಿತಿ ಒದಗಿಸಲಾಗುತ್ತಿದೆ. ಈ ರೀತಿಯ ತಪ್ಪು ಮಾಹಿತಿ ಮತ್ತು ವದಂತಿಗಳನ್ನು ಹರಡಿ ಜನರನ್ನು ದಾರಿತಪ್ಪಿಸಬಾರದು ಎಂದು ಇಲಾಖೆ ಮನವಿ ಮಾಡಿದೆ. 5ಜಿ ತಂತ್ರಜ್ಞಾನದ ಜೊತೆ ಕೋವಿಡ್-19 ಸಾಂಕ್ರಾಮಿಕಕ್ಕೆ ಸಂಬಂಧ ಕಲ್ಪಿಸಿರುವುದು ತಪ್ಪು ಮತ್ತು ಅದಕ್ಕೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ ಎಂದು ಇಲಾಖೆ ಪ್ರತಿಪಾದಿಸಿದೆ.
ಅಲ್ಲದೆ ಭಾರತದಲ್ಲಿ ಎಲ್ಲೂ 5ಜಿ ಜಾಲದ ಪರೀಕ್ಷೆ ಇನ್ನೂ ಆರಂಭವಾಗಿಯೇ ಇಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ. ಆದ್ದರಿಂದ 5ಜಿ ತಂತ್ರಜ್ಞಾನದ ಪರೀಕ್ಷೆ ಅಥವಾ ಸಂಪರ್ಕ ಜಾಲ ಭಾರತದಲ್ಲಿ ಕೊರೊನಾ ಸೋಂಕು ಹರಡಲು ಕಾರಣವಾಗುತ್ತಿದೆ ಎಂಬುದು ನಿರಾಧಾರ ಮತ್ತು ಸುಳ್ಳು ಎಂದು ಇಲಾಖೆ ಹೇಳಿದೆ.

ಜೀವಂತ ಕೋಶಗಳ ಮೇಲೆ ಯಾವುದೇ ರೀತಿಯ ಹಾನಿ ಇಲ್ಲ
ಮೊಬೈಲ್ ಟವರ್ ಗಳು ನಾನ್ ಅಯೊನೈಜಿಂಗ್ ರೇಡಿಯೋ ತರಂಗಾಂತರಗಳನ್ನು ಹೊರಹಾಕಲಿದ್ದು, ಅವು ಅತ್ಯಂತ ಕಡಿಮೆ ಶಕ್ತಿಯನ್ನು ಹೊಂದಿರುತ್ತವೆ ಮತ್ತು ಮನುಷ್ಯರು ಸೇರಿದಂತೆ ಜೀವಂತ ಕೋಶಗಳ ಮೇಲೆ ಯಾವುದೇ ರೀತಿಯ ಹಾನಿಯನ್ನು ಮಾಡುವ ಸಾಮರ್ಥ್ಯ ಅವುಗಳಿಗಿರುವುದಿಲ್ಲ. ದೂರಸಂಪರ್ಕ ಇಲಾಖೆ(ಡಿಒಟಿ) ರೇಡಿಯೋ ತರಂಗಾಂತರ ಕ್ಷೇತ್ರ(ಅಂದರೆ ಬೇಸ್ ಸ್ಟೇಷನ್ ಎಮಿಷನ್ಸ್)ಕ್ಕೆ ತೆರೆದುಕೊಳ್ಳಬಹುದಾದ ಮಿತಿಯನ್ನು ನಿಗದಿಪಡಿಸಿದೆ. ಅವು ಸುರಕ್ಷಿತ ಅಂತಾರಾಷ್ಟ್ರೀಯ ನಾನ್ ಅಯೊನೈಜಿಂಗ್ ರೇಡಿಯೇಷನ್ ಪ್ರೊಟೆಕ್ಷನ್ ಕಮಿಷನ್(ಐಸಿಎನ್ಐಆರ್ ಪಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆ ಶಿಫಾರಸ್ಸು ಮಾಡಿರುವ ಸುರಕ್ಷತಾ ಮಾನದಂಡಗಳಿಗಿಂತ ಹತ್ತು ಪಟ್ಟು ಕಠಿಣವಾಗಿವೆ.

ಡಿಒಟಿ ಈಗಾಗಲೇ ಕೈಗೊಂಡಿರುವ ಉಪಕ್ರಮಗಳು
ದೂರಸಂಪರ್ಕ ಇಲಾಖೆ, ಟಿಎಸ್ ಪಿಗಳು ಕಡ್ಡಾಯವಾಗಿ ನಿಗದಿತ ಮಾನದಂಡಗಳನ್ನು ಪಾಲನೆ ಮಾಡುವ ಪ್ರಕ್ರಿಯೆ ಕುರಿತು ಅತ್ಯಂತ ವ್ಯವಸ್ಥಿತವಾದ ಪ್ರಕ್ರಿಯೆಯನ್ನು ನಿಗದಿಪಡಿಸಿದೆ. ಆದರೆ ಯಾರಿಗಾದರೂ ಯಾವುದೇ ಮೊಬೈಲ್ ಟವರ್, ಇಲಾಖೆ ನಿಗದಿಪಡಿಸಿದ ಸುರಕ್ಷಿತ ಮಿತಿಗಿಂತ ಹೆಚ್ಚಿನ ರೇಡಿಯೋ ಕಿರಣಗಳನ್ನು ಹೊರಹಾಕುತ್ತಿದೆ ಎಂದೆನಿಸಿದರೆ ಅವರು ತರಂಗ ಸಂಚಾರ್ ಪೋರ್ಟಲ್ https://tarangsanchar.gov.in/emfportal ಮೂಲಕ ಇಎಂಎಫ್ ಪರೀಕ್ಷೆ ಮಾಡಿಸಲು ಮನವಿ ಮಾಡಬಹುದು.

ಇಎಂಎಫ್ ವಿಕಿರಣ ಕುರಿತು ಸಾರ್ವಜನಿಕರಲ್ಲಿ ಜಾಗೃತಿ
ಮೊಬೈಲ್ ಟವರ್‌ಗಳು ಹೊರಹಾಕುವ ಇಎಂಎಫ್ ಕಿರಣಗಳು ಆರೋಗ್ಯದ ಮೇಲೆ ಪರಿಣಾಮ ಬೀರಲಿವೆ ಎಂಬ ಕುರಿತು ಜನಸಾಮಾನ್ಯರಲ್ಲಿರುವ ಭಯವನ್ನು ಹೋಗಲಾಡಿಸಲು ದೂರಸಂಪರ್ಕ ಇಲಾಖೆ ಇಎಂಎಫ್ ವಿಕಿರಣ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ.

ವಿಸ್ತೃತ ಮಾಹಿತಿ ಪ್ರಕಟಣೆ ‘ತರಂಗ್ ಸಂಚಾರ್’ ಪೋರ್ಟಲ್
ರಾಷ್ಟ್ರವ್ಯಾಪಿ ಜಾಗೃತಿ ಕಾರ್ಯಕ್ರಮ, ಇಎಂಎಫ್ ಗೆ ಸಂಬಂಧಿಸಿದ ನಾನಾ ವಿಷಯಗಳ ಕುರಿತ ಕರಪತ್ರ/ಮಾಹಿತಿ ಕೈಪಿಡಿ ವಿತರಣೆ, ಡಿಒಟಿ ವೆಬ್ ಸೈಟ್ ನಲ್ಲಿ ಇಎಂಎಫ್ ಗೆ ಸಂಬಂಧಿಸಿದ ವಿಸ್ತೃತ ಮಾಹಿತಿ ಪ್ರಕಟಣೆ 'ತರಂಗ್ ಸಂಚಾರ್' ಪೋರ್ಟಲ್ ಆರಂಭ ಕುರಿತು ದಿನಪತ್ರಿಕೆಗಳಲ್ಲಿ ಜಾಹಿರಾತು ಮತ್ತಿತರ ಕ್ರಮಗಳು ಸೇರಿವೆ. ದೂರಸಂಪರ್ಕ ಇಲಾಖೆಯ ಕ್ಷೇತ್ರ ಘಟಕಗಳು, ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಹೆಚ್ಚು ಹೆಚ್ಚು ಜನರಿಗೆ ಮೊಬೈಲ್ ಟವರ್ ಗಳು ಹೊರಹಾಕುವ ಇಎಂಎಫ್ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಕುರಿತ ವೈಜ್ಞಾನಿಕ ವಾಸ್ತವಾಂಶಗಳ ಬಗ್ಗೆ ಅರಿವು ಮೂಡಿಸುತ್ತಿದೆ.

Fact Check
ಕ್ಲೇಮು
5ಜಿ ಮೊಬೈಲ್ ಟವರ್‌ನಿಂದ ಕೊರೊನಾ 2ನೇ ಅಲೆ ಹೆಚ್ಚಳವಾಗುತ್ತಿದೆ.
ಪರಿಸಮಾಪ್ತಿ
ಕೋವಿಡ್-19 ಹರಡುವುದು ಮತ್ತು 5ಜಿ ತಂತ್ರಜ್ಞಾನದ ನಡುವೆ ಯಾವುದೇ ಸಂಬಂಧವಿಲ್ಲ,ಟವರ್‌ಗಳು ಹೊರಹಾಕುವ ಇಎಂಎಫ್ ಕಿರಣಗಳು ಆರೋಗ್ಯದ ಮೇಲೆ ಪರಿಣಾಮ ಬೀರಲ್ಲ ಎಂದು ಸಂವಹನ ಸಚಿವಾಲಯದ ದೂರಸಂಪರ್ಕ ಇಲಾಖೆ (ಡಿಒಟಿ) ಸ್ಪಷ್ಟಪಡಿಸಿದೆ.
Rating
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications