• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಯೋಧ್ಯಾ ಅಂತಿಮ ತೀರ್ಪು: ಹಿಂದೂ, ಮುಸ್ಲಿಮರಿಗೆ ಒಪ್ಪಿಗೆಯಾಗದಿದ್ದರೆ...?

|

ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 40 ದಿನಗಳ ನಡೆದ ಪ್ರತಿದಿನ ವಿಚಾರಣೆ ಅಕ್ಟೋಬರ್ 16ರಂದು ಅಂತ್ಯ ಕಂಡಿದೆ. ನಾಲ್ಕು ವಾರಗಳಲ್ಲಿ ಅಂತಿಮ ತೀರ್ಪು ಹೊರ ಬೀಳಲಿದೆ. ಒಂದು ವೇಳೆ ಅಂತಿಮ ತೀರ್ಪು ಹಿಂದೂ, ಮುಸ್ಲಿಮರಿಗೆ ಒಪ್ಪಿಗೆಯಾಗದಿದ್ದರೆ...? ಮುಂದೇನು?

ಜಸ್ಟೀಸ್ ಬೊಬ್ಡೆ ಅವರಲ್ಲದೆ, ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ಚಂದ್ರಚೂಡ್, ಜಸ್ಟೀಸ್ ಭೂಷಣ್, ಜಸ್ಟೀಸ್ ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠವು, ಅಕ್ಟೋಬರ್ 17ರೊಳಗೆ ಈ ಕೇಸಿಗೆ ಸಂಬಂಧಿಸಿದ ಎಲ್ಲಾ ವಿಚಾರಣೆಯನ್ನು ಅಂತಿಮಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ನವೆಂಬರ್ 17ರಂದು ನಿವೃತ್ತಿ ಹೊಂದುತ್ತಿರುವುದರಿಂದ ನ.17ರ ತನಕ ತೀರ್ಪಿಗೆ ಕಾಯಬಹುದಾಗಿದೆ.

ಸುಪ್ರೀಂ ಕೋರ್ಟ್ ನಲ್ಲಿ ಅಯೋಧ್ಯೆ ವಿಚಾರಣೆ ಮುಕ್ತಾಯ, ಏನೆಲ್ಲ ಆಯ್ತು?

ಒಂದು ವೇಳೆ ನವೆಂಬರ್ 17ರಂದು ಈ ನ್ಯಾಯಪೀಠದಿಂದ ತೀರ್ಪು ಸಿಗದಿದ್ದರೆ ಮತ್ತೊಂದು ನ್ಯಾಯಪೀಠಕ್ಕೆ ಪ್ರಕರಣ ವರ್ಗಾವಣೆಯಾಗಲಿದೆ. ಆದರೆ, ಅಂತಿಮ ತೀರ್ಪು ಎರಡು ಕಡೆ ಅರ್ಜಿದಾರರಿಗೆ ಒಪ್ಪಿಗೆಯಾಗದಿದ್ದರೆ, ಕೇಂದ್ರ ಸರ್ಕಾರ ತನ್ನ ಪರಮಾಧಿಕಾರ ಬಳಸಿ, ವಿವಾದ ಇತ್ಯರ್ಥಕ್ಕೆ ಮುಂದಾಗಬಹುದು. ಸುಗ್ರಿವಾಜ್ಞೆ ಹೊರಡಿಸಿ ರಾಮ ಮಂದಿರ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬಹುದು. ಇದರ ಪರಿಣಾಮವೇನು? ಈ ಬಗ್ಗೆ ಮೋದಿ, ಅಮಿತ್ ಶಾ ಹೇಳಿಕೆ ಏನಿದೆ? ಮುಂದೆ ಓದಿ...

ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣ

ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣ

ಏನಿದು ಪ್ರಕರಣ?: 1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿತ್ತು.

2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ. 2010ರ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ 14ಕ್ಕೂ ಅಧಿಕ ಮೇಲ್ಮನವಿಯನ್ನು ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ಅಂತಿಮ ಹಂತ ತಲುಪಿದ್ದು, ತೀರ್ಪು ಹೊರಬೀಳಬೇಕಿದೆ.

ಆಸ್ತಿ ಹಂಚಿಕೆ ಬಗ್ಗೆ 2010ರ ಅಲಹಾಬಾದ್ ಹೈಕೋರ್ಟ್ ತೀರ್ಪು

ಆಸ್ತಿ ಹಂಚಿಕೆ ಬಗ್ಗೆ 2010ರ ಅಲಹಾಬಾದ್ ಹೈಕೋರ್ಟ್ ತೀರ್ಪು

ವಿವಾದಿತ ತಾಣ ಹಂಚಿಕೆ ಮಾಡಿಕೊಳ್ಳುವಂತೆ ಅಲಹಾಬಾದ್ ಹೈಕೋರ್ಟ್ 2010ರಲ್ಲಿ ಆದೇಶ ನೀಡಿತ್ತು. ತಲಾ ಮೂರನೇ ಒಂದು ಭಾಗ ಮುಸ್ಲಿಂ ಸಮುದಾಯ, ಹಿಂದೂಗಳಿಗೆ ಹಂಚಿಕೆ. ನಿರ್ಮೋಹಿ ಅಖಾರಕ್ಕೆ ಮುಖ್ಯ ವಿವಾದಿತ ಭಾಗ ಎಂದು ಆದೇಶ ನೀಡಿತ್ತು. ಇದಾದ ಬಳಿಕ ಮೇ 2011ರಲ್ಲಿ 2010ರ ಹೈಕೋರ್ಟ್ ತೀರ್ಪಿನ ವಿರುದ್ಧ ಹಿಂದೂ ಹಾಗೂ ಮುಸ್ಲಿಂ ಸಮುದಾಯದಿಂದ ಮೇಲ್ಮನವಿ ಸಲ್ಲಿಸಲಾಯಿತು. ನಂತರ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತು.

ಅಯೋಧ್ಯೆ ವಿಚಾರಣೆ ಅಂತ್ಯ, ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ವಿಸ್ತೃತ ಸಂವಿಧಾನ ಪೀಠ ರಚನೆ

ವಿಸ್ತೃತ ಸಂವಿಧಾನ ಪೀಠ ರಚನೆ

ವಿಸ್ತೃತ ಸಂವಿಧಾನ ಪೀಠ ರಚನೆಗೆ ಆಗ್ರಹಿಸಿದ್ದ ಮುಸ್ಲಿಂ ಸಂಘಟನೆಗಳ ಮನವಿಯನ್ನು ನ್ಯಾ. ನಜೀರ್ ಪುರಸ್ಕರಿಸಿದರು. ಆದರೆ, ಇದರ ವಿರುದ್ಧ ತ್ರಿಸದಸ್ಯ ಪೀಠದಲ್ಲಿ 2:1 ರ ಫಲಿತಾಂಶ ಬಂದಿದೆ. ಸಿಜೆಐ ದೀಪಕ್ ಮಿಶ್ರಾ ಹಾಗೂ ನ್ಯಾ ಅಶೋಕ್ ಭೂಷಣ್ ಎತ್ತಿ ಹಿಡಿದರೆ, ನ್ಯಾ ಅಬ್ದುಲ್ ನಜೀರ್ ಅಸಮ್ಮತಿ ವ್ಯಕ್ತಪಡಿಸಿದರು. ಇದಾದ ಬಳಿಕವೇ ಜಸ್ಟಿಸ್ ಬೊಬ್ಡೆ, ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ಚಂದ್ರಚೂಡ್, ಜಸ್ಟೀಸ್ ಭೂಷಣ್, ಜಸ್ಟೀಸ್ ಅಬ್ದುಲ್ ನಜೀರ್ ನ್ಯಾಯಪೀಠದಿಂದ ತ್ವರಿತಗತಿಯಲ್ಲಿ ವಿಚಾರಣೆ ಮುಂದುವರೆಯಿತು. ಕೋರ್ಟ್ ಮೇಲ್ವಿಚಾರಣೆಯಲ್ಲಿ ರಾಮಜನ್ಮಭೂಮಿ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸುವ ಪ್ರಯತ್ನವೂ ವಿಫಲವಾಯಿತು. ಮೂವರು ಸಂಧಾನಕಾರರು ನೀಡಿದ ವರದಿ

ಮೋದಿ, ಅಮಿತ್ ಶಾ ನೀಡಿದ ಸುಳಿವೇನು?

ಮೋದಿ, ಅಮಿತ್ ಶಾ ನೀಡಿದ ಸುಳಿವೇನು?

ಎಎನ್‌ಐ ಸುದ್ದಿಸಂಸ್ಥೆಯ ಸಂಪಾದಕಿ ಸ್ಮಿತಾ ಪ್ರಕಾಶ್ ಅವರಿಗೆ ಸಂದರ್ಶನ ನೀಡಿರುವ ಪ್ರಧಾನಿ ಮೋದಿ, ರಾಮಮಂದಿರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ರಾಮಮಂದಿರ ಕುರಿತ ಯಾವುದೇ ಸುಗ್ರೀವಾಜ್ಞೆ ತೆಗೆದುಕೊಂಡರೂ ಸಹ ಅದು ಕಾನೂನು ಪ್ರಕ್ರಿಯೆ ಪೂರ್ಣವಾದ ಬಳಿಕವಷ್ಟೆ ಚಾಲ್ತಿಗೆ ಬರುತ್ತದೆ ಎಂದಿದ್ದಾರೆ. ಆ ಮೂಲಕ ಬಿಜೆಪಿಯು ಸಹ ರಾಮಮಂದಿರಕ್ಕೆ ಕೋರ್ಟ್‌ ತೀರ್ಪಿಗೆ ಕಾಯುತ್ತಿದೆ ಎಂದು ಸೂಚ್ಯಗೊಳಿಸಿದ್ದರು.

"ರಾಮ ಮಂದಿರ ನಿರ್ಮಾಣದ ನಮ್ಮ ಮಾತಿನಿಂದ ನಾವು ಹಿಂದೆ ಸರಿಯುವುದಿಲ್ಲ. ರಾಮ ಮಂದಿರ ನಿರ್ಮಾಣಕ್ಕೆ ಯಾವುದೇ ಸುಗ್ರೀವಾಜ್ಞೆಯ ಅಗತ್ಯವೂ ಇಲ್ಲ" ಎಂದು ಅಮಿತ್ ಶಾ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ, ಮೋದಿ ಹಾಗೂ ಅಮಿತ್ ಅವರ ಹೇಳಿಕೆ ಬಗ್ಗೆ ಶಿವಸೇನಾ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಅಯೋಧ್ಯಾ ಪ್ರಕರಣ Timeline : 1528 ರಿಂದ 2019ರ ತನಕ ಕಾಲಾನುಕ್ರಮದಲ್ಲಿ

ಸುಗ್ರಿವಾಜ್ಞೆ ಹೊರಡಿಸಿ ಮಂದಿರ ನಿರ್ಮಾಣಕ್ಕೆ ಚಾಲನೆ

ಸುಗ್ರಿವಾಜ್ಞೆ ಹೊರಡಿಸಿ ಮಂದಿರ ನಿರ್ಮಾಣಕ್ಕೆ ಚಾಲನೆ

ಸುಗ್ರಿವಾಜ್ಞೆ ಹೊರಡಿಸಿ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಬಹುದು ಧಾರ್ಮಿಕ ಮುಖಂಡರ ಸಲಹೆಯಂತೆ ಅಗಮ ಶಾಸ್ತ್ರ ಬಲ್ಲವಂಥರನ್ನು ನೇಮಿಸಬಹುದು. ಮೋದಿ ಸರ್ಕಾರ ಈ ಮಾರ್ಗ ಹಿಡಿದರೆ ಸುಪ್ರೀಂಕೋರ್ಟ್ ಏನೇ ತೀರ್ಪು ನೀಡಿದರೂ ಅದು ಜಾರಿಗೆ ಬರುವುದಿಲ್ಲ. ಆದರೆ ಸರ್ಕಾರದ ನಡೆಯನ್ನು ಪ್ರಶ್ನಿಸಬಹುದು. ಸರ್ಕಾರಕ್ಕೆ ಸುಗ್ರಿವಾಜ್ಞೆ ಹೊರಡಿಸುವ ಎಲ್ಲಾ ಹಕ್ಕನ್ನು ಸಂವಿಧಾನ ನೀಡಿದೆ. ಆಸ್ತಿ ಹಕ್ಕು ಕ್ಲೇಮ್ ಮಾಡುವವರಿಗೆ ಪರಿಹಾರ ಒದಗಿಸಿ ವ್ಯಾಜ್ಯ ಇತ್ಯರ್ಥ ಮಾಡಿಕೊಳ್ಳಬಹುದು ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಸಂವಿಧಾನದ ಆರ್ಟಿಕಲ್ 123 ಏನು ಹೇಳುತ್ತದೆ

ಸಂವಿಧಾನದ ಆರ್ಟಿಕಲ್ 123 ಏನು ಹೇಳುತ್ತದೆ

ಸಂವಿಧಾನದ ಆರ್ಟಿಕಲ್ 123 ಪ್ರಕಾರ, ಸುಗ್ರಿವಾಜ್ಞೆ ಹೊರಡಿಸುವುದು ಅಷ್ಟು ಸುಲಭವ ಕೆಲಸವಲ್ಲ. ಹಾಗು ಅದಕ್ಕೆ ಸೂಕ್ತ ಪರಿಸ್ಥಿತಿ ಇದೆಯೇ ಎಂಬುದು ಸಾಬೀತಾಗಬೇಕು. ಸಂಸತ್ತಿನ ಉಭಯ ಸದನ, ರಾಷ್ಟ್ರಪತಿಗಳಿಗೆ ಈ ಪರಿಸ್ಥಿತಿಯಲ್ಲಿ ಸುಗ್ರಿವಾಜ್ಞೆ ಹೊರಡಿಸುವುದೊಂದೇ ಮಾರ್ಗ ಎಂಬುದು ಮನವರಿಕೆಯಾದರೆ ಮಾತ್ರ ಸರ್ಕಾರ ಇಂಥ ಕ್ರಮಕ್ಕೆ ಮುಂದಾಗಬಹುದು.

English summary
The verdict in the Ayodhya Case could be delivered in the next one month. None of the parties are willing to settle for anything less and attempts to mediate the dispute have failed on several occasions. Modi govt can settle issue by ordinance route.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X