ಜಗತ್ತಿನ 100 ಪ್ರಭಾವಶಾಲಿ ನಾಯಕರ ಪಟ್ಟಿಯಲ್ಲಿ ಮೋದಿ ಮತ್ತು ದೀದಿ!
ನವದೆಹಲಿ, ಸೆಪ್ಟೆಂಬರ್ 15: ಜಗತ್ತಿನ ಪ್ರಭಾವಿ ನಾಯಕರ ಪಟ್ಟಿಯನ್ನು ಟೈಮ್ಸ್ ನಿಯತಕಾಲಿಕೆ ಪ್ರಕಟಿಸಿದ್ದು, ಭಾರತದ ಮೂವರು ಪ್ರಮುಖ ಸ್ಖಾನದಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯಸ್ಥ ಅದರ್ ಪೂನಾವಾಲಾ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.
2021ನೇ ಸಾಲಿನಲ್ಲಿ ಜಗತ್ತಿನ ಅತಿಪ್ರಭಾವಿ ಎನಿಸಿರುವ 100 ವ್ಯಕ್ತಿಯಗಳ ಪಟ್ಟಿಯನ್ನು ಟೈಮ್ಸ್ ನಿಯತಕಾಲಿಕೆಯು ಪ್ರಕಟಿಸಿದೆ. ಒಟ್ಟು ಆರು ವಲಯಗಳಲ್ಲಿ ಪ್ರಖ್ಯಾತಿ ಪಡೆದಿರುವ ನಾಯಕರನ್ನು ಆಯ್ಕೆ ಮಾಡಲಾಗಿದೆ. ಚಿಹ್ನೆಗಳು, ಪ್ರವರ್ತಕರು, ಟೈಟಾನ್ಸ್, ಕಲಾವಿದರು, ನಾಯಕರು ಮತ್ತು ಆವಿಷ್ಕಾರಕರನ್ನು ವಿಂಗಡಿಸಲಾಗಿದೆ.
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ:
ಸಿಎನ್ಎನ್ ಪತ್ರಕರ್ತ ಫರೀದ್ ಜಕಾರಿಯಾ ಬರೆದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವ್ಯಕ್ತಿಚಿತ್ರದ ಪ್ರಕಾರ, ಸ್ವಾತಂತ್ರ್ಯದ ನಂತರ ಭಾರತದ ಮೂವರು ಪ್ರಮುಖ ನಾಯಕರು ಈ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದಾರೆ. ಮೊದಲಿಗೆ ಜವಾಹರಲಾಲ್ ನೆಹರು, ಎರಡು ಇಂದಿರಾ ಗಾಂಧಿ ಮತ್ತು ಮೂರನೇಯದಾಗಿ ನರೇಂದ್ರ ಮೋದಿ ಆಗಿದ್ದಾರೆ. ಈ ಮೂವರು ನಾಯಕರು ರಾಜಕೀಯ ವಲಯದಲ್ಲಿ ಅತ್ಯಂತ ಪ್ರಭಾವಶಾಲಿ ಎನಿಸಿದ್ದಾರೆ, ಎಂದು ಬರೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ:
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವ್ಯಕ್ತಿಚಿತ್ರದಲ್ಲಿ "ಭಾರತೀಯ ರಾಜಕೀಯದಲ್ಲಿ ಉಗ್ರತೆಯ ಮುಖ" ಎಂದು ಹೇಳಲಾಗುತ್ತಿದೆ. 66 ವರ್ಷದ ಮಮತಾ ಬ್ಯಾನರ್ಜಿಯವರಿಂದ ತೃಣಮೂಲ ಕಾಂಗ್ರೆಸ್ ಪಕ್ಷ ಬೆಳವಣಿಗೆಯಾಗಿದೆ ಎಂಬ ಅರ್ಥದಲ್ಲಿ ಉಲ್ಲೇಖಿಸಲಾಗಿದೆ.
ಎಸ್ಐಐ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಅದರ್ ಪೂನಾವಾಲಾ:
ಟೈಮ್ಸ್ ನಿಯತಕಾಲಿಕೆಯಲ್ಲಿ ಸೀರಂ ಇನ್ಸ್ ಟಿಟ್ಟೂಯ್ ಆಫ್ ಇಂಡಿಯಾದ ಮುಖ್ಯ ಕಾರ್ಯ ನಿರ್ವಾಹಕ ಅದರ್ ಪೂನಾವಾಲಾ ಹೆಸರನ್ನು ಉಲ್ಲೇಖಿಸಲಾಗಿದೆ. "ಸಾಂಕ್ರಾಮಿಕ ಪಿಡುಗು ಇಂದಿಗೂ ಅಂತ್ಯವಾಗಿಲ್ಲ, ಪೂನಾವಾಲಾ ಅದನ್ನು ಅಂತ್ಯಗೊಳಿಸುವುದಕ್ಕೆ ಸಹಾಯ ಮಾಡಲಿದ್ದಾರೆ. ಹೆಚ್ಚು ಅಪಾಯಕಾರಿ ರೂಪಾಂತರಗಳ ಅಪಾಯ ಒಳಗೊಂಡಂತೆ ಲಸಿಕೆ ಅಸಮಾನತೆಯು ತೀಕ್ಷ್ಣವಾಗಿದೆ. ಪ್ರಪಂಚದ ಒಂದು ಭಾಗದಲ್ಲಿ ವಿಳಂಬವಾದ ರೋಗನಿರೋಧಕತೆಯು ಜಾಗತಿಕ ಪರಿಣಾಮಗಳನ್ನು ಉಂಟುಮಾಡಬಹುದು." ಎಂದು ಹೇಳಲಾಗಿದೆ.
ಟೈಮ್ಸ್ ನಿಯತಕಾಲಿಕೆ ವಾರ್ಷಿಕ ಪಟ್ಟಿ-2021:
2021ನೇ ಸಾಲಿನಲ್ಲಿ ಜಾಗತಿಕ ಮಟ್ಟದ ಪ್ರಮುಖ ನಾಯಕರ ಪಟ್ಟಿಯನ್ನು ಟೈಮ್ಸ್ ನಿಯತಕಾಲಿಕೆ ಪ್ರಕಟಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆದರ್ ಪೂನವಲ್ಲಾ ಹೆಸರು ಪಟ್ಟಿಯಲ್ಲಿದೆ. ಭಾರತೀಯ ನಾಯಕರ ಹೊರತಾಗಿ ಪಟ್ಟಿಯಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡೆನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹೆಸರು ಉಲ್ಲೇಖಿಸಲಾಗಿದೆ.
ತಾಲಿಬಾನ್ ಸಹ-ಸಂಸ್ಥಾಪಕನ ಹೆಸರು ಉಲ್ಲೇಖ:
ಟೈಮ್ ನಿಯತಕಾಲಿಕೆಯ '2021 ರ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ' ಪಟ್ಟಿಯಲ್ಲಿ ತಾಲಿಬಾನ್ ಸಹ-ಸಂಸ್ಥಾಪಕ ಮುಲ್ಲಾ ಅಬ್ದುಲ್ ಘನಿ ಬರeದಾರ್ ಹೆಸರು ಕಾಣಿಸಿಕೊಂಡಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಅಫ್ಘಾನಿಸ್ತಾನದಲ್ಲಿ ಮಧ್ಯಕಾಲೀನ ತಾಲಿಬಾನ್ ಆಡಳಿತದ ಮುಖ್ಯಸ್ಥ ಮುಲ್ಲಾ ಅಖುಂದ್ ಅವರಿಗೆ ಬರದಾರ್ ಅವರನ್ನು ಉಪನಾಯಕ ಎಂದು ಹೆಸರಿಸಲಾಗಿದೆ. ಟೈಮ್ ನಿಯತಕಾಲಿಕೆಯ ವಾರ್ಷಿಕ ಪಟ್ಟಿಯಲ್ಲಿ ಇಸ್ರೇಲಿ ಪ್ರಧಾನಿ ನಫ್ತಾಲಿ ಬೆನೆಟ್, ರಷ್ಯಾದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಲ್ನಿ, ಅಮೇರಿಕನ್ ರಾಜಕಾರಣಿ ಲಿಜ್ ಚೆನಿ, ಟಿವಿ ನಿರೂಪಕ ಟಕರ್ ಕಾರ್ಲ್ಸನ್ ಮತ್ತು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಸೇರಿದ್ದಾರೆ.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications