ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದದ ಜೊತೆ 7 ಒಪ್ಪಂದಗಳಿಗೆ ಸಹಿ ಹಾಕಿದ ಬಾಂಗ್ಲಾದೇಶ, ವಿವರಗಳು

|
Google Oneindia Kannada News

ನವದೆಹಲಿ, ಸೆಪ್ಟೆಂಬರ್‌ 06: ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮ್ಮುಖದಲ್ಲಿ ಭಾರತದೊಂದಿಗೆ 7 ಒಪ್ಪಂದಗಳನ್ನು ಮಾಡಿಕೊಂಡಿದ್ದಾರೆ.

ಮಂಗಳವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಸಮ್ಮುಖದಲ್ಲಿ ಭಾರತ ಮತ್ತು ಬಾಂಗ್ಲಾದೇಶ ಏಳು ತಿಳಿವಳಿಕೆ ಪತ್ರಗಳಿಗೆ (ಎಂಒಯು) ಸಹಿ ಹಾಕಿದವು. ಪ್ರಧಾನಿ ಮೋದಿ ಮತ್ತು ಹಸೀನಾ ನೇತೃತ್ವದಲ್ಲಿ ಭಾರತ ಬಾಂಗ್ಲಾದೇಶ ನಿಯೋಗ ಮಟ್ಟದ ಮಾತುಕತೆಯು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಪ್ರಾರಂಭವಾಯಿತು.

ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಆಗಮನ: ಹಲವು ನಿರೀಕ್ಷೆ?ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಆಗಮನ: ಹಲವು ನಿರೀಕ್ಷೆ?

ಒಪ್ಪಂದದಲ್ಲಿ ಸಂಪರ್ಕ, ಇಂಧನ, ಜಲ ಸಂಪನ್ಮೂಲಗಳು, ವ್ಯಾಪಾರ ಮತ್ತು ಹೂಡಿಕೆ, ಗಡಿ ನಿರ್ವಹಣೆ ಮತ್ತು ಭದ್ರತೆ, ಅಭಿವೃದ್ಧಿ ಪಾಲುದಾರಿಕೆ ಮತ್ತು ಪ್ರಾದೇಶಿಕ ಮತ್ತು ಬಹುಪಕ್ಷೀಯ ವಿಷಯಗಳಿಗೆ ಸಂಬಂಧಿಸಿದ ವಿಷಯಗಳಿವೆ ಎಂದು ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶದ ನಡುವೆ ಏರ್ಪಟ್ಟ 7 ಒಪ್ಪಂದಗಳೆಂದರೆ

1.ಕುಶಿಯಾರಾ ನದಿಯ ನೀರು ಹಂಚಿಕೆ ಕುರಿತು ಮಧ್ಯಂತರ ದ್ವಿಪಕ್ಷೀಯ ಒಪ್ಪಂದವನ್ನು ಅಂತಿಮಗೊಳಿಸಲು ಒಪ್ಪಂದ.
2. ವೈಜ್ಞಾನಿಕ ಸಹಕಾರಕ್ಕಾಗಿ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR), ಭಾರತ ಮತ್ತು ಬಾಂಗ್ಲಾದೇಶ ಕೌನ್ಸಿಲ್ ಆಫ್ ಸೈಂಟಿಫಿಕ್ ಇಂಡಸ್ಟ್ರಿಯಲ್ ರಿಸರ್ಚ್ (BCSIR) ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
3. ಸಾಮರ್ಥ್ಯ ವೃದ್ಧಿಯನ್ನು ಉತ್ತೇಜಿಸಲು ಭೋಪಾಲ್‌ನ ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿ ಮತ್ತು ಬಾಂಗ್ಲಾದೇಶ ಸುಪ್ರೀಂ ಕೋರ್ಟ್ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ
4. ರೈಲ್ವೇ ಸಚಿವಾಲಯವು ಬಾಂಗ್ಲಾದೇಶ ರೈಲ್ವೇಗಳೊಂದಿಗೆ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಿದೆ. ಅದರ ಅಡಿಯಲ್ಲಿ ಭಾರತವು ಬಾಂಗ್ಲಾದೇಶ ರೈಲ್ವೆಯ ಸಿಬ್ಬಂದಿಗೆ ಭಾರತೀಯ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ನೀಡುತ್ತದೆ.
5. ಬಾಂಗ್ಲಾದೇಶ ರೈಲ್ವೇಗಳಿಗೆ ಐಟಿ ಪರಿಹಾರಗಳನ್ನು ಒದಗಿಸುವಲ್ಲಿ ಸಹಕರಿಸಲು ಎರಡೂ ದೇಶಗಳ ಸಚಿವಾಲಯಗಳ ನಡುವೆ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
6. ಬಾಂಗ್ಲಾದೇಶ ದೂರದರ್ಶನ ಮತ್ತು ಪ್ರಸಾರ ಭಾರತಿ ನಡುವೆ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
7. ಬಾಹ್ಯಾಕಾಶ ತಂತ್ರಜ್ಞಾನ ಮತ್ತು ವೈಜ್ಞಾನಿಕ ಮತ್ತು ಸಂಶೋಧನಾ ಸಹಯೋಗದಲ್ಲಿ ಸಹಕಾರವನ್ನು ಉತ್ತೇಜಿಸಲು ಎರಡೂ ದೇಶಗಳ ನಡುವೆ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಹೊಸದಿಲ್ಲಿ ಮತ್ತು ಢಾಕಾ ನಡುವಿನ ಮಹತ್ವದ ಸಂಬಂಧ

ಹೊಸದಿಲ್ಲಿ ಮತ್ತು ಢಾಕಾ ನಡುವಿನ ಮಹತ್ವದ ಸಂಬಂಧ

ಇದಕ್ಕೂ ಮುನ್ನ ಹಸೀನಾ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ರಾಷ್ಟ್ರಪತಿ ಭವನದಲ್ಲಿ ಸ್ವಾಗತದ ನಂತರ ಬಾಂಗ್ಲಾದೇಶದ ಪ್ರಧಾನಮಂತ್ರಿ ಅವರು ಹೊಸದಿಲ್ಲಿ ಮತ್ತು ಢಾಕಾ ನಡುವಿನ ಮಹತ್ವದ ಸಂಬಂಧಗಳನ್ನು ಗಮನಿಸುವಾಗ ಪ್ರತಿ ಬಾರಿಯೂ ಭಾರತದಲ್ಲಿರುವುದಕ್ಕೆ ಸಂತೋಷವಾಗುತ್ತದೆ ಎಂದು ಹೇಳಿದರು.

ಭಾರತ ನಮ್ಮ ಸ್ನೇಹಿತ. ನಾನು ಇಲ್ಲಿಗೆ ಬಂದಾಗಲೆಲ್ಲಾ ನನಗೆ ಸಂತೋಷವಾಗುತ್ತದೆ. ವಿಶೇಷವಾಗಿ ನಾವು ನಮ್ಮ ವಿಮೋಚನಾ ಯುದ್ಧದ ಸಮಯದಲ್ಲಿ ಭಾರತ ನೀಡಿದ ಕೊಡುಗೆಯನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ನಾವು ಸೌಹಾರ್ದ ಸಂಬಂಧವನ್ನು ಹೊಂದಿದ್ದೇವೆ. ನಾವು ಪರಸ್ಪರ ಸಹಕರಿಸುತ್ತಿದ್ದೇವೆ ಎಂದು ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ.

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಭೇಟಿ; ಹೇಗಿದೆ ಭಾರತ-ಬಾಂಗ್ಲಾ ಸಂಬಂಧ?ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಭೇಟಿ; ಹೇಗಿದೆ ಭಾರತ-ಬಾಂಗ್ಲಾ ಸಂಬಂಧ?

ಹಸೀನಾ ಅವರ ಸ್ವಾಗತಕ್ಕೆ ರಾಷ್ಟ್ರಪತಿ ಭವನಕ್ಕೆ ಅಲಂಕಾರ

ಹಸೀನಾ ಅವರ ಸ್ವಾಗತಕ್ಕೆ ರಾಷ್ಟ್ರಪತಿ ಭವನಕ್ಕೆ ಅಲಂಕಾರ

ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ಬಾಂಗ್ಲಾ ಪ್ರಧಾನಿ ಹಸೀನಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಬರಮಾಡಿಕೊಂಡರು. ಹಸೀನಾ ಅವರು ಪ್ರಧಾನಿ ಮೋದಿಗೆ ಹಸ್ತಲಾಘವ ಮಾಡಿದರು. ಈ ವೇಳೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ಉಪಸ್ಥಿತರಿದ್ದರು. ಹಸೀನಾ ಅವರ ಸ್ವಾಗತಕ್ಕೆ ರಾಷ್ಟ್ರಪತಿ ಭವನವನ್ನು ಅಲಂಕರಿಸಲಾಗಿತ್ತು. ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿಯಾಗಲಿದ್ದಾರೆ. ಭಾರತದ "ನೆರೆಹೊರೆ ಮೊದಲು" ನೀತಿಯ ಅಡಿಯಲ್ಲಿ ಬಾಂಗ್ಲಾದೇಶವು ಅತ್ಯಗತ್ಯ ಪಾಲುದಾರನಾಗಿರುವುದರಿಂದ ಹಸೀನಾ ಭಾರತಕ್ಕೆ ತನ್ನ ನಾಲ್ಕು ದಿನಗಳ ಭೇಟಿಯನ್ನು ಹಮ್ಮಿಕೊಂಡಿದ್ದಾರೆ.

ನಿಜಾಮುದ್ದೀನ್ ಔಲಿಯಾ ದರ್ಗಾಕ್ಕೂ ಭೇಟಿ

ನಿಜಾಮುದ್ದೀನ್ ಔಲಿಯಾ ದರ್ಗಾಕ್ಕೂ ಭೇಟಿ

ಸೋಮವಾರ ನವದೆಹಲಿಗೆ ಆಗಮಿಸಿದ ಕೂಡಲೇ ಬಾಂಗ್ಲಾದೇಶದ ಪ್ರಧಾನಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಹಿತಾಸಕ್ತಿಯ ವಿಷಯಗಳ ಕುರಿತು ಚರ್ಚಿಸಿದರು. ಅವರು ದೆಹಲಿಯ ಪ್ರಮುಖ ಯಾತ್ರಾ ಪ್ರವಾಸಿ ಆಕರ್ಷಣೆಯಾದ ನಿಜಾಮುದ್ದೀನ್ ಔಲಿಯಾ ದರ್ಗಾಕ್ಕೂ ಭೇಟಿ ನೀಡಿದರು. ಸೋಮವಾರ ಇಲ್ಲಿಗೆ ಆಗಮಿಸಿದ ನಂತರ ನವದೆಹಲಿಯಲ್ಲಿ ಜವಳಿ ಮತ್ತು ರೈಲ್ವೇ ಖಾತೆಯ ರಾಜ್ಯ ಸಚಿವ ದರ್ಶನಾ ಜರ್ದೋಶ್ ಅವರು ಪಿಎಂ ಹಸೀನಾ ಅವರನ್ನು ಸ್ವಾಗತಿಸಿದರು.

ಭಾರತ ಮತ್ತು ಬಾಂಗ್ಲಾ ನಡುವೆ ಸಂಬಂಧಕ್ಕೆ ಬಲ

ಭಾರತ ಮತ್ತು ಬಾಂಗ್ಲಾ ನಡುವೆ ಸಂಬಂಧಕ್ಕೆ ಬಲ

ಹಸೀನಾ ಅವರ ಭೇಟಿ ನಿರ್ಣಾಯಕವಾಗಿದ್ದು, ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಬಹುಮುಖಿ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ. ಸೋಮವಾರ ನವದೆಹಲಿಗೆ ಆಗಮಿಸಿದ ಕೂಡಲೇ ಬಾಂಗ್ಲಾದೇಶದ ಪ್ರಧಾನಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಹಿತಾಸಕ್ತಿಯ ವಿಷಯಗಳ ಕುರಿತು ಚರ್ಚಿಸಿದ್ದಾರೆ. ಬಾಂಗ್ಲಾದೇಶದ ಪ್ರಧಾನಿಯೂ ತಮ್ಮನ್ನು ಸ್ವಾಗತಿಸಿದ ನೃತ್ಯಗಾರರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು. ಎರಡೂ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧಗಳು 2021ರಲ್ಲಿ 50ನೇ ವರ್ಷವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ.

English summary
Bangladesh Prime Minister Sheikh Hasina, who is on a 4-day visit to India, signed seven agreements with India in the presence of Prime Minister Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X