• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೇಂದ್ರ ಸರ್ಕಾರಿ ನೌಕರರ ಸಂಬಳ ಶೇ28ರಷ್ಟು ಏರಿಕೆ, ಮೋದಿ ಭರವಸೆ

|
Google Oneindia Kannada News

ನವದೆಹಲಿ, ನವೆಂಬರ್ 06: ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಬಗ್ಗೆ ಈಗಾಗಲೇ ಓದಿರುತ್ತೀರಿ. ಅಧಿಕೃತ ಆದೇಶ ಹೊರಬರಲಿದೆ. ವೇತನ ಸಂಹಿತೆಯ ಕರಡು ಪ್ರತಿ ಶಿಫಾರಸ್ಸಿನಲ್ಲಿ ಕೆಲಸದ ಅವಧಿ ಬಗ್ಗೆ ಬದಲಾವಣೆ ಇದ್ದರೂ ಕನಿಷ್ಠ ವೇತನದಲ್ಲಿ ಬದಲಾವಣೆ ಮಾಡಿಲ್ಲ.

ಹೀಗಾಗಿ, 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರಿ ನೌಕರರಿಗೆ 18,000 ರು ಕನಿಷ್ಠ ವೇತನ ಪ್ರತಿ ತಿಂಗಳಿಗೆ ಸಿಗಲಿದೆ. ವೇತನ ಸಂಹಿತೆಯ ಕರಡು ಪ್ರತಿಯಂತೆ ಉದ್ಯೋಗಿಗಳು ದಿನಕ್ಕೆ 9 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ವೇತನವನ್ನು ನಿರ್ಧರಿಸಲು ಮೂರು ಭೌಗೋಳಿಕ ವರ್ಗೀಕರಣಗಳನ್ನು ಸೂಚಿಸಲಾಗಿದೆ. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಯಾವುದೇ ಸೂಚನೆ ಇಲ್ಲ.

ಪ್ರತಿ ದಿನದ ಕೆಲಸದ ಅವಧಿ 9 ಗಂಟೆಗಳ ಕಾಲ ಎಂದು ನಿಗದಿ?ಪ್ರತಿ ದಿನದ ಕೆಲಸದ ಅವಧಿ 9 ಗಂಟೆಗಳ ಕಾಲ ಎಂದು ನಿಗದಿ?

ಕೇಂದ್ರ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ನಾನ್ ಗೆಜೆಟೆಡ್ ಅಧಿಕಾರಿಗಳಿಗೆ ಅನುತ್ಪಾದನಾ ಮಿಲಿತ ಬೋನಸ್ (Non Product linked) ನೀಡಲಾಗಿದೆ. ಡಿಎ ಜೊತೆಗೆ ಟಿಎ ಸಿಕ್ಕಿದೆ. ಆದರೆ ಕನಿಷ್ಠ ವೇತನ ಏರಿಕೆ ಮಾಡಿಲ್ಲ. ಆದ್ದರಿಂದ 18,000 ರು ವೇತನಕ್ಕೆ ಅನುಗುಣವಾಗಿ ಲೆಕ್ಕ ಹಾಕಬೇಕಾಗುತ್ತದೆ.

ತಿಂಗಳಲ್ಲಿ 26 ದಿನಗಳ ಕೆಲಸದಂತೆ ಲೆಕ್ಕಾಚಾರ

ತಿಂಗಳಲ್ಲಿ 26 ದಿನಗಳ ಕೆಲಸದಂತೆ ಲೆಕ್ಕಾಚಾರ

ತಿಂಗಳ ವೇತನವನ್ನು ನಿಗದಿಪಡಿಸಲು ತಿಂಗಳಲ್ಲಿ 26 ದಿನಗಳ ಕೆಲಸಕ್ಕೆ ಎಂಟು ಗಂಟೆಗಳ ದೈನಂದಿನ ಕೆಲಸವನ್ನು ಲೆಕ್ಕ ಹಾಕಲಾಗುತ್ತದೆ. ಉತ್ಪಾದನಾ ಕಾರ್ಖಾನೆಗಳೂ ಪ್ರತಿ ದಿನ 9 ಗಂಟೆ ಅವಧಿ ಕೆಲಸ ಮಾಡುವಂತೆ ಮನವಿ ಮಾಡಿವೆ. ಸದ್ಯ ಈ ಲೆಕ್ಕಾಚಾರದಂತೆ 692 ರು ಪ್ರತಿ ದಿನದಂತೆ ಸಿಗಲಿದೆ. ಅದರೆ ಸರ್ಕಾರ ಈಗ ವೇತನ ಪರಿಷ್ಕರಣೆ ಮಾಡಲಿದ್ದು, ರಾಷ್ಟ್ರೀಯ ಕನಿಷ್ಠ ವೇತನ ಕೂಡಾ ದೇಶವ್ಯಾಪ್ತಿ ಬದಲಾಗಲಿದೆ.

ರಾಜ್ಯ ಸರ್ಕಾರಿ ನೌಕರರಿಗೂ ಅನ್ವಯ

ರಾಜ್ಯ ಸರ್ಕಾರಿ ನೌಕರರಿಗೂ ಅನ್ವಯ

ರಾಷ್ಟ್ರೀಯ ಕನಿಷ್ಠ ವೇತನ (National minimum floor wage) ಬದಲಾವಣೆಗೆ ಸೂಚಿಸಿರುವ ಸಲಹಾ ಮಂಡಳಿಯ ಶಿಫಾರಸ್ಸಿನ ಅನ್ವಯ ಕೇಂದ್ರ ಸರ್ಕಾರಿ ನೌಕರರ ಸಂಬಳ ಶೇ28ರಷ್ಟು ಏರಿಕೆಯಾಗಲಿದೆ. ಇದನ್ನು ರಾಜ್ಯ ಸರ್ಕಾರಿ ನೌಕರರಿಗೂ ಹಂತ ಹಂತವಾಗಿ ಜಾರಿಗೊಳಿಸಲು ಸೂಚಿಸಲಾಗಿದೆ. 7ನೇ ವೇತನ ಆಯೋಗದ ಅನ್ವಯ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ, ಭತ್ಯೆ, ಕೆಲಸದ ಅವಧಿ, ರಜಾ ದಿನ ನಿಗದಿ ಮಾಡುವಂತೆ ಬೇಡಿಕೆ ಇದ್ದೆ ಇದೆ.

ನವೆಂಬರ್ ತಿಂಗಳಿನಲ್ಲಿ ಮೋದಿ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಬಂಪರ್ನವೆಂಬರ್ ತಿಂಗಳಿನಲ್ಲಿ ಮೋದಿ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಬಂಪರ್

ಆಹಾರ ಸೇವನೆ ಕ್ರಮ ಕೂಡಾ ಪರಿಗಣನೆ

ಆಹಾರ ಸೇವನೆ ಕ್ರಮ ಕೂಡಾ ಪರಿಗಣನೆ

ಪ್ರತಿ ದಿನಕ್ಕೆ 2,700 ಕ್ಯಾಲೋರಿ ನಿವ್ವಳ ಆಹಾರ ಸೇವನೆ ಯೂನಿಟ್ಟುಗಳು ಹಾಗೂ 66 ಮೀಟರ್ ಬಟ್ಟೆ ಪ್ರತಿ ಕುಟುಂಬಕ್ಕೆ, ಮನೆ ಬಾಡಿಗೆ ಶೇ10ರಷ್ಟು, ಇಂಧನ, ವಿದ್ಯುತ್ ಪೂರೈಕೆ, ಇನ್ನಿತರ ಸೌಲಭ್ಯಗಳಿಗಾಗಿ ಶೇ 20ರಷ್ಟು ಕಡಿತವಾಗಲಿದ್ದು, ಇದರಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ತುರ್ತು ಪರಿಸ್ಥಿತಿಯ ಖರ್ಚು ವೆಚ್ಚದ ಕಡಿತ ಶೇ 25ರಷ್ಟು ಎಂದು ನಿಗದಿ ಮಾಡಲಾಗಿದೆ.

ಕನಿಷ್ಠ ಮಾಸಿಕ ವೇತನ ಪ್ಲಸ್ ಭತ್ಯೆ

ಕನಿಷ್ಠ ಮಾಸಿಕ ವೇತನ ಪ್ಲಸ್ ಭತ್ಯೆ

ಕೇಂದ್ರದ ಕಾರ್ಮಿಕ ಸಚಿವಾಲಯದ ಆಂತರಿಕ ಸಮಿತಿಯು ಜನವರಿಯಲ್ಲಿ ಬಿಡುಗಡೆ ಮಾಡಿದ ವರದಿಯಂತೆ, ಜುಲೈ 2018ರ ಪ್ರಕಾರ ಕನಿಷ್ಠ ವೇತನ 375 ರೂ., ಕನಿಷ್ಠ ಮಾಸಿಕ ವೇತನ 9,750 ರೂ ಹಾಗೂ ನಗರ ಮೂಲದ ಕಾರ್ಮಿಕರಿಗೆ 1,430 ರೂ. ವಸತಿ ಭತ್ಯೆಯನ್ನು ನೀಡಬೇಕೆಂದು ಸೂಚಿಸಲಾಗಿದೆ. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಯಾವುದೇ ಸೂಚನೆ ಇಲ್ಲ. ಕೇಂದ್ರ ಸರ್ಕಾರಿ ನೌಕರರಿಗೆ ಸಾರಿಗೆ ಭತ್ಯೆ (Travel Allowance) ಕೂಡಾ ನೀಡಲಾಗುತ್ತಿದೆ. ಟಿಎ ಮೌಲ್ಯ ಸೇರಿಸಿದ ಬಳಿಕ ಸಂಬಳ 810 ರು ನಿಂದ 4,320ರುಗೇರಲಿದೆ.

ಕೇಂದ್ರ ಸರ್ಕಾರ ತುಟ್ಟಿ ಭತ್ಯೆ ಹೆಚ್ಚಳ

ಕೇಂದ್ರ ಸರ್ಕಾರ ತುಟ್ಟಿ ಭತ್ಯೆ ಹೆಚ್ಚಳ

ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ 01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು. ಶೇ3ರಷ್ಟು ತುಟ್ಟಿಭತ್ಯೆ ಹೆಚ್ಚಳ ನಿರೀಕ್ಷೆ ಹೊಂದಿದ್ದ ನೌಕರರಿಗೆ ಈಗ ಶೇ 5ರಷ್ಟು ತುಟ್ಟಿಭತ್ಯೆ ಸಿಗಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ನಾನ್ ಗೆಜೆಟೆಡ್ ಅಧಿಕಾರಿಗಳಿಗೆ ಅನುತ್ಪಾದನಾ ಮಿಲಿತ ಬೋನಸ್(Non Product linked) ನೀಡಲಾಗಿದೆ.

26,000 ರೂಪಾಯಿಗೆ ಹೆಚ್ಚಳ ಮಾಡಲು ಬೇಡಿಕೆ

26,000 ರೂಪಾಯಿಗೆ ಹೆಚ್ಚಳ ಮಾಡಲು ಬೇಡಿಕೆ

ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ. ಹೀಗಾಗಿ ಕನಿಷ್ಠ ವೇತನ 21 ಸಾವಿರ ರು ನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆಯಿದೆ.

English summary
The 7th Pay Commission had recommended a minimum salary of Rs 18,000 per month for all Central Government employees. Reports say that the national minimum floor wage could go up to 28 per cent.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X