ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ: ಕಾಂಗ್ರೆಸ್ 'ಮೈಂಡ್ ರೀಡಿಂಗ್' ಸರಿಯಾಗಿ ಅರಿತ ಬಿಜೆಪಿ

|
Google Oneindia Kannada News

ಸಿಂಧಗಿ ಮತ್ತು ಹಾನಗಲ್ ಅಸೆಂಬ್ಲಿ ಕ್ಷೇತ್ರದ ಉಪ ಚುನಾವಣೆಯ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರ ತೊಡಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ಏರ್ಪಡಲಿದೆ ಎನ್ನುವ ಲೆಕ್ಕಾಚಾರವಿದ್ದರೂ, ಸಿಂಧಗಿಯಲ್ಲಿ ಜೆಡಿಎಸ್ ಅಸ್ತಿತ್ವವನ್ನು ಕಡೆಗಣಿಸುವಂತಿಲ್ಲ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ್ರು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಜೊತೆಗೆ ಸಿಂಧಗಿಯಲ್ಲಿ ಠಿಕಾಣಿ ಹೂಡಿ ಪ್ರಚಾರದ ಉಸ್ತುವಾರಿಯನ್ನು ನೋಡಿಕೊಳ್ಳಲಿದ್ದಾರೆ. ಇನ್ನು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಎರಡು ಕ್ಷೇತ್ರದಲ್ಲಿ (ಅ 18) ಪ್ರಚಾರ ನಡೆಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಣ್ಣೀರು ನಿಮ್ಮನ್ನು ಸುಮ್ಮನೆ ಬಿಡಲ್ಲ!ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಣ್ಣೀರು ನಿಮ್ಮನ್ನು ಸುಮ್ಮನೆ ಬಿಡಲ್ಲ!

ಆಡಳಿತ ಪಕ್ಷ ಬಿಜೆಪಿಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿರುವುದರಿಂದ, ಉಸ್ತುವಾರಿಗಳು ಈಗಾಗಲೇ ಕ್ಷೇತ್ರದಲ್ಲಿ ಬೀಡುಬಿಟ್ಟು ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಮೂರು ಪಕ್ಷಗಳ ಕೆಸೆರೆರೆಚಾಟ, ಸಾಮಾಜಿಕ ತಾಣದಲ್ಲಿ ಎಗ್ಗಿಲ್ಲದಂತೇ ಸಾಗುತ್ತಿದೆ.

ವಿಜಯದಶಮಿಯ ದಿನದಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿದ್ದರು. ಉಪ ಚುನಾವಣೆಯಲ್ಲಿ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಇವರಿಬ್ಬರ ನಡುವೆ ಭೇಟಿಯಾಗಿತ್ತು ಎನ್ನುವ ಮಾತಿತ್ತು. ಕಾಂಗ್ರೆಸ್ ಮೈಂಡ್ ರೀಡಿಂಗ್ ಸರಿಯಾಗಿ ಅರಿತ ಬಿಜೆಪಿ..

4 ತಿಂಗಳ ನಂತರ ಬಿಎಸ್ವೈ ಭೇಟಿಯಾದ ಬಿ.ಎಲ್.ಸಂತೋಷ್: ಇದಾ ಕಾರಣ?4 ತಿಂಗಳ ನಂತರ ಬಿಎಸ್ವೈ ಭೇಟಿಯಾದ ಬಿ.ಎಲ್.ಸಂತೋಷ್: ಇದಾ ಕಾರಣ?

 ನಾಲ್ಕು ತಿಂಗಳಿನ ನಂತರ ಸಂತೋಷ್ ಅವರು ಯಡಿಯೂರಪ್ಪನವರನ್ನು ಭೇಟಿ

ನಾಲ್ಕು ತಿಂಗಳಿನ ನಂತರ ಸಂತೋಷ್ ಅವರು ಯಡಿಯೂರಪ್ಪನವರನ್ನು ಭೇಟಿ

ಸುಮಾರು ನಾಲ್ಕು ತಿಂಗಳಿನ ನಂತರ ಸಂತೋಷ್ ಅವರು ಯಡಿಯೂರಪ್ಪನವರನ್ನು ಭೇಟಿಯಾಗಿದ್ದರು. ಉಪ ಚುನಾವಣೆ ನಡೆಯುವ ಎರಡೂ ಕ್ಷೇತ್ರದಲ್ಲಿ ಬಿಎಸ್ವೈ ಪ್ರಚಾರದಲ್ಲಿ ಭಾಗವಹಿಸುವುದು ತೀರಾ ಅತ್ಯವಶ್ಯಕ ಎನ್ನುವ ವರದಿ ಆಂತರಿಕ ಸಮೀಕ್ಷೆಯಲ್ಲಿ ಬಂದಿತ್ತು. ಆದರೆ, ಆಪ್ತರ ಮೇಲೆ ಆದಾಯ ತೆರಿಗೆ ದಾಳಿ ನಡೆದ ನಂತರ, ಯಡಿಯೂರಪ್ಪ ಮೌನಕ್ಕೆ ಶರಣಾಗಿದ್ದರು. ಹಾಗಾಗಿ, ಅವರನ್ನು ಮನವೊಲಿಸುವ ಸಲುವಾಗಿಯೇ ಸಂತೋಷ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದರು ಎಂದು ಹೇಳಲಾಗುತ್ತಿದೆ.

 ಯಡಿಯೂರಪ್ಪನವರು ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳ ಬೇಕಿದೆ

ಯಡಿಯೂರಪ್ಪನವರು ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳ ಬೇಕಿದೆ

ಖಾಸಗಿ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಯಡಿಯೂರಪ್ಪನವರು ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದಿದ್ದರೆ, ಅದರ ಲಾಭವನ್ನು ಕಾಂಗ್ರೆಸ್ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ ಎನ್ನುವ ಅಂಶ ವರದಿಯಾಗಿತ್ತು. ಇದರ ಸುಳಿವನ್ನು ಮತ್ತು ಕಾಂಗ್ರೆಸ್ಸಿನ ಕಾರ್ಯತಂತ್ರವನ್ನು ಸರಿಯಾಗಿ ಅರಿತ ಬಿಜೆಪಿ, ಯಡಿಯೂರಪ್ಪನವರ ಮನವೊಲಿಸುವಲ್ಲಿ ಯಶಸ್ವಿಯಾಗಿದೆ. ಬಿಎಸೈ, ಎರಡೂ ಕ್ಷೇತ್ರದಲ್ಲಿ ಎರಡೆರಡು ದಿನ ಪ್ರಚಾರ ನಡೆಸಲಿದ್ದಾರೆ. ಕಾಂಗ್ರೆಸ್ ಮೈಡ್ ರೀಂಡಿಂಗ್ ಸರಿಯಾಗಿ ಅರಿತ ಬಿಜೆಪಿ..

 ಡಿಕೆಶಿ ಅವರು ಬಿಎಸ್ವೈ ವಿಚಾರವನ್ನೇ ಚುನಾವಣಾ ಅಸ್ತ್ರವಾಗಿ ಬಳಸಲು ಆರಂಭಿಸಿದ್ದಾರೆ

ಡಿಕೆಶಿ ಅವರು ಬಿಎಸ್ವೈ ವಿಚಾರವನ್ನೇ ಚುನಾವಣಾ ಅಸ್ತ್ರವಾಗಿ ಬಳಸಲು ಆರಂಭಿಸಿದ್ದಾರೆ

ಬಿಜೆಪಿ ನಿರೀಕ್ಷಿಸಿದ ರೀತಿಯಲ್ಲೇ ಕಾಂಗ್ರೆಸ್ ಮುಖಂಡರು ಯಡಿಯೂರಪ್ಪನವರ ವಿಚಾರವನ್ನು ಪ್ರಸ್ತಾವಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಯಡಿಯೂರಪ್ಪನವರ ವಿಚಾರವನ್ನೇ ಚುನಾವಣಾ ಅಸ್ತ್ರವಾಗಿ ಬಳಸಲು ಆರಂಭಿಸಿದ್ದಾರೆ. "ದಕ್ಷಿಣ ಭಾರತದಲ್ಲಿ ಬಿಜೆಪಿ ಸರಕಾರದ ಹೆಬ್ಬಾಗಿಲು ತೆರೆದಿದ್ದೇ ಯಡಿಯೂರಪ್ಪನವರು ಎಂದು ಹೇಳುತ್ತಿದ್ದ ಬಿಜೆಪಿಯವರು ಅವರನ್ನು ಈಗೇಕೆ ಹೀನಾಯವಾಗಿ ನಡೆಸಿಕೊಂಡರು? ಅವರನ್ಯಾಕೆ ಮೂಲೆಗುಂಪು ಮಾಡಿದರು? ಅವರು ಕಣ್ಣೀರು ಹಾಕಿಕೊಂಡು ಮನೆಗೆ ಹೋಗುವಂತೆ ಮಾಡಿದರು. ಅವರ ಕಣ್ಣೀರು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ"ಎಂದು ಡಿಕೆಶಿ ಹೇಳಿದ್ದಾರೆ.

 ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಲಿಂಗಾಯತ ಮತಗಳು

ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಲಿಂಗಾಯತ ಮತಗಳು

ಉಪ ಚುನಾವಣೆ ನಡೆಯುವ ಎರಡೂ ಕ್ಷೇತ್ರದಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಲಿಂಗಾಯತ ಮತಗಳು ಇರುವುದರಿಂದ, ಯಡಿಯೂರಪ್ಪನವರ ಉಪಸ್ಥಿತಿ ಪ್ರಮುಖ ಪಾತ್ರ ವಹಿಸಲಿದೆ. ಪಕ್ಷ ಕಟ್ಟಿದ ಯಡಿಯೂರಪ್ಪನವರನ್ನು ಬಿಜೆಪಿ ಕಡೆಗಣಿಸಿದೆ ಎಂದು ಕಾಂಗ್ರೆಸ್ಸಿನ ಪ್ರಚಾರಕ್ಕೆ ಬಿಎಸ್ವೈ ಮತ್ತು ಬಿಜೆಪಿ ಮುಖಂಡರು ಕೌಂಟರ್ ನೀಡಲೇ ಬೇಕಾದ ಅನಿವಾರ್ಯತೆ ಸೃಷ್ಟಿಯಾಗುವ ಸಾಧ್ಯತೆಯಿಲ್ಲದಿಲ್ಲ.

ಎರಡು ಕ್ಷೇತ್ರಗಳಿಗೆ ಅಕ್ಟೋಬರ್ ಮೂವತ್ತರಂದು ಚುನಾವಣೆ ನಡೆಯಲಿದ್ದು ಮತ್ತು ನವೆಂಬರ್ ಎರಡರಂದು ಫಲಿತಾಂಶ ಹೊರಬೀಳಲಿದೆ.

English summary
By Elections In Karnataka: As BJP Expected Congress Using Yediyurappa Name In Campaign. Know More,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X