ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿವೋಟರ್ ಸಮೀಕ್ಷೆ: ಮಂಡ್ಯದಲ್ಲಿ ನಿಖಿಲ್‌ಗೆ ಸೋಲು?

|
Google Oneindia Kannada News

Recommended Video

#Exit Poll 2019: ಎಬಿಪಿ ನ್ಯೂಸ್-ಸಿವೋಟರ್ ಸಮೀಕ್ಷೆ ಪ್ರಕಾರ ಮಂಡ್ಯದಲ್ಲಿ ಸುಮಲತಾಗೆ ಗೆಲುವು? | Oneindia Kannada

ನವದೆಹಲಿ, ಮೇ 19: ರಾಜ್ಯದಲ್ಲಿ ಇರುವ 28 ಲೋಕಸಭಾ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಹೆಚ್ಚಿನ ಸೀಟುಗಳು ಸಿಗಬಹುದು ಎಂಬುದು ಕುತೂಹಲ ಕೆರಳಿಸಿದೆ. ಕೇಂದ್ರದಲ್ಲಿ ಯಾವ ಸರ್ಕಾರ ಅಧಿಕಾರಕ್ಕೆ ಬರಬಹುದು ಎನ್ನುವುದರ ಜತೆಗೆ, ಕರ್ನಾಟಕದ ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆಯೂ ಎಲ್ಲ ಗಮನ ನೆಟ್ಟಿದೆ. ಏಕೆಂದರೆ ಈ ಚುನಾವಣಾ ಫಲಿತಾಂಶವು ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ ಎಂದು ನಂಬಲಾಗಿದೆ.

28 ಕ್ಷೇತ್ರಗಳಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 17 ಸೀಟುಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್ 9 ಸೀಟುಗಳಲ್ಲಿ ಗೆದ್ದಿದ್ದರೆ, ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಿತ್ತು. ಈ ಬರಿ ಲೋಕಸಭೆ ಚುನಾವಣೆಯ ಸ್ಪರ್ಧಾ ಚಿತ್ರಣ ಸಂಪೂರ್ಣ ಬದಲಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಜತೆಗೂಡಿ ಕರ್ನಾಟಕದಲ್ಲಿ ಚುನಾವಣೆ ಎದುರಿಸಿವೆ. ಹೀಗಾಗಿ ಒಟ್ಟಾರೆ ಫಲಿತಾಂಶದಲ್ಲಿ ಬದಲಾವಣೆಗಳಾಗಬಹುದು ಎಂದು ಈ ಮೈತ್ರಿ ಪಕ್ಷಗಳು ನಿರೀಕ್ಷಿಸಿವೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ಮಿತ್ರಪಕ್ಷಗಳ ನಡುವೆ ನೇರ ಪೈಪೋಟಿ ಇದೆ. ಮಂಡ್ಯ ಕ್ಷೇತ್ರದಲ್ಲಿ ಮಾತ್ರ ಈ ಪೈಪೋಟಿ ಬದಲಾಗಿದೆ. ಇಲ್ಲಿ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ನಡುವೆ ನೇರ ಪೈಪೋಟಿ ಇದೆ. ಬಿಎಸ್‌ಪಿ ಹಾಗೂ ಇತರೆ ಕೆಲವು ಪಕ್ಷಗಳ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಫಲಿತಾಂಶ ಬರಲು ಇನ್ನೂ ನಾಲ್ಕು ದಿನ ಬಾಕಿ ಇದೆ. ಅದಕ್ಕೂ ಮುನ್ನ ತಮ್ಮ ರಾಜ್ಯದಲ್ಲಿ ಯಾವ ಯಾವ ಪಕ್ಷ ಎಷ್ಟು ಸೀಟುಗಳನ್ನು ಗೆಲ್ಲಬಹುದು, ಕೇಂದ್ರದಲ್ಲಿ ಯಾವ ಸರ್ಕಾರ ಅಧಿಕಾರಕ್ಕೆ ಬರಬಹುದು ಎಂಬ ಕುತೂಹಲ ತೀವ್ರವಾಗಿದೆ.

2019ರ ಎಕ್ಸಿಟ್‌ ಪೋಲ್ : ಕರ್ನಾಟಕದಲ್ಲಿ ಯಾರಿಗೆ ಎಷ್ಟು ಸ್ಥಾನಗಳು? 2019ರ ಎಕ್ಸಿಟ್‌ ಪೋಲ್ : ಕರ್ನಾಟಕದಲ್ಲಿ ಯಾರಿಗೆ ಎಷ್ಟು ಸ್ಥಾನಗಳು?

ಅದಕ್ಕೂ ಮುನ್ನ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟುಗಳು ಬರಬಹುದು ಎಂಬ ಕುತೂಹಲ ತಣಿಸುವ ನಿಟ್ಟಿನಲ್ಲಿ 'ಎಬಿಪಿ ಸಿ-ವೋಟರ್ ಸಂಸ್ಥೆ ನಡೆಸಿದ ಸಮೀಕ್ಷೆಯ ಫಲಿತಾಂಶ ಇಲ್ಲಿದೆ.

ಸಿವೋಟರ್ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 18, ಕಾಂಗ್ರೆಸ್ 7 ಜೆಡಿಎಸ್ 2 ಮತ್ತು ಪಕ್ಷೇತರರು ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ. ಇಲ್ಲಿ ಮುಂಚೂಣಿಯಲ್ಲಿರುವ ಪಕ್ಷೇತರ ಅಭ್ಯರ್ಥಿ ಎಂದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಸುಮಲತಾ ಅಂಬರೀಷ್. ಸಮೀಕ್ಷೆಯ ಪ್ರಕಾರ ಮಂಡ್ಯದಲ್ಲಿ ಸುಮಲತಾ ಅಂಬರೀಷ್, ಜೆಡಿಎಸ್‌ನ ನಿಖಿಲ್ ಅವರನ್ನು ಸೋಲಿಸಲಿದ್ದಾರೆ.

ಕಮಲದ ದರ್ಬಾರು

ಕಮಲದ ದರ್ಬಾರು

ವಿಧಾನಸಭೆ ಚುನಾವಣೆಯಲ್ಲಿ ಅತ್ಯಧಿಕ ಸೀಟುಗಳನ್ನು ಪಡೆದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸರ್ಕಾರ ರಚಿಸುವ ಅದೃಷ್ಟ ಪಡೆದುಕೊಳ್ಳದ ಬಿಜೆಪಿ, ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಲಿದೆ. ಕಳೆದ ಚುನಾವಣೆಯಲ್ಲಿ 17 ಸೀಟುಗಳಲ್ಲಿ ಗೆದ್ದಿದ್ದ ಬಿಜೆಪಿ, ಈ ಬಾರಿ ಅದನ್ನು ಹೆಚ್ಚಿಸಿಕೊಳ್ಳಲಿದೆ. ಸಮೀಕ್ಷೆ ಪ್ರಕಾರ ಬಿಜೆಪಿ 18 ಸೀಟುಗಳಲ್ಲಿ ಗೆಲ್ಲಲಿದೆ. ಅದು ಈ ಬಾರಿ 27 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ ಎನ್ನುವುದು ಗಮನಾರ್ಹ.

ಎಬಿಪಿ ನ್ಯೂಸ್-ಸಿವೋಟರ್ ಸಮೀಕ್ಷೆ: ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯಎಬಿಪಿ ನ್ಯೂಸ್-ಸಿವೋಟರ್ ಸಮೀಕ್ಷೆ: ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ

ಮೈತ್ರಿಗೆ ಜನರ ಬೆಂಬಲವಿಲ್ಲ?

ಮೈತ್ರಿಗೆ ಜನರ ಬೆಂಬಲವಿಲ್ಲ?

ಕಳೆದ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಈ ಬಾರಿ ಹೊಂದಾಣಿಕೆ ಮಾಡಿಕೊಂಡು ಅಭ್ಯರ್ಥಿಗಳನ್ನು ಇಳಿಸಿವೆ. ಆದರೆ, ಕಮಲದ ಪ್ರಭಾವಳಿಯಲ್ಲಿ ಈ ಮೈತ್ರಿ ಅಷ್ಟೇನೂ ಪರಿಣಾಮಕಾರಿಯಾಗುವುದಿಲ್ಲ ಎನ್ನುತ್ತದೆ ಎಬಿಪಿ-ಸಿವೋಟರ್ ಸಮೀಕ್ಷೆ. ಕಾಂಗ್ರೆಸ್ ಮತ್ತು ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದ್ದರೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವುದು ಸಾಧ್ಯವಾಗುವುದಿಲ್ಲ. ಮಿಗಿಲಾಗಿ ಕಳೆದ ಚುನಾವಣೆಯಲ್ಲಿ 9 ಕ್ಷೇತ್ರಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಎರಡು ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ. ಎರಡು ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದ ಜೆಡಿಎಸ್, ಅಷ್ಟೇ ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ.

ರಿಪಬ್ಲಿಕ್ ಭಾರತ್-ಸಿ ವೋಟರ್ ಸಮೀಕ್ಷೆ: NDA 287, UPA 128 ರಿಪಬ್ಲಿಕ್ ಭಾರತ್-ಸಿ ವೋಟರ್ ಸಮೀಕ್ಷೆ: NDA 287, UPA 128

ಮಂಡ್ಯದಲ್ಲಿ ಸುಮಲತಾ ಜಯಭೇರಿ?

ಮಂಡ್ಯದಲ್ಲಿ ಸುಮಲತಾ ಜಯಭೇರಿ?

ಸಿವೋಟರ್ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಚುನಾವಣಾ ಅಭ್ಯರ್ಥಿಗಳ ಬಲಾಬಲವನ್ನು ಗಮನಿಸಿದಾಗ ರಾಜ್ಯದಲ್ಲಿ ಗೆಲ್ಲುವ ಮಟ್ಟದಲ್ಲಿ ಪೈಪೋಟಿ ನೀಡುವ ಪಕ್ಷೇತರ ಅಭ್ಯರ್ಥಿಯೆಂದರೆ ಸುಮಲತಾ ಅಂಬರೀಷ್ ಮಾತ್ರ. ಹೀಗಾಗಿ ಮಂಡ್ಯದಲ್ಲಿ ಸುಮಲತಾ ಅವರು ಗೆಲುವು ಸಾಧಿಸಲಿದ್ದಾರೆ ಎನ್ನಲಾಗಿದೆ. ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್‌ನ ಕೆಲವು ಮುಖಂಡರು ಕೂಡ ತೆರೆಮರೆಯಲ್ಲಿ ಬೆಂಬಲ ನೀಡಿದ್ದರು. ಹೀಗಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಿಖಿಲ್ ಅವರಿಗೆ ಸೋಲು ನಿಚ್ಚಳ ಎಂದು ಸಮೀಕ್ಷೆ ತಿಳಿಸಿದೆ.

ಲೋಕಸಭಾ ಚುನಾವಣೆ 2019 : ನ್ಯೂಸ್ 18 ಕರ್ನಾಟಕದ ಫಲಿತಾಂಶ ಲೋಕಸಭಾ ಚುನಾವಣೆ 2019 : ನ್ಯೂಸ್ 18 ಕರ್ನಾಟಕದ ಫಲಿತಾಂಶ

ಕರ್ನಾಟಕದಲ್ಲಿ ಯಾರಿಗೆ ಎಷ್ಟು ಮತ?

ಕರ್ನಾಟಕದಲ್ಲಿ ಯಾರಿಗೆ ಎಷ್ಟು ಮತ?

ಬಿಜೆಪಿ ಪರ ಜನರು ಹೆಚ್ಚಿನ ಒಲವು ತೋರಿಸಿದ್ದು, 18 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ. ಕಾಂಗ್ರೆಸ್ ಎರಡು ಸ್ಥಾನಗಳನ್ನು ಕಳೆದುಕೊಂಡು 9 ರಿಂದ 7ಕ್ಕೆ ಏರಲಿದೆ. ಜೆಡಿಎಸ್ ಎರಡು ಸ್ಥಾನಗಳನ್ನು ಉಳಿಸಿಕೊಳ್ಳಲಿದೆಯಾದರೂ ಮಂಡ್ಯ ಕಳೆದುಕೊಳ್ಳಲಿದೆ. ಹಾಸನ ಮತ್ತು ತುಮಕೂರು ಕ್ಷೇತ್ರಗಳಲ್ಲಿ ಅದು ಜಯಗಳಿಸುವ ಸಾಧ್ಯತೆ ಇದೆ. ಕಳೆದ ವರ್ಷ ಯಾವುದೇ ಪಕ್ಷೇತರ ಅಭ್ಯರ್ಥಿ ಗೆದ್ದಿರಲಿಲ್ಲ. ಈ ಬಾರಿ ಸುಮಲತಾ ಅಂಬರೀಷ್ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

English summary
Lok Sabha Elections 2019: ABP News -CVoter Exit poll rersults 2019 Karnataka Live in kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X