ಇಂಡಿಯಾ ಟುಡೇ ಸಮೀಕ್ಷೆಗಳ ಸಮೀಕ್ಷೆ: ತೇಜಸ್ವಿ ಬಣಕ್ಕೆ ಗೆಲುವು
ಇಂಡಿಯಾ ಟುಡೇ -ಆಕ್ಸಿಸ್ ಮೈ ಇಂಡಿಯಾ ಚುನಾವಣಾ ಪೂರ್ವ ಸಮೀಕ್ಷೆಯಂತೆ ಮಹಾಘಟಬಂಧನ್ ಜಯಭೇರಿ ಬಾರಿಸಲಿದ್ದು, ತೇಜಸ್ವಿ ಯಾದವ್ ಮುಖ್ಯಮಂತ್ರಿಯಾಗಲಿದ್ದಾರೆ.
ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಸಲಾಗಿದ್ದು, ನವೆಂಬರ್ 7 ರಂದು ಮೂರನೇ ಹಾಗೂ ಅಂತಿಮ ಹಂತದ ಮತದಾನ ಮುಕ್ತಾಯವಾಗಿದೆ. ಚುನಾವಣಾ ಆಯೋಗದ ನಿಯಮದಂತೆ ಸಂಜೆ 6 ಗಂಟೆ ನಂತರ ಚುನಾವಣೋತ್ತರ ಸಮೀಕ್ಷೆಗಳು ಬರಲಾರಂಭಿಸಿವೆ ಇಂಡಿಯಾ ಟುಡೇ ಹಾಗೂ ಆಕ್ಸಿಸ್ ಮೈ ಇಂಡಿಯಾ ಕಲೆ ಹಾಕಿರುವ ಸಮೀಕ್ಷೆಗಳ ಸಮೀಕ್ಷೆ ವರದಿ ಇಲ್ಲಿದೆ...
243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಸಲಾಯಿತು. ನವೆಂಬರ್ 10ರಂದು ಫಲಿತಾಂಶ ಹೊರ ಬರಲಿದೆ.

ಅಕ್ಟೋಬರ್ 28 ರ ಬುಧವಾರ ಸಂಜೆ 6.30 ರಿಂದ ನವೆಂಬರ್ 7ರ ತನಕ ಬಿಹಾರದ ವಿಧಾನಸಭೆ ಚುನಾವಣೆ, ಲೋಕಸಭೆ ಉಪ ಚುನಾವಣೆಗೆ ಸಂಬಂಧಿಸಿದಂತೆ ವೆಬ್ ತಾಣ, ಎಲೆಕ್ಟ್ರಾನಿಕ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು.
2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ ಗಳಿಸಿದ್ದವು. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.
ಸಮೀಕ್ಷೆಗಳ ಸಮೀಕ್ಷೆ: ತೇಜಸ್ವಿ ಬಣಕ್ಕೆ ಗೆಲುವು ಸಾಧಿಸಲಿದ್ದು, ಆರ್ ಜೆ ಡಿ-ಕಾಂಗ್ರೆಸ್ ಬಣ 133 ಸ್ಥಾನ ಪಡೆಯಲಿದ್ದು, ಎನ್ಡಿಎ 100 ಸ್ಥಾನ ಹಾಗೂ ಇತರೆ 11 ಪಡೆಯಲಿದೆ.
| ಸಮೀಕ್ಷೆಗಳ ಸಮೀಕ್ಷೆ 234 ಸ್ಥಾನ, 122 ಮ್ಯಾಜಿಕ್ ನಂಬರ್ | |||
|---|---|---|---|
| ಸಮೀಕ್ಷೆ ಸಂಸ್ಥೆ | ಎನ್ಡಿಎ | ಮಹಾಘಟಬಂಧನ್ | ಇತರೆ |
| ಸಿವೋಟರ್ | 116 | 120 | 7 |
| ಜನತಾ ಕಿ ಬಾತ್ | 104 | 128 | 11 |
| ಟಿವಿ9 ಭಾರತ್ ವರ್ಷ್ | 115 | 120 | 8 |
| ಇಟಿಜಿ ಬಿಹಾರ್ | 114 | 120 | 9 |
| ಟುಡೇಸ್ ಚಾಣಕ್ಯ | 55 | 180 | 8 |
| ಡಿವಿ ರಿಸರ್ಚ್ | 114 | 116 | 23 |
| ಆಕ್ಸಿಸ್ ಮೈ ಇಂಡಿಯಾ | 80 | 150 | 12 |
| Poll Of Polls | 100 | 133 | 11 |











Click it and Unblock the Notifications