• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭರಪೂರ ಉದ್ಯೋಗ ಭರವಸೆ ಹೊತ್ತ ಬಿಜೆಪಿ ಪ್ರಣಾಳಿಕೆ ಬಿಡುಗಡೆ

|

ಪಾಟ್ನಾ, ಅ.22: ಬಿಹಾರ ವಿಧಾನಸಭಾ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಪ್ರಣಾಳಿಕೆ ಬಿಡುಗಡೆಯಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದ್ದಾರೆ. ಬಿಹಾರದಲ್ಲಿ ಸ್ಥಳೀಯವಾಗಿ ಭರಪೂರ ಉದ್ಯೋಗ ಭರವಸೆಯನ್ನು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದೆ.

ಬಿಜೆಪಿ ಸಂಕಲ್ಪ ಪತ್ರ ಬಿಡುಗಡೆ ಸಂದರ್ಭದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆಗೆ ಹಿರಿಯ ಮುಖಂಡ ಭೂಪೇಂದರ್ ಯಾದವ್, ಅಶ್ವಿನಿ ಚೌಬೆ, ಪ್ರಮೋದ್ ಕುಮಾರ್, ನಿತ್ಯಾನಂದ್ ರೇ ಅವರು ಉಪಸ್ಥಿತರಿದ್ದರು.

ಬಿಹಾರ ಚುನಾವಣೆಗೆ ಮಹಾಘಟಬಂಧನ್ ಮೈತ್ರಿಕೂಟವು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ರಾಜ್ಯದ ಕಾರ್ಮಿಕರಿಗೆ ಬಿಹಾರದಲ್ಲೇ ಉದ್ಯೋಗ ಸೃಷ್ಟಿಸುವುದಾಗಿ ಕಾಂಗ್ರೆಸ್ ಆಶ್ವಾಸನೆ ನೀಡಿದೆ. ರಾಜ್ಯದ ಕಾರ್ಮಿಕರಿಗೆ ಬಿಹಾರದಲ್ಲೇ ಉದ್ಯೋಗ ಸೃಷ್ಟಿಸುವುದಕ್ಕೆ ಮೊದಲ ಆದ್ಯತೆ ನೀಡಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪಕ್ಷಗಳು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಿರುವುದು ವಿಶೇಷ.

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಿಹಾರ ಕಾರ್ಮಿಕರಿಗೆ ಬಂಪರ್!ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಿಹಾರ ಕಾರ್ಮಿಕರಿಗೆ ಬಂಪರ್!

''ಪಾಂಚ್ ಸೂತ್ರ ಏಕ್ ಲಕ್ಷ್ಯ 11 ಸಂಕಲ್ಪ್''

''ಐದು ಸೂತ್ರ, ಒಂದು ಗುರಿ, 11 ಸಂಕಲ್ಪಗಳನ್ನು ಬಿಜೆಪಿ ಈ ಬಾರಿ ಹೊತ್ತುಕೊಂಡಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಪ್ರಣಾಳಿಕೆ ಬಿಡುಗಡೆ ಮಾಡಿ ಹೇಳಿದರು. ಬಿಹಾರವನ್ನು ಐಟಿಹಬ್ ಆಗಿ ಪರಿವರ್ತಿಸುವುದು ಬಿಜೆಪಿಯ ಸಂಕಲ್ಪ, 19 ಲಕ್ಷ ಹೊಸ ಉದ್ಯೋಗ ಸೃಷ್ಟಿ ಮಾಡಲಾಗುವುದು'' ಎಂದರು.

''ರಾಜಕೀಯವಾಗಿ ಸೂಕ್ಷ್ಮ, ಮಾಹಿತಿಭರಿತ ನಾಗರಿಕರನ್ನು ಬಿಹಾರ ಹೊಂದಿದೆ. ಪಕ್ಷಗಳ ಭರವಸೆ, ಆಶ್ವಾಸನೆ ಬಗ್ಗೆ ಪ್ರಶ್ನೆ ಮಾಡುವ ಹಕ್ಕು ಮತದಾರರಿಗೆ ನಮ್ಮ ಪಕ್ಷ ನೀಡುತ್ತಿದೆ. ಆಶ್ವಾಸನೆಗಳು ಈಡೇರದಿದ್ದರೆ ಪ್ರಶ್ನಿಸಬಹುದು'' ಎಂದು ಹೇಳಿದರು.

ಬಿಹಾರ ಮಹಾಘಟಬಂಧನ ಮೈತ್ರಿಕೂಟದಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆಬಿಹಾರ ಮಹಾಘಟಬಂಧನ ಮೈತ್ರಿಕೂಟದಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಇನ್ನಷ್ಟು ಭರವಸೆಗಳು:
ಎಲ್ಲರಿಗೂ ಉಚಿತವಾಗಿ ಕೊರೊನಾವೈರಸ್ ಲಸಿಕೆ, 30 ಪಕ್ಷ ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಾಣ, 3 ಲಕ್ಷ ಹೊಸ ಶಿಕ್ಷಕರ ನೇಮಕಾತಿ, ಆರೋಗ್ಯ ಕ್ಷೇತ್ರದಲ್ಲಿ ಲಕ್ಷಕ್ಕೂ ಅಧಿಕ ನೇಮಕ, ಸ್ವಾವಲಂಬಿ ಬಿಹಾರ ನಿರ್ಮಾಣದ ಗುರಿ.

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಟ್ರಕ್ ಚಾಲಕನ ಮಗಳು ಬಿಹಾರದ ಅತಿ ಶ್ರೀಮಂತ ಅಭ್ಯರ್ಥಿಟ್ರಕ್ ಚಾಲಕನ ಮಗಳು ಬಿಹಾರದ ಅತಿ ಶ್ರೀಮಂತ ಅಭ್ಯರ್ಥಿ

ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.

English summary
Union Finance Minister Nirmala Sitharaman launched BJP’s manifesto for Bihar Assembly elections 2020 in Patna today(OCt 22).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X