ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗಿಲ್ಲ ಅದೃಷ್ಟ; ಎಬಿಪಿ-ಸಿ ವೋಟರ್ ಸಮೀಕ್ಷೆ

|
Google Oneindia Kannada News

ಕೋಲ್ಕತ್ತಾ, ಮಾರ್ಚ್ 16: ಪಶ್ಚಿಮ ಬಂಗಾಳದಲ್ಲಿ ಇದೇ ಮಾರ್ಚ್ 27ರಂದು ವಿಧಾನಸಭೆ ಚುನಾವಣೆ ಆರಂಭವಾಗಲಿದ್ದು, ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಸದ್ಯಕ್ಕೆ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಡುವೆ ಜಿದ್ದಿನ ಹಣಾಹಣಿ ಇದೆ.

ಪ‍ಶ್ಚಿಮ ಬಂಗಾಳದಲ್ಲಿ ಈ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಹಟದಲ್ಲಿ ಬಿಜೆಪಿ ಹಲವು ಕಾರ್ಯತಂತ್ರಗಳನ್ನು ಹೂಡುತ್ತಿದ್ದರೆ, ಪಶ್ಚಿಮ ಬಂಗಾಳ ತನ್ನ ಮಗಳ ಆಡಳಿತವನ್ನಷ್ಟೇ ಬಯಸುತ್ತದೆ. ಹೊರಗಿನವರು ಇಲ್ಲಿ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಈ ನಡುವೆ ಎಬಿಪಿ-ಸಿ ವೋಟರ್ ಪಶ್ಚಿಮ ಬಂಗಾಳ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ವರದಿ ಪ್ರಕಟಿಸಿದೆ. ಆ ಸಮೀಕ್ಷೆ ಏನು ಹೇಳುತ್ತಿದೆ? ಮುಂದೆ ಓದಿ...

ಟೈಮ್ಸ್ ಸಿ-ವೋಟರ್ ಚುನಾವಣಾ ಪೂರ್ವ ಸಮೀಕ್ಷೆ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಅಧಿಕಾರಟೈಮ್ಸ್ ಸಿ-ವೋಟರ್ ಚುನಾವಣಾ ಪೂರ್ವ ಸಮೀಕ್ಷೆ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಅಧಿಕಾರ

 ತೃಣಮೂಲ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ; ಸಮೀಕ್ಷೆ

ತೃಣಮೂಲ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ; ಸಮೀಕ್ಷೆ

ಈ ಬಾರಿಯ ಚುನಾವಣೆಯಲ್ಲಿ ನೀವು ಯಾರಿಗೆ ಮತ ಹಾಕುತ್ತೀರಿ ಎಂದು ಪಶ್ಚಿಮ ಬಂಗಾಳ ಜನರನ್ನು ಕೇಳಿದಾಗ, 43% ಜನರು ತಾವು ತೃಣಮೂಲ ಕಾಂಗ್ರೆಸ್‌ಗೆ ಮತ ಹಾಕುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ, 42% ಜನರು ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ತನ್ನ ಅಧಿಕಾರ ಮುಂದುವರೆಸುವುದೆಂದು ನಂಬಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

 ಗೆಲುವು ತಂದು ಕೊಡುವುದೇ ಬಿಜೆಪಿ ಕಾರ್ಯತಂತ್ರ?

ಗೆಲುವು ತಂದು ಕೊಡುವುದೇ ಬಿಜೆಪಿ ಕಾರ್ಯತಂತ್ರ?

2021ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡಲು ಬಿಜೆಪಿ ತಯಾರಿ ಮಾಡಿಕೊಳ್ಳುತ್ತಿದೆ. ಪರಿವರ್ತನಾ ಯಾತ್ರೆ, ರಥಯಾತ್ರೆ, ಸಾಲು ಸಾಲು ಸಮಾವೇಶ... ಈ ಎಲ್ಲಾ ಕಾರ್ಯತಂತ್ರಗಳೊಂದಿಗೆ ಬಿಜೆಪಿ ಗೆಲುವು ಸಾಧಿಸುವ ಪಣ ತೊಟ್ಟಿದೆ. ಇದಾಗಿಯೂ ಆಡಳಿತ ಪಕ್ಷ ಹೆಚ್ಚು ಮತಗಳನ್ನು ಗಳಿಸುವ ಸಾಧ್ಯತೆ ಹೆಚ್ಚಿದೆ ಎಂದು ಸಮೀಕ್ಷೆ ಹೇಳುತ್ತಿದೆ.

 ತೃಣಮೂಲ ಕಾಂಗ್ರೆಸ್‌ಗೆ 150-166 ಕ್ಷೇತ್ರಗಳಲ್ಲಿ ಗೆಲುವು

ತೃಣಮೂಲ ಕಾಂಗ್ರೆಸ್‌ಗೆ 150-166 ಕ್ಷೇತ್ರಗಳಲ್ಲಿ ಗೆಲುವು

ಸಮೀಕ್ಷೆ ಪ್ರಕಾರ ತೃಣಮೂಲ ಕಾಂಗ್ರೆಸ್‌ಗೆ 294 ಕ್ಷೇತ್ರಗಳ ಪೈಕಿ 150ರಿಂದ 166 ಕ್ಷೇತ್ರಗಳಲ್ಲಿ ಗೆಲುವು ಪಡೆಯುತ್ತದೆ ಎಂದು ಅಂದಾಜಿಸಲಾಗಿದೆ. ಬಿಜೆಪಿಗೆ 98 ರಿಂದ 114 ಕ್ಷೇತ್ರಗಳಲ್ಲಿ ಗೆಲುವು ಪಡೆಯಬಹುದು ಎಂದು ಹೇಳಲಾಗಿದೆ. ಕಾಂಗ್ರೆಸ್- ಎಡಪಕ್ಷಗಳ ಮೈತ್ರಿಯು 23-31 ಸೀಟುಗಳನ್ನು ಪಡೆಯುವ ನಿರೀಕ್ಷೆಯಿದ್ದು, ಇತರೆ ಪಕ್ಷಗಳು 3 ರಿಂದ 5 ಕ್ಷೇತ್ರಗಳನ್ನು ಪಡೆಯಬಹುದು ಎನ್ನಲಾಗಿದೆ.

 ಮಾ.27ರಿಂದ 294 ಕ್ಷೇತ್ರಗಳಿಗೆ ಚುನಾವಣೆ

ಮಾ.27ರಿಂದ 294 ಕ್ಷೇತ್ರಗಳಿಗೆ ಚುನಾವಣೆ

ಪಶ್ಚಿಮ ಬಂಗಾಳದಲ್ಲಿ 294 ಕ್ಷೇತ್ರಗಳಿಗೆ ಮಾರ್ಚ್ 27ರಿಂದ ಚುನಾವಣೆ ಆರಂಭವಾಗಲಿದೆ. ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27, ಏಪ್ರಿಲ್ 1, ಏಪ್ರಿಲ್6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.

English summary
ABP C Voter survey indicates that tmc will come to power again in west bengal and bjp to give tough fight,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X