Year Ender 2024: ಕಾಂಡೋಮ್ ಖರೀದಿಯಲ್ಲಿ ಬೆಂಗಳೂರಿಗರೇ ಫಸ್ಟ್, ಈ ವರ್ಷ ಅತಿ ಹೆಚ್ಚು ಆರ್ಡರ್ ಮಾಡಿದ್ದೇನು ಗೊತ್ತಾ?
ಜನಪ್ರಿಯ ಆನ್‌ಲೈನ್ ಡೆಲಿವರಿ ಸಂಸ್ಥೆ ಸ್ವಿಗ್ಗಿ (Swiggy) ತನ್ನ ವಾರ್ಷಿಕ ವರದಿ ಬಿಡುಗಡೆ ಮಾಡಿದೆ. ಈ ಪೈಕಿ ಯಾವೆಲ್ಲ ವಸ್ತುಗಳನ್ನು ಗ್ರಾಹಕರು ಹೆಚ್ಚಾಗಿ ಆರ್ಡರ್ ಮಾಡಿದ್ದಾರೆ? ಯಾವ ನಗರದ ಜನ ಯಾವ ವಸ್ತುವನ್ನು ಆರ್ಡರ್ ಮಾಡಿದ್ದಾರೆ ಎಂಬ ಅಚ್ಚರಿ ವಿಚಾರವನ್ನು ರಿವೀಲ್ ಮಾಡಿದೆ. ಈ ಪೈಕಿ ಕಾಂಡೋಮ್ ಕೂಡ ಮಹತ್ವದ ಸ್ಥಾನ ಪಡೆದುಕೊಂಡಿದೆ.
ಸುವಾಸನೆಯ ಕಾಂಡೋಮ್ ಮತ್ತು ಒಳಉಡುಪುಗಳ ಮಾರಾಟದಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದೆ ಎಂದು Swiggy Instamart 2024 ವರದಿ ಬಹಿರಂಗಪಡಿಸಿದೆ. ಹಬ್ಬಗಳ ಸಂದರ್ಭದಲ್ಲಿ ಪೂಜಾ ಸಾಮಾಗ್ರಿಗಳು ಮತ್ತು ವೈನ್ ಖರೀದಿಸುವಲ್ಲಿ ಬೆಂಗಳೂರು ಜನ ಮುಂದಿದ್ದಾರೆ ಎಂದು ತಿಳಿದುಬಂದಿದೆ. ತ್ವರಿತ-ವಾಣಿಜ್ಯ ವಲಯದಲ್ಲಿ ಹೈದರಾಬಾದ್ ಮತ್ತು ಮುಂಬೈನಂತಹ ಸ್ಪರ್ಧಿಗಳನ್ನು ಬೆಂಗಳೂರು ಹಿಂದಿಕ್ಕಿದೆ.

ಅತಿ ಹೆಚ್ಚು ಕಾಂಡೋಮ್ ಮಾರಾಟ ಹೊಂದಿರುವ ನಗರಗಳ ಪಟ್ಟಿಯಲ್ಲಿ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರು ಅಗ್ರಸ್ಥಾನದಲ್ಲಿದೆ. ಈ ಕಾಂಡೋಮ್‌ಗಳ ಮಾರಾಟವು ರಾತ್ರಿ 10ರಿಂದ 11 ಗಂಟೆಯ ನಡುವೆ ಭಾರಿ ಪ್ರಮಾಣದಲ್ಲಿ ಆರ್ಡರ್ ಆಗಿವೆ ಎಂದು ಸ್ವಿಗ್ಗಿ ಬಹಿರಂಗಪಡಿಸಿದೆ.
ಸ್ವಿಗ್ಗಿ ಹೇಳಿರುವಂತೆ ಪ್ರತಿ 140 ಆರ್ಡರ್‌ಗಳಲ್ಲಿ ಕನಿಷ್ಠ ಒಂದಾದರೂ ಲೈಂಗಿಕ ಉತ್ಪನ್ನವನ್ನು ಆರ್ಡರ್ ಮಾಡಿದ್ದಾರೆ. ಈ ವರ್ಷ ಕಾಂಡೋಮ್‌ಗಳ ಮೇಲೆ ಅತಿ ಹೆಚ್ಚು ಖರ್ಚು ಮಾಡಿದವರು ಬೆಂಗಳೂರಿಗರು ಎಂದು ಹೇಳಿದೆ. ಕಾಂಡೋಮ್ ಮಾತ್ರವಲ್ಲದೆ ಬೆಂಗಳೂರಿನ ಜನರು ತಡರಾತ್ರಿಯಲ್ಲಿ ಮಸಾಲಾ ಚಿಪ್ಸ್, ಕುರ್ಕುರೆಯನ್ನು ಸಹ ಹೆಚ್ಚಾಗಿ ಆರ್ಡರ್ ಮಾಡಿದ್ದಾರೆ ಎನ್ನಲಾಗಿದೆ.
ಅದರಲ್ಲೂ ಕಾಂಡೋಮ್ ಅನ್ನು ರಾತ್ರಿ 10 ಗಂಟೆಯಿಂದ 11 ಗಂಟೆಯ ನಡುವೆ ಆರ್ಡರ್ ಮಾಡಿರುವುದು ಅಚ್ಚರಿ ಸಂಗತಿ ಎಂದು ಹೇಳಲಾಗುತ್ತಿದೆ. ಮಸಾಲಾ-ಫ್ಲೇವರ್ಡ್ ಚಿಪ್ಸ್, ಕುರ್‌ಕುರೆ ಹಾಗೂ, ಸುವಾಸನೆಯುಳ್ಳ ಫ್ಲೇವರ್ಡ್ ಕಾಂಡೋಮ್‌ಗಳು ಹೆಚ್ಚಾಗಿ ಮಾರಾಟವಾಗಿವೆ ಎಂದು ಹೇಳಿದೆ.
ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಒಳುಉಡುಪುಗಳು ಕೂಡ ಬೆಂಗಳೂರಿನಲ್ಲೇ ಹೆಚ್ಚಾಗಿ ಆರ್ಡರ್ ಮಾಡಲಾಗಿವೆ. ಹೈದರಾಬಾದ್ ಮತ್ತು ಮುಂಬೈ ಎರಡೂ ನಗರಗಳಲ್ಲಿ ಒಳಉಡುಪುಗಳು ಆರ್ಡರ್ ಆಗಿರುವಷ್ಟು ಸಂಖ್ಯೆಯನ್ನು ಬೆಂಗಳೂರು ಹಿಂದಿಕ್ಕಿದೆ ಎಂದು ವರದಿಯಲ್ಲಿ ತಿಳಿಸಿದೆ.

ಇದರ ಜೊತೆಗೆ ಬೆಂಗಳೂರು ಹೆಚ್ಚಿನ ಸಂಖ್ಯೆಯ ಪೂಜಾ ಸಾಮಗ್ರಿಗಳನ್ನು ಆರ್ಡರ್ ಮಾಡಿದೆ. ಬೆಂಗಳೂರು ಮಂದಿ ಇತರ ನಗರಗಳಿಗೆ ಹೋಲಿಸಿದರೆ ವಿಶೇಷವಾಗಿ ದೀಪಾವಳಿ ಆಚರಣೆಯ ಸಮಯದಲ್ಲಿ 1.8 ಪಟ್ಟು ಹೆಚ್ಚು ವೈನ್ ಮತ್ತು ಶಾಟ್ ಗ್ಲಾಸ್‌ಗಳನ್ನು ಆರ್ಡರ್ ಮಾಡಿದ್ದಾರೆ. ಭಾರತದ ಬೇರೆ ನಗರಗಳಿಗಿಂತ ಬೆಂಗಳೂರಿಗರು ಟೂತ್ ಬ್ರಷ್‌ಗಳನ್ನು ಅತಿ ಹೆಚ್ಚಾಗಿ ಆರ್ಡರ್ ಮಾಡಿದ್ದಾರೆ.
ಹೈದರಾಬಾದ್ ಮಂದಿಯೂ ಲಕ್ಷಗಟ್ಟಲೆ ಕಾಂಡೋಮ್ ಅನ್ನು ಆರ್ಡರ್ ಮಾಡಿದ್ದಾರೆ. ಬೆಂಗಳೂರಿಗರು ಎಷ್ಟು ಕಾಂಡೋಮ್ ಆರ್ಡರ್ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಅಂಕಿಅಂಶ ಬಹಿರಂಗವಾಗಿಲ್ಲ. ಆದರೆ, ಮಾರಾಟದಲ್ಲಿ ಬೆಂಗಳೂರು ಮುಂದಿದೆ ಸ್ಪಷ್ಟವಾಗಿ ಹೇಳಿದೆ. ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನಲ್ಲಿ ಅಗತ್ಯ ವಸ್ತುಗಳನ್ನು ಆರ್ಡರ್ ಮಾಡುವ ವಿಷಯದಲ್ಲಿ ಹೈದರಾಬಾದ್, ಮುಂಬೈ ಮತ್ತು ದೆಹಲಿ ನಗರಗಳು ಬೆಂಗಳೂರಿಗೆ ಕಠಿಣ ಸ್ಪರ್ಧೆಯನ್ನು ನೀಡಿವೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications