ಅನ್ನಭಾಗ್ಯ ಯೋಜನೆ; ಅನ್ನ ದೇವರಿಗಿಂತ ಇನ್ನು ದೇವರು ಇಲ್ಲ
'ಅನ್ನ ದೇವರಿಗಿಂತ ಇನ್ನು ದೇವರು ಇಲ್ಲ' ಎನ್ನುವ ಸರ್ವಜ್ಞರ ಕವಿವಾಣಿಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿಯಾದ ಅವಧಿಯಲ್ಲಿ ಉಚಿತವಾಗಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದರು. ಹಸಿವು ಮುಕ್ತ ರಾಜ್ಯ ಮಾಡುವ ಗುರಿಯನ್ನಿಟ್ಟುಕೊಂಡು 2013ರಲ್ಲಿ ರಾಜ್ಯದ ಚುಕ್ಕಾಣಿ ಹಿಡಿದಾಗ ಬಸವಣ್ಣನವರ ದಾಸೋಹ ಸಂಸ್ಕೃತಿಯಂತೆ ಹಸಿವು ಮುಕ್ತ ಕರ್ನಾಟಕ ಮಾಡುವ ತಮ್ಮ ಜೀವಮಾನದ ಆಶಯ ಮತ್ತು ಕಾಳಜಿಯ ಭಾಗವಾಗಿ ರೂಪಿಸಿದ ಯೋಜನೆ ಅನ್ನಭಾಗ್ಯ.
ಆಹಾರ ಭದ್ರತಾ ಯೋಜನೆಯಡಿ ಪ್ರತಿಯೊಬ್ಬ ಪಡಿತರದಾರನಿಗೆ ತಲಾ 10 ಕೆಜಿ ಆಹಾರಧಾನ್ಯ ಒದಗಿಸುವ ಯೋಜನೆ ಅನ್ನಭಾಗ್ಯ. ಪ್ರಸ್ತುತ ಹೆಚ್ಚುವರಿ ಅಕ್ಕಿಯ ಅಲಭ್ಯತೆಯ ಹೊರತಾಗಿಯೂ ಸರ್ಕಾರ ಕೈಚೆಲ್ಲಿ ಕುಳಿತಿಲ್ಲ. ಜನರಿಗೆ ನೀಡಿದ ವಾಗ್ದಾನದಂತೆ ಬಿಪಿಎಲ್ ಕುಟುಂಬದ ಸದಸ್ಯರಿಗೆ 5 ಕೆಜಿ ಅಕ್ಕಿಯ ಬದಲಾಗಿ ತಲಾ ರೂ.170 ಕುಟುಂಬದ ಯಜಮಾನಿಯ ಖಾತೆಗೆ ಹಾಕುವ ಕ್ರಾಂತಿಕಾರಕ ಕ್ರಮಕ್ಕೆ ಸರ್ಕಾರ ಈಗಾಗಲೇ ಚಾಲನೆ ನೀಡಿದೆ. ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಕುಟುಂಬ ಪಡಿತರ ಚೀಟಿಗಳು ಮತ್ತು ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ವಿತರಿಸಲಾಗಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಈ ಯೋಜನೆ ಅನ್ವಯ.

ಸರ್ಕಾರ ರಚನೆಯಾದ ನಂತರ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ 5 ಕೆಜಿ ಅಕ್ಕಿ ನೀಡಲು ಸಿದ್ದತೆಗಳನ್ನು ನಡೆಸಲಾಯಿತು. ಆದರೆ ರಾಜ್ಯದಲ್ಲಿ ಅಷ್ಟೊಂದು ಅಕ್ಕಿ ದಾಸ್ತಾನು ಇಲ್ಲದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಅಕ್ಕಿ ಖರೀದಿಸಲು ಪ್ರಯತ್ನ ನಡೆಸಿತು. ಜೂನ್ 23ರಂದು ಸ್ವತಃ ಮುಖ್ಯಮಂತ್ರಿ ಅವರೇ ದೆಹಲಿಗೆ ತೆರಳಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಸಲ್ಲಿಸಿ ಬಂದಿದ್ದರು.ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡಲು ಸಾಧ್ಯವಿಲ್ಲವೆಂದಾಗ, ಫಲಾನುಭವಿಗಳಿಗೆ ನಗದು ನೀಡುವುದರಿಂದ ಅನುಕೂಲವಾಗುತ್ತದೆ ಎಂದರಿತು ಈ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಅನ್ನಭಾಗ್ಯ ಯೋಜನೆ; 'ನೆಮ್ಮದಿಯ ಬದುಕಿಗೆ ಆಹಾರ ಭದ್ರತೆ ಅನ್ನಭಾಗ್ಯ' ಎನ್ನುವ ಘೋಷವಾಕ್ಯದೊಂದಿಗೆ ಜುಲೈ 10ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅನ್ನಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಲಾಯಿತು. ಆ.28ಕ್ಕೆ ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸಲಿದೆ. ಸರ್ಕಾರದ ವಾಗ್ದಾನದಂತೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಅತ್ಯುತ್ತಮ ಸ್ಪಂದನೆ ಮತ್ತು ಪ್ರತಿಕ್ರಿಯೆ ಜನರಿಂದ ಲಭ್ಯವಾಗಿದೆ.
ನಿರೀಕ್ಷೆಗೆ ತಕ್ಕಂತೆ ಅಕ್ಕಿ ಸಿಗದ ಹಿನ್ನೆಲೆಯಲ್ಲಿ ಸರ್ಕಾರ ಫಲಾನುಭವಿಗಳ ಖಾತೆಗೆ 5 ಕೆಜಿ ಅಕ್ಕಿ ಬದಲು ತಲಾ ಸದಸ್ಯರಿಗೆ ರೂ.170 ಜಮೆ ಮಾಡುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ ತಿಂಗಳಿನಲ್ಲಿ ಒಟ್ಟು 3,08,429 ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‍ದಾರರಿದ್ದು ಈ ಕುಟುಂಬಗಳ 10,03.264 ಸದಸ್ಯರಿಗೆ ರೂ.17,46,73,810 ಗಳನ್ನು ಜಮೆ ಮಾಡಲಾಗಿದೆ. ಹಾಗೂ ಆಗಸ್ಟ್‌ನಲ್ಲಿ ಒಟ್ಟು 3,25,156 ಕಾರ್ಡುಗಳ ಕುಟುಂಬದ 11,45,683 ಸದಸ್ಯರಿಗೆ ರೂ.18,49,56,430 ಜಮೆ ಮಾಡಲಾಗಿದೆ.
ಯೋಜನೆಯ ಕುರಿತು ಮಾತನಾಡಿದ ಅವಿನ್ ಆರ್. ಉಪ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಶಿವಮೊಗ್ಗ, "ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಯಾವುದೇ ದೂರುಗಳಿದ್ದರೆ ಉಚಿತ ಸಹಾಯವಾಣಿ ಸಂಖ್ಯೆ 1967 ಹಾಗೂ 1800-4259339ಕ್ಕೆ ಕರೆ ಮಾಡಬಹುದು. ಹಾಗೂ ನ್ಯಾಯಬೆಲೆ ಅಂಗಡಿಯ ವ್ಯಾಪ್ತಿಯಲ್ಲಿ ಅಧಿಕಾರಿಯೊಬ್ಬರ ಸಮ್ಮುಖದಲ್ಲಿ ನಿರ್ದಿಷ್ಟ ದಿನಾಂಕದಂದು ಅನ್ನಭಾಗ್ಯ ಅದಾಲತ್ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆ ಫಲಾನುಭವಿ ಮಾಚೇನಹಳ್ಳಿಯ ಮಂಜಣ್ಣ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, "ಅನ್ನಭಾಗ್ಯ ಯೋಜನೆ ನಮ್ಮಂತಹ ಬಡವರಿಗೆ ವರದಾನವಾಗಿದೆ. ಅನೇಕರು ಏನೇನೋ ಟೀಕೆ ಮಾಡುತ್ತಿದ್ದಾರೆ. ಆದರೆ ಆ ಟೀಕೆಗಳಿಗೆ ಅರ್ಥವಿಲ್ಲ. ಮುಖ್ಯಮಂತ್ರಿಯವರು 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುತ್ತಿರುವುದು ಸಹ ತುಂಬಾ ಉಪಯೋಗವಾಗಿದೆ. ಈ ಹಣದಿಂದ ಅಕ್ಕಿ ಅಥವಾ ಇತರೆ ದಿನಸಿ, ಆರೋಗ್ಯ ಇನ್ನಿತರೆ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದೇವೆ" ಎಂದರು.
ಸೋಗಾನೆಯ ರಾಮಕ್ಕ ಮಾತನಾಡಿ, "ನಾನು ಮತ್ತು ನನ್ನ ಪತಿ ಕೂಲಿ ಮಾಡುತ್ತಿದ್ದು, ಅದರಿಂದಲೇ ಮಕ್ಕಳ ಶಿಕ್ಷಣ ಹಾಗೂ ನಮ್ಮ ಕುಟುಂಬ ನಿರ್ವಹಣೆ ಮಾಡಬೇಕಿದೆ. ಹಸಿದವರಿಗೇ ಗೊತ್ತು ಅನ್ನದ ಬೆಲೆ. ಸರ್ಕಾರ ನೀಡುತ್ತಿರುವ ಅಕ್ಕಿಯಿಂದ ನಮ್ಮ ಜೀವನ ಸಾಗುತ್ತಿದೆ. ಈಗ ಅಕ್ಕಿ ಬದಲು ಹಣ ನೀಡುತ್ತಿರುವುದರಿಂದ ಇತರೆ ಅಗತ್ಯಗಳನ್ನು ಪೂರೈಸಿಕೊಳ್ಳುತ್ತಿದ್ದೇವೆ, ಸರ್ಕಾರಕ್ಕೆ ಧನ್ಯವಾದಗಳು" ಎಂದು ಹೇಳಿದ್ದಾರೆ.
ವಿಶೇಷ ಲೇಖನ; ಭಾಗ್ಯ, ವಾರ್ತಾ ಸಹಾಯಕರು, ವಾರ್ತಾ ಇಲಾಖೆ ಶಿವಮೊಗ್ಗ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications