ಬಿಎಸ್‌ವೈ ರಾಜೀನಾಮೆ; ದೆಹಲಿಯಿಂದ ಬರಲಿದ್ದಾರೆ ಬಿಜೆಪಿ ವೀಕ್ಷಕರು

ಬೆಂಗಳೂರು, ಜುಲೈ 26; ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರು? ಎಂಬುದು ಸದ್ಯ ರಾಜ್ಯದ ಜನರ ಪ್ರಶ್ನೆಯಾಗಿದೆ.

ಸೋಮವಾರ ರಾಜ್ಯದಲ್ಲಿ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ದೆಹಲಿಯಲ್ಲಿಯೂ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ಮಾಡಿದ್ದಾರೆ.

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು? ಎಂಬುದು ಮಂಗಳವಾರ ಅಂತಿಮಗೊಳ್ಳುವ ನಿರೀಕ್ಷೆ ಇದೆ. ಬಿಜೆಪಿ ಹೈಕಮಾಂಡ್ ನಾಯಕರು ಮುಂದಿನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಗಮನಹರಿಸಿದ್ದಾರೆ.

 BJP High Command To Send Observers To Elect New Chief Minister

ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಯಲಿದೆ. ಮಂಗಳವಾರ ಬೆಳಗ್ಗೆ 9.30ಕ್ಕೆ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಅದಕ್ಕೂ ಮೊದಲು ಹೈಕಮಾಂಡ್ ಮುಂದಿನ ಪ್ರಕ್ರಿಯೆಗಾಗಿ ವೀಕ್ಷಕರನ್ನು ಕರ್ನಾಟಕಕ್ಕೆ ಕಳಿಸಲಿದೆ.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಧರ್ಮೇಂದ್ರ ಪ್ರಧಾನ್ ವೀಕ್ಷಕರಾಗಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾಗಿ ಅರುಣ್ ಸಿಂಗ್ ಸಹ ಅವರ ಜೊತೆ ಇರಲಿದ್ದಾರೆ. ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆಗೆ ಅಭಿಪ್ರಾಯ ಸಂಗ್ರಹ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+