ಅಮೆರಿಕ ಚುನಾವಣೆಯಲ್ಲಿ ಯಾರಿಗೆ ಗೆಲುವು..? ಯಾರಿಗೆ ಸೋಲು..?

ಬಲಿಷ್ಠ ರಾಷ್ಟ್ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದು ಬೀಗುವವರು ಯಾರು ಎಂಬ ಕುತೂಹಲ ಎಲ್ಲರಲ್ಲೂ ಮನೆಮಾಡಿದೆ. ಅಷ್ಟಕ್ಕೂ ಈ ಕುತೂಹಲಗಳಿಗೆ ಚುನಾವಣಾ ಪೂರ್ವ ಸಮೀಕ್ಷೆಗಳು ಉತ್ತರ ನೀಡುತ್ತಿವೆ. ಸಮೀಕ್ಷೆಗಳ ಸದ್ಯದ ಅಂಕಿ-ಅಂಶ ಗಮನಿಸಿದರೆ ಬಿಡೆನ್ ಹಾಲಿ ಅಧ್ಯಕ್ಷ ಟ್ರಂಪ್‌ಗಿಂತ ಭಾರಿ ಮುನ್ನಡೆ ಕಾಯ್ದುಕೊಂಡಿರುವುದು ಸ್ಪಷ್ಟವಾಗುತ್ತಿದೆ.

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಅಧ್ಯಕ್ಷ ಸ್ಥಾನ ಅಲಂಕರಿಸಬೇಕಾದರೆ ಕನಿಷ್ಠ 270 ಮತ ಅಗತ್ಯವಾಗಿರುತ್ತದೆ. ಅಂದರೆ ಒಟ್ಟು 538 ಚುನಾಯಿತ ಪ್ರತಿನಿಧಿಗಳ ಪೈಕಿ 270 ಚುನಾಯಿತ ಅಭ್ಯರ್ಥಿಗಳ ಬೆಂಬಲ ಅತ್ಯಗತ್ಯವಾಗಿರುತ್ತದೆ. ಸಮೀಕ್ಷೆಗಳ ವರದಿ ಪ್ರಕಾರ ಈಗಾಗಲೇ ಬಿಡೆನ್ ಪಕ್ಷ ಡೆಮಾಕ್ರಟಿಕ್ 290 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಇನ್ನುಳಿದ ಸ್ಥಾನಗಳ ಪೈಕಿ 126ರಲ್ಲಿ ಟ್ರಂಪ್ ಪಕ್ಷವಾದ ರಿಪಬ್ಲಿಕನ್ಸ್ ಮುಂದಿದ್ದರೆ, 122 ಸ್ಥಾನಗಲ್ಲಿ ಯಾವುದೇ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಹೀಗೆ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ತಾಳೆಹಾಕಿ ನೋಡುವುದಾದರೆ ಜೋ ಬಿಡೆನ್ ಈಗಾಗಲೇ ಚುನಾವಣೆ ಗೆದ್ದಾಗಿದೆ. 270 ಸ್ಥಾನ ಅಗತ್ಯವಿರುವ ಕಡೆ ಬಿಡೆನ್ ಈಗಾಗಲೇ 290 ಸ್ಥಾನಗಳಲ್ಲಿ ಗೆಲುವು ಕಾಣುವ ಮುನ್ಸೂಚನೆ ನೀಡಿದ್ದಾರೆ.

 ಶೇಕಡವಾರು ಮತಗಳಿಕೆಯಲ್ಲೂ ಬಿಡೆನ್ ಮುಂದೆ

ಶೇಕಡವಾರು ಮತಗಳಿಕೆಯಲ್ಲೂ ಬಿಡೆನ್ ಮುಂದೆ

ಬಿಡೆನ್ 538 ಸ್ಥಾನಗಳ ಪೈಕಿ 290 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಜೊತೆ ಜೊತೆಗೆ ಶೇಕಡವಾರು ಮತದಾನದಲ್ಲಿ ಶೇ. 53.8 ರಷ್ಟು ಮತಗಳನ್ನು ಬಾಚಿಕೊಳ್ಳುವ ಮುನ್ಸೂಚನೆ ನೀಡಿದ್ದಾರೆ. ಆದರೆ ಮತ್ತೊಂದು ಬದಿಯಲ್ಲಿ ಟ್ರಂಪ್‌ಗೆ ಶೇಕಡವಾರು ಮತದಾನದಲ್ಲೂ ಭಾರಿ ಹಿನ್ನಡೆಯಾಗಿದೆ. ಬಿಡೆನ್‌ಗಿಂತಲೂ ಟ್ರಂಪ್ ಶೇಕಡ 9.6ರಷ್ಟು ಕಡಿಮೆ ಮತ ಗಳಿಸಿದ್ದಾರೆ. ಚುನಾವಣೆಗೆ ಇನ್ನೂ 6 ದಿನಗಳು ಬಾಕಿ ಇರುವಾಗಲೇ ಇದು ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಆಘಾತ ನೀಡಿದೆ.

ನಿರ್ಣಾಯಕ ರಾಜ್ಯಗಳಲ್ಲೇ ಟ್ರಂಪ್‌ಗೆ ಶಾಕ್..?

ನಿರ್ಣಾಯಕ ರಾಜ್ಯಗಳಲ್ಲೇ ಟ್ರಂಪ್‌ಗೆ ಶಾಕ್..?

ಈ ಬಾರಿಯ ಅಮೆರಿಕ ಅಧ್ಯಕ್ಷೀಯ ಚುನಾವಣೆ ಅದೆಷ್ಟು ಕ್ಲಿಷ್ಟಕರವಾಗಿದೆ ಎಂದರೆ ನಿರೀಕ್ಷೆಗಳೆಲ್ಲಾ ಉಲ್ಟಾ ಆಗುತ್ತಿವೆ. ಟ್ರಂಪ್ ಗೆದ್ದು ಬೀಗಬಹುದು ಎಂದುಕೊಂಡಿದ್ದ ರಾಜ್ಯಗಳಲ್ಲೇ ಟ್ರಂಪ್ ಸೋಲುವ ಮುನ್ಸೂಚನೆ ಸಿಕ್ಕಿದೆ. ಅದರಲ್ಲೂ ಟ್ರಂಪ್ ಕಳೆದಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಲು ಸಹಕಾರಿಯಾಗಿದ್ದ ರಾಜ್ಯಗಳಲ್ಲಿಯೇ ಟ್ರಂಪ್‌ಗೆ ಸೋಲು ಎದುರಾಗುತ್ತಿದೆ. ಇನ್ನುಳಿದಂತೆ ನಿರ್ಣಾಯಕ ಪಾತ್ರ ವಹಿಸುವ, ಅತಿಹೆಚ್ಚು ಮತಗಳನ್ನು ಹೊಂದಿರುವ ರಾಜ್ಯಗಳಲ್ಲೂ ಟ್ರಂಪ್‌ಗೆ ಭಾರಿ ಹಿನ್ನಡೆ ಉಂಟಾಗುತ್ತಿದೆ. ಈ ಮೂಲಕ ಟ್ರಂಪ್‌ಗೆ 2ನೇ ಅವಧಿ ಬಹುತೇಕ ಅನುಮಾನ ಎನ್ನುವಂತಾಗಿದೆ.

244 ವರ್ಷಗಳ ಇತಿಹಾಸ..!

244 ವರ್ಷಗಳ ಇತಿಹಾಸ..!

ಜಗತ್ತಿಗೆ ಪ್ರಜಾಪ್ರಭುತ್ವದ ಪಾಠ ಹೇಳಿಕೊಟ್ಟಿದ್ದು ಯುರೋಪಿಯನ್ನರು. ಆದರೆ ಅದೇ ಪ್ರಜಾಪ್ರಭುತ್ವವನ್ನು ಆಧುನಿಕ ಜಗತ್ತಿನಲ್ಲಿ ಎತ್ತಿಹಿಡಿದಿದ್ದು ಅಮೆರಿಕ. ಜಾರ್ಜ್ ವಾಷಿಂಗ್‌ಟನ್, ಅಬ್ರಹಾಂ ಲಿಂಕನ್, ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ಒಬಾಮಾ ಹೀಗೆ ಡೊನಾಲ್ಡ್ ಟ್ರಂಪ್ ಅಧಿಕಾರ ಹಿಡಿಯುವವರೆಗೂ 45 ಅಧ್ಯಕ್ಷರನ್ನ ಅಮೆರಿಕ ಕಂಡಿದೆ. ಅಮೆರಿಕ ಪ್ರಜಾಪ್ರಭುತ್ವ ಇತಿಹಾಸಕ್ಕೆ 244 ವರ್ಷ ಇತಿಹಾಸವಿದೆ. ಆಧುನಿಕ ಜಗತ್ತಿನಲ್ಲಿ ಯಾವುದೇ ರಾಷ್ಟ್ರ ಕೂಡ ಈ ವಿಚಾರದಲ್ಲಿ ಅಮೆರಿಕವನ್ನು ಹಿಂದೆ ಹಾಕಲು ಸಾಧ್ಯವಾಗಿಲ್ಲ.

ಅಧ್ಯಕ್ಷನಾಗಲು ಇರಬೇಕಾದ ಅರ್ಹತೆ ಏನು..?

ಅಧ್ಯಕ್ಷನಾಗಲು ಇರಬೇಕಾದ ಅರ್ಹತೆ ಏನು..?

ಅಮೆರಿಕ ಸಂವಿಧಾನದ ಪ್ರಕಾರ ಅಧ್ಯಕ್ಷೀಯ ಅಭ್ಯರ್ಥಿಯಾಗುವವರು ಅಲ್ಲೇ ಹುಟ್ಟಿರಬೇಕು, ಅಮೆರಿಕದ ಪ್ರಜೆಯಾಗಿರಬೇಕು. ಅಲ್ಲದೆ ಅಭ್ಯರ್ಥಿಯಾಗಲು ಕನಿಷ್ಠ 35 ವರ್ಷ ವಯಸ್ಸಾಗಿರಬೇಕು. ಅಮೆರಿಕ ಅಧ್ಯಕ್ಷರ ಆಯ್ಕೆ ಸುಲಭದ ವಿಚಾರವಲ್ಲ. ಅಮೆರಿಕ ಅಧ್ಯಕ್ಷೀಯ ಚುನಾವಣೆ ಸುದೀರ್ಘವಾಗಿದ್ದು, ನವೆಂಬರ್‌ನಲ್ಲೇ ಮತದಾನ ನಡೆದರೂ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಹಾಗೂ ಅಧಿಕಾರ ಹಸ್ತಾಂತರ ಶುರುವಾಗುವುದು ಜನವರಿಯಲ್ಲಿ. ಹೀಗೆ ಅಮೆರಿಕ ಅಧ್ಯಕ್ಷರನ್ನು ಆಯ್ಕೆ ಮಾಡಲು ಹಲವು ತಿಂಗಳ ಸಮಯ ಬೇಕಾಗುತ್ತದೆ.

4 ವರ್ಷಕ್ಕೊಮ್ಮೆ ಅಧ್ಯಕ್ಷರು ಬದಲಾಗುತ್ತಾರೆ

4 ವರ್ಷಕ್ಕೊಮ್ಮೆ ಅಧ್ಯಕ್ಷರು ಬದಲಾಗುತ್ತಾರೆ

ಅಮೆರಿಕ ಅಧ್ಯಕ್ಷರನ್ನು ಪ್ರತಿ 4 ವರ್ಷಕ್ಕೊಮ್ಮೆ ಬದಲಾಯಿಸಲಾಗುತ್ತದೆ ಅಥವಾ ಮರು ಆಯ್ಕೆ ಮಾಡುತ್ತಾರೆ. 2020ರಲ್ಲಿ ನವೆಂಬರ್ 3ರಂದು ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮತದಾನ ನಡೆಯಲಿದೆ. 18 ವರ್ಷ ಮೇಲ್ಪಟ್ಟ ಅಮೆರಿಕನ್ನರು ಮತದಾನ ಮಾಡಲಿದ್ದಾರೆ. ಆದರೆ ಕೊರೊನಾ ಹಿನ್ನೆಲೆ ಈ ಬಾರಿ ಅಂಚೆ ಮತದಾನ ಪದ್ಧತಿಯ ಮೊರೆ ಹೋಗಲಾಗಿದೆ.

 ಪರೋಕ್ಷ ಚುನಾವಣೆ ಮೂಲಕ ಆಯ್ಕೆ

ಪರೋಕ್ಷ ಚುನಾವಣೆ ಮೂಲಕ ಆಯ್ಕೆ

ಭಾರತದಲ್ಲಿ ಇರುವಂತೆ ಅಮೆರಿಕದಲ್ಲಿ ಹತ್ತಾರು ಪಕ್ಷಗಳು ಅಸ್ತಿತ್ವದಲ್ಲಿ ಇಲ್ಲ. ಅಮೆರಿಕದಲ್ಲಿ 2 ರಾಜಕೀಯ ಪಕ್ಷಗಳಿದ್ದು, ಅಧ್ಯಕ್ಷರನ್ನು 'ಎಲೆಕ್ಟೊರೋಲ್ ಕಾಲೇಜು' ಮೂಲಕ ಆಯ್ಕೆಮಾಡಲಾಗುತ್ತದೆ. ಸಾರ್ವಜನಿಕರು 'ಎಲೆಕ್ಟೊರೋಲ್ ಕಾಲೇಜು'ಗಳ ಮೂಲಕ ಚುನಾಯಿತ ಪ್ರತಿನಿಧಿಗಳಿಗೆ ಮತ ಹಾಕುತ್ತಾರೆ. ಹೀಗೆ ಜನರ ಮತ ಪಡೆದು ಆಯ್ಕೆಯಾಗುವ ಪ್ರತಿನಿಧಿಗಳು ಅಧ್ಯಕ್ಷ ಸ್ಥಾನದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅಧಿಕಾರ ಪಡೆಯುತ್ತಾರೆ.

ಈ ಬಾರಿ ಡೊನಾಲ್ಡ್ ಟ್ರಂಪ್ ಹಾಗೂ ಜೋ ಬಿಡೆನ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ. ಪ್ರತಿ ರಾಜ್ಯದಲ್ಲಿ ಎಲೇಕ್ಟರ್‌ಗಳ ಸಂಖ್ಯೆ ಅಮೆರಿಕದ ಒಟ್ಟು ಜನಸಂಖ್ಯೆಯಲ್ಲಿ ಆ ರಾಜ್ಯದ ಪಾಲು ಆಧರಿಸಿ ನಿರ್ಧರಿಸಲಾಗುತ್ತಿದೆ. ಈ ಪ್ರಕ್ರಿಯೆಗೆ ಇತ್ತೀಚಿನ ಜನಸಂಖ್ಯಾ ವರದಿ ಆಧಾರವಾಗಿರುತ್ತದೆ. ಅಂದರೆ 2019ರಲ್ಲಿ ನಡೆದ ಅಮೆರಿಕದ ಜನಗಣತಿ ಆಧಾರದಲ್ಲಿ ಅಮೆರಿಲದಲ್ಲಿ ಒಟ್ಟು 32.8 ಕೋಟಿ ಪ್ರಜೆಗಳಿದ್ದಾರೆ.

ಚುನಾಯಿತ ಪ್ರತಿನಿಧಿಗಳ ಸಂಖ್ಯೆ ಎಷ್ಟು..?

ಚುನಾಯಿತ ಪ್ರತಿನಿಧಿಗಳ ಸಂಖ್ಯೆ ಎಷ್ಟು..?

ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ 50 ರಾಜ್ಯಗಳಿದ್ದು, ವಾಶಿಂಗ್‌ಟನ್ ಡಿಸಿ ಅಮೆರಿಕದ ರಾಜಧಾನಿಯಾಗಿದೆ. ಹೀಗೆ ವಾಶಿಂಗ್‌ಟನ್ ಡಿಸಿ ಸೇರಿದಂತೆ 51 ರಾಜ್ಯಗಳ ಪ್ರಜೆಗಳು ಅಮೆರಿಕ ಅಧ್ಯಕ್ಷರ ಆಯ್ಕೆಗೆ ಮತದಾನ ಮಾಡುತ್ತಾರೆ. ಒಟ್ಟು 538 ಚುನಾಯಿತ ಪ್ರತಿನಿಧಿಗಳಿರುತ್ತಾರೆ. 538 ಪ್ರತಿನಿಧಿಗಳ ಪೈಕಿ ಪ್ರತಿ ರಾಜ್ಯವನ್ನೂ ಪ್ರತಿನಿಧಿಸಲು ಇಬ್ಬರು ಸೆನೆಟರ್‌ಗಳು ಆಯ್ಕೆಯಾಗುತ್ತಾರೆ. ಒಟ್ಟು 100 ಸೆನೆಟರ್‌ಗಳು ಆಯ್ಕೆಯಾಗುತ್ತಾರೆ. ವಾಷಿಂಗ್ಟನ್ ಡಿಸಿ ಸೇರಿದಂತೆ ಒಟ್ಟು 51 ಎಲೆಕ್ಟೊರಾಲ್ ಕಾಲೇಜುಗಳಿವೆ. ಪ್ರತಿ ರಾಜ್ಯದಲ್ಲಿ ಯಾವ ಪಕ್ಷದ ಅಭ್ಯರ್ಥಿಗೆ ಬಹುಮತ ದೊರೆಯುತ್ತದೆಯೋ ಆ ಅಭ್ಯರ್ಥಿಗೆ ರಾಜ್ಯದ ಇತರ ಎಲ್ಲ ಮತಗಳು ಒಗ್ಗೂಡುತ್ತವೆ.

 ಅಧ್ಯಕ್ಷರಾಗಲು ಎಷ್ಟು ಬಹುಮತ ಅಗತ್ಯ..?

ಅಧ್ಯಕ್ಷರಾಗಲು ಎಷ್ಟು ಬಹುಮತ ಅಗತ್ಯ..?

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಅಧ್ಯಕ್ಷ ಸ್ಥಾನ ಅಲಂಕರಿಸಬೇಕಾದರೆ ಕನಿಷ್ಠ 270 ಮತ ಅಗತ್ಯವಾಗಿರುತ್ತದೆ. ಅಂದರೆ ಒಟ್ಟು 538 ಚುನಾಯಿತ ಪ್ರತಿನಿಧಿಗಳ ಪೈಕಿ 270 ಚುನಾಯಿತ ಅಭ್ಯರ್ಥಿಗಳ ಬೆಂಬಲ ಅತ್ಯಗತ್ಯವಾಗಿರುತ್ತದೆ. ಪ್ರತಿಯೊಬ್ಬ ಚುನಾಯಿತ ಪ್ರತಿನಿಧಿಗೂ 2 ಮತಗಳನ್ನು ಹಾಕುವ ಹಕ್ಕು ಇರುತ್ತದೆ. ಒಂದು ಮತ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಮತ್ತೊಂದು ಮತ ಉಪಾಧ್ಯಕ್ಷ ಸ್ಥಾನಕ್ಕೆ ಸಲ್ಲುತ್ತದೆ. ಇನ್ನು ಚುನಾವಣೆ ಪ್ರಕ್ರಿಯೆ ಬಗ್ಗೆ ಅನುಮಾನ ಹೊಂದಿದ್ದರೆ ಅಥವಾ ಈ ಕುರಿತಾಗಿ ತಕರಾರು ಇದ್ದರೆ ಸೋತ ಅಭ್ಯರ್ಥಿ ಅಮೆರಿಕದ ಸುಪ್ರೀಂಕೋರ್ಟ್ ಮೊರೆ ಹೋಗಲು ಅವಕಾಶ ಇದೆ. ಇದೀಗ ಟ್ರಂಪ್ ಕೂಡ ಅಂಚೆ ಮತದಾನದ ಬಗ್ಗೆ ಅನುಮಾನ ವ್ಯಕ್ತಪಡಿಸಿ, ತಾವು ಸೋತರೆ ಅಧಿಕಾರ ಹಸ್ತಾಂತರ ಸುಪ್ರೀಂಕೋರ್ಟ್‌ನಲ್ಲಿ ನಿರ್ಧಾರವಾಗಬಹುದು ಎಂದಿದ್ದಾರೆ.

ಟ್ರಂಪ್ ಎಡವಟ್ಟು ಹೇಳಿಕೆಗಳಿಂದ ವಿವಾದ

ಟ್ರಂಪ್ ಎಡವಟ್ಟು ಹೇಳಿಕೆಗಳಿಂದ ವಿವಾದ

ಮಾಸ್ಕ್ ವಿಚಾರದಿಂದ ಹಿಡಿದು, ಕೊರೊನಾ ವೈರಸ್ ತನಕ ಟ್ರಂಪ್ ಮೇಲಿಂದ ಮೇಲೆ ವಿವಾದಗಳನ್ನು ಸೃಷ್ಟಿ ಮಾಡಿದ್ದರು. ಮೊದಲಿಗೆ ಮಾಸ್ಕ್ ಹಾಕುವುದನ್ನು ಕಡ್ಡಾಯ ಮಾಡುವುದಿಲ್ಲ ಎಂದು ಹಠ ಹಿಡಿದಿದ್ದರು. ಬಳಿಕ ತಾವೇ ಮಾಸ್ಕ್ ತೊಟ್ಟು ಹೊರಗೆ ಕಾಣಿಸಿಕೊಂಡಿದ್ದರು. ಹಾಗೇ ಕೊರೊನಾ ವೈರಸ್ ಸಾಯಲು ದೇಹಕ್ಕೆ ಸೋಂಕು ನಿವಾರಕ ರಾಸಾಯನಿಕಗಳನ್ನು ಚುಚ್ಚಿ ಎಂದಿದ್ದರು.
ಸಾಲದು ಎಂಬಂತೆ ನೆರಳಾತೀತ ಕಿರಣಗಳನ್ನು ದೇಹಕ್ಕೆ ಹಾಯಿಸಿದರೆ ಮನುಷ್ಯನ ದೇಹದಲ್ಲಿರುವ ಕೊರೊನಾ ಸಾಯುತ್ತದೆ ಅಂತಾ ಹೇಳಿಕೆ ಕೊಟ್ಟಿದ್ದರು. ಆದರೆ ಇದೆಲ್ಲಾ ಮನುಷ್ಯನನ್ನೇ ಸಾಯಿಸುತ್ತದೆ ಎಂಬುದನ್ನೇ ಟ್ರಂಪ್ ಮರೆತಂತೆ ಮಾತನಾಡಿದ್ದರು. ಇಂತಹ ವಿಚಿತ್ರ ಹೇಳಿಕೆಗಳಿಂದ ಟ್ರಂಪ್ ವಿಶ್ವಾಸ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಇದು ಚುನಾವಣೆ ಮೇಲೂ ಭಾರಿ ಪ್ರಭಾವ ಬೀರುತ್ತಿದೆ. ಆದರೆ ಚುನಾವಣೆ ಮುಗಿಯಲು ಇನ್ನೂ 6 ದಿನಗಳು ಬಾಕಿ ಇದ್ದು, 6 ದಿನಗಳ ಒಳಗೆ ಟ್ರಂಪ್ ಮ್ಯಾಜಿಕ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+