Todays Chanakya Exit Poll: ಮಹಾಘಟಬಂಧನ್ ಮೈತ್ರಿಕೂಟಕ್ಕೆ ಗದ್ದುಗೆ
ಪಾಟ್ನಾ, ನವೆಂಬರ್.07: ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊೆೆಂಡಿದೆ. ರಾಜ್ಯದಲ್ಲಿ ಆರ್ ಜೆಡಿ-ಕಾಂಗ್ರೆಸ್ಸಿನ ಮಹಾಘಟಬಂಧನ್ ಮೈತ್ರಿಕೂಟ, ಜೆಡಿಯು-ಬಿಜೆಪಿ-ಎಚ್ಎಎಂನ ಎನ್ ಡಿಎ ಮೈತ್ರಿಕೂಟ ಹಾಗೂ ಲೋಕಜನಶಕ್ತಿ ಪಕ್ಷಗಳ ಭವಿಷ್ಯವನ್ನು ಚುನಾವಣಾ ಸಮೀಕ್ಷೆಗಳ ಮೂಲಕ ವಿಶ್ಲೇಷಿಸಲಾಗುತ್ತದೆ.
2020ರ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದು ಸಾಕಷ್ಟು ಕುತೂಹಲ ಕೆರಳಿಸಿದೆ. ಅಕ್ಟೋಬರ್.28ರ ಮೊದಲ ಹಂತದಲ್ಲಿ ಶೇ.55.69ರಷ್ಟು ಮತದಾನ ನಡೆದಿದೆ. ನವೆಂಬರ್.03ರ ಎರಡನೇ ಹಂತದಲ್ಲಿ ಶೇ.53.51ರಷ್ಟು ಮತದಾನ ನಡೆದಿದೆ. ಶನಿವಾರ 3ನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ.
ಭಾರತದ ಸಂಸತ್ ಚುನಾವಣೆ ಹಾಗೂ ವಿಧಾನಸಭಾ ಚುನಾವಣಾ ಮತದಾನೋತ್ತರ ಸಮೀಕ್ಷೆಗಳ ಪೈಕಿ "ಟುಡೇ ಚಾಣಕ್ಯ" ಸಮೀಕ್ಷೆಯು ಅತ್ಯಂತ ವಿಶ್ವಾಸಾರ್ಹ ಎನಿಸಿದೆ. ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಫಲಿತಾಂಶದ ಕುರಿತು "ಟುಡೇ ಚಾಣಕ್ಯ" ನಡೆಸಿರುವ ಮತದಾನೋತ್ತರ ಸಮೀಕ್ಷೆ ಅಂಕಿ-ಅಂಶಗಳು ಹೇಗಿದೆ. ಯಾವ ಮಹಾಘಟಬಂಧನ್ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಪೈಕಿ ಗದ್ದುಗೆ ಗಿಟ್ಟಿಸಿಕೊಳ್ಳುವವರು ಯಾರು. ರಾಜ್ಯದಲ್ಲಿ ಲೋಕಜನಶಕ್ತಿ ಪಕ್ಷ ಕಿಂಗ್ ಮೇಕರ್ ಆಗುತ್ತಾ ಎಂಬ ಪ್ರಶ್ನೆಗಳಿಗೆ ಟುೇ ಚಾಣಕ್ಯ ಮತದಾನೋತ್ತರ ಸಮೀಕ್ಷೆಯಲ್ಲಿ ಉತ್ತರ ಸಿಕ್ಕಿದೆ.

ಬಿಹಾರದಲ್ಲಿ ಮಹಾಘಟಬಂಧನಕ್ಕೆ ಗದ್ದುಗೆ:
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಕುದುರೆ ಯಾವುದು ಎನ್ನುವುದರ ಕುರಿತು ಟುಡೇಸ್ ಚಾಣುಕ್ಯ ಚುನಾವಣಾ ಮತದಾನೋತ್ತರ ಸಮೀಕ್ಷೆಯಲ್ಲಿ ಸ್ಪಷ್ಟವಾಗಿ ಹೇಳಿದೆ. ಆರ್ ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮಹಾಘಟಬಂಧನ್ ಗದ್ದುಗೆ ಏರಲಿದೆ ಎಂದು ಭವಿಷ್ಯ ನುಡಿದಿದೆ.
ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್ ಮೈತ್ರಿಕೂಟವು ಶೇ.44ರಷ್ಟು ಮತಗಳನ್ನು ಪಡೆದುಕೊಂಡಿದ್ದು, ಎನ್ ಡಿಎ ಮೈತ್ರಿಕೂಟವು ಶೇ.33ರಷ್ಟು ಮತಗಳನ್ನು ಪಡೆದುಕೊಂಡಿದೆ ಎಂದು ಚಾಣಕ್ಯ ಸಮೀಕ್ಷೆಯಲ್ಲಿ ತಿಳಿಸಿದೆ.
2015ರ ಬಿಹಾರ ಚುನಾವಣೆ ಫಲಿತಾಂಶ:
ಕಳೆದ 2015ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಲಾಲೂ ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ಪಕ್ಷವು 80 ಸ್ಥಾನ ಜಯಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು 71 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ 27 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತ್ತು. ಬಿಜೆಪಿ, ಲೋಕಜನಶಕ್ತಿ ಪಕ್ಷ, ಹಿಂದೂಸ್ತಾನ್ ಅವಂ ಮೋರ್ಚಾ ಮತ್ತು ರಾಷ್ಟ್ರೀಯ ಲೋಕಸಮತಾ ಪಕ್ಷಗಳನ್ನೊಳಗೊಂಡ ಎನ್ ಡಿಎ ಮೈತ್ರಿಕೂಟವು 53 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

ಮಹಾಘಟಬಂಧನ್ ಮೈತ್ರಿಕೂಟಕ್ಕೆ ಅಧಿಕಾರ
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಕುದುರೆ ಯಾವುದು ಎನ್ನುವುದರ ಕುರಿತು ಟುಡೇಸ್ ಚಾಣುಕ್ಯ ಚುನಾವಣಾ ಮತದಾನೋತ್ತರ ಸಮೀಕ್ಷೆಯಲ್ಲಿ ಸ್ಪಷ್ಟವಾಗಿ ಹೇಳಿದೆ. ಆರ್ ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮಹಾಘಟಬಂಧನ್ ಗದ್ದುಗೆ ಏರಲಿದೆ ಎಂದು ಭವಿಷ್ಯ ನುಡಿದಿದೆ. ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್ ಮೈತ್ರಿಕೂಟವು ಶೇ.44ರಷ್ಟು ಮತಗಳನ್ನು ಪಡೆದುಕೊಂಡಿದ್ದು, ಎನ್ ಡಿಎ ಮೈತ್ರಿಕೂಟವು ಶೇ.33ರಷ್ಟು ಮತಗಳನ್ನು ಪಡೆದುಕೊಂಡಿದೆ ಎಂದು ಚಾಣಕ್ಯ ಸಮೀಕ್ಷೆಯಲ್ಲಿ ತಿಳಿಸಿದೆ.

"ಚಾಣಕ್ಯ"ನ ಪ್ರಕಾರ ಯಾರಿಗೆಷ್ಟು ಸ್ಥಾನ?
ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಟುಡೇಸ್ ಚಾಣಕ್ಯ ಚುನಾವಣೋತ್ತರ ಸಮೀಕ್ಷೆ ನಡೆಸಿದೆ. 2020ರಲ್ಲಿ ಮಹಾಘಟಬಂಧನ್ ಮೈತ್ರಿಕೂಟಕ್ಕೆ ಅಧಿಕಾರಕ್ಕೆ ಬರಲಿದೆ ಎಂದು ಚಾಣಕ್ಯ ಭವಿಷ್ಯ ನುಡಿದಿದೆ. ಮಹಾಘಟಬಂಧನ್ 169-191 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಎನ್ ಡಿಎ ಮೈತ್ರಿಕೂಟ 44-56, ಇತರೆ 4-12 ಸ್ಥಾನ ಗಳಿಸಲಿದೆ ಎಂದು ಟುಡೇಸ್ ಚಾಣಕ್ಯ ಚುನಾವಣೋತ್ತರ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಬಿಹಾರದಲ್ಲಿ ನಡೆಯುವುದಿಲ್ಲವೇ ನಿತೀಶ್-ಮೋದಿ ಮೋದಿ
ಬಿಹಾರದಲ್ಲಿ 15 ವರ್ಷ ಮುಖ್ಯಮಂತ್ರಿ ಆಗಿ ಆಡಳಿತ ನಡೆಸಿದ ನಿತೀಶ್ ಕುಮಾರ್ ವಿರುದ್ಧ ಈ ಬಾರಿ ಆಡಳಿತ ವಿರೋಧಿ ಅಲೆಯಿದೆ ಎಂಬ ಮಾತುಗಳು ಆರಂಭದಿಂದಲೂ ಕೇಳಿ ಬರುತ್ತಿದ್ದವು. ಈ ಹಿನ್ನೆಲೆ ಎನ್ ಡಿಎ ಮೈತ್ರಿಕೂಟದಲ್ಲೇ ಗುರುತಿಸಿಕೊಂಡಿದ್ದ ಎಲ್ ಜೆಪಿ ಕೂಡ ನಿತೀಶ್ ವಿರುದ್ಧ ಬಂಡಾಯದ ಬಾವುಟ ಹಾರಿಸಿ, ಎನ್ ಡಿಎ ಮೈತ್ರಿಕೂಟದಿಂದಲೇ ಹೊರ ನಡೆದಿತ್ತು. ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆಯನ್ನೇ ಮಹಾಘಟಬಂಧನ್ ಮೈತ್ರಿಕೂಟವು ಸರಿಯಾಗಿ ಮತದಾರರ ಎದುರಿನಲ್ಲಿ ಪ್ರಸ್ತುತಪಡಿಸುವಲ್ಲಿ ಯಶಸ್ವಿಯಾಗಿದೆ. ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮತದಾರರ ಮನ ಮುಟ್ಟುವಲ್ಲಿ ಸಫಲರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

2015ರಲ್ಲಿ ನಡೆದ ಚುನಾವಣೆಯ ಫಲಿತಾಂಶ
ಕಳೆದ 2015ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಲಾಲೂ ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ಪಕ್ಷವು 80 ಸ್ಥಾನ ಜಯಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು 71 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ 27 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತ್ತು. ಬಿಜೆಪಿ, ಲೋಕಜನಶಕ್ತಿ ಪಕ್ಷ, ಹಿಂದೂಸ್ತಾನ್ ಅವಂ ಮೋರ್ಚಾ ಮತ್ತು ರಾಷ್ಟ್ರೀಯ ಲೋಕಸಮತಾ ಪಕ್ಷಗಳನ್ನೊಳಗೊಂಡ ಎನ್ ಡಿಎ ಮೈತ್ರಿಕೂಟವು 53 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications