ಸಮೀಕ್ಷೆ: ಪಿಣರಾಯಿ ನೇತೃತ್ವದ ಎಲ್‌ಡಿಎಫ್‌ಗೆ ಭರ್ಜರಿ ಜಯ
ತಿರುವನಂತಪುರಂ, ಮಾರ್ಚ್ 16: ಕೇರಳ ಜೊತೆಗೆ ತಮಿಳುನಾಡು, ಅಸ್ಸಾಂ, ಪುದುಚೇರಿ , ಪಶ್ಚಿಮ ಬಂಗಾಳದ ವಿಧಾನಸಭೆಗೆ ಚುನಾವಣೆ ದಿನಾಂಕಗಳನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಕೇರಳ ಚುನಾವಣೆಯಲ್ಲಿ ಎಲ್‌ಡಿಎಫ್ ಮತ್ತೊಮ್ಮೆ ಗೆಲುವು ಸಾಧಿಸುವ ಸಾಧ್ಯತೆಯಿದೆ ಎಂದು ಇಂದು ಪ್ರಕಟವಾದ ಎಬಿಪಿ ಸಿ- ವೋಟರ್ ಸಮೀಕ್ಷೆ ಹೇಳಿದೆ.
ಬಿಜೆಪಿ ಒಂದು ಸ್ಥಾನಗಳಿಸಿದರೆ ಹೆಚ್ಚು ಹಾಗೂ ಪಿಣರಾಯಿ ವಿಜಯನ್ ಸಿಎಂ ಆಗಲು ಸೂಕ್ತ ಎಂದು ಎಬಿಪಿಯ ಈ ಹಿಂದಿನ ಸಮೀಕ್ಷೆ ಹಾಗೂ ಟೈಮ್ಸ್ ನೌ- ಸಿ -ವೋಟರ್ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲೂ ಹೇಳಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
ಚುನಾವಣಾ ಪೂರ್ವ ಸಮೀಕ್ಷೆಗಳನ್ನು ಅನೇಕ ಸಂಸ್ಥೆಗಳು ಪ್ರಕಟಿಸುತ್ತಿವೆ. ಕೇರಳದಲ್ಲಿ ಎಲ್‌ಡಿಎಫ್ ಅಧಿಕಾರಕ್ಕೇರಲಿದ್ದು, ಯುಡಿಎಫ್ ಮತ್ತೊಮ್ಮೆ ಮುಖಭಂಗ ಅನುಭವಿಸಲಿದೆ ಎಂದು ವರದಿ ಬಂದಿದೆ. ಕೇರಳದ 140 ಸ್ಥಾನಗಳಿಗೆ ಮಲಪ್ಪುರಂ ಉಪ ಚುನಾವಣೆ ಏಪ್ರಿಲ್ 6 ರಂದು ಮತದಾನ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ವಿಧಾನಸಭೆಯ ಬಲಾಬಲ
140 ಸ್ಥಾನಗಳ ವಿಧಾನಸಭೆಯ ಬಲಾಬಲ: ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ 93 ಸ್ಥಾನ, ಕಾಂಗ್ರೆಸ್ ನೇತೃತ್ವ ಯುಡಿಎಫ್ 42 ಹಾಗೂ ಬಿಜೆಪಿ ನೇತೃತ್ವದ ಎನ್ಡಿಎ 1 ಸ್ಥಾನ ಹೊಂದಿದೆ. ಯಾವುದೇ ಪಕ್ಷವು ಅಧಿಕಾರ ಸ್ಥಾಪಿಸಲು ಮ್ಯಾಜಿಕ್ ನಂಬರ್ 71 ದಾಟಬೇಕಾಗುತ್ತದೆ.
2016ರಲ್ಲಿ ಎಲ್ ಡಿ ಎಫ್ 91, ಯುಡಿಎಫ್ 47, ಕಾಂಗ್ರೆಸ್ 1, ಇತರೆ 1 ಎಂದು ಫಲಿತಾಂಶ ಬಂದಿತ್ತು.

ಲೆಫ್ಟ್ ಡೆಮೊಕ್ರಾಟಿಕ್ ಫ್ರಂಟ್‌ಗೆ ಜಯ
ಎಬಿಪಿ -ಸಿವೋಟರ್ ಸಮೀಕ್ಷೆ 2021 ಆಡಳಿತಾರೂಢ ಲೆಫ್ಟ್ ಡೆಮೊಕ್ರಾಟಿಕ್ ಫ್ರಂಟ್ (LDF) ಮತ್ತೊಮ್ಮೆ ಅಧಿಕಾರಕ್ಕೇರಲಿದೆ. ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ ಸರಳ ಬಹುಮತ ಗಳಿಸಲಿದ್ದು 77 ರಿಂದ 85 ಸ್ಥಾನ ಗಳಿಸಲಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ 54 ರಿಂದ 62 ಸ್ಥಾನ ಗಳಿಸಬಹುದು ಹಾಗೂ ಬಿಜೆಪಿ 2 ಸ್ಥಾನ ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ. ಯಾವುದೇ ಪಕ್ಷವು ಅಧಿಕಾರ ಸ್ಥಾಪಿಸಲು ಮ್ಯಾಜಿಕ್ ನಂಬರ್ 71 ದಾಟಬೇಕಾಗುತ್ತದೆ.

ಶೇಕಡವಾರು ಮತ ಗಳಿಕೆ
ಎಬಿಪಿ -ಸಿವೋಟರ್ ಸಮೀಕ್ಷೆಯಂತೆ ಶೇಕಡವಾರು ಮತ ಶೇಕಡವಾರು ಮತ ಗಳಿಕೆಯಲ್ಲಿ 2016ಕ್ಕೆ ಹೋಲಿಸಿದರೆ ಎಲ್ ಡಿ ಎಫ್ ಶೇ 0.6%, ಯುಡಿಎಫ್ 0.9% ಹಾಗೂ ಬಿಜೆಪಿ 0.3% ರಷ್ಟು ಕುಸಿತ ಕಾಣಲಿದೆ ಎಂದು ಎಬಿಪಿ -ಸಿವೋಟರ್ ಸಮೀಕ್ಷೆ ಹೇಳಿದೆ. ಅಂದರೆ ಎಲ್‌ಡಿಎಫ್ 43.5%, ಯುಡಿಎಫ್ 38.8%, ಬಿಜೆಪಿ 14.9%, ಇತರೆ 4.6% ಗಳಿಸಲಿವೆ.
2016ರಲ್ಲಿ ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ ಶೇ 43.88%; ಕಾಂಗ್ರೆಸ್ ನೇತೃತ್ವದ ಯುಡಿಎಫ್ ಶೇ 38.81; ಬಿಜೆಪಿ ನೇತೃತ್ವದ ಎನ್ಡಿಎ 14. 96% ಮತಗಳಿಸಿದ್ದವು.

ಯುಡಿಎಫ್‌ಗೆ ಮೂರು ಸಮೀಕ್ಷೆಗಳಲ್ಲೂ ಹಿನ್ನಡೆ
ಯುಡಿಎಫ್ ಪರ ಮೂರು ಸಮೀಕ್ಷೆಗಳಲ್ಲೂ ಹಿನ್ನಡೆ ಸ್ಥಳೀಯ ಮಾಧ್ಯಮ ಸಂಸ್ಥೆಗಳು ನೀಡಿರುವ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ, ಎಲ್ ಡಿ ಎಫ್ 72 ರಿಂದ 78 ಸ್ಥಾನ ಗೆಲ್ಲುವ ಸಾಧ್ಯತೆಯಿದೆ ಎನ್ನಲಾಗಿದೆ. ಯುಡಿಎಫ್ 65 ಹಾಗೂ ಬಿಜೆಪಿ 3 ರಿಂದ 7 ಸ್ಥಾನ ಗಳಿಸುವ ನಿರೀಕ್ಷೆಯಿದೆ. ಎರಡನೇ ಸಮೀಕ್ಷೆಯಲ್ಲಿ ಎಲ್ ಡಿ ಎಫ್ 68 ರಿಂದ 78 ಸ್ಥಾನ, ಯುಡಿಎಫ್ 62 ರಿಂದ 72 ಸ್ಥಾನ ಹಾಗೂ ಬಿಜೆಪಿ 2 ಸ್ಥಾನ ಗಳಿಸುವ ಸಾಧ್ಯತೆ ಇದೆ ಎಂದು ವರದಿ ಬಂದಿದೆ. ಇದಲ್ಲದೆ ಎಬಿಪಿ ಸಿ ವೋಟರ್ ಹಾಗೂ ಟೈಮ್ಸ್ ನೌ ಸಿ ವೋಟರ್ ಈ ಹಿಂದಿನ ಸಮೀಕ್ಷೆಯನ್ನು ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ.

ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್ ಜನಪ್ರಿಯತೆ ಸಿಎಂ ಪಿಣರಾಯಿ ವಿಜಯನ್ ಜನಪ್ರಿಯತೆ ತಗ್ಗಿಲ್ಲ, ಎಬಿಪಿ ಸಿ -ವೋಟರ್ ಚುನಾವಣಾ ಪೂರ್ವ ಮೊದಲ ಸಮೀಕ್ಷೆಯಲ್ಲಿ ಶೇ 42.34 ಮಂದಿ ವಿಜಯನ್ ಅವರೇ ಮುಂದೆ ಸಿಎಂ ಆಗಲು ಸೂಕ್ತ ಎಂದಿದ್ದಾರೆ. ಹೊಚ್ಚ ಹೊಸ ಸಮೀಕ್ಷೆಯಂತೆ ಪಿಣರಾಯಿ ಪರ ಶೇ 38.5ರಷ್ಟು ಮತ ಹಾಕಿದ್ದಾರೆ. ಶೇ 27ರಷ್ಟು ಮಂದಿ ಮಾಜಿ ಸಿಎಂ ಉಮ್ಮನ್ ಚಾಂಡಿ ಸಿಎಂ ಆದರೆ ಒಳ್ಳೆಯದು ಎಂದಿದ್ದಾರೆ. ಕೇರಳ ಆರೋಗ್ಯ ಸಚಿವೆ ಶೈಲಜಾ ಅವರ ಹೆಸರು ಕೇಳಿ ಬಂದಿದ್ದು, ಅವರ ಪರ ಶೇ 6.9ರಷ್ಟು ಮಂದಿ ನಿಂತಿದ್ದಾರೆ. ಇನ್ನು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಶಶಿ ತರೂರ್ ಪರ ಶೇ 5.2ರಷ್ಟು ಮಂದಿ ಮತ ಹಾಕಿರುವುದು ವಿಶೇಷ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications