ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವ್ಯಾಕ್ಸಿನ್ ಬಗ್ಗೆ ಎಚ್ಚರ: ಲಸಿಕೆಯು ಯಾರಿಗೆ ಸೂಕ್ತ, ಯಾರಿಗೆ ಸೂಕ್ತವಲ್ಲ?

|
Google Oneindia Kannada News

ನವದೆಹಲಿ, ಜನವರಿ.19: ಭಾರತದಲ್ಲಿ ಕೊರೊನಾವೈರಸ್ ಸೋಂಕಿಗಾಗಿ ಎರಡು ಕಂಪನಿ ಲಸಿಕೆಗಳಿಗೆ ಅನುಮೋದನೆ ನೀಡಲಾಗಿದೆ. ಕೊವಿಶೀಲ್ಡ್ ಲಸಿಕೆಯಲ್ಲಿ ಯಾವುದೇ ತಕರಾರು ಕಂಡು ಬಂದಿಲ್ಲ. ಆದರೆ ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳುವವರು ಕಡ್ಡಾಯವಾಗಿ ಷರತ್ತುಗಳನ್ನು ಓದಲೇಬೇಕು.

ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸಿರುವ ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡವರಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆಗಳು, ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತಿವೆ. ಈ ಹಿನ್ನೆಲೆ ಎಂಥವರು ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳುವುದು ಸೂಕ್ತ ಎನ್ನುವ ಬಗ್ಗೆ ಸ್ವತಃ ಸಂಸ್ಥೆಯೇ ಒಂದು ಸಲಹಾ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಕೊವಿಡ್-19 ಲಸಿಕೆ ಬೇಕೇ; ಈ ದಾಖಲೆಗಳೊಂದಿಗೆ ನಿಯಮ ಅನುಸರಿಸಿ! ಕೊವಿಡ್-19 ಲಸಿಕೆ ಬೇಕೇ; ಈ ದಾಖಲೆಗಳೊಂದಿಗೆ ನಿಯಮ ಅನುಸರಿಸಿ!

ಜನವರಿ.16ರಂದು ಮೊದಲ ದಿನ ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡವರ ಸಂಖ್ಯೆಗಿಂತ ದಿನೇ ದಿನೆ ಲಸಿಕೆ ಪಡೆದುಕೊಳ್ಳುವವರ ಸಂಖ್ಯೆಯು ಇಳಿಮುಖವಾಗುತ್ತಿದೆ. ಹಾಗಿದ್ದಲ್ಲಿ ಕೊವಿಶೀಲ್ಡ್ ಲಸಿಕೆ ಯಾರಿಗೆ ಸೂಕ್ತ, ಯಾರು ಈ ಕೊವ್ಯಾಕ್ಸಿನ್ ಲಸಿಕೆ ತೆಗೆದುಕೊಳ್ಳಬಾರದು. ಕೊವ್ಯಾಕ್ಸಿನ್ ಲಸಿಕೆಗಳ ಬಗ್ಗೆ ಸಾರ್ವಜನಿಕರಲ್ಲಿರುವ ಗೊಂದಲಗಳಿಗೆ ಸಂಸ್ಥೆಯೇ ಸಲಹಾ ಪಟ್ಟಿಯ ಮೂಲಕ ಉತ್ತರ ನೀಡಿದೆ.

ಮೊದಲೇ ಅನಾರೋಗ್ಯಕ್ಕೆ ತುತ್ತಾದವರಿಗೆ ಸೂಕ್ತವಲ್ಲ

ಮೊದಲೇ ಅನಾರೋಗ್ಯಕ್ಕೆ ತುತ್ತಾದವರಿಗೆ ಸೂಕ್ತವಲ್ಲ

ಸಾಮಾನ್ಯವಾಗಿ ಕೊವ್ಯಾಕ್ಸಿನ್ ಲಸಿಕೆಯನ್ನು ಕೊರೊನಾವೈರಸ್ ಸೋಂಕು ಬಾರದಂತೆ ತಡೆಗಟ್ಟುವ ಉದ್ದೇಶದಿಂದ ನೀಡಲಾಗುತ್ತಿದೆ. ಮೊದಲೇ ಅನಾರೋಗ್ಯಕ್ಕೆ ತುತ್ತಾದವರು. ರೋಗ ನಿರೋಧಕ ಶಕ್ತಿ ಕೊರತೆ ಹೊಂದಿರುವವರು, ಇತರೆ ಆರೋಗ್ಯ ಸಂಬಂಧಿತ ಕಾಯಿಲೆಗಳ ಲಕ್ಷಣಗಳನ್ನು ಹೊಂದಿರುವವರಿಗೆ ಕೊವ್ಯಾಕ್ಸಿನ್ ಲಸಿಕೆಯು ಸೂಕ್ತವಲ್ಲ ಎಂದು ಭಾರತ್ ಬಯೋಟೆಕ್ ಸ್ಪಷ್ಟಪಡಿಸಿದೆ.

ಕೊವ್ಯಾಕ್ಸಿನ್ ಲಸಿಕೆಯನ್ನು ಯಾರು ತೆಗೆದುಕೊಳ್ಳಬಾರದು?

ಕೊವ್ಯಾಕ್ಸಿನ್ ಲಸಿಕೆಯನ್ನು ಯಾರು ತೆಗೆದುಕೊಳ್ಳಬಾರದು?

- ದೈಹಿಕ ಅಲರ್ಜಿ ಹೊಂದಿರುವವರು ಲಸಿಕೆ ತೆಗೆದುಕೊಳ್ಳಬೇಡಿ

- ಜ್ವರದಿಂದ ಬಳಲುತ್ತಿರುವವರಿಗೆ ಲಸಿಕೆಯು ಸೂಕ್ತವಲ್ಲ

- ರಕ್ತಸ್ರಾವ ಮತ್ತು ತಿಳಿಯಾದ ರಕ್ತವನ್ನು ಹೊಂದಿರುವವರು ಲಸಿಕೆ ಪಡೆದುಕೊಳ್ಳಬಾರದು

- ರೋಗ ನಿರೋಧಕ ಶಕ್ತಿ ಮತ್ತು ರೋಗ ನಿರೋಧಕ ವ್ಯವಸ್ಥೆಯಲ್ಲಿ ಲೋಪಗಳಿದ್ದಲ್ಲಿ ಲಸಿಕೆ ಹಾಕಿಸಿಕೊಳ್ಳಬೇಡಿ

- ಗರ್ಭಿಣಿಯರು ಲಸಿಕೆ ಹಾಕಿಸಿಕೊಳ್ಳುವುದು ಬೇಡ

- ಸ್ತನ್ಯಪಾನ ಮಾಡುವ ಮಹಿಳೆಯರು

- ಕೊವಿಡ್-19 ಸೋಂಕಿಗೆ ಬೇರೆ ಲಸಿಕೆ ಹಾಕಿಸಿಕೊಂಡವರು ಕೊವ್ಯಾಕ್ಸಿನ್ ಲಸಿಕೆ ಪಡೆಯಬೇಡಿ

- ಇತರೆ ಯಾವುದೇ ರೀತಿ ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ಕೊವ್ಯಾಕ್ಸಿನ್ ಲಸಿಕೆ ಉತ್ತಮವಲ್ಲ

ಕೊರೊನಾ ಲಸಿಕೆ ಪಡೆದವರಲ್ಲಿ ಕಾಣಿಸಿಕೊಳ್ಳುತ್ತಾ ಅಡ್ಡಪರಿಣಾಮ?ಕೊರೊನಾ ಲಸಿಕೆ ಪಡೆದವರಲ್ಲಿ ಕಾಣಿಸಿಕೊಳ್ಳುತ್ತಾ ಅಡ್ಡಪರಿಣಾಮ?

ಎಂಥವರು ಕೊವ್ಯಾಕ್ಸಿನ್ ಲಸಿಕೆ ತೆಗೆದುಕೊಳ್ಳಬಹುದು?

ಎಂಥವರು ಕೊವ್ಯಾಕ್ಸಿನ್ ಲಸಿಕೆ ತೆಗೆದುಕೊಳ್ಳಬಹುದು?

ಭಾರತದ ಕೇಂದ್ರ ಔಷಧೀಯ ನಿಯಂತ್ರಣ ಪ್ರಾಧಿಕಾರವು ಭಾರತ್ ಬಯೋಟೆಕ್ ಸಂಸ್ಥೆಯಲ್ಲಿ ಉತ್ಪಾದಿಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಸಿಕೊಳ್ಳುವುದಕ್ಕೆ ಅನುಮೋದನೆ ನೀಡಿದೆ. ಅದರ ಪ್ರಕಾರ, ಸರ್ಕಾರವು ಗುರುತಿಸಿರುವ ಆದ್ಯತೆಗೆ ಅನುಗುಣವಾಗಿ ಮೇಲೆ ಉಲ್ಲೇಖಿಸಿರುವ ಆರೋಗ್ಯ ಸಮಸ್ಯೆಗಳಿಂದ ಮುಕ್ತರಾಗಿರುವ ಪ್ರತಿಯೊಬ್ಬರು ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳುವ ಅರ್ಹತೆಯನ್ನು ಹೊಂದಿರುತ್ತಾರೆ.

ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಕೆ

ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಕೆ

ಭಾರತದಲ್ಲಿ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕೃತವಾಗಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ ಮೊದಲ ದಿನವೇ ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳುವುದಕ್ಕ ಹಲವೆಡೆ ವೈದ್ಯರು ವಿರೋಧ ವ್ಯಕ್ತಪಡಿಸಿದ್ದರು. 3ನೇ ಹಂತದ ವೈದ್ಯಕೀಯ ಪ್ರಯೋಗದ ಸ್ಥಿತಿಯಲ್ಲಿ ಇರುವ ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳುವುದಿಲ್ಲ ಎಂದು ಪ್ರತಿರೋಧ ತೋರಿದ್ದರು.

ಆರೋಗ್ಯ ಸುರಕ್ಷತೆಯೊಂದಿಗೆ ಕೊವ್ಯಾಕ್ಸಿನ್ ಲಸಿಕೆ

ಆರೋಗ್ಯ ಸುರಕ್ಷತೆಯೊಂದಿಗೆ ಕೊವ್ಯಾಕ್ಸಿನ್ ಲಸಿಕೆ

ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ಪಡೆದವರಿಗೆ ಆರೋಗ್ಯ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಒಪ್ಪಿಗೆ ಪತ್ರ ಸಿದ್ಧಪಡಿಸಲಾಗಿತ್ತು. ಲಸಿಕೆ ಪಡೆದವರ ಆರೋಗ್ಯದಲ್ಲಿ ವ್ಯತ್ಯಾಸವಾದಲ್ಲಿ ಅಂಥವರಿಗೆ ಸರ್ಕಾರ ನಿಗದಿಪಡಿಸಿರುವ ಅಧಿಕೃತ ಕೇಂದ್ರ ಮತ್ತು ರಾಜ್ಯದ ಆಸ್ಪತ್ರೆಗಳಲ್ಲಿ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗುತ್ತದೆ. ಒಂದು ವೇಳೆ ಕೊವ್ಯಾಕ್ಸಿನ್ ಲಸಿಕೆ ಪಡೆದವರಲ್ಲಿ ಗಂಭೀರ ಪ್ರಮಾಣದ ಅಡ್ಡ ಪರಿಣಾಮ ಕಂಡು ಬಂದಲ್ಲಿ ಅವರಿಗೆ ಭಾರತ್ ಬಯೋಟೆಡ್ ಸಂಸ್ಥೆಯಿಂದ ಪರಿಹಾರ ನೀಡಲಾಗುತ್ತದೆ ಎಂದು ಒಪ್ಪಿಗೆ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಹಲವು ರಾಜ್ಯಗಳಲ್ಲಿ ಕೊವ್ಯಾಕ್ಸಿನ್ ಪಡೆಯಲು ವಿರೋಧ

ಹಲವು ರಾಜ್ಯಗಳಲ್ಲಿ ಕೊವ್ಯಾಕ್ಸಿನ್ ಪಡೆಯಲು ವಿರೋಧ

ದೇಶಾದ್ಯಂತ ಕೊರೊನಾವೈರಸ್ ಸೋಂಕಿನ ಅಭಿಯಾನ ಆರಂಭವಾದ ಮೊದಲ ದಿನ ತಮಿಳುನಾಡಿನಲ್ಲಿ 600 ಜನರಿಗೆ ಕೊವ್ಯಾಕ್ಸಿನ್ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಆದರೆ ಮೊದಲ ದಿನ 99 ಜನರಿಗೆ ಹಾಗೂ ಎರಡನೇ ದಿನ ಕೇವಲ 90 ಜನರಿಗೆ ಲಸಿಕೆ ನೀಡಲಾಗಿತ್ತು. ರಾಜಸ್ಥಾನದಲ್ಲಿ ಮೊದಲ ದಿನ 314 ಜನರಿಗೆ ಲಸಿಕೆ ನೀಡಲಾಗಿತ್ತು. ಲಸಿಕೆ ಪಡೆದವರ ಆರೋಗ್ಯದಲ್ಲಿ ಯಾವುದೇ ಅಡ್ಡಪರಿಣಾಮ ಕಂಡು ಬಂದಿರಲಿಲ್ಲವಾದರೂ ಜನರು ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಹಿಂಜರಿಯುತ್ತಿದ್ದಾರೆ ಎಂದು ರಾಜಸ್ಥಾನದ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ನರೇಶ್ ಠಾಕ್ರಲ್ ತಿಳಿಸಿದ್ದಾರೆ.

English summary
Bharat Biotech Warns People With Medical Conditions To Avoid Vaccine Jab.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X