ಸರ್ಕಾರಿ ನೌಕರರಿಗೆ ಶುಭ ಸುದ್ದಿ ಕೊಟ್ಟ ಸರ್ಕಾರ, ತುಟ್ಟಿಭತ್ಯೆ ಲೆಕ್ಕಾಚಾರ ಹೇಗೆ?
ನವದೆಹಲಿ, ಅಕ್ಟೋಬರ್ 09: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಘೋಷಿಸಿದ್ದಾರೆ.
ಈ ನಿರ್ಧಾರದಿಂದ ಕೇಂದ್ರ ಸರಕಾರದ ಮೇಲೆ 9000 ಕೋಟಿ ರುಪಾಯಿ ಹೆಚ್ಚುವರಿ ಹೊರೆ ಬೀಳಲಿದೆ. ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ 01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು. ಶೇ3ರಷ್ಟು ತುಟ್ಟಿಭತ್ಯೆ ಹೆಚ್ಚಳ ನಿರೀಕ್ಷೆ ಹೊಂದಿದ್ದ ನೌಕರರಿಗೆ ಈಗ ಶೇ 5ರಷ್ಟು ತುಟ್ಟಿಭತ್ಯೆ ಸಿಗಲಿದೆ.
ಶೇ3 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದಾಗ ಡಿಎ ಹಾಗೂ ತುಟ್ಟಿ ದರ (ಡಿಆರ್) ನಿವೃತ್ತಿಯಾದವರಿಗೆ ಶೇ 12ರಷ್ಟು ತಲುಪಿದೆ. ಈಗ ಡಿಆರ್ ಶೇ17ರಷ್ಟಾಗಲಿದೆ.
ಹಣದುಬ್ಬರದ ಪರಿಣಾಮವನ್ನು ತಡೆದುಕೊಳ್ಳುವ ಸಲುವಾಗಿ ವೇತನದ ಜತೆಗೆ ಪಾವತಿ ಮಾಡುವಂಥ ಒಂದು ಭಾಗ ತುಟ್ಟಿ ಭತ್ಯೆ. ಈ ಏರಿಕೆಯ ಅನುಕೂಲವನ್ನು 48.41 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ 62.03 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಡಿಸೆಂಬರ್ ತಿಂಗಳಿನ ಗ್ರಾಹಕ ದರ ಸೂಚಿ (consumer price index) ಶೇ5 ರಷ್ಟಾದರೆ, ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿತ್ತು. ಆದರೆ, ಇದೆಲ್ಲವನ್ನು ಮೀರಿ ಶೇ 5ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ
ಸರ್ಕಾರಿ ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನು ಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆ ಬೇಡಿಕೆ ಇದ್ದೇ ಇದೆ.
ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ
2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ. ಈಗ ತುಟ್ಟಿ ದರ (ಡಿಆರ್) ಈಗ ಶೇ 16ರಷ್ಟಾಗಿದೆ.

ತುಟ್ಟಿಭತ್ಯೆ ಹೆಚ್ಚಳ ಮಾಡುವುದು ಹೇಗೆ?
ಕೇಂದ್ರ ಸರ್ಕಾರಿ ನೌಕರರ ಡಿಎ ಪರ್ಸಂಟೇಜ್: ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕಳೆದ 12 ತಿಂಗಳಿಗೆ 115.76/115.76X100. ಸಾರ್ವಜನಿಕ ವಲಯದ ಸಿಬ್ಬಂದಿ ಡಿಎ ಪರ್ಸಂಟೇಜ್: ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕೊನೆ 3 ತಿಂಗಳಿಗೆ 126.33/126.33X100.

ನಗರಗಳ ಆಧಾರದ ಮೇಲೆ ಲೆಕ್ಕಾಚಾರ
ಕೇಂದ್ರ ಸರ್ಕಾರಿ ನೌಕರರು ತಾವಿರುವ ನಗರಗಳ ಆಧಾರದ ಮೇಲೆ ಶೇ. 45ರವರೆಗೆ ಹೆಚ್ಚಿನ ಸಂಬಳ ಪಡೆಯಲಿದ್ದಾರೆ. 48.41 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ,53 ಲಕ್ಷ ಕೇಂದ್ರದ ಪಿಂಚಣಿದಾರರು, ಸೇನಾ ವಲಯದ 14 ಲಕ್ಷ ಸಿಬ್ಬಂದಿಗೆ ಇದರ ಲಾಭಗಳಾಗಲಿದ್ದು, ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ 30,748 ಕೋಟಿ ರು. ಹೊರೆ ಬೀಳಲಿದೆ. ಏಪ್ರಿಲ್ 1 ರಿಂದ 7 ನೇ ವೇತನ ಆಯೋಗದ ವರದಿಯ ಅನುಸಾರ ವೇತನ ಹೆಚ್ಚಳವಾಗಲಿದೆ. ಆದರೆ, ಕನಿಷ್ಟ ವೇತನ ಏರಿಕೆಯಾಗಿಲ್ಲ. ಲೆವೆಲ್ 01 ರಿಂದ ಲೆವೆಲ್ 18ರ ತನಕ ಸಮಾನ ಸ್ತರದಲ್ಲಿ ಅವರ ಸಂಬಳಕ್ಕೆ ತಕ್ಕಂತೆ ಡಿಎ ಹೆಚ್ಚಳ ಮಾಡುತ್ತಾ ಬರಲಾಗಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications