ವ್ಯಕ್ತಿಚಿತ್ರ : ಛತ್ತೀಸ್ ಗಡದ ಕಾಂಗ್ರೆಸ್ಸಿನ ನೇತಾರ ಸಿಎಂ ಭೂಪೇಶ್ ಬಘೇಲ್
ಛತ್ತೀಸ್ ಗಡದಲ್ಲಿ 15 ವರ್ಷಗಳ ನಂತರ ಅಧಿಕಾರ ಸ್ಥಾಪಿಸುವ ಜನಾದೇಶ ಪಡೆದುಕೊಂಡಿರುವ ಕಾಂಗ್ರೆಸ್ಸಿಗೆ ಈಗ ಮುಖ್ಯಮಂತ್ರಿ ಅಯ್ಕೆಯ ಗೊಂದಲ ಮೂಡಿತ್ತು. ಆದರೆ, ಇಂದು ಭೂಪೇಶ್ ಬಘೇಲ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಘೋಷಿಸಲಾಗಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ ಗಡ ಮುಖ್ಯಮಂತ್ರಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಸೋಮವಾರದಂದು ಮೂರು ರಾಜ್ಯಗಳ ನೂತನ ಸಿಎಂಗಳ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
ಛತ್ತೀಸ್ ಗಢದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ,ಪಠಾಣ್ ಶಾಸಕ, 57 ವರ್ಷ ವಯಸ್ಸಿನ ಹಿಂದುಳಿದ ವರ್ಗದ ನಾಯಕ ಭೂಪೇಶ್ ಬಘೇಲ್ ಅವರ ಹೆಸರು ಸಿಎಂ ರೇಸಿನಲ್ಲಿ ಮುಂಚೂಣಿಯಲ್ಲಿದೆ.ಜೊತೆಗೆ ಪಕ್ಷದ ಏಕೈಕ ಸಂಸದ ತಾಮ್ರಧ್ವಜ್ ಸಾಹು, ವಿಪಕ್ಷ ನಾಯಕ ಟಿಎಸ್ ಸಿಂಗ್ ದೇವ್ ಅವರ ಹೆಸರುಗಳು ಕೇಳಿ ಬಂದಿತ್ತು. ಕೊನೆಗೆ ಭೂಪೇಶ್ ಅವರ ಹೆಸರನ್ನು ಆಯ್ಕೆ ಮಾಡಿರುವುದಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪರಿವೀಕ್ಷಕರಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದರು.

ಜಲ ಸಂಪನ್ಮೂಲ ಸಚಿವ ರಾಜೇಶ್ ಮುನಾತ್ ಅವರಿಗೆ ಸೇರಿದೆ ಎನ್ನಲಾದ ನಕಲಿ ಪೋರ್ನೊಗ್ರಾಫಿಕ್ ಸಿಡಿಯನ್ನು ಹಂಚಿದ ಆರೋಪವನ್ನು ಛತ್ತೀಸ್ ಗಡ ಕಾಂಗ್ರೆಸ್ ಅಧ್ಯಕ್ಷ ಭೂಪೇಶ್ ಹೊತ್ತುಕೊಂಡಿದ್ದರು. ಭೂಪೇಶ್ ವಿರುದ್ಧ ಸಿಬಿಐ ತಂಡವು ದೋಷಾರೋಪಣ ಪಟ್ಟಿ ಸಲ್ಲಿಸಿತ್ತು. ವಿಶೇಷ ನ್ಯಾಯಾಲಯದಲ್ಲಿ ಖುದ್ದು ವಾದಿಸಿದ ಭೂಪೇಶ್ ಅವರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದರು.
Chhattisgarh Chief Minister designate Bhupesh Baghel with Congress leaders Mallikarjun Kharge and PL Punia in Raipur pic.twitter.com/Des7A6fhFZ
— ANI (@ANI) December 16, 2018
ಛತ್ತೀಸ್ ಗಢ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭೂಪೇಶ್ ಬಘೇಲ್ ಅವರು ಅಕ್ಟೋಬರ್ 2014ರಿಂದ ಅಧಿಕಾರ ನಡೆಸಿದ್ದಾರೆ. ದುರ್ಗ್ ಜಿಲ್ಲೆಯ ಪಟಾನ್ ಕ್ಷೇತ್ರದ ಅಭ್ಯರ್ಥಿ. ಈ ಹಿಂದೆ ದಿಗ್ವಿಜಯ್ ಸಿಂಗ್ ಅವರ ಸರ್ಕಾರದಿಂದ ಸಚಿವರಾಗಿದ್ದರು. ಸಾರಿಗೆ ಸಚಿವರಾಗಿ ಉತ್ತಮ ಹೆಸರು ಗಳಿಸಿದರು. ಛತ್ತೀಸ್ ಗಢ ರಾಜ್ಯ ಉದಯವಾದ ಬಳಿಕ ಬಘೇಲ್ ಅವರು ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸಿದರು.
Celebrations are in order in Chhattisgarh as @Bhupesh_Baghel is appointed CM. We wish him the best as he forms a govt. of equality, transparency & integrity starting off with farm loan waiver for farmers as we promised. pic.twitter.com/7OqGcPi2eh
— Congress (@INCIndia) December 16, 2018
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications