ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರದಲ್ಲಿ ಮತ್ತೆ ರಾಜಕೀಯ ಬಿಕ್ಕಟ್ಟು: ನಿತೀಶ್ ಕುಮಾರ್ ರಾಜಕೀಯ ಇತಿಹಾಸ ಗೊತ್ತಾ?

|
Google Oneindia Kannada News

ಬಿಹಾರ ಮುಖ್ಯಮಂತ್ರಿ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಬಿಜೆಪಿ ಜೊತೆಗಿನ ಮೈತ್ರಿಯಿಂದ ಯೂ ಟರ್ನ್ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಪಕ್ಷದ ಸಭೆ ನಡೆಯಲಿದ್ದು, ಈ ಕುರಿತು ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಜೆಡಿಯು ಸಭೆ ಬೆನ್ನಲ್ಲೇ ಕಾಂಗ್ರೆಸ್, ಆರ್‌ಜೆಡಿ ಕೂಡ ಪ್ರತ್ಯೇಕವಾಗಿ ಪಕ್ಷದ ಸಭೆ ಕರೆದಿವೆ. ಈ ವಾರದಲ್ಲೇ ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಅಂತ್ಯವಾಗಲಿದೆ ಎಂದು ರಾಜಕೀಯ ತಜ್ಞರು ಲೆಕ್ಕಾಚಾರ ಹಾಕಿದ್ದಾರೆ.

ಬಿಜೆಪಿ, ಜೆಡಿಯು ಮೈತ್ರಿಯಲ್ಲಿ ಬಿರುಕು; ಮೋದಿಗೆ ಸ್ವಾಗತವಿಲ್ಲ!ಬಿಜೆಪಿ, ಜೆಡಿಯು ಮೈತ್ರಿಯಲ್ಲಿ ಬಿರುಕು; ಮೋದಿಗೆ ಸ್ವಾಗತವಿಲ್ಲ!

ಮೈತ್ರಿಯನ್ನು ಮುರಿದುಕೊಂಡು ಸರ್ಕಾರ ಬೀಳಿಸುವುದು ನಿತೀಶ್ ಕುಮಾರ್ ಅವರಿಗೆ ಹೊಸದೇನು ಅಲ್ಲ. ಅವರ ರಾಜಕೀಯ ಇತಿಹಾಸದಲ್ಲಿ ಹಲವು ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ, ಸರ್ಕಾರ ರಚನೆ ಮಾಡಿದ್ದಾರೆ, ಅರ್ಧದಲ್ಲೇ ಮೈತ್ರಿಯನ್ನು ತೊರೆದು ಬೇರೆ ಪಕ್ಷದ ಜೊತೆ ಕೈ ಜೋಡಿಸಿದ್ದಾರೆ.

Amid Bihar Political Crisis Let Us Take A Look At A Timeline

2016ರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಆರ್ ಜೆಡಿ, ಕಾಂಗ್ರೆಸ್ ಬೆಂಬಲದೊಂದಿಗೆ ಬಿಹಾರದಲ್ಲಿ ಸರ್ಕಾರ ರಚನೆ ಮಾಡಿದ್ದರು. ಆದರೆ, ಜುಲೈ 26, 2017 ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್ ಮೈತ್ರಿಯಿಂದ ಹೊರಬಂದರು.

ಬಿಜೆಪಿ ಜೊತೆ ಮುನಿಸು: ಮಂಗಳವಾರ ಪಕ್ಷದ ಸಭೆ ಕರೆದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ಬಿಜೆಪಿ ಜೊತೆ ಮುನಿಸು: ಮಂಗಳವಾರ ಪಕ್ಷದ ಸಭೆ ಕರೆದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಜೆಪಿ ಜೊತೆಗಿನ ಮೈತ್ರಿಯೂ ಅಂತ್ಯ?; ನಂತರ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದರು. 2021ರ ಚುನಾವಣೆಯಲ್ಲಿ, ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿಯೊಂದಿಗೆ ಚುನಾವಣೆ ಎದುರಿಸಿತು, ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿ (ಯು) ಕೇವಲ 43 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು, ಆದರೂ ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚಿಸಿತು. ಈಗ ಬಿಜೆಪಿಯೊಂದಿಗಿನ ಮೈತ್ರಿಗೂ ಅಂತ್ಯ ಹಾಡಲಿದೆ ಎನ್ನಲಾಗಿದೆ.

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆಯೇ ನಿತೀಶ್ ಕುಮಾರ್ ಅವರ ರಾಜಕೀಯ ಜೀವನದ ಮಹತ್ವದ ಘಟನೆಗಳು ಪಟ್ಟಿ ಇಲ್ಲಿದೆ.

Amid Bihar Political Crisis Let Us Take A Look At A Timeline

1985: ನಿತೀಶ್ ಕುಮಾರ್ ಮೊದಲ ಬಾರಿಗೆ ಬಿಹಾರ ರಾಜ್ಯ ವಿಧಾನಸಭೆಗೆ ಆಯ್ಕೆಯಾದರು.

1989: ನಿತೀಶ್ ಕುಮಾರ್ ಅವರು ಲಾಲು ಪ್ರಸಾದ್ ಅವರನ್ನು ಬೆಂಬಲಿಸಿದರು ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ಪಡೆದರು.

1996: ನಿತೀಶ್ ಕುಮಾರ್ ಬಿಜೆಪಿಯನ್ನು ಬೆಂಬಲಿಸಿದರು.

2000: ನಿತೀಶ್ ಮೊದಲ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. 151 ಶಾಸಕರೊಂದಿಗೆ ಎನ್‌ಡಿಎಗೆ ಆಗಿನ 324 ಸದಸ್ಯ ಸದನದಲ್ಲಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗಲಿಲ್ಲ. ಅವರು ಬಹುಮತ ಸಾಬೀತುಪಡಿಸುವ ಮೊದಲು ರಾಜೀನಾಮೆ ನೀಡಿದರು.

Amid Bihar Political Crisis Let Us Take A Look At A Timeline

1988 ರಿಂದ 2004: ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರೈಲ್ವೆ, ಸಾರಿಗೆ ಮತ್ತು ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದರು.

2004: ನಳಂದದಿಂದ ಆರನೇ ಅವಧಿಗೆ ಲೋಕಸಭೆಗೆ ಮರು ಆಯ್ಕೆಯಾದರು.

ನವೆಂಬರ್ 2005: ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆ ಮಾಡುವ ಮೂಲಕ ನಿತೀಶ್ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು

ಜೂನ್ 2013: ನರೇಂದ್ರ ಮೋದಿಯೇ ಪ್ರಧಾನಿ ಅಭ್ಯರ್ಥಿ ಎಂದು ಸ್ಪಷ್ಟವಾದ ನಂತರ ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದರು

2014: ನಿತೀಶ್ ಕುಮಾರ್ ಸಿಎಂ ಸ್ಥಾನದಿಂದ ಕೆಳಗಿಳಿದರು ಮತ್ತು ಜಿತನ್ ರಾಮ್ ಮಾಂಝಿ ಅವರನ್ನು ಸಿಎಂ ಆಗಿ ನೇಮಿಸಲಾಯಿತು

ಫೆಬ್ರವರಿ 2015: ನಿತೀಶ್ ಅವರ JD(U) ಲಾಲು ಪ್ರಸಾದ್ ಯಾದವ್ ನೇತೃತ್ವದಲ್ಲಿ ಆರ್ ಜೆಡಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುತ್ತದೆ. ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಮತ್ತೆ ಸಿಎಂ ಆಗುತ್ತಾರೆ.

ಜುಲೈ 2016: ನಿತೀಶ್ ಮತ್ತೊಂದು ಯೂ-ಟರ್ನ್ ತೆಗೆದುಕೊಂಡ ನಿತೀಶ್ ಕುಮಾರ್ ಮೈತ್ರಿ ಮುರಿದುಕೊಂಡರು, ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಿದರು

2020: ಬಿಜೆಪಿಯೊಂದಿಗೆ ಚುನಾವಣೆಗೆ ಸ್ಪರ್ಧಿಸಿ ಮತ್ತೊಮ್ಮೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಚುನಾವಣೆಯಲ್ಲಿ ಜೆಡಿಯು ಕೇವಲ 43 ಸ್ಥಾನಗಳನ್ನು ಗಳಿಸಿದ್ದು, ಬಿಜೆಪಿ 74 ಸ್ಥಾನಗಳನ್ನು ಗೆದ್ದಿದೆ.

2022: ಬಿಜೆಪಿ ಜೊತೆ ನಿತೀಶ್ ಕುಮಾರ್ ಸಂಬಂಧ ಹದಗೆಟ್ಟಿದ್ದು, ಬಿಹಾರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

English summary
The Bihar government is on the verge of a collapse as Nitish Kumar appears to make a u-turn yet again. In the 2021 elections, Nitish Kumar’s JD(U) fought the elections with the BJP and formed the government although the JD(U) was able to get just 43 seats. With the political crisis looming large in Bihar, let us take a look at a timeline.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X