2022ರ ಬಜೆಟ್‌ನಲ್ಲಿ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ: ಸಮೀಕ್ಷೆ
ನವದೆಹಲಿ, ಜನವರಿ 21: ಕೊರೊನಾ ವೈರಸ್ ಸೋಂಕು ಒಡ್ಡಿದ ನಿರಂತರ ಸವಾಲುಗಳಿಂದಾಗಿ ಸಾರ್ವಜನಿಕ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುವ ಅನಿವಾರ್ಯತೆಯು ಈಗ ಸೃಷ್ಟಿ ಆಗಿದೆ. ಈ ನಿಟ್ಟಿನಲ್ಲಿ ಮುಂದಿನ ಕೇಂದ್ರ ಬಜೆಟ್‌ನಲ್ಲಿ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ ಎಂದು ಅಸೋಚಾಮ್ (ಎಎಸ್‌ಎಸ್‌ಒಸಿಎಚ್‌ಎಎಂ) ಸಮೀಕ್ಷೆ ಬಹಿರಂಗಪಡಿಸಿದೆ.
ASSOCHAM ಸಮೀಕ್ಷೆಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಶೇಕಡಾ 47 ರಷ್ಟು ಜನರು 2022-23 ರ ಬಜೆಟ್‌ನಲ್ಲಿ ಆರೋಗ್ಯ ರಕ್ಷಣೆಗೆ ಹೆಚ್ಚಿನ ಗಮನವನ್ನು ನೀಡುತ್ತಿರುವ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಕಡೆಗೆ ಬೊಟ್ಟು ಮಾಡಿದ್ದಾರೆ. ಈ ಸಮೀಕ್ಷೆಯನ್ನು ವಿವಿಧ ವಲಯಗಳಿಂದ 40 ನಗರಗಳಲ್ಲಿ 400 ಪ್ರತಿಸ್ಪಂದಕರ ನಡುವೆ ನಡೆಸಲಾಗಿದೆ.
ಕೊರೊನಾ ವೈರಸ್ ಸೋಂಕು ಜಾಗತಿಕ ಆರೋಗ್ಯ ವ್ಯವಸ್ಥೆಯ ಮಿತಿಗಳನ್ನು ಪರೀಕ್ಷಿಸಿದೆ. ಸರ್ಕಾರದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಮುಂಚೂಣಿ ಕಾರ್ಯಕರ್ತರ ದಣಿವರಿಯದ ಪ್ರಯತ್ನಗಳ ನಡುವೆಯೂ ಈ ಸಾಂಕ್ರಾಮಿಕ ರೋಗವು ಆರೋಗ್ಯ ವ್ಯವಸ್ಥೆಯಲ್ಲಿ ಕೆಲವು ಸಮಸ್ಯೆಯನ್ನು ಸೃಷ್ಟಿ ಮಾಡಿದೆ. ಬಜೆಟ್‌ನಲ್ಲಿ ಆದ್ಯತೆ ನೀಡಲಾಗುವ ಅಂಶಗಳ ಪಟ್ಟಿಯಲ್ಲಿ ಸರ್ಕಾರದ ಮೂಲಸೌಕರ್ಯಗಳ ಮೇಲಿನ ವೆಚ್ಚವು ಅಗ್ರಸ್ಥಾನದಲ್ಲಿದೆ. "ಸರ್ಕಾರವು ಮೊದಲು ಮೂಲಸೌಕರ್ಯದಲ್ಲಿ ಹೂಡಿಕೆಯನ್ನು ಹೆಚ್ಚಿಸುವತ್ತ ಗಮನಹರಿಸಬೇಕು, ನಂತರ ಉತ್ಪಾದನಾ ಸಾಮರ್ಥ್ಯಗಳ ಹೆಚ್ಚಳ ಮಾಡಿ ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸಬೇಕು," ಎಂದು ಸಮೀಕ್ಷೆಯು ಹೇಳಿದೆ.

ಕೋವಿಡ್ ಎದುರಿಸುವಲ್ಲಿ ಆರ್ಥಿಕತೆಗೆ ಪ್ರಮುಖ ಸ್ಥಾನ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2022 ರಂದು ತಮ್ಮ ನಾಲ್ಕನೇ ಕೇಂದ್ರ ಬಜೆಟ್ ಅನ್ನು ಘೋಷಿಸಲಿದ್ದಾರೆ. ಈ ನಡುವೆ ಈ ಬಜೆಟ್ ಸಮೀಕ್ಷೆಯು ನಡೆದಿದೆ. ಕೊರೊನಾ ವೈರಸ್ ರೂಪಾಂತರಗಳ ದಾಳಿಯನ್ನು ಎದುರಿಸಲು ಆರ್ಥಿಕತೆಯು ಪ್ರಮುಖ ಸ್ಥಾನವನ್ನು ವಹಿಸಿದೆ ಎಂದು ಅಸೋಚಾಮ್ ಪ್ರಧಾನ ಕಾರ್ಯದರ್ಶಿ ದೀಪಕ್ ಸೂದ್ ಹೇಳಿದರು. "ಆದರೆ ಈ ವೇಗವನ್ನು ಉಳಿಸಿಕೊಳ್ಳಲು ಬೆಳವಣಿಗೆಯನ್ನು ಉತ್ತೇಜಿಸುವ ಅವಶ್ಯಕತೆಯಿದೆ. ಅದು ಸಾಮಾನ್ಯ ಪುರುಷ ಮತ್ತು ಮಹಿಳೆಗೆ ಪರಿಹಾರವನ್ನು ನೀಡುತ್ತದೆ," ಎಂದು ಕೂಡಾ ಅಸೋಚಾಮ್ ಪ್ರಧಾನ ಕಾರ್ಯದರ್ಶಿ ದೀಪಕ್ ಸೂದ್ ತಿಳಿಸಿದರು.

"ಆದಾಯ ತೆರಿಗೆ ಕಡಿಮೆ ಮಾಡಿ, ಇಂಧನ ಜಿಎಸ್‌ಟಿ ವ್ಯಾಪ್ತಿಗೆ ತನ್ನಿ"
ASSOCHAM ಸಮೀಕ್ಷೆಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಸುಮಾರು 40 ಪ್ರತಿಶತದಷ್ಟು ಜನರು ಖಾಸಗಿ ಬೇಡಿಕೆ ಮತ್ತು ಬಳಕೆಯನ್ನು ಹೆಚ್ಚಿಸಲು ಹಣಕಾಸು ಸಚಿವರು ಆದಾಯ ತೆರಿಗೆಯನ್ನು ಕಡಿಮೆ ಮಾಡಬೇಕು ಎಂದು ಹೇಳಿದ್ದಾರೆ. ಬಡ ಕುಟುಂಬಗಳಿಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಸಹಾಯಕವಾಗಬಹುದು ಎಂದು ಸುಮಾರು 31 ಪ್ರತಿಶತದಷ್ಟು ಜನರು ಹೇಳಿದ್ದಾರೆ. ಸರಕು ಮತ್ತು ಸೇವಾ ತೆರಿಗೆಯು ಕೇಂದ್ರ ಬಜೆಟ್‌ನ ಅಡಿಯಲ್ಲಿ ಬರುವುದಿಲ್ಲವಾದರೂ, ಕೇಂದ್ರ ಹಣಕಾಸು ಸಚಿವರ ನೇತೃತ್ವದ ಜಿಎಸ್‌ಟಿ ಕೌನ್ಸಿಲ್ ದರಗಳನ್ನು ಪರಿಷ್ಕರಿಸಬಹುದು ಎಂದು ಉದ್ಯಮವು ನಿರೀಕ್ಷಿಸಿದೆ. ಇದಲ್ಲದೆ, ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ಅಡಿಯಲ್ಲಿ ತರಲು ಕೇಂದ್ರ ಮತ್ತು ರಾಜ್ಯಗಳಿಗೆ ಒಪ್ಪಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಸಮೀಕ್ಷೆಯು ಹೇಳಿದೆ.

ಉದ್ಯೋಗ ಸೃಷ್ಟಿಯ ವೇಗ ಹೆಚ್ಚಿಸುವುದು ಹೇಗೆ?
ಉದ್ಯೋಗ ಸೃಷ್ಟಿಯ ವೇಗವನ್ನು ಹೆಚ್ಚಿಸಲು ಸರ್ಕಾರ ಏನು ಮಾಡಬಹುದು ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಹಲವು ಮಂದಿ, "ಸರ್ಕಾರವು ಮೂಲಸೌಕರ್ಯ ಮತ್ತು ವಸತಿ ಕ್ಷೇತ್ರದ ಮೇಲೆ ಕೇಂದ್ರೀಕರಿಸಬೇಕು," ಎಂದು ಹೇಳಿದ್ದಾರೆ. ಹೆಚ್ಚಿನ ಜನರನ್ನು ನೇಮಿಸಿಕೊಳ್ಳಲು ಕಂಪನಿಗಳಿಗೆ ಹೆಚ್ಚಿನ ಪ್ರೋತ್ಸಾಹವೂ ಅತ್ಯಗತ್ಯ ಎಂದು ಕೂಡಾ ಜನರು ಪ್ರತಿಕ್ರಿಯೆ ನೀಡಿದ್ದಾರೆ. ಮೂಲಸೌಕರ್ಯಗಳನ್ನು ನಿರ್ಮಿಸುವುದು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಮತ್ತು ಕೃಷಿ ವಿಭಾಗಕ್ಕೆ ಮಾರುಕಟ್ಟೆ ಪ್ರವೇಶವನ್ನು ಬಲಪಡಿಸಲು ಸಹಾಯಕವಾಗಿದೆ. ಒಟ್ಟಾರೆ ಮೂಲಸೌಕರ್ಯ ಅಭಿವೃದ್ಧಿಯು ವಿವಿಧ ಕೈಗಾರಿಕೆಗಳ ಬೆಳವಣಿಗೆಯನ್ನು ಬೆಂಬಲಿಸುತ್ತದೆ ಎಂಬುವುದು ಸಮೀಕ್ಷೆಯಲ್ಲಿ ತಿಳಿದು ಬಂದ ಅಭಿಪ್ರಾಯವಾಗಿದೆ.

ಕೋವಿಡ್‌ನಿಂದ ನಲುಗಿದೆ ಈ ವಲಯ
ಭಾರತೀಯ ಆರ್ಥಿಕತೆಯ ಬೆನ್ನೆಲುಬಾಗಿರುವ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ವಲಯವು ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದೆ. ಈ ವಿಭಾಗವು ಗಮನಾರ್ಹವಾದ ಬದುಕುಳಿಯುವ ಸವಾಲುಗಳನ್ನು ಎದುರಿಸಿದೆ. ಈ ವಲಯಕ್ಕೆ ಕೋವಿಡ್ ಸಂದರ್ಭದಲ್ಲಿ ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ. ಗ್ರಾಹಕರ ಬೇಡಿಕೆ ಕಡಿಮೆ ಆಗಿದೆ. ಉದ್ಯೋಗಿಗಳ ಸಂಖ್ಯೆಯನ್ನು ಕೂಡಾ ಕಡಿಮೆ ಮಾಡಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ. ಆರಂಭಿಕ ಲಾಕ್‌ಡೌನ್ ಸಮಯದಲ್ಲಿ ಬೆಂಬಲ ನೀಡಲು ರೂ 3 ಲಕ್ಷ ಕೋಟಿ ಇಸಿಎಲ್‌ಜಿ ಯೋಜನೆಯಂತಹ ಸರ್ಕಾರದ ಕ್ರಮಗಳ ಹೊರತಾಗಿಯೂ, ಈ ವಲಯವು ಸಾಕಷ್ಟು ಬಿಕ್ಕಟ್ಟಿನಲ್ಲಿ ಸಿಲುಕಿದೆ. ಶೇಕಡ 28 ರಷ್ಟು ಜನರು MSMEಗಳಿಗೆ ಕಡಿಮೆ ವೆಚ್ಚದಲ್ಲಿ ಇತ್ತೀಚಿನ ತಂತ್ರಜ್ಞಾನಗಳ ಬಳಕೆಗೆ ಆದ್ಯತೆ ನೀಡುವ, ಉತ್ತೇಜನ ನೀಡುವ ಕ್ರಮಗಳನ್ನು ಬಜೆಟ್ ಒಳಗೊಂಡಿರಬೇಕು ಎಂದು ಹೇಳಿದ್ದಾರೆ. ಅಲ್ಪಾವಧಿಯ ಸವಾಲುಗಳನ್ನು ನಿರ್ವಹಿಸಲು, ಸರ್ಕಾರವು ಮುಂದಿನ ವರ್ಷದವರೆಗೆ ಕ್ರೆಡಿಟ್ ಗ್ಯಾರಂಟಿ ಯೋಜನೆಯ ವಿಸ್ತರಣೆಯನ್ನು ನೀಡಬೇಕು ಎಂಬುವುದು ಕೂಡಾ ಜನರ ಬೇಡಿಕೆ ಆಗಿದೆ. (ಒನ್‌ಇಂಡಿಯಾ ಸುದ್ದಿ)
Recommended Video
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications