ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸರ್ಕಾರಿ ನೌಕರರಿಗೆ DA ಪರಿಹಾರ ಜೊತೆಗೆ ಸಂಬಳ ಏರಿಕೆ?

By ಒನ್ಇಂಡಿಯಾ ಡೆಸ್ಕ್
|
Google Oneindia Kannada News

ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ನಂತರ ತುಟ್ಟಿಭತ್ಯೆ ಪರಿಹಾರ ಘೋಷಣೆ ಬಗ್ಗೆ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ. ಡಿಎ ಹೆಚ್ಚಳವಾದರೂ ನೇರವಾಗಿ ಸಂಬಳ ಏರಿಕೆ ಬಗ್ಗೆ ಸುಳಿವು ಸಿಕ್ಕಿರಲಿಲ್ಲ. ಆದರೆ, ಈಗ ಮಾಡಲು ಕೇಂದ್ರ ಸರ್ಕಾರ ಮುಂದಾಗಿರುವ ಶುಭ ಸುದ್ದಿ ಸಿಕ್ಕಿದೆ. ಈಗ ತುಟ್ಟಿಭತ್ಯೆ ಪರಿಹಾರ (DA arrear) ಬಾಕಿ ಎಂದಿಗೆ ಸಿಗಬಹುದು ಎಂಬ ನಿರೀಕ್ಷೆಗೆ ಉತ್ತರ ಸಿಕ್ಕಿದೆ. ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದು, ಡಿಆರ್ ಬಾಕಿ ಮೊತ್ತ ಪಾವತಿ ಬಗ್ಗೆ ಸುಳಿವು ನೀಡಿದ್ದು, ಹೊಸ ವರ್ಷದಲ್ಲಿ ಸರಿ ಸುಮಾರು 2 ಲಕ್ಷ ರು ನಷ್ಟು ಬಾಕಿಮೊತ್ತ ಸಿಗಲಿದೆ.

ಕೊರೊನಾವೈರಸ್ ಸಾಂಕ್ರಾಮಿಕದ ಕಾಲದಲ್ಲಿ ಕಳೆದ ಎರಡು ವರ್ಷಗಳಿಂದ ಡಿಎ ಹೆಚ್ಚಳ ಮಾಡಲಾಗಿರಲಿಲ್ಲ. ಕೋವಿಡ್ -19 ಸಾಂಕ್ರಾಮಿಕದಿಂದಾಗಿ ಉದ್ಭವಿಸಿದ ಅಸಾಧಾರಣ ಪರಿಸ್ಥಿತಿಯಿಂದಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಮೂರು ಹೆಚ್ಚುವರಿ ಕಂತುಗಳ ತುಟ್ಟಿ ಭತ್ಯೆ [ಡಿಎ] ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರವನ್ನು [ಡಿಆರ್] 01.01.2020, 01.07.2020 ಮತ್ತು 01.01.2021, ಸ್ಥಗಿತಗೊಳಿಸಲಾಗಿತ್ತು.

ಡಿಎ ಕೂಡಾ ಮತ್ತೊಮ್ಮೆ ಶೇ 3ರಷ್ಟು ಹೆಚ್ಚಳ

ಡಿಎ ಕೂಡಾ ಮತ್ತೊಮ್ಮೆ ಶೇ 3ರಷ್ಟು ಹೆಚ್ಚಳ

ಸದ್ಯದ ಲೆಕ್ಕಾಚಾರದಂತೆ ಜನವರಿ 1 (4%), ಜುಲೈ 1 2020(3%) ಹಾಗೂ ಜನವರಿ 1, 2021 (4%) ಗೆ ಮೂರು ಬಾರಿ ಏರಿಕೆಯಾಗಿ ಶೇ 25ಕ್ಕೇರಿದೆ. ಸೆಪ್ಟೆಂಬರ್ 1, 2021ಕ್ಕೆ ಪರಿಷ್ಕರಣೆಗೊಳ್ಳಲಿದೆ. ಆದರೆ, 18 ತಿಂಗಳ ಬಾಕಿ ಮೊತ್ತ ಸಿಗುವುದಿಲ್ಲ. ಕೇಂದ್ರ ಬೊಕ್ಕಸಕ್ಕೆ 12,150 ಕೋಟಿ ರು ಹೆಚ್ಚುವರಿ ಹೊರೆ ಬೀಳಲಿದೆ. ಡಿಎ ಹೆಚ್ಚಳದಿಂದಾಗಿ 48.34 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 65.26 ಲಕ್ಷ ಪಿಂಚಣಿದಾರರಿಗೆ ನೆರವು ಲಭಿಸಲಿದೆ. ಫಿಟ್ಮೆಂಟ್ ಫ್ಯಾಕ್ಟರ್ ಹೆಚ್ಚಳದ ನಿರೀಕ್ಷೆಯಿದ್ದು, ಡಿಎ ಕೂಡಾ ಮತ್ತೊಮ್ಮೆ ಶೇ 3ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂಬ ಸುದ್ದಿಯಿದೆ.

ದಿನಕ್ಕೆ 9 ಗಂಟೆಗಳ ಕಾಲ ಕೆಲಸ

ದಿನಕ್ಕೆ 9 ಗಂಟೆಗಳ ಕಾಲ ಕೆಲಸ

ವೇತನ ಸಂಹಿತೆಯ ಕರಡು ಪ್ರತಿಯಂತೆ ಉದ್ಯೋಗಿಗಳು ದಿನಕ್ಕೆ 9 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ವೇತನವನ್ನು ನಿರ್ಧರಿಸಲು ಮೂರು ಭೌಗೋಳಿಕ ವರ್ಗೀಕರಣಗಳನ್ನು ಸೂಚಿಸಲಾಗಿತ್ತು. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಇನ್ನೂ ಯಾವುದೇ ಸೂಚನೆ ಇಲ್ಲಿ ತನಕ ಬಂದಿಲ್ಲ. ರೈಲ್ವೆ ಇಲಾಖೆಯಲ್ಲಿ ಮಾತ್ರ ಎರಡು ಪಾಳಿಯಲ್ಲಿ ಕೆಲಸ ಮಾಡಲು ಹೊಸ ಸಚಿವರು ಕೆಲವು ವಿಭಾಗಕ್ಕೆ ಅನ್ವಯವಾಗುವಂತೆ ಆದೇಶ ನೀಡಿದ್ದರು. ಇನ್ನು ವಾರದಲ್ಲಿ ಎರಡು ದಿನ ರಜೆ ಬದಲಿಗೆ ಮೂರು ದಿನ ರಜೆ ಅಥವಾ ವಾರಕ್ಕೆ 4 ದಿನಗಳು ಮಾತ್ರ ಕಾರ್ಯ ನಿರ್ವಹಿಸುವ ಬಗ್ಗೆ ಚಿಂತನೆ ನಡೆದಿತ್ತು. ಆದರೆ, ಇದು ಸದ್ಯಕ್ಕೆ ಕಾರ್ಯಸಾಧುವಲ್ಲ ಎಂದು ಕೈಬಿಡಲಾಗಿದೆ.

ಗ್ರಾಹಕ ದರ ಸೂಚಿಯಂತೆ ಭತ್ಯೆ ಏರಿಕೆ

ಗ್ರಾಹಕ ದರ ಸೂಚಿಯಂತೆ ಭತ್ಯೆ ಏರಿಕೆ

ಹಣದುಬ್ಬರದ ಪರಿಣಾಮವನ್ನು ತಡೆದುಕೊಳ್ಳುವ ಸಲುವಾಗಿ ವೇತನದ ಜತೆಗೆ ಪಾವತಿ ಮಾಡುವಂಥ ಒಂದು ಭಾಗ ತುಟ್ಟಿ ಭತ್ಯೆ. ಈ ಏರಿಕೆಯ ಅನುಕೂಲವನ್ನು 48.34 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ 62.26 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಡಿಸೆಂಬರ್ ತಿಂಗಳಿನ ಗ್ರಾಹಕ ದರ ಸೂಚಿ (consumer price index) ಶೇ4.59 ರಷ್ಟಾದರೆ, ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ 3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿತ್ತು. ಆದರೆ, ಇದೆಲ್ಲವನ್ನು ಮೀರಿ ಮುಂದಿನ ಅವಧಿ ಜನವರಿ 2020ಕ್ಕೆ ಶೇ 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಲಾಗುತ್ತದೆ. ಜುಲೈ 2021ಕ್ಕೆ ಹೊಂದಾಣಿಕೆ ರಹಿತ ಸಿಪಿಐ ಶೇ 5.4ರಷ್ಟಿದೆ.

ಮೂಲ ವೇತನ ಏರಿಕೆಗೆ ಆಗ್ರಹ

ಮೂಲ ವೇತನ ಏರಿಕೆಗೆ ಆಗ್ರಹ

ಕೇಂದ್ರದ ಕಾರ್ಮಿಕ ಸಚಿವಾಲಯದ ಆಂತರಿಕ ಸಮಿತಿಯು ಕಳೆದ ವರ್ಷ ಜನವರಿಯಲ್ಲಿ ಬಿಡುಗಡೆ ಮಾಡಿದ ವರದಿಯಂತೆ, ಪ್ರಕಾರ ಕನಿಷ್ಠ ವೇತನ 375 ರೂ., ಕನಿಷ್ಠ ಮಾಸಿಕ ವೇತನ 9,750 ರೂ ಹಾಗೂ ನಗರ ಮೂಲದ ಕಾರ್ಮಿಕರಿಗೆ 1,430 ರೂ. ವಸತಿ ಭತ್ಯೆಯನ್ನು ನೀಡಬೇಕೆಂದು ಸೂಚಿಸಲಾಗಿದೆ. ಸದ್ಯ ಡಿಎ ಮತ್ತೆ ಶೇ 3ರಷ್ಟು ಏರಿಕೆಯಾದರೆ ಭತ್ಯೆ 73,440 ರು ತನಕ ಸಿಗಲಿದೆ. ಕನಿಷ್ಠ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆ ಇನ್ನೂ ಈಡೇರಿಲ್ಲ. ಕನಿಷ್ಠ ವೇತನ 21 ಸಾವಿರ ರು ನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆ ಬಗ್ಗೆ ಚರ್ಚೆ ನಡೆದಿದ್ದರೂ ಮುಂದಿನ ಬಜೆಟ್ ತನಕ ಘೋಷಣೆಯಾಗುವುದಿಲ್ಲ.

ಗೃಹಭತ್ಯೆ (HRA) ಕೂಡಾ ಏರಿಕೆ?

ಗೃಹಭತ್ಯೆ (HRA) ಕೂಡಾ ಏರಿಕೆ?

ಡಿಎ ಶೇ 25ಕ್ಕೆ ಹೆಚ್ಚಳವಾದರೆ ಗೃಹಭತ್ಯೆ (HRA) ಕೂಡಾ ಏರಿಕೆಯಾಗುತ್ತದೆ. ಸದ್ಯ HRA ಶೇ 27ಕ್ಕೇರಿಸಲಾಗಿದೆ ಎಂದು ಝೀ ನ್ಯೂಸ್ ವರದಿ ಮಾಡಿದೆ. ನಗರ ಶ್ರೇಣಿಕೃತ ಎಕ್ಸ್, ವೈ ಹಾಗೂ ಝಡ್ ಕೆಟಗೆರಿ ಅನ್ವಯ ಕ್ರಮವಾಗಿ ಎಕ್ಸ್ ವರ್ಗಕ್ಕೆ ಮೂಲ ವೇತನದ ಶೇ 27ರಷ್ಟು , ವೈ ವರ್ಗಕ್ಕೆ ಮೂಲ ವೇತನದ ಶೇ 18ರಷ್ಟು ಹಾಗೂ ಮೂಲ ಝಡ್ ವರ್ಗಕ್ಕೆ ಮೂಲ ವೇತನದ ಶೇ 9ರಷ್ಟು ಸಿಗಲಿದೆ. 5 ಲಕ್ಷಕ್ಕಿಂತ ಅಧಿಕ ಜನಸಂಖ್ಯೆಯುಳ್ಳ ಪಟ್ಟಣವಾದರೆ ಝಡ್ ವರ್ಗದಿಂದ ವೈ ವರ್ಗಕ್ಕೆ ಬಡ್ತಿ ಹೊಂದಿದಂತೆ ಎಂದುಕೊಳ್ಳಬಹುದು. ಕನಿಷ್ಠ ಗೃಹಭತ್ಯೆ ಮೂರು ಕೆಟಗೆರಿಗೆ 5,400 ರು, 3,600ರು ಹಾಗೂ 1,800 ರು ಇದೆ. ತುಟ್ಟಿ ಭತ್ಯೆ ಶೇ 50ಕ್ಕೂ ಅಧಿಕವಾದರೆ ಗೃಹಭತ್ಯೆಯನ್ನು ಕ್ರಮವಾಗಿ ಶೆ 30, ಶೇ 20 ಹಾಗೂ ಶೇ 10ಕ್ಕೆ ಇಳಿಸಲಾಗುತ್ತದೆ.

English summary
7th Pay Commission: Central government employees are waiting to receive the dearness allowance (DA) arrears that have been stopped for more than 18 months now. If the DA increases then the salary of Central government employees will increase automatically.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X