R. R. Nagar Constituency; ಮುನಿರತ್ನ ಕಟ್ಟಿ ಹಾಕುತ್ತಾ 'ಕೈ' ಪಡೆ!
ರಾಜರಾಜೇಶ್ವರಿ ನಗರ (ಆರ್. ಆರ್. ನಗರ) ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕ್ಷೇತ್ರದಲ್ಲಿ ಒಂದು. ಇಲ್ಲಿ ಪಕ್ಷಕ್ಕಿಂತ ವ್ಯಕ್ತಿಯ ಹಿಡಿತವೇ ಹೆಚ್ಚಿದೆ ಎಂದು ಹೇಳಿದರೂ ತಪ್ಪಿಲ್ಲ. ಕ್ಷೇತ್ರದ ಹಾಲಿ ಶಾಸಕರು ಮುನಿರತ್ನ.
ಬೆಂಗಳೂರು ನಗರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜರಾಜೇಶ್ವರಿ ನಗರ (ಆರ್. ಆರ್. ನಗರ) ಸಹ ಒಂದು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕ್ಷೇತ್ರದಲ್ಲಿ ಪಕ್ಷಕ್ಕಿಂತ ವ್ಯಕ್ತಿಯ ಹಿಡಿತವೇ ಹೆಚ್ಚಿದೆ ಎಂದು ಹೇಳಿದರೂ ತಪ್ಪಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಿರೀಕ್ಷೆ ಮಾಡಲಾಗಿದೆ.
ರಾಜರಾಜೇಶ್ವರಿ ದೇವಿ ನೆಲೆಗೊಂಡಿರುವ ಕ್ಷೇತ್ರ ರಾಜರಾಜೇಶ್ವರಿ ನಗರ. ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದ್ದ ಕ್ಷೇತ್ರ 2008ರ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಹೊಸ ಕ್ಷೇತ್ರವಾಯಿತು. ಬೆಂಗಳೂರು-ತುಮಕೂರು ಹೆದ್ದಾರಿಯಿಂದ ಬೆಂಗಳುರು-ಮೈಸೂರು ಹೆದ್ದಾರಿ ತನಕ ವಿಸ್ತಾರ ಹೊಂದಿರುವ ದೊಡ್ಡ ಕ್ಷೇತ್ರವಿದು.
ಒಂದು ಉಪ ಚುನಾವಣೆ ಸೇರಿದಂತೆ 3 ಚುನಾವಣೆ ಕಂಡಿರುವ ಕ್ಷೇತ್ರದ ಹಾಲಿ ಶಾಸಕರು ಚಲನಚಿತ್ರ ನಿರ್ಮಾಪಕರೂ ಆಗಿರುವ ಮುನಿರತ್ನ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ತೋಟಗಾರಿಕಾ ಸಚಿವರು. ಈ ಬಾರಿಯ ಚುನಾವಣೆಯಲ್ಲಿಯೂ ಅವರಿಗೆ ಪಕ್ಷ ಟಿಕೆಟ್ ನಿರಾಕರಣೆ ಮಾಡಲು ಕಾರಣಗಳೇ ಇಲ್ಲ ಎನ್ನಬಹುದು.
ಆರ್. ಆರ್ ನಗರ ವಿಧಾನಸಭಾ ಕ್ಷೇತ್ರದ ಒಟ್ಟು ಮತದಾರರು 4,26,423. ಪುರುಷರು 2,39,863, ಮಹಿಳೆಯರು 2,22,473 ಮತ್ತು ತೃತೀಯ ಲಿಂಗಿಗಳು 87. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸಾಕಷ್ಟು ಪ್ರಭಾವ ಹೊಂದಿದೆ. 2020ರ ಉಪ ಚುನಾವಣೆ ಸಮಯದಿಂದ ಜೆಡಿಎಸ್ ಶಕ್ತಿ ಕುಂದಿದೆ ಎನ್ನಬಹುದು.

ಆರ್. ಆರ್. ನಗರದ ಸಮಸ್ಯೆಗಳು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಲಕ್ಷ್ಮೀದೇವಿ ನಗರ, ಜಾಲಹಳ್ಳಿ, ಜೆ. ಪಿ. ಪಾರ್ಕ್, ಯಶವಂತಪುರ, ಹೆಚ್. ಎಂ. ಟಿ., ಲಗ್ಗೆರೆ, ಜ್ಞಾನ ಭಾರತಿ, ರಾಜರಾಜೇಶ್ವರಿ ನಗರ, ಕೊಟ್ಟಿಗೆಪಾಳ್ಯ ವಾರ್ಡ್‌ಗಳನ್ನು ಆರ್. ಆರ್. ವಿಧಾನಸಭಾ ಕ್ಷೇತ್ರ ಒಳಗೊಂಡಿದೆ.
ನೈಸ್ ರಸ್ತೆ, ಮಾಲ್‌ಗಳು, ನಮ್ಮ ಮೆಟ್ರೋ, ಬೆಳೆಯುತ್ತಿರುವ ರಿಯಲ್ ಎಸ್ಟೇಟ್ ಆರ್. ಆರ್. ನಗರದ ಪ್ರಮುಖ ಅಂಶಗಳು. ಕ್ಷೇತ್ರದಲ್ಲಿ ವಲಸಿಗರ ಸಂಖ್ಯೆ ಹೆಚ್ಚಿದೆ. ಪ್ರತಿಷ್ಠಿತ ಬಡಾವಣೆಯಾಗಿದ್ದರೂ ಕ್ಷೇತ್ರದಲ್ಲಿ ಕೊಳಗೇರಿಗಳು ಇವೆ. ಕ್ಷೇತ್ರದ ಹಲವು ಕಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯುತ್ತಿದೆ, ವಾಹನ ಸವಾರರಿಗೆ ಇದರ ಬಿಸಿ ತಟ್ಟಿದೆ. ಕುಡಿಯುವ ನೀರು, ಒಳಚರಂಡಿ, ಸಂಚಾರ ದಟ್ಟಣೆ ಸೇರಿದಂತೆ ಕೆಲವು ಸಮಸ್ಯೆಗಳನ್ನು ಪಟ್ಟಿ ಮಾಡಬಹುದಾಗಿದೆ.

ಆರ್. ಆರ್. ನಗರ ಶಾಸಕ ಮುನಿರತ್ನ
ಒಕ್ಕಲಿಗರ ಪಾಬಲ್ಯ ಇರುವ ಆರ್. ಆರ್. ನಗರ ಕ್ಷೇತ್ರದಲ್ಲಿ ಚಲನಚಿತ್ರ ನಿರ್ಮಾಪಕ, ಬಿಜೆಪಿ ನಾಯಕ ಮುನಿರತ್ನ ಪ್ರಾಬಲ್ಯ ಸಾಧಿಸಿದ್ದಾರೆ. ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎಂದರೆ ತಪ್ಪಾಗಲಾರದು. 2008ರಲ್ಲಿ ಕ್ಷೇತ್ರದಲ್ಲಿ ಬಿಜೆಪಿಯ ಎಂ. ಶ್ರೀನಿವಾಸ್ ಗೆದ್ದಿದ್ದರು. 2013 ಮತ್ತು 2018ರಲ್ಲಿ ಕಾಂಗ್ರೆಸ್‌ನಿಂದ ಮುನಿರತ್ನ ಗೆದ್ದರು. 2019ರಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, 2020ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಗೆದ್ದು ಬಂದರು. ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರಿದರು. ಬಸವರಾಜ ಬೊಮ್ಮಾಯಿ ಸಂಪುದಲ್ಲಿಯೂ ಸಚಿವರಾಗಿದ್ದಾರೆ.
2018ರ ಚುನಾವಣೆ ಸಂದರ್ಭದಲ್ಲಿ ನಕಲಿ ವೋಟರ್ ಐಡಿ ಪತ್ತೆ ಪ್ರಕರಣದ ಮೂಲಕ ದೇಶಾದ್ಯಂತ ಸುದ್ದಿ ಮಾಡಿದ ಕ್ಷೇತ್ರ ಆರ್. ಆರ್. ನಗರ. ಇದು ಕಾಂಗ್ರೆಸ್‌ನ ಮುನಿರತ್ನ ಗೆಲುವಿಗೆ ಅಡ್ಡಗಾಲು ಹಾಕಲಿಲ್ಲ. ಕಾಂಗ್ರೆಸ್‌ನಿಂದ ಗೆದ್ದು ಬಂದ ಅವರು ಬಳಿಕ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಬೀಳಿಸಿ, ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಮತ್ತೆ ಗೆದ್ದು ಸಚಿವ ಸ್ಥಾನವನ್ನು ಸಹ ಪಡೆದರು. ಯಾವ ಪಕ್ಷದಿಂದ ನಿಂತರೂ ಗೆಲ್ಲುವಷ್ಟು ಪ್ರಭಾವ ಮುನಿರತ್ನ ಹೊಂದಿದ್ದಾರೆ.

ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಲಬ್ಯ ಹೇಗಿದೆ?
2018ರ ಚುನಾವಣೆಯಲ್ಲಿ ತುಳಸಿ ಮುನಿರಾಜು ಗೌಡ ಮುನಿರತ್ನ ಎದುರಾಳಿಯಾಗಿ ಬಿಜೆಪಿ ಅಭ್ಯರ್ಥಿಯಾಗಿದ್ದರು. ಆದರೆ ಈಗ ಮುನಿರತ್ನ ಬಿಜೆಪಿಯಲ್ಲಿದ್ದು, ತುಳಸಿ ಮುನಿರಾಜು ಗೌಡ ಸಹ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ 2008ರಲ್ಲಿ 60,184 ಮತ ಪಡೆದಿತ್ತು. 2013ರಲ್ಲಿ 50,726 ಮತ ಪಡೆದಿತ್ತು. 2018ರಲ್ಲಿ 82,573 ಮತ ಗಳಿಸಿತ್ತು. 2020ರಲ್ಲಿ ಉಪ ಚುನಾವಣೆಯಲ್ಲಿ ಮುನಿರತ್ನ 1,25,990 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಮುನಿರತ್ನ ಗೆಲುವನ್ನು ತಡೆಯಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. 2018ರಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಮುನಿರತ್ನ 1,08,065 ಮತ ಪಡೆದಿದ್ದರು. 2013ರಲ್ಲಿ 71,064 ಮತ ಪಡೆದಿದ್ದರು. 2020ರ ಉಪ ಚುನಾವಣೆಯಲ್ಲಿ ಕುಸುಮಾ ಹನುಮಂತರಾಯಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು, ಪಡೆದ ಮತಗಳು 67,877.
ಉಪ ಚುನಾವಣೆಯಲ್ಲಿ ಸೋತರೂ ಕ್ಷೇತ್ರದಲ್ಲಿ ಸಕ್ರಿಯರಾಗಿರುವ, ಸಾಮಾಜಿಕ ಜಾಲತಾಣದಲ್ಲಿಯೂ ಅಪಾರ ಅಭಿಮಾನಿಗಳನ್ನು ಹೊಂದಿರುವ ಯುವ ನಾಯಕಿ ಕುಸುಮಾ ಹನುಂತರಾಯಪ್ಪ. ಈ ಬಾರಿಯ ಚುನಾವಣೆಗೆ ಸಹ ಅವರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ಮುನಿರತ್ನ ಗೆಲುವಿನ ಓಟಕ್ಕೆ ಕಾಂಗ್ರೆಸ್ ತಡೆ ಹಾಕಲಿದೆಯೇ? ಕಾದು ನೋಡಬೇಕು.

ಕ್ಷೇತ್ರದಲ್ಲಿ ಜೆಡಿಎಸ್ ಪ್ರಭಾವ ಹೇಗಿದೆ?
ಆರ್. ಆರ್. ನಗರ ಕ್ಷೇತ್ರದಲ್ಲಿ ಜೆಡಿಎಸ್ ಪ್ರಭಾವ ಕಡಿಮೆ. 2018ರಲ್ಲಿ 60,360, 2013ರಲ್ಲಿ 52,251 ಮತ್ತು 2008ರ ಚುನಾವಣೆಯಲ್ಲಿ ಪಕ್ಷದ ಪಡೆದ ಮತ 36,782. ಆದರೆ 2020ರ ಉಪ ಚುನಾವಣೆಯಲ್ಲಿ ಕೃಷ್ಣಮೂರ್ತಿ ವಿ. ಪಕ್ಷದ ಅಭ್ಯರ್ಥಿಯಾಗಿದ್ದರು ಪಡೆದ ಮತಗಳು ಕೇವಲ 10,269. ಈ ಬಾರಿಯೂ ಅವರೇ ಅಭ್ಯರ್ಥಿಯಾಗುವುದು ಖಚಿತ ಎಂಬ ಮಾಹಿತಿ ಇದೆ. 93 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿರುವ ಜೆಡಿಎಸ್ ಪಕ್ಷ ಆರ್. ಆರ್. ನಗರಕ್ಕೆ ಅಭ್ಯರ್ಥಿ ಯಾರು? ಎಂದು ಹೇಳಿಲ್ಲ.
2018ರ ಚುನಾವಣೆಯಲ್ಲಿ ಬಿಜೆಪಿಯ ತುಳಸಿ ಮುನಿರಾಜು ಗೌಡ 82,573, ಕಾಂಗ್ರೆಸ್‌ನ ಮುನಿರತ್ನ 1,08,065 ಮತ್ತು ಜೆಡಿಎಸ್‌ನ ಜಿ. ಹೆಚ್. ರಾಮಚಂದ್ರ 60,360 ಮತಗಳನ್ನು ಪಡೆದಿದ್ದರು.
ಮುನಿರತ್ನ ರಾಜೀನಾಮೆ ಬಳಿಕ 2020ರ ಉಪ ಚುನಾವಣೆಯಲ್ಲಿ ಬಿಜೆಪಿಯ ಮುನಿರತ್ನ 1,25,990 ಮತ, ಕಾಂಗ್ರೆಸ್‌ನ ಕುಸುಮಾ ಹನುಂತರಾಯಪ್ಪ 67,877 ಮತ ಮತ್ತು ಜೆಡಿಎಸ್‌ನ ಕೃಷ್ಣಮೂರ್ತಿ ವಿ. 10,269 ಮತಗಳನ್ನುಗಳಿಸಿದ್ದರು.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ












Click it and Unblock the Notifications