• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಫೇಲ್ ಯುದ್ಧವಿಮಾನ ಒಪ್ಪಂದದ ಆಳ-ಅಗಲದ ಸಂಪೂರ್ಣ ಚಿತ್ರಣ!

|

ನವದೆಹಲಿ, ನವೆಂಬರ್.14: ಸಾಲು ಸಾಲು ಐತಿಹಾಸಿಕ ತೀರ್ಪು ನೀಡುತ್ತಿರುವ ಸುಪ್ರೀಂಕೋರ್ಟ್ ಮತ್ತೊಂದು ದೊಡ್ಡ ಪ್ರಕರಣದ ತೀರ್ಪನ್ನು ಹೊರಡಿಸಿದೆ. ಯುಪಿಎ-ಎನ್ ಡಿಎ ಸರ್ಕಾರಗಳ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದ್ದ ಕೇಸ್ ಗೆ ಸುಪ್ರೀಂಕೋರ್ಟ್ ಮುಕ್ತಿ ನೀಡಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುಡ್ ನ್ಯೂಸ್ ಕೊಟ್ಟಿದೆ. ದಶಕಗಳಿಂದ ಸಾಕಷ್ಟು ಗೊಂದಲಗಳಲ್ಲಿಯೇ ಸಾಗಿ ಬಂದ ರಫೆಲ್ ಯುದ್ಧವಿಮಾನಗಳ ಖರೀದಿ ಒಪ್ಪಂದದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವನ್ನು ಕೋರ್ಟ್ ತಳ್ಳಿ ಹಾಕಿದೆ.

ರಫೇಲ್ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೆ ಕ್ಲೀನ್ ಚಿಟ್

ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಕೇಂದ್ರ ಸರ್ಕಾರ ಅವ್ಯವಹಾರ ನಡೆಸಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಬೇಕೆಂದು ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿದ್ದ ಎಲ್ಲ ಮೇಲ್ಮನವಿ ಅರ್ಜಿಗಳನ್ನು ಕೋರ್ಟ್ ವಜಾಗೊಳಿಸಿದೆ. ದೇಶದ ರಕ್ಷಣಾ ವಲಯಕ್ಕೆ ಸಂಬಂಧಿಸಿದಂತೆ ಮಾಡಿಕೊಂಡ 36 ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದದಲ್ಲಿ ಕೇಂದ್ರ ಸರ್ಕಾರಕ್ಕೆ ಕೋರ್ಟ್ ಕ್ಲೀನ್ ಚಿಟ್ ನೀಡಿದೆ.

ತ್ರಿಸದಸ್ಯ ಪೀಠದಿಂದ ಕ್ಲೀನ್ ಚಿಟ್!

36 ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಡಿಸೆಂಬರ್‌ನಲ್ಲಿ ಕ್ಲೀನ್ ಚಿಟ್ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ತೀರ್ಪು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾ. ಸಂಜಯ್ ಕಿಶನ್ ಕೌಲ್ ಮತ್ತು ಕೆ.ಎಂ.ಜೋಸೆಫ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಮೇಲ್ಮನವಿ ಅರ್ಜಿಗಳನ್ನು ತಿರಸ್ಕರಿಸಿದೆ. ಆ ಮೂಲಕ ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದೆ.

ಇನ್ನು, ರಫೇಲ್ ಯುದ್ಧ ವಿಮಾನಗಳ ಖರೀದಿ ವಿಚಾರ ಇಂದು ನಿನ್ನೆಯದ್ದಲ್ಲ. ಭಾರತ ಹಾಗೂ ಫ್ರಾನ್ಸ್ ನಡುವೆ ದಶಗಳ ಹಿಂದೆ ನಡೆದ ಒಪ್ಪಂದದಲ್ಲಿ ಸಾಲು ಸಾಲು ಗೊಂದಲಗಳೇ ತುಂಬಿಕೊಂಡಿವೆ. ಹಾಗಾದರೆ ರಫೇಲ್ ಯುದ್ಧವಿಮಾನಗಳ ಖರೀದಿ ಒಪ್ಪಂದ. ಯುಪಿಎ ಸರ್ಕಾರ ರೂಪಿಸಿದ್ದ ರೂಪರೇಷೆಗಳು, ಎನ್ ಡಿಎ ಸರ್ಕಾರದಲ್ಲಿ ನಡೆದ ಒಪ್ಪಂದದ ಪ್ರಕ್ರಿಯೆಗಳು. ಕೇಂದ್ರ ಸರ್ಕಾರದ ಮೇಲಿರುವ ಆರೋಪಗಳು. ಇಡೀ ಒಪ್ಪಂದದ ಪ್ರಕ್ರಿಯೆ ನಡೆದುಬಂದ ಹಾದಿ ಹೇಗಿತ್ತು ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಡಿಸೆಂಬರ್.30, 2002: ದೇಶದ ರಕ್ಷಣೆಯ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರದಿಂದ ಜಾರಿಗೆ ಬಂತು ನೂತನ ಕ್ರಮ. ರಕ್ಷಣಾ ಖರೀದಿ ವಿಧಾನಗಳನ್ನು ಕೇಂದ್ರ ಸರ್ಕಾರವೇ ಸುಗಮಗೊಳಿಸಿತು.

ಆಗಸ್ಟ್.28, 2007: ಯುಪಿಎ ನೇತೃತ್ವದ ಕೇಂದ್ರ ಸರ್ಕಾರ 126 ಮಧ್ಯಮ ಬಹುಪಾತ್ರ ಯುದ್ಧ ವಿಮಾನಗಳ ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಿತು.

58 ಸಾವಿರ ಕೋಟಿಯ ರಫೇಲ್ ಡೀಲ್ ಎಂದರೇನು? ಏನಿದು ವಿವಾದ?

ಮೇ.2011: ವಿದೇಶಗಳಿಂದ ರಫೇಲ್ ಹಾಗೂ ಯುರೋಫೈಟರ್ ಜೆಟ್ ಗಳ ಖರೀದಿಸಲು ತೀರ್ಮಾನ

ಜನವರಿ.30, 2012: ಕೇಂದ್ರ ಸರ್ಕಾರ ಕರೆದ ಹರಾಜು ಪ್ರಕ್ರಿಯೆಯಲ್ಲಿ ಅತಿಕಡಿಮೆ ಬೆಲೆಗೆ ರಫೇಲ್ ಯುದ್ಧವಿಮಾನವನ್ನು ನೀಡಲು ಫ್ರಾನ್ಸ್ ನ ಡಸಾಲ್ಟ್ ವಿಮಾನಯಾನ ಸಂಸ್ಥೆ ಒಪ್ಪಿಕೊಂಡಿತು. ಅಂದು 126 ಯುದ್ಧ ವಿಮಾನಗಳ ಆಮದು ಮಾಡಿಕೊಳ್ಳಲು ಭಾರತ ಒಪ್ಪಂದ ಮಾಡಿಕೊಂಡಿತ್ತು. ಈ ಪೈಕಿ ಹಾರಾಟಕ್ಕೆ ಸಿದ್ಧಗೊಂಡಿರುವ 18 ಯುದ್ಧವಿಮಾನಗಳನ್ನು ಫ್ರಾನ್ಸ್ ನಿಂದ ಪಡೆಯುವುದು. ಉಳಿದ 108 ಯುದ್ಧವಿಮಾನಗಳನ್ನು ಬೆಂಗಳೂರಿನ ಹೆಚ್ ಎಎಲ್ ನಲ್ಲಿ ಉತ್ಪಾದಿಸುವುದಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.

ಮಾರ್ಚ್.13, 2014: ಫ್ರಾನ್ಸ್ ನ ಡಸಾಲ್ಟ್ ಎವಿಯೇಷನ್ ಹಾಗೂ ಭಾರತದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಡುವೆ ಉತ್ಪಾದನೆಗೆ ಸಂಬಂಧಿಸಿದಂತೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. 108 ಯುದ್ಧ ವಿಮಾನಗಳ ತಯಾರಿಕೆ, ಶಸ್ತ್ರಾಸ್ತ್ರ ವ್ಯವಸ್ಥೆ, ಗ್ರಾಹಕೀಕರಣ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ, ಯಾವುದೂ ಕೂಡಾ ಅಂತಿಮವಾಗಿರಲಿಲ್ಲ.

ಆಗಸ್ಟ್.08, 2014: 126 ಯುದ್ಧವಿಮಾನಗಳ ಪೈಕಿ ಹಾರಾಟಕ್ಕೆ ಸಿದ್ಧಗೊಂಡ 18 ಯುದ್ಧವಿಮಾನಗಳನ್ನು ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಭಾರತಕ್ಕೆ ರವಾನೆಯಾಗಲಿವೆ. ಉಳಿದ 108 ಯುದ್ಧವಿಮಾನಗಳನ್ನು ಏಳು ವರ್ಷಗಳ ಅವಧಿಯಲ್ಲಿ ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅಂದಿನ ಕೇಂದ್ರ ಸಚಿವ ಅರುಣ್ ಜೇಟ್ಲಿ ಸಂಸತ್ ನಲ್ಲಿ ಮಾಹಿತಿ ನೀಡಿದ್ದರು.

ರಫೇಲ್ ವಿವಾದದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಆರು ಸಂಗತಿಗಳು

ಎಪ್ರಿಲ್.10, 2015: ಪ್ಯಾರಿಸ್ ಪ್ರವಾಸ ಕೈಗೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಹೊಸ ಘೋಷಣೆಯೊಂದನ್ನು ಮಾಡಿದರು. ಫ್ರಾನ್ಸ್ ನಿಂದ 36 ರಫೇಲ್ ಯುದ್ಧವಿಮಾನಗಳನ್ನು ಖರೀದಿಸುವುದಾಗಿ ಘೋಷಿಸಿದರು.

ಜೂನ್, 2015: 36 ರಫೇಲ್ ಯುದ್ಧವಿಮಾನ ಖರೀದಿ ಬಗ್ಗೆ ಪ್ರಧಾನಿ ಘೋಷಣೆ ಮಾಡಿ ಎರಡು ತಿಂಗಳಿಗೆ ಹಳೆಯ ಒಪ್ಪಂದವನ್ನು ರದ್ದುಗೊಳಿಸಲಾಯಿತು. 126 ಯುದ್ಧವಿಮಾನಗಳ ಖರೀದಿಗೆ ಮೊದಲು ಮಾಡಿಕೊಂಡಿದ್ದ ಒಪ್ಪಂದವನ್ನು ಭಾರತದ ಕೇಂದ್ರ ರಕ್ಷಣಾ ಇಲಾಖೆ ರದ್ದುಗೊಳಿಸುವುದಾಗಿ ಘೋಷಿಸಿತು.

ಜನವರಿ.26, 2016: ಭಾರತೀಯ ಗಣರಾಜ್ಯೋತ್ಸವದ ಹಿನ್ನೆಲೆ ಪ್ರಾನ್ಸ್ ಅಧ್ಯಕ್ಷ ಫ್ರಾನ್ಸಿಸ್ಕೋ ಹೊಲಾಂಡೆ ದೆಹಲಿಗೆ ಆಗಮಿಸಿದ್ದರು. ಅಂದು 36 ರಫೇಲ್ ಯುದ್ಧವಿಮಾನ ಖರೀದಿಗೆ ಸಂಬಂಧಿಸಿದಂತೆ ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಹೊಲೆಂಡ್ ಸಹಿ ಹಾಕಿದರು.

ಅಕ್ಟೋಬರ್.2016: ಫ್ರಾನ್ಸ್ ನ ಡಸಾಲ್ಟ್ ಕಂಪನಿ ಭಾರತದಲ್ಲಿನ ತನ್ನ ಪಾಲುದಾರ ಸಂಸ್ಥೆಯನ್ನು ಆಯ್ಕೆ ಮಾಡಿಕೊಂಡಿತು. ಅನಿಲ್ ಅಂಬಾನಿ ಮಾಲೀಕತ್ವದ ರಿಲಾಯನ್ಸ್ ಡಿಫೆನ್ಸ್ ಕಂಪನಿ ಜೊತೆ ಡಸಾಲ್ಟ್ ಎವಿಯೇಶನ್ ಒಪ್ಪಂದಕ್ಕೆ ಸಹಿ ಹಾಕಿತು.

ರಫೇಲ್ ಒಪ್ಪಂದ: ವಿವಾದದ ನಡುವೆ ಮರೆಯಾದ ಸೂಕ್ಷ್ಮ ಸತ್ಯಗಳು

ನವೆಂಬರ್.18, 2016: ಪ್ರಾನ್ಸ್ ನಿಂದ ಆಮದು ಮಾಡಿಕೊಳ್ಳಲು ತೀರ್ಮಾನಿಸಿರುವ ರಫೇಲ್ ಯುದ್ಧವಿಮಾನಗಳ ಬೆಲೆಯ ಬಗ್ಗೆ ಸಂಸತ್ ನಲ್ಲಿ ಪ್ರಕಟಿಸಲಾಯಿತು. ಒಂದು ರಫೇಲ್ ಯುದ್ಧವಿಮಾನಕ್ಕೆ 670 ಕೋಟಿ ರೂಪಾಯಿ ನೀಡಲಾಗುತ್ತಿದೆ ಎಂದು ಸರ್ಕಾರ ಮಾಹಿತಿ ನೀಡಿತು. ಜೊತೆಗೆ 2022ರ ಎಪ್ರಿಲ್ ವೇಳೆಗೆ ಹಾರಾಟಕ್ಕೆ ಸಿದ್ಧಗೊಂಡಿರುವ 36 ರಫೇಲ್ ಯುದ್ಧವಿಮಾನಗಳನ್ನು ಫ್ರಾನ್ಸ್ ನ ಡೆಸಾಲ್ಟ್ ಭಾರತಕ್ಕೆ ಹಸ್ತಾಂತರಿಸಲಿದೆ ಎಂದು ಸಂಸತ್ ನಲ್ಲಿ ಸರ್ಕಾರ ಸ್ಪಷ್ಟಪಡಿಸಿತು.

ಮಾರ್ಚ್.13, 2018: 36 ರಫೇಲ್ ಯುದ್ಧವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂತು. ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಯಿತು.

ರಿಲಾಯನ್ಸ್ ಹೊರತಾಗಿ ಬೇರೆ ಆಯ್ಕೆಯೇ ಇರಲಿಲ್ಲ!

ಭಾರತದಲ್ಲಿ 36 ರಫೇಲ್ ಯುದ್ಧವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿರುವ ಆರೋಪ ರಾಷ್ಟ್ರಾದ್ಯಂತ ಸದ್ದು ಮಾಡಿತ್ತು. ಇದರ ನಡುವೆ ಫ್ರಾನ್ಸ್ ಮಾಜಿ ಅಧ್ಯಕ್ಷ ಫ್ರಾನ್ಸಿಸ್ಕೋ ಹೊಲಾಂಡೆ ನೀಡಿದ ಹೇಳಿಕೆ ಉರಿಯುವ ಬೆಂಕಿಗೆ ತುಪ್ಪ ಸುರಿಯಿತು. ರಿಲಾಯನ್ಸ್ ಪರ ಕೇಂದ್ರ ಸರ್ಕಾರ ವಕಾಲತ್ತು ವಹಿಸಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಇದರ ನಡುವೆ ಖಾಸಗಿ ವಾಹಿನಿ ಸಂದರ್ಶನ ನೀಡಿದ ಹೊಲಾಂಡೆ, ಭಾರತದಲ್ಲಿ ಪಾಲುದಾರಿಕೆ ಸಂಸ್ಥೆ ಆಯ್ದುಕೊಳ್ಳುವಾಗ ನಮ್ಮ ಮುಂದೆ ಆಯ್ಕೆಗಳೇ ಇರಲಿಲಲ್ಲ. ಹೀಗಾಗಿ ದರು. ರಿಲಾಯನ್ಸ್ ಡಿಫೆನ್ಸ್ ಸಂಸ್ಥೆಯನ್ನೇ ಪಾಲುದಾರ ಸಂಸ್ಥೆಯಾಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು ಎಂದು ಪ್ರಾನ್ಸ್ ಅಧ್ಯಕ್ಷ ಹಾಲೊಂಡೆ ಹೇಳಿಕೆ ನೀಡಿದ್ದರು. ಇದರಿಂದ ಭಾರತದಲ್ಲಿ ಹೊತ್ತಿ ಉರಿಯುತ್ತಿದ್ದ ರಫೇಲ್ ಬೆಂಕಿಗೆ ತುಪ್ಪ ಸುರಿದಂತೆ ಆಗಿತ್ತು.

ಸೆಪ್ಟೆಂಬರ್.05, 2018: ರಫೇಲ್ ಒಪ್ಪಂದ ಕುರಿತು ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ತಡೆ ನೀಡುವಂತೆ ಮನವಿ.

ಸೆಪ್ಟೆಂಬರ್.18, 2018: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಅಕ್ಟೋಬರ್.10ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್.

ಅಕ್ಟೋಬರ್.08,2018: ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿಸಾಸಕ್ತಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ. ಅಕ್ಟೋಬರ್.10ರಂದು ಹೊಸದಾಗಿ ಪಿಐಎಲ್ ಸಲ್ಲಿಸುವಂತೆ ಕೋರ್ಟ್ ಸೂಚನೆ ನೀಡಿತ್ತು.

ಅಕ್ಟೋಬರ್.10, 2018: ರಫೇಲ್ ಯುದ್ಧವಿಮಾನಗಳ ಖರೀದಿ ಕುರಿತು ವಿಸ್ತೃತ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ ಗೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ ನೀಡಿತು.

ಅಕ್ಟೋಬರ್.24, 2018: ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ, ಅರುಣ್ ಶೌರಿ, ಹಾಗೂ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್, ಕೇಂದ್ರದ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋದರು.

ಅಕ್ಟೋಬರ್.31, 2018: ಮುಂದಿನ 10 ದಿನಗಳಲ್ಲೇ ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದದ ಕುರಿತು ಮಾಹಿತಿ. ಒಪ್ಪಂದ ಮಾಡಿಕೊಂಡಿರುವ ಮೌಲ್ಯದ ಕುರಿತು ಸಂಪೂರ್ಣ ಚಿತ್ರಣವುಳ್ಳ ಪ್ರತಿಯನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್ ಗೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಕೋರ್ಟ್ ಆದೇಶ ನೀಡಿತು.

ನವೆಂಬರ್.12,2018: ರಫೇಲ್ ಒಪ್ಪಂದವನ್ನು ಮಾಡಿಕೊಳ್ಳುವಾಗ ಅನುಸರಿಸಿದ ಕ್ರಮ. ಯುದ್ಧವಿಮಾನಗಳಿಗೆ ಪಾವತಿಸಿದ ಹಣದ ಕುರಿತು ಸಂಪೂರ್ಣ ಮಾಹಿತಿಯನ್ನು ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್ ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿತು.

ನವೆಂಬರ್.14, 2018: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿತು.

ಡಿಸೆಂಬರ್.14, 2018: ರಫೇಲ್ ಯುದ್ಧವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿತು. ಒಪ್ಪಂದದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯಾವುದೇ ರೀತಿ ಅವ್ಯವಹಾರ ನಡೆಸಿದ್ದು ಕಂಡು ಬಂದಿಲ್ಲ. ಹೀಗಾಗಿ ಕೋರ್ಟ್ ಗೆ ಸಲ್ಲಿಕೆಯಾಗಿದ್ದ ಎಲ್ಲ ಪಿಐಎಲ್ ಅರ್ಜಿಗಳನ್ನು ಕೋರ್ಟ್ ವಜಾಗೊಳಿಸಿತು. ಸುಪ್ರೀಂಕೋರ್ಟ್ ತೀರ್ಪನ್ನು ಮತ್ತೊಮ್ಮ ಪರಿಶೀಲಿಸುವಂತೆ ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ, ಅರುಣ್ ಶೌರಿ, ಹಾಗೂ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದರು.

ಏಪ್ರಿಲ್.10, 2019: ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾದ ಮರುಪರಿಶೀಲನಾ ಅರ್ಜಿ ವಿಚಾರಣೆ ವಜಾಗೊಳಿಸುವಂತೆ ಕೇಂದ್ರ ಸರ್ಕಾರ ಕೂಡಾ ಅರ್ಜಿ ಸಲ್ಲಿಸಿತು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ಕೇಂದ್ರದ ಮನವಿಯನ್ನು ತಿರಸ್ಕರಿಸಿದ್ದು, ವಿಚಾರಣೆಗೆ ಸಮ್ಮತಿ ನೀಡಿತ್ತು.

ಮೇ.10, 2019: ರಫೇಲ್ ಒಪ್ಪಂದದ ಕುರಿತು ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಕೋರ್ಟ್ ಪೂರ್ಣಗೊಳಿಸಿದ್ದು, ತೀರ್ಪನ್ನು ನವೆಂಬರ್.14ಕ್ಕೆ ಕಾಯ್ದಿರಿಸಿತು.

ಅಕ್ಟೋಬರ್.08, 2019: ವಿಜಯ ದಶಮಿ ಹಿನ್ನೆಲೆಯಲ್ಲಿ ಪ್ರಾನ್ಸ್ ನಿಂದ ಭಾರತಕ್ಕೆ ಮೊದಲ ರಫೇಲ್ ಯುದ್ಧವಿಮಾನ ಹಸ್ತಾಂತರಗೊಂಡಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆಯುಧ ಪೂಜೆ ದಿನವೇ ರಫೇಲ್ ಯುದ್ಧವಿಮಾನಕ್ಕೆ ಪೂಜೆ ಸಲ್ಲಿಸಿದ್ದರು.

ನವೆಂಬರ್.14, 2019: ಇಂದು ಮರುಪರಿಶೀಲನಾ ಅರ್ಜಿಗಳ ಕುರಿತು ತೀರ್ಪು ನೀಡಿರುವ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದೆ. ಮರುಪರಿಶೀಲನಾ ಅರ್ಜಿಗಳನ್ನೆಲ್ಲ ವಜಾಗೊಳಿಸಿದ ಸುಪ್ರೀಂಕೋರ್ಟ್, ಫ್ಪಾನ್ಸ್ ನ ಡಸಾಲ್ಟ್ ಎವಿಯೇಷನ್ ನಿಂದ 36 ರಫೇಲ್ ಯುದ್ಧವಿಮಾನಗಳನ್ನು ಖರೀದಿಸುವಂತೆ ಮಾಡಿಕೊಂಡಿರುವ ಒಪ್ಪಂದದಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಹೇಳಿದೆ.

English summary
Rafale Deal: Clean Chit For Central Government. A Brief Timeline Of The Controversial Fighter Jet Deal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more