ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ್ ಪರಿಚಯ
ಬಾಗಲಕೋಟೆ, ಏಪ್ರಿಲ್ 02 : ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದ ಮಹಿಳೆ ಇಂದು ರಾಷ್ಟ್ರ ರಾಜಕಾರಣದತ್ತ ಹೆಜ್ಜೆ ಇಟ್ಟಿದ್ದಾರೆ. 2019ರ ಲೋಕಸಭಾ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದ ಏಕೈಕ ಮಹಿಳೆ ಇವರು.
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ವೀಣಾ ಕಾಶಪ್ಪನವರ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ವೀಣಾ ಅವರು ಈಗ ಸಂಸತ್‌ನತ್ತ ಹೆಜ್ಜೆ ಇಟ್ಟಿದ್ದಾರೆ.
'ರಾಜಕೀಯ ಎಂದರೆ ನನಗೆ ಆಗದು, ಮಾವ ಎಸ್.ಆರ್.ಕಾಶಪ್ಪನವರ್ ಶಾಸಕರಾಗಿ, ಸಚಿವರಾಗಿ ಕಾರ್ಯ ನಿರ್ವಹಿಸಿ ಸಾಕಷ್ಟು ಹೆಸರು ಮಾಡಿದ್ದರೂ ನನಗೆ ರಾಜಕೀಯ ಇಷ್ಟವಿರಲಿಲ್ಲ' ಎಂದು ಹಿಂದೆ ಸಂದರ್ಶನವೊಂದರಲ್ಲಿ ವೀಣಾ ಕಾಶಪ್ಪನವರ್ ಹೇಳಿದ್ದರು.
ಬಾಗಲಕೋಟೆ ಕ್ಷೇತ್ರದಿಂದ 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ವೀಣಾ ಕಾಶಪ್ಪನವರ್ ಅವರಿಗೆ ಕಾಂಗ್ರೆಸ್ ಅವಕಾಶ ನೀಡಿದೆ. ಕ್ಷೇತ್ರದ ಹಾಲಿ ಸಂಸದ, ಬಿಜೆಪಿ ನಾಯಕ ಪಿ.ಸಿ.ಗದ್ದಿಗೌಡರ್ ಅವರು ಚುನಾವಣೆಯಲ್ಲಿ ಎದುರಾಳಿಯಾಗಿದ್ದಾರೆ. ಏಪ್ರಿಲ್ 23ರಂದು ಚುನಾವಣೆ ನಡೆಯಲಿದೆ.....

ಬೆಂಗಳೂರಿನವರು
ಬೆಂಗಳೂರಿನ ಉದ್ಯಮಿಯೊಬ್ಬರ ಪುತ್ರಿಯಾದ ವೀಣಾ ಕಾಶಪ್ಪನವರ್ ಪದವೀಧರರು. ಕರ್ನಾಟಕದ ರಾಜಕೀಯದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಎಸ್.ಆರ್.ಕಾಶಪ್ಪನವರ್ ಅವರ ಪುತ್ರ ವಿಜಯಾನಂದ ಕಾಶಪ್ಪನವರ್ ಅವರನ್ನು ವಿವಾಹವಾಗುವ ಮೂಲಕ ಕಾಶಪ್ಪನವರ್ ಅವರ ಕುಟುಂಬಕ್ಕೆ ಸೊಸೆಯಾಗಿ ಬಂದರು.

ಅನಿವಾರ್ಯವಾಗಿ ರಾಜಕೀಯಕ್ಕೆ ಬಂದರು
ವೀಣಾ ಕಾಶಪ್ಪನವರ್ ಅವರಿಗೆ ರಾಜಕಾರಣ ಇಷ್ಟವಿರಲಿಲ್ಲ. 2002ರಲ್ಲಿ ಎಸ್.ಆರ್.ಕಾಶಪ್ಪನವರ್ ಕಾರು ಅಪಘಾತದಲ್ಲಿ ಮೃತಪಟ್ಟರು. ಆಗ ಅವರ ಪತ್ನಿ ಗೌರಮ್ಮ ಮತ್ತು ವಿಜಯಾನಂದ ಕಾಶಪ್ಪನವರ್ ರಾಜಕೀಯಕ್ಕೆ ಬಂದರು. ವೀಣಾ ಕಾಶಪ್ಪನವರ್ ಅವರು ಆಗ ಅನಿವಾರ್ಯವಾಗಿ ರಾಜಕೀಯಕ್ಕೆ ಬರಬೇಕಾಯಿತು.

ಬಾಗಲಕೋಟೆ ಜಿಲ್ಲೆ
ವಿಜಯಾನಂದ ಕಾಶಪ್ಪನವರ್ ಅವರು ಶಾಸಕರಾಗಿದ್ದಾಗ 2016ರ ಮೇ 7ರಂದು ವೀಣಾ ಕಾಶಪ್ಪನವರ್ ಅವರನ್ನು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರನ್ನಾಗಿ ಮಾಡಿದರು. ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದರೂ ವೀಣಾ ಅವರು ಪತಿ ಮತ್ತು ಮಾವನ ವರ್ಚಸ್ಸನ್ನು ಮೀರಿ ಬೆಳೆದರು. ಜನರ ಮೆಚ್ಚುಗೆಗೆ ಪಾತ್ರರಾದರು.

ಜನರ ಕಷ್ಟವನ್ನು ಅರಿತರು
ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗುತ್ತಿದ್ದಂತೆ ಬಾಗಲಕೋಟೆಗೆ ವಾಸ್ತವ್ಯ ಬದಲಿಸಿದರು. ಮಕ್ಕಳನ್ನು ಇಲ್ಲಿಯೇ ಶಾಲೆಗೆ ಸೇರಿಸಿದರು. ಗ್ರಾಮ ವಾಸ್ತವ್ಯ ನಡೆಸಿ ಜನರ ಕಷ್ಟಗಳನ್ನು ಅರಿತರು. ಬಯಲು ಶೌಚಕ್ಕೆ ಹೋಗುತ್ತಿದ್ದ ಮಹಿಳೆಯರ ಸಂಕಷ್ಟ ತಿಳಿದು ಸರ್ಕಾರದ ವತಿಯಿಂದ ಶೌಚಾಲಯಗಳನ್ನು ನಿರ್ಮಿಸಲು ಸಹಕಾರ ನೀಡಿದರು.

ಲಿಂಗಾಯತ ಸಮುದಾಯಕ್ಕೆ ಸೇರಿದವರು
ವೀಣಾ ಕಾಶಪ್ಪನವರ್ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಬಳಿಕ ವೀಣಾ ಅವರ ಜನಪರ ನಿಲುವನ್ನು ಗುರುತಿಸಿ ಈ ಬಾರಿಯ ಚುನಾವಣೆ ಟಿಕೆಟ್ ಕೊಡಿಸಿದ್ದಾರೆ. ಮಾಜಿ ಸಚಿವ ಎಸ್.ಆರ್.ಪಾಟೀಲ್ ಸೇರಿದಂತೆ ಹಲವು ಪ್ರಭಾವಿ ನಾಯಕರು ವೀಣಾ ಅವರ ಬೆಂಬಲಕ್ಕೆ ನಿಂತಿದ್ದಾರೆ. ಚುನಾವಣೆಯಲ್ಲಿ ಜಯಗಳಿಸುವರೇ? ಎಂದು ಕಾದು ನೋಡಬೇಕು.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications