ಭೂಮಿ ಮೇಲೆ ಪ್ರಳಯ! ಡೈನೋಸಾರ್ ಸಂತತಿ ನಾಶವಾಗಿದ್ದು ಹೇಗೆ?

ಭೂಮಿ ಮೇಲೆ ಪ್ರಳಯ ಆಗುತ್ತೆ, ಆಗುತ್ತೆ ಅನ್ನೋ ಮಾತುಗಳು ಪದೇ ಪದೆ ಕಿವಿಗೆ ಬೀಳ್ತಾನೆ ಇರುತ್ತೆ. ಆದರೆ 6.6 ಕೋಟಿ ವರ್ಷಗಳ ಹಿಂದೆ ಭೂಮಿ ಮೇಲೆ ನಿಜವಾಗಿಯೂ ಪ್ರಳಯ ಸಂಭವಿಸಿತ್ತು. ಅದರ ಪರಿಣಾಮವೇ ಭೂಮಿ ಮೇಲೆ ಬದುಕಿದ್ದ ಬೃಹತ್ ಗಾತ್ರದ ಜೀವಿಗಳಾದ ಡೈನೋಸಾರ್ ಸಂತತಿ ಸರ್ವನಾಶ ಆಗಿತ್ತು. ಇದನ್ನು ವಿಜ್ಞಾನಿಗಳು ಮತ್ತೊಮ್ಮೆ ಖಚಿತಪಡಿಸಿದ್ದಾರೆ.

ಆದರೆ ಇದಕ್ಕಿಂತಲೂ ಮತ್ತೊಂದು ಮುಖ್ಯವಾದ ವಿಚಾರವನ್ನೂ ವಿಜ್ಞಾನಿಗಳು ಪ್ರಸ್ತಾಪಿಸಿದ್ದಾರೆ. ಅದೇನೆಂದರೆ ಭೂಮಿ ಮೇಲೆ ಅತಿದೊಡ್ಡ ಕಾಡು ಹೊಂದಿರುವ 'ಅಮೆಜಾನ್‌' ಸೃಷ್ಟಿಯಾಗಿದ್ದು ಕೂಡ ಇದೇ ಪ್ರಳಯದಿಂದಲೇ ಅಂತೆ. ಹೌದು ಡೈನೋಸಾರ್ ಸಂತತಿ ಅಳಿವಿಗೆ ಕಾರಣವಾದ ಸುಮಾರು 12 ಕಿಲೋ ಮೀಟರ್ ಗಾತ್ರದ ಬೃಹತ್ ಕ್ಷುದ್ರಗ್ರಹವೇ ಈ ಕಾಡುಗಳನ್ನ ಸೃಷ್ಟಿಸಿದೆಯಂತೆ.

ಭೂಮಿ ಹಾಗೂ ಬೃಹತ್ ಗಾತ್ರದ ಕ್ಷುದ್ರಗ್ರಹದ ನಡುವೆ ಭೀಕರ ಘರ್ಷಣೆ ಸಂಭವಿಸಿತ್ತು. ಸ್ಫೋಟದ ತೀವ್ರತೆಯಿಂದ ಡೈನೋಸಾರ್ ಸಂತತಿ ಬದುಕಿ ಉಳಿಯಲು ಆಗಲಿಲ್ಲ. ಆದರೆ ಕ್ಷುದ್ರಗ್ರಹ ಭೂಮಿಗೆ ಬಂದು ಬಿದ್ದ ಜಾಗವೇ ಅಮೆಜಾನ್ ಅರಣ್ಯವಾಗಿ ಬದಲಾಯಿತು ಎನ್ನುತ್ತಿದೆ ಹೊಸ ಅಧ್ಯಯನ.

ವಿಜ್ಞಾನಿಗಳಿಗೆ ಹೇಗೆ ಗೊತ್ತಾಯಿತು..?

ವಿಜ್ಞಾನಿಗಳಿಗೆ ಹೇಗೆ ಗೊತ್ತಾಯಿತು..?

ಅಮೆಜಾನ್ ಅರಣ್ಯ ಸಹಜವಾಗಿ ಇಡೀ ಜಗತ್ತನ್ನು ಸೆಳೆಯುವ ಪ್ರದೇಶ. ಹೀಗಾಗಿಯೇ ಅಮೆಜಾನ್ ಮೇಲಿನ ಅಧ್ಯಯನಕ್ಕೆ ಬಹುದೊಡ್ಡ ತಂಡವೇ ಇರುತ್ತದೆ. ಇದೇ ರೀತಿ ಒಂದು ತಂಡ ಅಮೆಜಾನ್ ಕಾಡಿನ ಸೃಷ್ಟಿ ಬಗ್ಗೆ ಅಧ್ಯಯನ ಆರಂಭಿಸಿತ್ತು. ಆಗ ವಿಜ್ಞಾನಿಗಳ ತಂಡ ಪಳಿಯುಳಿಕೆ ಪರಾಗ ಸೇರಿದಂತೆ ಹಲವು ವಿಧದ ಪರೀಕ್ಷೆ ನಡೆಸಿದ್ದಾರೆ. ಸುಮಾರು 50 ಸಾವಿರ ಪಳಿಯುಳಿಕೆ ಪರಾಗ ಹಾಗೂ 6 ಸಾವಿರ ಜಾತಿಯ ಎಲೆಗಳ ಅಧ್ಯಯನ ನಡೆಸಿ ವರದಿ ನೀಡಿದ್ದಾರೆ. ಕ್ಷುದ್ರಗ್ರಹ ಬಂದು ಅಪ್ಪಳಿಸುವ ಮೊದಲು ಅಮೆಜಾನ್ ಕಾಡು ಇರುವ ಪ್ರದೇಶ ಸಾಮಾನ್ಯ ಕಾಡಿನಂತೆ ಇತ್ತು. ಆದರೆ ಕ್ಷುದ್ರಗ್ರಹ ಅಪ್ಪಳಿಸಿದ ಬಳಿಕ ಅಲ್ಲಿ ಬಹುದೊಡ್ಡ ಬದಲಾವಣೆ ಸಂಭವಿಸಿ, ಯಾರೂ ಊಹಿಸಲಾಗದ ಕಾಡು ನಿರ್ಮಾಣವಾಗಿದೆಯಂತೆ.

ನೂರಾರು ಕೋಟಿ ಎಕರೆ ಅರಣ್ಯ..!

ನೂರಾರು ಕೋಟಿ ಎಕರೆ ಅರಣ್ಯ..!

ಅಮೆಜಾನ್ ಅರಣ್ಯದಲ್ಲಿ ಇರುವಷ್ಟು ಕಾಡು ಜಗತ್ತಿನ ಯಾವ ಭಾಗದಲ್ಲೂ ಸಿಗೋದಕ್ಕೆ ಸಾಧ್ಯವಿಲ್ಲ. ಇದಕ್ಕೆ ಸಹಕಾರಿಯಾಗಿರೋದು ಅಲ್ಲಿನ ವಾತಾವರಣ. ಸುಮಾರು 5.5 ಮಿಲಿಯನ್ ಸ್ಕ್ವೇರ್ ಕಿಲೋಮೀಟರ್‌ನಷ್ಟು ಅರಣ್ಯ ಪ್ರದೇಶವನ್ನು ಅಮೆಜಾನ್ ಹೊಂದಿದೆ. ಎಕರೆ ಲೆಕ್ಕದಲ್ಲಿ ಹೇಳುವುದಾದರೆ ಸುಮಾರು 130 ಕೋಟಿ ಎಕರೆಗೂ ಹೆಚ್ಚಿನ ಪ್ರದೇಶ. ಇಷ್ಟು ಪ್ರಮಾಣದ ಕಾಡಿನಲ್ಲಿ ಬಹುಪಾಲು ಅರಣ್ಯ ಹರಡಿರುವುದು ಬ್ರೆಜಿಲ್‌ನಲ್ಲಿ. ಎಡಬಿಡದೆ ಸುರಿಯುವ ಮಳೆ, ಸದಾ ತುಂಬಿ ಹರಿಯುವ ಅಮೆಜಾನ್ ನದಿಯ ಸುತ್ತಮುತ್ತಲೂ ದಟ್ಟವಾದ ಮರ-ಗಿಡಗಳು ಬೆಳೆದು ನಿಂತಿವೆ.

ಜೌಗು ಪ್ರದೇಶವಾಗಿರುವ ಕಾಡು ಊಹೆಗೆ ನಿಲುಕದಷ್ಟು ಅರಣ್ಯ ಸಂಪತ್ತು ಹೊಂದಿದೆ. ಅಧ್ಯಯನವೊಂದರ ಪ್ರಕಾರ ಅಮೆಜಾನ್‌ನ 1 ಹೆಕ್ಟೇರ್ ಪ್ರದೇಶದಲ್ಲಿ 750 ಜಾತಿಯ ಮರಗಳು ಹಾಗೂ 1500ಕ್ಕೂ ಹೆಚ್ಚು ಜಾತಿಯ ಗಿಡಗಳನ್ನ ಕಾಣಬಹುದು. ಕೇವಲ 1 ಹೆಕ್ಟೆರ್ ಅಂದರೆ ಸುಮಾರು 2.47 ಎಕರೆ ಪ್ರದೇಶದಲ್ಲೇ ಇಷ್ಟು ಅರಣ್ಯ ಸಂಪತ್ತು ಅಡಗಿದೆ ಎಂದರೆ 5.5 ಮಿಲಿಯನ್ ಸ್ಕ್ವೇರ್ ಕಿಲೋಮೀಟರ್‌ ಜಾಗದಲ್ಲಿ ಇನ್ನೆಂತಹ ಸಂಪತ್ತು ಇರಬೇಡ ಊಹಿಸಿ.

ಕಾಡುಗಳ್ಳರಿಗೆ ಸ್ವರ್ಗ..!

ಕಾಡುಗಳ್ಳರಿಗೆ ಸ್ವರ್ಗ..!

ಅಮೆಜಾನ್‌ನಲ್ಲಿ ಅದರಲ್ಲೂ ಬ್ರೆಜಿಲ್‌ನಲ್ಲಿ ಹರಡಿರುವ ಅಮೆಜಾನ್ ಅರಣ್ಯದಲ್ಲಿ ಅಡಗಿರುವ ಸಂಪತ್ತಿನ ಮೇಲೆ ಸ್ಮಗ್ಲರ್ಸ್ ಹಾಗೂ ಕಾಡುಗಳ್ಳರು ಕಣ್ಣಿಟ್ಟಿದ್ದಾರೆ. ಒಂದ್ಕಡೆ ಕೃಷಿಕರು ಕಾಡು ಕಡಿದು ವ್ಯವಸಾಯ ಮಾಡಿದರೆ, ಸ್ಮಗ್ಲರ್ಸ್ ಇದೇ ಕಾಡಲ್ಲಿ ಕೊಕೇನ್‌ ರೀತಿಯ ಮಾದಕ ವಸ್ತುಗಳನ್ನ ಬೆಳೆಯುತ್ತಿದ್ದಾರೆ. ಇಲ್ಲಿ ಸಿಗುವ ಅಪಾರ ಪ್ರಮಾಣದ ಸಂಪತ್ತು ದೋಚುತ್ತಿದ್ದಾರೆ. ಇಷ್ಟೇ ಅಲ್ಲ ಅಮೆಜಾನ್‌ನ ಎಷ್ಟೋ ಗಣಿಗಾರಿಕೆಗಳು ಸ್ಮಗ್ಲರ್ಸ್ ಹಿಡಿತದಲ್ಲೇ ಇವೆ. ಕಳ್ಳದಾರಿ ಮೂಲಕ ಇಲ್ಲಿ ದೋಚಿದ ಅರಣ್ಯ ಸಂಪತ್ತನ್ನು ಕಾಡುಗಳ್ಳರು ನೆರೆಯ ಅಮೆರಿಕ ಸೇರಿದಂತೆ ದೂರದ ಯೂರೋಪ್ ರಾಷ್ಟ್ರಗಳಿಗೂ ಕದ್ದು ಸಾಗಿಸುತ್ತಿದ್ದಾರೆ. ಹೀಗಾಗಿ ಅಮೆಜಾನ್ ಪಾತ್ರದಲ್ಲಿ ಕತ್ತಲಾದರೆ ಸಾಕು ಜೆಸಿಬಿ, ಗರಗಸ, ಟ್ರಕ್‌ ಆರ್ಭಟ ಜೋರಾಗೇ ಇರುತ್ತೆ. ಬ್ರೆಜಿಲ್‌ನ ಸ್ಥಳೀಯ ಆಡಳಿತಗಳು ಸ್ಮಗ್ಲರ್ಸ್ ಬೆನ್ನಿಗೇ ನಿಂತಿವೆ. ಅಧಿಕಾರಿಗಳ ಕಥೆ ಕೇಳೋದೆ ಬೇಡ, ಅಷ್ಟರಮಟ್ಟಿಗೆ ಕಾಡುಗಳ್ಳರ ಹಾವಳಿ ಇದೆ. ಪೆರು, ಕೊಲಂಬಿಯಾ, ಬೊಲಿವಿಯಾ, ವೆನಿಜುವೆಲಾ ದೇಶಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ.

ಮೂಲ ನಿವಾಸಿಗಳ ಜೀವಕ್ಕೆ ಕುತ್ತು

ಮೂಲ ನಿವಾಸಿಗಳ ಜೀವಕ್ಕೆ ಕುತ್ತು

ಅಮೆಜಾನ್ ಅರಣ್ಯ ಸಸ್ಯ ಸಂಕುಲ ಹಾಗೂ ಪ್ರಾಣಿಗಳಿಗೆ ಮಾತ್ರ ಜಾಗ ನೀಡಿಲ್ಲ. ಇಲ್ಲಿ ಸಾವಿರಾರು ಕಾಡು ಜನಾಂಗಗಳು ವಾಸ ಇವೆ. ಇವರೆಲ್ಲಾ ಇಲ್ಲಿನ ಮೂಲ ನಿವಾಸಿಗಳು. ಆದರೆ ಆಧುನಿಕ ಜಗತ್ತಿನಲ್ಲಿ ಇವರಿಗೂ ಇಲ್ಲಿ ಸ್ಥಾನವೇ ಇಲ್ಲದಂತಾಗಿದೆ. ಸ್ಮಗ್ಲರ್ಸ್ ಹಾಗೂ ಕಾಡುಗಳ್ಳರ ಕೈಯಲ್ಲಿ ಸಿಲುಕಿ ಸಾವಿರಾರು ಕಾಡು ಜನರು ಪ್ರಾಣಬಿಟ್ಟಿದ್ದಾರೆ. ಹಲವರು ಕಾಡನ್ನೇ ತೊರೆದು ನಾಡು ಸೇರಿದ್ದಾರೆ. ಇನ್ನೂ ಆಧುನಿಕ ಜಗತ್ತಿನ ಜೊತೆಗೆ ಸಂಪರ್ಕವನ್ನೇ ಹೊಂದದ ಕೆಲವು ಜನಾಂಗಗಳು ಅಲ್ಲೇ ನರಳಿ ನರಳಿ ಪ್ರಾಣಬಿಡುವ ಸ್ಥಿತಿ ಇದೆ. ಆದರೆ ಇದ್ಯಾವುದೂ ಬ್ರೆಜಿಲ್ ಸರ್ಕಾರಕ್ಕೆ ಕಾಣುತ್ತಿಲ್ಲ. ಇದೇ ರೀತಿ ಅಮೆಜಾನ್ ಹರಡಿರುವ ಪೆರು, ಕೊಲಂಬಿಯಾ, ಬೊಲಿವಿಯಾ, ವೆನಿಜುವೆಲಾ ದೇಶಗಳಲ್ಲೂ ಮುಗ್ಧ ಕಾಡುಜನರ ಮಾರಣಹೋಮ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+