Mahakumbh Mela 2025: 13,000 ಅಡಿ ಎತ್ತರದಲ್ಲಿ ಹಾರಿತು ಮಹಾಕುಂಭ ಮೇಳದ ಧ್ವಜ
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ-2025ಕ್ಕೆ ಸಕಲ ತಯಾರಿಗಳು ನಡೆಯುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ ಮಹಾಕುಂಭ ಮೇಳಕ್ಕೆ ಚಾಲನೆ ಸಿಗಲಿದ್ದು, ಇದೀಗ ಮುಗಿಲೆತ್ತರದಲ್ಲೂ ಮಹಾಕುಂಭ ಮೇಳ ಸದ್ದು ಮಾಡುತ್ತಿದೆ. ಈ ಕಾರ್ಯಕ್ರಮಕ್ಕೆ ವಿದೇಶಗಳಿಂದಲೂ ಪ್ರವಾಸಿಗರು ಬರಲಿದ್ದು, ಸದ್ಯ ಬ್ಯಾಂಕಾಂಕ್‌ನಲ್ಲಿ ಸುಮಾರು 13,000 ಅಡಿ ಎತ್ತರದಲ್ಲಿ ಮಹಾಕುಂಭ ಮೇಳದ ಧ್ವಜ ಹಾರಿಸಲಾಗಿದೆ.
ಪ್ರಯಾಗ್‌ರಾಜ್ ಮೂಲದವರಾದ ಅನಾಮಿಕಾ ಶರ್ಮಾ ಅವರು 2025ರ ಮಹಾಕುಂಭ ಮೇಳಕ್ಕೆ ಬ್ಯಾಂಕಾಕ್‌ನಲ್ಲಿ 13,000 ಅಡಿ ಎತ್ತರದಿಂದ ಜಿಗಿದು ಮಹಾಕುಂಭ ಮೇಳದ ಧ್ವಜ ಹಾರಿಸುವ ಮೂಲಕ ಈ ಧಾರ್ಮಿಕ ಕಾರ್ಯಕ್ರಮಕ್ಕೆ ಎಲ್ಲರನ್ನೂ ಆಹ್ವಾನಿಸಿದ್ದಾರೆ. ಈ ರೀತಿ ಅವರು 2025ರ ಮಹಾ ಕುಂಭ ಮೇಳದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನದ ಭಾಗವಾಗಿ ಅನಾಮಿಕಾ ಅವರು ಧ್ವಜ ಹಾರಿಸುವ ಸಾಹಸ ಪ್ರದರ್ಶಿಸಿದ್ದಾರೆ. ಅನಾಮಿಕಾ ಶರ್ಮಾ ಅವರು ಈ ಹಿಂದೆಯೂ ಧೈರ್ಯಶಾಲಿ ಸಾಹಸಗಳಿಗೆ ಹೆಸರುವಾಸಿಯಾಗಿದ್ದರು. ಈ ಹಿಂದೆ ಅವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ತೆರೆಯುವ ನೆನಪಿಗಾಗಿ ಜೈ ಶ್ರೀರಾಮ್ ಮತ್ತು ರಾಮ ಮಂದಿರದ ಧ್ವಜಗಳೊಂದಿಗೆ ಎತ್ತರದಿಂದ ಹಾರಿದ್ದರು.

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಹಾಕುಂಭ ಮೇಳಕ್ಕೆ ಇದೊಂದು ವಿಭಿನ್ನ ರೀತಿಯ ಆಮಂತ್ರಣ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಇನ್ನೇನು ಕುಂಭಮೇಳಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಭಾರತೀಯ ರೈಲ್ವೆ ಕೂಡ 98 ವಿಶೇಷ ರೈಲುಗಳನ್ನು ಪರಿಚಯಿಸುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಯಾಗರಾಜ್‌ಗೆ ಪ್ರಯಾಣಿಸುವ ಭಕ್ತರಿಗೆ ಸುರಕ್ಷಿತ ಮತ್ತು ಆರಾಮದಾಯಕ ಪ್ರಯಾಣವನ್ನು ನೀಡಲು ವಿಶೇಷ ರೈಲುಗಳನ್ನು ವಿನ್ಯಾಸಗೊಳಿಸಲಾಗಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಪಶ್ಚಿಮ ರೈಲ್ವೆಯು ಕುಂಭಮೇಳದ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ಈ ರೈಲುಗಳಿಗೆ ಫ್ಲೆಕ್ಸ್ ಪೇಂಟಿಂಗ್ ಮೂಲಕ ವಿಶೇಷವಾಗಿ ಸಿದ್ಧಪಡಿಸಲಾಗಿದೆ. ಈ ರೈಲುಗಳಲ್ಲಿ ನೈರ್ಮಲ್ಯ ಹಾಗೂ ವಿದ್ಯುತ್ ಉಪಕರಣಗಳ ಕಾರ್ಯನಿರ್ವಹಣೆಯನ್ನು ನೋಡಿಕೊಳ್ಳಲಾಗುತ್ತಿದ್ದು, ಇಲ್ಲಿಯವರೆಗೆ 98 ವಿಶೇಷ ರೈಲುಗಳನ್ನು ಪ್ರಾರಂಭಿಸಲಾಗಿದೆ. ಪ್ರಯಾಣಿಕರಿಗೆ ಮಾರ್ಗದರ್ಶನ ನೀಡಲು ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಆರ್‌ಪಿಎಫ್ ಅಧಿಕಾರಿಗಳ ತಂಡವನ್ನು ನಿಲ್ದಾಣಗಳಲ್ಲಿ ನಿಯೋಜಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಹಾಕುಂಭದ ಸಮಯದಲ್ಲಿ ಭಕ್ತರಿಗಾಗಿ ಭಾರತೀಯ ರೈಲ್ವೇಯು ಸಮಗ್ರ ಯೋಜನೆಯನ್ನು ಅನಾವರಣಗೊಳಿಸಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣದ ಬೇಡಿಕೆಯನ್ನು ಪೂರೈಸಲು 3,300 ವಿಶೇಷ ಸೇವೆಗಳು ಸೇರಿದಂತೆ 10,000ಕ್ಕೂ ಹೆಚ್ಚು ರೈಲುಗಳನ್ನು ನಿರ್ವಹಿಸಲಾಗುವುದು ಎಂದು ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರದ ಕಾರ್ಯನಿರ್ವಾಹಕ ನಿರ್ದೇಶಕ ದಿಲೀಪ್ ಕುಮಾರ್ ಹೇಳಿದ್ದಾರೆ.
ಮಹಾಕುಂಭ ಮುಂಗಡ ಬುಕಿಂಗ್ ಸುಗಮಗೊಳಿಸಲು ಪ್ರಮುಖ ನಿಲ್ದಾಣಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಒಳಗೊಂಡಿವೆ. ರೈಲ್ವೇ ಸಂರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗುತ್ತಿದೆ. ಇವರು ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸಲಿದ್ದಾರೆ. ಪ್ರಯಾಣಿಕರಿಗೆ ರೈಲುಗಳಿಗೆ ಕ್ರಮಬದ್ಧವಾಗಿ ಮಾರ್ಗದರ್ಶನವನ್ನೂ ನೀಡಲಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications