Anjali Nimbalkar Profile: ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ವ್ಯಕ್ತಿ ಪರಿಚಯ
ಕರ್ನಾಟಕ ರಾಜ್ಯದ ಕೆಲವೇ ಕೆಲವು ಮಹಿಳಾ ರಾಜಕಾರಣಿಗಳಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಕೂಡ ಒಬ್ಬರು. ಈಗಾಗಲೇ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟು ಜನಮನ್ನಣೆಗಳಿಸುವಲ್ಲಿ ಅಂಜಲಿ ನಿಂಬಾಳ್ಕರ್ ಯಶಸ್ವಿಯಾಗಿದ್ದಾರೆ.
ಬೆಂಗಳೂರು, ಮಾಚ್ 7: ಅಂಜಲಿ ನಿಂಬಾಳ್ಕರ್ ಕರ್ನಾಟಕ ಕಾಂಗ್ರೆಸ್ ಮಹಿಳಾ ನಾಯಕಿರಲ್ಲಿ ಪ್ರಮುಖರಾಗಿದ್ದು, ರಾಜಕೀಯ ಪ್ರತಿಷ್ಠೆಯ ಕಣ ಬೆಳಗಾವಿ ಜಿಲ್ಲೆಯ ಖಾನಾಪುರದ ಶಾಸಕಿಯಾಗಿದ್ದಾರೆ. ಕರ್ನಾಟಕ ರಾಜ್ಯದ ಕೆಲವೇ ಕೆಲವು ಮಹಿಳಾ ರಾಜಕಾರಣಿಗಳಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಕೂಡ ಒಬ್ಬರು. ಈಗಾಗಲೇ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟು ಜನಮನ್ನಣೆಗಳಿಸುವಲ್ಲಿ ಅಂಜಲಿ ನಿಂಬಾಳ್ಕರ್ ಯಶಸ್ವಿಯಾಗಿದ್ದಾರೆ.
ಮರಾಠ ಸಮುದಾಯದವರಾಗಿರುವ ಅಂಜಲಿ ನಿಂಬಾಳ್ಕರ್ ಆಗಸ್ಟ್ 22, 1976ರಲ್ಲಿ ಖಾನಾಪುರದಲ್ಲಿ ಜನಿಸಿದರು. ವೃತ್ತಿಯಲ್ಲಿ ವೈದ್ಯರಾಗಿದ್ದ ಅಂಜಲಿ ನಿಂಬಾಳ್ಕರ್ ಬಳಿಕ ರಾಜಕೀಯದತ್ತ ಒಲವು ತೋರಿದರು. ಇವರ ಪತಿ ಹೇಮಂತ್ ನಿಂಬಾಳ್ಕರ್ ಕರ್ನಾಟಕ ಜನಪ್ರಿಯ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ಕಾಂಗ್ರೆಸ್‌ಗೆ ಸೇರಿದ ಅಂಜಲಿ ನಿಂಬಾಳ್ಕರ್ 2018ರ ವಿಧಾನಸಭಾ ಚುನಾವಣೆ ಮೂಲಕ ತಮ್ಮ ರಾಜಕೀಯ ಅದೃಷ್ಟ ಪರೀಕ್ಷೆಗಿಳಿದರು. 2018ರ ಚುನಾವಣೆಯಲ್ಲಿ ಖಾನಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಅಂಜಲಿ ನಿಂಬಾಳ್ಕರ್ 36,649 ಮತಗಳನ್ನು ಗಳಿಸುವ ಮೂಲಕ ಪ್ರತಿ ಸ್ಪರ್ಧಿಯಾಗಿದ್ದ ಬಿಜೆಪಿಯ ವಿಠ್ಠಲ್ ಹಲಗೇಕರ್ ವಿರುದ್ಧ 5,133 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಇನ್ನು ಅಂಜಲಿ ನಿಂಬಾಳ್ಕರ್ ವಿರುದ್ಧ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ನಾಸಿರ್ ಭಗವಾನ್ ಸಹ 27,272 ಮತಗಳನ್ನು ಗಳಿಸುವ ಮೂಲಕ ಪೈಪೋಟಿ ನೀಡಿದ್ದರು. ಹೀಗಾಗಿ ಈ ಬಾರಿಯೂ ಖಾನಾಪುರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಭರ್ಜರಿ ಪೈಪೋಟಿ ನಡೆಯುವ ಸಾಧ್ಯತೆ ಇದೆ.
ಐದು ವರ್ಷದ ಶಾಸಕಿ ಅವಧಿಯನ್ನು ಯಶಸ್ವಿಯಾಗಿ ಮುಗಿಸಿರುವ ಅಂಜಲಿ ನಿಂಬಾಳ್ಕರ್ ಈ ಬಾರಿಯೂ ಕಾಂಗ್ರೆಸ್‌ನಿಂದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇತ್ತ ಈ ಬಾರಿ ಅಂಜಲಿ ನಿಂಬಾಳ್ಕರ್‌ಗೆ ಪ್ರತಿಸ್ಪರ್ಧೆ ನೀಡಲು ಬಿಜೆಪಿಯಿಂದ ಮೂವರು ಟಿಕೆಟ್ ಆಕಾಂಕ್ಷಿಗಳು ಸಜ್ಜಾಗಿದ್ದು, ಜೆಡಿಎಸ್‌ನಿಂದ ನಾಸಿರ್ ಭಗವಾನ್ ಸರ್ಧಿಸಲು ಮುಂದಾಗಿದ್ದಾರೆ.

ಇನ್ನು ಶಾಸಕಿಯಾಗಿದ್ದ ಅವಧಿಯಲ್ಲೇ ಅಂಜಲಿ ನಿಂಬಾಳ್ಕರ್ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಗಳ ಚುನಾವಣೆಗೆ ಸ್ಪರ್ಧಿಸಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಈ ಚುನಾವಣೆ ತೀವ್ರ ಕುತೂಹಲ ಮೂಡಿಸಿತ್ತು. ತೀವ್ರ ಪೈಪೋಟಿ ಏರ್ಪಟ್ಟಿದ್ದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಮಾಜಿ ಶಾಸಕ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅರವಿಂದ ಪಾಟೀಲ್ ಗೆಲುವು ಸಾಧಿಸಿದ್ದರು. ಶಾಸಕಿ ಅಂಜಲಿ ನಿಂಬಾಳ್ಕರ್ ಸೋಲುಕಂಡಿದ್ದರು.
ಮೊದಲ ಬಾರಿ ಶಾಸಕರಾದರೂ ಅಂಜಲಿ ನಿಂಬಾಳ್ಕರ್ ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಮೂಲಕ ಜನಮನ್ನಣೆ ಗಳಿಸಿದ್ದು, ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧಿಸಲು ಸಜ್ಜಾಗಿದ್ದಾರೆ. ಈಗಾಗಲೇ ಚುನಾವಣೆ ಪ್ರಚಾರ ಆರಂಭಿಸಿರುವ ಅವರು ಪ್ರಜಾಧ್ವನಿ ಯಾತ್ರೆಯಲ್ಲಿ ಸಕ್ರಿಯರಾಗಿದ್ದಾರೆ.
ಅಂಜಲಿ ನಿಂಬಾಳ್ಕರ್ ಅವರ ಆಸ್ತಿ ವಿವರ
ಅಂಜಲಿ ನಿಂಬಾಳ್ಕರ್ ಅವರ ಒಟ್ಟು ಆಸ್ತಿ 14.03 ಕೋಟಿ ರೂಪಾಯಿ, ಸಾಲ 92.9 ಲಕ್ಷ ರೂಪಾಯಿ ಎನ್ನಲಾಗಿದೆ. ಇನ್ನು ಅಂಜಲಿ ನಿಂಬಾಳ್ಕರ್ https://www.facebook.com/Dr.AnjaliHemantNimbalkar/ ಫೇಸ್‌ಬುಕ್ ಖಾತೆ ಹಾಗೂ https://twitter.com/DrAnjaliTai/status/1577932630992965632 ಟ್ವಿಟರ್ ಖಾತೆ ಮೂಲಕ ಸದಾ ಜನರೊಂದಿಗೆ ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.












Click it and Unblock the Notifications