• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿಧಾನಸಭೆ ಚುನಾವಣೆ 2022: ಫಲಿತಾಂಶವನ್ನು ವೀಕ್ಷಿಸುವುದು ಹೇಗೆ?

|
Google Oneindia Kannada News

ನವದೆಹಲಿ, ಮಾರ್ಚ್ 09: ಪಂಚ ರಾಜ್ಯಗಳಲ್ಲಿನ ಚುನಾವಣಾ ಕದನವು ಸುಮಾರು ಒಂದು ತಿಂಗಳ ಅವಧಿಯ ಮತದಾನ ಪ್ರಕ್ರಿಯೆಯ ನಂತರ ಕೊನೆಗೊಂಡಿದೆ. ಮಾರ್ಚ್ 10 ರಂದು ಪಂಜಾಬ್, ಉತ್ತರ ಪ್ರದೇಶ, ಮಣಿಪುರ, ಉತ್ತಾರಖಂಡ, ಗೋವಾದ ವಿಧಾನಸಭೆ ಚುನಾವಣೆ ಫಲಿತಾಂಶಗಳು ಹೊರಬೀಳಲಿದೆ.

ಮಾರ್ಚ್ 10 ರಂದು ಬೆಳಿಗ್ಗೆ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಮತ ಎಣಿಕೆ ಪ್ರಾರಂಭವಾಗಲಿದೆ. ಕೋವಿಡ್‌ ಮಾರ್ಗಸೂಚಿಯನ್ನು ಪಾಲನೆ ಮಾಡಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಎರಡು ತಿಂಗಳಲ್ಲಿ ಒಟ್ಟು 690 ವಿಧಾನಸಭಾ ಕ್ಷೇತ್ರಗಳು ಮತದಾನವಾಗಿದ್ದು, ಯುಪಿಯಲ್ಲಿ ಗರಿಷ್ಠ (403 ಸ್ಥಾನಗಳು) ನಂತರ ಪಂಜಾಬ್ (117), ಉತ್ತರಾಖಂಡ್ (70), ಮಣಿಪುರ (60), ಮತ್ತು ಗೋವಾ (40)ದ ಮುಂದಿನ ಸರ್ಕಾರ ಯಾವುದು ಎಂದು ಮಾರ್ಚ್ 10 ರಂದು ನಿರ್ಧಾರವಾಗಲಿದೆ.

ಡೈಲಿಹಂಟ್‌ನಲ್ಲಿ 5 ರಾಜ್ಯಗಳ ಚುನಾವಣೆ ಫಲಿತಾಂಶ ಫುಲ್ ಕವರೇಜ್ಡೈಲಿಹಂಟ್‌ನಲ್ಲಿ 5 ರಾಜ್ಯಗಳ ಚುನಾವಣೆ ಫಲಿತಾಂಶ ಫುಲ್ ಕವರೇಜ್

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಮಾರ್ಚ್ 10ರಂದು ಪಂಚ ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ.

ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ, ಮತಗಳ ಎಣಿಕೆಯು ಬೆಳಿಗ್ಗೆ 8 ಗಂಟೆಯಿಂದ ಪ್ರಾರಂಭವಾಗುತ್ತದೆ. ಐದು ರಾಜ್ಯಗಳ ಫಲಿತಾಂಶಗಳನ್ನು ಸೂಚಿಸುವಂತೆಯೇ ಸಂಜೆಯೊಳಗೆ ಮತಗಳ ಎಣಿಕೆ ಪೂರ್ಣಗೊಳ್ಳಲಿದೆ.

Lokniti-CSDS Exit Poll Result 2022: ಐದು ರಾಜ್ಯಗಳಲ್ಲಿ ಯಾರಿಗೆ ಗದ್ದುಗೆ? Lokniti-CSDS Exit Poll Result 2022: ಐದು ರಾಜ್ಯಗಳಲ್ಲಿ ಯಾರಿಗೆ ಗದ್ದುಗೆ?

ಚುನಾವಣಾ ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ? ಎಲ್ಲಿ?

ಈ ಲಿಂಕ್ ಮೂಲಕ ನೀವು ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನೀವು ನೋಡಬಹುದು. ಇದನ್ನು ಹೊರತುಪಡಿಸಿ ಚುನಾವಣಾ ಫಲಿತಾಂಶಗಳನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ವೆಬ್‌ಸೈಟ್ ಅಂದರೆ eciresults.nic.in ನಲ್ಲಿ ಪರಿಶೀಲಿಸಬಹುದು.

ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳಿದೆ?

ಪಂಚ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗೆ ಸಂಬಂಧಿಸಿದ ಅಂಕಿ-ಅಂಶಗಳು ಮುಂದಿನ ಮೂರು ದಿನಗಳಲ್ಲಿ ಹೊರ ಬೀಳಲಿರುವ ಅಂತಿಮ ಫಲಿತಾಂಶದ ಕೈಗನ್ನಡಿ ಎಂದು ವಿಶ್ಲೇಷಿಸಲಾಗುತ್ತಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ಯಾವ ಪಕ್ಷಕ್ಕೆ ಮತದಾರರು ಮಣೆ ಹಾಕಲಿದ್ದಾರೆ ಎಂಬ ಬಗ್ಗೆ ಹಲವು ಸುದ್ದಿಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ನಡೆಸಿವೆ. ಉತ್ತರ ಪ್ರದೇಶದ ಒಟ್ಟು 403 ವಿಧಾನಸಭೆ ಕ್ಷೇತ್ರಗಳಲ್ಲಿ ಗೆಲುವಿಗೆ 202 ಸ್ಥಾನಗಳು ಬೇಕು. ಯುಪಿಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಅಧಿಕ ಸ್ಥಾನ ಬಂದು ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಸಮೀಕ್ಷೆಯು ಹೇಳಿದೆ. ಇನ್ನು ಪಂಜಾಬ್‌ನಲ್ಲಿ ಕಾಂಗ್ರೆಸ್‌ ಕೈಯಿಂದ ಆಡಳಿತವನ್ನು ತನ್ನ ತೆಕ್ಕೆಗೆ ಆಮ್‌ ಆದ್ಮಿ ಪಕ್ಷ ಪಡೆಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ. ಇನ್ನು ಉತ್ತಾರಖಂಡದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಭಾರೀ ಪೈಪೋಟಿ ನಡೆಯುವ ಸಾಧ್ಯತೆ ಇದೆ ಎಂದು ಸಮೀಕ್ಷೆಯು ಉಲ್ಲೇಖ ಮಾಡಿದೆ. ಇನ್ನು ಸಣ್ಣ ರಾಜ್ಯವಾದ ಗೋವಾದಲ್ಲಿಯೂ ಬಿಜೆಪಿ ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ನಡೆಯುವ ಸಾಧ್ಯತೆ ಇದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ. (ಒನ್‌ಇಂಡಿಯಾ ಸುದ್ದಿ)

   ಬಿಜೆಪಿ ಮತ್ತೆ ಕುದುರೆ ವ್ಯಾಪಾರ ಶುರು ಮಾಡಿದ್ರಾ ! | Oneindia Kannada
   English summary
   Assembly Election Result 2022: Where To Watch Assembly Poll Result. Here's Details.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X