ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೆದುಳು ತಿನ್ನುವ ‘ಹುಳು’ಗಳ ಆರ್ಭಟ, ನಿಗೂಢ ಕಾಯಿಲೆಗೆ ಬೆಚ್ಚಿದ ಅಮೆರಿಕ

|
Google Oneindia Kannada News

ಅಮೆರಿಕವನ್ನ ಒಂದಿಲ್ಲೊಂದು ಸಮಸ್ಯೆ ಬಿಟ್ಟೂಬಿಡದೆ ಕಾಡುತ್ತಿದೆ. ಅದರಲ್ಲೂ ಕೊರೊನಾ ಅಪ್ಪಳಿಸಿದ ಬಳಿಕ ಅಮೆರಿಕ ಅಕ್ಷರಶಃ ನಲುಗಿ ಹೋಗಿದೆ. ಆರ್ಥಿಕವಾಗಿ ಪ್ರಬಲ ರಾಷ್ಟ್ರವಾಗಿದ್ದ ಅಮೆರಿಕದ ಬುಡ ಅಲುಗಾಡಿದೆ. ಈ ಹೊತ್ತಲ್ಲೇ ಅಮೆರಿಕದಲ್ಲಿ ಹೊಸ ಹೊಸ ರೋಗಗಳು ಕಾಣಿಸುತ್ತಿವೆ. ಇದೀಗ ಮೆದುಳು ತಿನ್ನುವ ಅಮೀಬಾ ಕಾಟ ಅಮೆರಿಕನ್ನರ ಪಾಲಿಗೆ ಬರಸಿಡಿಲಿನಂತೆ ಅಪ್ಪಳಿಸಿದೆ.

'ನಾಗ್ಲೆರಿಯಾ ಫೌಲೆರಿ' ಅಥವಾ ಮೆದುಳು ತಿನ್ನುವ ಅಮೀಬಾ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಅಮೆರಿಕದ ಟೆಕ್ಸಾಸ್‌ನಲ್ಲಿ 3 ವರ್ಷದ ಮಗು ವಿಚಿತ್ರ ರೋಗಕ್ಕೆ ಬಲಿಯಾಗಿದೆ. ಟೆಕ್ಸಾಸ್‌ನ ಅರ್ಲಿಂಗ್ಟನ್ ನಿವಾಸಿ 3 ವರ್ಷದ ಮಗುವಿಗೆ ಮೆದುಳು ತಿನ್ನುವ ಅಮೀಬಾ ತಗುಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದ್ದು, ದುರಂತಕ್ಕೆ ಸ್ಥಳೀಯ ಆಡಳಿತ ಕಾರಣ ಎಂದು ಮಗುವಿನ ಪೋಷಕರು ಕೋರ್ಟ್ ಮೊರೆ ಹೋಗಿದ್ದಾರೆ.

ಮಗು ಸಾಯುವುದಕ್ಕೂ ಕೆಲ ದಿನದ ಹಿಂದೆ ನೀರಿನಲ್ಲಿ ಆಟವಾಡಿತ್ತು ಎನ್ನಲಾಗಿದೆ. ಈಗಾಗಲೇ ಮೆದುಳು ತಿನ್ನುವ ಅಮೀಬಾ ಹೆಚ್ಚಾಗಿ ಹಬ್ಬುತ್ತಾ ಸಾಗಿದ್ರೂ ಸ್ಥಳೀಯ ಆಡಳಿತ ಎಚ್ಚೆತ್ತು ನೀರಿನ ತಪಾಸಣೆ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಮಗುವಿನ ಸಾವಿಗೆ ಸ್ಥಳೀಯ ಆಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಮಗುವಿನ ಪೋಷಕರು ಕೇಸ್ ಹಾಕಿದ್ದಾರೆ.

3 Year Old Boy Died By Brain Eating Microbe In Texas State

ಮೆದುಳು ಸೇರಿದರೆ ಒಂದೇ ವಾರದಲ್ಲಿ ಸಾವು : ನಾಗ್ಲೆರಿಯಾ ಫೌಲೆರಿ ಅಥವಾ ಮೆದುಳು ತಿನ್ನುವ ಅಮೀಬಾ ಅದೆಷ್ಟು ಡೇಂಜರಸ್ ಎಂದರೆ, ಈ ಸೋಂಕಿಗೆ ಸರಿಯಾದ ಔಷಧಗಳೇ ಲಭ್ಯವಿಲ್ಲ. ಅಕಸ್ಮಾತ್ ನಾಗ್ಲೆರಿಯಾ ಫೌಲೆರಿ ಮನುಷ್ಯನ ಮೆದುಳು ಸೇರಿದಂತೆ, ಆ ಕ್ಷಣದಿಂದಲೇ ಮೆದುಳಿನ ಮೇಲೆ ದಾಳಿ ಮಾಡಿ ತಿನ್ನಲು ಆರಂಭಿಸುತ್ತದೆ. ಕೇವಲ ಒಂದು ವಾರದಲ್ಲಿ ಆತನ ಜೀವವನ್ನೇ ತೆಗೆದುಬಿಡುತ್ತದೆ. ಆದರೆ ಇದ್ಯಾವುದೂ ಸೋಂಕಿತನ ಗಮನಕ್ಕೆ ಬರುವುದೇ ಇಲ್ಲ. ಅಷ್ಟರಮಟ್ಟಿಗೆ ಖತರ್ನಾಕ್ ಈ ನಾಗ್ಲೆರಿಯಾ ಫೌಲೆರಿ ಸೂಕ್ಷ್ಮಾಣು ಜೀವಿಗಳು. ಹೀಗಾಗಿ ಮುನ್ನೆಚ್ಚರಿಕೆ ಅಗತ್ಯ ಎಂದು ತಜ್ಞ ವೈದ್ಯರು ಸಲಹೆ ನೀಡಿದ್ದಾರೆ.

ಜ್ವರ, ವಾಂತಿ, ತಲೆನೋವು ಕಾಡುವುದು: ನಾಗ್ಲೆರಿಯಾ ಫೌಲೆರಿ ಅಥವಾ ಮೆದುಳು ತಿನ್ನುವ ಅಮೀಬಾ ದೇಹ ಪ್ರವೇಶಿಸಿದರೆ ಮೆಲ್ಲಗೆ ತನ್ನ ಕಾರ್ಯ ಚಟುವಟಿಕೆ ಆರಂಭಿಸುತ್ತದೆ. ಹೀಗೆ ಸೂಕ್ಷ್ಮಾಣು ಜೀವಿ ತನ್ನ ಕೆಲಸ ಆರಂಭಿಸಿದ ಒಂದೆರಡು ದಿನಗಳಲ್ಲಿ ತೀವ್ರ ಜ್ವರ ಹಾಗೂ ತಲೆನೋವು ಕಾಡಲು ಆರಂಭವಾಗುತ್ತದೆ. ಹೀಗೆ ಆರಂಭವಾಗುವ ಸೋಂಕಿನ ಲಕ್ಷಣ, ಭಾರಿ ಪ್ರಮಾಣದಲ್ಲಿ ವಾಂತಿಯಾಗುವಂತೆ ಮಾಡುತ್ತದೆ. ಮನುಷ್ಯನ ರೋಗನಿರೋಧಕ ಶಕ್ತಿಯು ದಿನದಿಂದ ದಿನಕ್ಕೆ ಕುಸಿಯುತ್ತಾ ಸಾಗಿ, ಕಡೆಗೆ 1 ವಾರದ ಒಳಗಾಗಿ ಸೋಂಕಿತ ವ್ಯಕ್ತಿ ಮೃತಪಡುತ್ತಾನೆ. ಅಷ್ಟರೊಳಗೆ ಅಮಿಬಾ ವಂಶಕ್ಕೆ ಸೇರಿದ ಈ 'ನಾಗ್ಲೆರಿಯಾ ಫೌಲೆರಿ' ಸೂಕ್ಷ್ಮಾಣು ಜೀವಿ ಮೆದುಳನ್ನು ತಿಂದು ಮುಗಿಸಿರುತ್ತದೆ.

ಮೂಗಿನ ಒಳಗೆ ನೀರು ಸೇರಿಸಬೇಡಿ: ಈ ಸೂಕ್ಷ್ಮಾಣು ಜೀವಿ ಲೇಕ್ ಜಾನ್ಸನ್ ನಗರದಲ್ಲಿ ಕಂಡುಬಂದ ತಕ್ಷಣ ಅಧಿಕಾರಿಗಳು ಜನರಿಗೆ ನೀಡಿದ ಮೊದಲ ಎಚ್ಚರಿಕೆ, ಮೂಗಿನ ಒಳಗೆ ನೀರು ಸೇರಿಸಬೇಡಿ ಅಂತಾ. ಏಕೆಂದರೆ ಮೂಗಿನಲ್ಲಿ ನೀರು ಹೋದರೆ ಇಂತಹ ಮೈಕ್ರೋಬ್‌ಗಳು ಮೆದುಳು ಸೇರುವುದು ತುಂಬಾ ಸುಲಭ. ಹೀಗೆ ಮೆದುಳು ಸೇರುವ ಸೂಕ್ಷ್ಮಾಣು ಜೀವಿ ನಾಗ್ಲೆರಿಯಾ ಫೌಲೆರಿ ತಕ್ಷಣ ಮೆದುಳನ್ನ ತಿನ್ನಲು ಶುರುಮಾಡುತ್ತದೆ. ಕಡೆಗೆ ಸೋಂಕಿತ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೆ ಆತ ನರಳಿ ಪ್ರಾಣಬಿಡುತ್ತಾನೆ. ಹೀಗಾಗಿ ಮೂಗಿನ ಒಳಗೆ ನೀರು ಸೇರಿಸಬೇಡಿ ಎಂದು ಎಚ್ಚರಿಕೆ ನೀಡಲಾಗಿದೆ.

English summary
Allegedly a 3 year old boy died by Brain Eating Microbe in Texas state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X