ಇಂಡಿಯಾ ಟುಡೇ EXIT poll:ಯುವ ಜನತೆಗೆ ತೇಜಸ್ವಿ ಅಚ್ಚು ಮೆಚ್ಚು

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಸಲಾಗಿದ್ದು, ನವೆಂಬರ್ 7 ರಂದು ಮೂರನೇ ಹಾಗೂ ಅಂತಿಮ ಹಂತದ ಮತದಾನ ಮುಕ್ತಾಯವಾಗಿದೆ. ಚುನಾವಣಾ ಆಯೋಗದ ನಿಯಮದಂತೆ ಸಂಜೆ 6 ಗಂಟೆ ನಂತರ ಚುನಾವಣೋತ್ತರ ಸಮೀಕ್ಷೆಗಳು ಬರಲಾರಂಭಿಸಿವೆ ಇಂಡಿಯಾ ಟುಡೇ ಹಾಗೂ ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ವರದಿ ಇಲ್ಲಿದೆ...

ಅಕ್ಟೋಬರ್ 28 ರ ಬುಧವಾರ ಸಂಜೆ 6.30 ರಿಂದ ನವೆಂಬರ್ 7ರ ತನಕ ಬಿಹಾರದ ವಿಧಾನಸಭೆ ಚುನಾವಣೆ, ಲೋಕಸಭೆ ಉಪ ಚುನಾವಣೆಗೆ ಸಂಬಂಧಿಸಿದಂತೆ ವೆಬ್ ತಾಣ, ಎಲೆಕ್ಟ್ರಾನಿಕ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು.

ಇಂಡಿಯಾ ಟುಡೇ ಹಾಗೂ ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ವರದಿ
ಬಿಹಾರದ ಸಿಎಂ ಯಾರಾಗಬೇಕು?:
ತೇಜಸ್ವಿ ಯಾದವ್: 44%
ನಿತೀಶ್ ಕುಮಾರ್: 35%
ಚಿರಾಗ್ ಪಾಸ್ವಾನ್: 7%
ಉಪೇಂದ್ರ ಕುಶ್ವಾಹ: 4%

ಇಂಡಿಯಾ ಟುಡೇ ಹಾಗೂ ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ವರದಿ ವಯೋಮಿತಿ ಆಧಾರದ ಮೇಲೆ ಸಮೀಕ್ಷೆ

Bihar Exit Poll Results 2020: India Today-Axis My India Age wise vote Share

ವಯೋಮಿತಿ-ಎಂಜಿಬಿ--ಎನ್ಡಿಎ-ಎಲ್ಜೆಪಿ-ಜಿಡಿಎಸ್ಎಫ್-ಇತರೆ
18-25 ವರ್ಷ: 47%-34%-8%-4%-7%

26-35 ವರ್ಷ: 47%-36%-7%-3%-7%

36-50 ವರ್ಷ: 41%-42%-7%-5%-5%

51-60 ವರ್ಷ: 40%-45%-6%-3%-6%

61 ವರ್ಷ ಮೇಲ್ಪಟ್ಟ: 38%-48%-6%-3%-5%

ಅಂತಿಮವಾಗಿ ಸಮೀಕ್ಷೆ ಪ್ರಕಾರ ಯುವ ಜನತೆ ಮಹಾಘಟಬಂಧನ್(ಎಂಜಿಬಿ) ಸಿಎಂ ಅಭ್ಯರ್ಥಿ ಪರ ಮತ ಹಾಕಿದ್ದರೆ, ಹಿರಿಯನಾಗರಿಕರು ಹಾಲಿ ಸಿಎಂ ಎನ್ಡಿಎ ಅಭ್ಯರ್ಥಿ ನಿತೀಶ್ ಕುಮಾರ್ ಪರ ನಿಂತಿದ್ದಾರೆ.

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಸಲಾಯಿತು. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ, ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ, ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 19 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಸಲಾಯಿತು. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+