ದುಬಾರಿಯಲ್ಲ ಔಷಧಿ: ದೊಡ್ಡ ರೋಗಗಳಿಗೆ ಕಡಿಮೆ ದರದಲ್ಲಿ ಮದ್ದು!
ನವದೆಹಲಿ, ಜುಲೈ 21: ಭಾರತದಲ್ಲಿ ಅಪಾಯಕಾರಿ ರೋಗಗಳಿಗೆ ಸಂಬಂಧಿಸಿದ ಔಷಧಿಗಳ ಬೆಲೆಯನ್ನು ಕಡಿತಗೊಳಿಸುವುದಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವರದಿಯಾಗಿದೆ.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಔಷಧಿ ಉತ್ಪಾದಿಸುವ ಕಂಪನಿ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದು, ವ್ಯಾಪಾರೀಕರಣಕ್ಕೆ ಒಳಪಡುವ ಔಷಧಿಗಳ ಪಟ್ಟಿಯನ್ನು ಶೂನ್ಯಕ್ಕೆ ಇಳಿಸಲು ಯೋಜನೆ ಹಾಕಿಕೊಂಡಿದ್ದಾರೆ. ಆ ಮೂಲಕ ಜನರನ್ನು ಸಾವಿನ ಅಪಾಯಕ್ಕೆ ತಳ್ಳುವ ರೋಗಗಳಿಗೆ ಚಿಕಿತ್ಸೆಯ ದಾರಿಯನ್ನು ಸುಗಮಗೊಳಿಸಲಾಗುತ್ತಿದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಔಷಧಿಗಳು ಲಭ್ಯವಾಗಲಿದೆ.
"ಅಪಾಯಕಾರಿ ರೋಗಗಳಿಗೆ ಸೇರಿದ ಔಷಧಿಗಳ ಮೇಲಿನ ಲಾಭಾಂಶದ ಪ್ರಮಾಣವನ್ನು ತಗ್ಗಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರು ಜುಲೈ 26ರಂದು ಉದ್ಯಮಿಗಳನ್ನು ಭೇಟಿ ಆಗಲಿದ್ದಾರೆ," ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಔಷಧಿಗಳಲ್ಲಿ ಲಾಭದ ಮುಖವನ್ನು ನೋಡದೇ ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಂಡು ದರ ನಿಗದಿಪಡಿಸುವ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಯಾವ ರೋಗಗಳಿಗೆ ಸಂಬಂಧಿಸಿದ ಔಷಧಿಗಳ ಬೆಲೆಯಲ್ಲಿ ಇಳಿಕೆಯಾಗಬಹುದು? ದೇಶದಲ್ಲಿ ಅಪಾಯಕಾರಿ ಎಂದು ಗುರುತಿಸಿಕೊಂಡಿರುವ ರೋಗಗಳು ಯಾವುವು? ಔಷಧಿ ದರ ಕಡಿತಕ್ಕೆ ಕೇಂದ್ರ ಆರೋಗ್ಯ ಸಚಿವರು ಹಾಕಿಕೊಂಡಿರುವ ಯೋಜನೆ ಹೇಗಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಅಪಾಯಕಾರಿ ರೋಗಕ್ಕೆ ಸಂಬಂಧಿಸಿದ ಔಷಧಿಗಳ ಬೆಲೆ ಇಳಿಕೆ
ದೇಶದಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದ ಔಷಧಿಗಳಿಂದ ಪಡೆದುಕೊಳ್ಳುವ ಲಾಭಾಂಶವನ್ನು ಕಡಿತಗೊಳಿಸುವುದರ ಬಗ್ಗೆ ಪರಿಷ್ಕರಣೆ ನಡೆಸಲಾಗುತ್ತದೆ. ಆ ಮೂಲಕ ಔಷಧಿ ಉತ್ಪಾದನೆ ವೆಚ್ಚ ಮತ್ತು ಮಾರಾಟ ವೆಚ್ಚನ ನಡುವಿನ ವ್ಯತ್ಯಾಸವನ್ನು ಗುರುತಿಸುವುದು. ಕನಿಷ್ಠ ದರದಲ್ಲಿ ಸಾರ್ವಜನಿಕರಿಗೆ ಔಷಧಿಗಳು ಲಭ್ಯವಾಗುವಂತೆ ಮಾಡುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.

ಯಾವ ರೋಗಕ್ಕೆ ಸಂಬಂಧಿಸಿದ ಔಷಧಿ ದರ ಕಡಿತ?
ಭಾರತದಲ್ಲಿ ಮಧುಮೇಹ, ಹೃದಯರಕ್ತನಾಳ ಸಮಸ್ಯೆ, ಮೂತ್ರಪಿಂಡ ಕಾಯಿಲೆಗಳಿಗೆ ಸಂಬಂಧಿಸಿದಂತೆ ಗಂಭೀರ ಆರೋಗ್ಯ ತೊಂದರೆಯನ್ನು ಉಂಟು ಮಾಡುವ ರೋಗಗಳನ್ನು ಗುರುತಿಸಲಾಗಿದೆ. ಈ ರೋಗಕ್ಕೆ ಸಂಬಂಧಿಸಿದ ಔಷಧಿಗಳ ದರವನ್ನು ಕಡಿಮೆ ಮಾಡುವುದಕ್ಕೆ ಕೇಂದ್ರ ಸರ್ಕಾರವು ಚಿಂತನೆ ನಡೆಸುತ್ತಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಔಷಧಿಗಳು ಕೈಗೆಟುಕುವ ದರದಲ್ಲಿ ಸಿಗಲಿದೆ.

ಸ್ವಾತಂತ್ರ್ಯ ದಿನಾಚರಣೆ ದಿನ ಪ್ರಧಾನಿಯಿಂದ ಘೋಷಣೆ
ಸಾರ್ವಜನಿಕರನ್ನು ಕಾಡುತ್ತಿರುವ ಗಂಭೀರ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಔಷಧಿಗಳನ್ನು ಪೂರೈಸುವುದರ ಜೊತೆಗೆ ಅದರ ಬೆಲೆಗಳನ್ನು ಕಡಿತಗೊಳಿಸಲು ಸರ್ಕಾರ ಚರ್ಚೆ ನಡೆಸುತ್ತಿದೆ. ಔಷಧಿ ಉತ್ಪಾದಕ ಕಂಪನಿಗಳ ಜೊತೆಗೆ ಈ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಮಾತುಕತೆ ನಡೆಸಿದ್ದಾರೆ. ಆದರೆ ಔಷಧಿಗಳ ದರ ಇಳಿಕೆಗೆ ಸಂಬಂಧಿಸಿದಂತೆ ಅಧಿಕೃತವಾಗಿ ಯಾವಾಗ ಘೋಷಣೆ ಮಾಡಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ.
ಒಂದು ಮೂಲದ ಪ್ರಕಾರ, ಮುಂಬರುವ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ದಿನದಿಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಔಷಧಿಗಳ ದರ ಕಡಿತದ ಬಗ್ಗೆ ಘೋಷಿಸಲಿದ್ದಾರೆ ಎಂದು ತಿಳಿದುಬಂದಿದೆ.

ಔಷಧಿಗಳ ಬೆಲೆಯಲ್ಲಿ ಶೇ.90ರಷ್ಟು ಇಳಿಮುಖ
ಕಳೆದ ಹಲವು ತಿಂಗಳಿನಿಂದ ಔಷಧ ಬೆಲೆ ನಿಗಾ ಸಂಸ್ಥೆ ಆಗಿರುವ ನ್ಯಾಷನಲ್ ಫಾರ್ಮಾಸ್ಯುಟಿಕಲ್ ಪ್ರೈಸಿಂಗ್ ಅಥಾರಿಟಿ (ಎನ್‌ಪಿಪಿಎ) ಟಿಎಂಆರ್ ಯೋಜನೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. 2019 ರಲ್ಲಿ ಈ ಏಜೆನ್ಸಿಯು 42 ಆಯ್ದ ನಿಗದಿತ ಕ್ಯಾನ್ಸರ್ ವಿರೋಧಿ ಔಷಧಿಗಳ ವ್ಯಾಪಾರದ ಮೇಲಿನ ಲಾಭದ ಪ್ರಮಾಣಕ್ಕೆ ಇಂತಿಷ್ಟು ಮಿತಿಯನ್ನು ಹೇರಿತ್ತು. ಇತ್ತೀಚಿಗೆ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವರು 526 ಬ್ರ್ಯಾಂಡ್ ಔಷಧಿಗಳ ಬೆಲೆಯಲ್ಲಿ ಶೇ.90ರಷ್ಟು ಇಳಿಕೆಯಾಗಲಿದೆ ಎಂದು ಮಾಹಿತಿ ನೀಡಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications