• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಇಂಡಿಯಾ ಟುಡೇ EXIT poll: ಬಿಹಾರದಲ್ಲಿ ತೇಜಸ್ವಿ ಸರ್ಕಾರ

|

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಸಲಾಗಿದ್ದು, ನವೆಂಬರ್ 7 ರಂದು ಮೂರನೇ ಹಾಗೂ ಅಂತಿಮ ಹಂತದ ಮತದಾನ ಮುಕ್ತಾಯವಾಗಿದೆ. ಚುನಾವಣಾ ಆಯೋಗದ ನಿಯಮದಂತೆ ಸಂಜೆ 6 ಗಂಟೆ ನಂತರ ಚುನಾವಣೋತ್ತರ ಸಮೀಕ್ಷೆಗಳು ಬರಲಾರಂಭಿಸಿವೆ ಇಂಡಿಯಾ ಟುಡೇ ಹಾಗೂ ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ವರದಿ ಇಲ್ಲಿದೆ...

ಅಕ್ಟೋಬರ್ 28 ರ ಬುಧವಾರ ಸಂಜೆ 6.30 ರಿಂದ ನವೆಂಬರ್ 7ರ ತನಕ ಬಿಹಾರದ ವಿಧಾನಸಭೆ ಚುನಾವಣೆ, ಲೋಕಸಭೆ ಉಪ ಚುನಾವಣೆಗೆ ಸಂಬಂಧಿಸಿದಂತೆ ವೆಬ್ ತಾಣ, ಎಲೆಕ್ಟ್ರಾನಿಕ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು.

ಇಂಡಿಯಾ ಟುಡೇ EXIT poll:ಯುವ ಜನತೆಗೆ ತೇಜಸ್ವಿ ಅಚ್ಚು ಮೆಚ್ಚು

ಇಂಡಿಯಾ ಟುಡೇ -ಆಕ್ಸಿಸ್ ಮೈ ಇಂಡಿಯಾ ಚುನಾವಣಾ ಪೂರ್ವ ಸಮೀಕ್ಷೆಯಂತೆ ನಾಲ್ಕನೇ ಬಾರಿಗೆ ಸಿಎಂ ಆಗುವ ಕನಸು ಕಾಣುತ್ತಿರುವ ನಿತೀಶ್ ಕುಮಾರ್ ಅವರ ಕನಸು ಭಗ್ನವಾಗಲಿದ್ದು, ಮಹಾಘಟನಂಧನ್ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಅವರು ಸಿಎಂ ಅಭ್ಯರ್ಥಿಯಾಗಿ ಮೊದಲ ಆಯ್ಕೆಯಾಗಿದ್ದು ಜೊತೆಗೆ ಎನ್ಡಿಎ ಬದಿಗೊತ್ತಿ ಕಾಂಗ್ರೆಸ್- ಆರ್ ಜೆಡಿ ಸರ್ಕಾರ ಬರಲಿದೆ ಎಂದು ವರದಿ ಬಂದಿದೆ.

243 ಸ್ಥಾನ (122 ಮ್ಯಾಜಿಕ್ ನಂಬರ್)

ಮಹಾಘಟಬಂಧನ್: 139 ರಿಂದ 161, 39% ಮತ ಗಳಿಕೆ

ಎನ್ಡಿಎ: 69 ರಿಂದ 61, 44%

   Muniratna vs Kusuma : RR Nagar ಕಣದಲ್ಲಿ ಗೆಲ್ಲೋದು ಯಾರು, ಎರಡೂ ಪಕ್ಷಗಳ ಜಿದ್ದಾಜಿದ್ದಿ | Oneindia Kannada

   ಎಲ್ ಜೆಪಿ: 3 ರಿಂದ 5, 7%

   ಜಿಡಿಎಸ್ ಎಫ್: 3 ರಿಂದ 5, 4%

   ಇಂಡಿಯಾ ಟುಡೇ EXIT poll:ಬಿಹಾರ ಅಭಿವೃದ್ಧಿ, ಉದ್ಯೋಗವೇ ಮುಖ್ಯ

   243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಸಲಾಯಿತು. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ, ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ, ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 1 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಸಲಾಯಿತು. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

   2015ರಲ್ಲಿ ಬಂದಿದ್ದ ಫಲಿತಾಂಶ: 2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ ಗಳಿಸಿದ್ದವು. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.

   English summary
   Bihar Election Exit Poll Results 2020 in Kannada: India Today-Axis My India seat projections:Tejashwi to sweep polls. RJD-cong - 139 to 161 seats, JDU- BJP- 69 to 91 seats, LJP 3 to 5 seats, Others 3 to 5 seats
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X