ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ನಿಯಂತ್ರಿಸಿ ಆರೋಗ್ಯವಾಗಿ ಬೇಸಿಗೆ ಕಳೆಯೋಣ

|
Google Oneindia Kannada News

ಕಳೆದ ವರ್ಷವೂ ಇದೇ ವೇಳೆಗೆ ಕೊರೊನಾ ಸೋಂಕು ಹೆಚ್ಚಾಗಿತ್ತು. ಮತ್ತೆ ಈ ಬಾರಿಯೂ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಬೇಸಿಗೆಯ ಬಿಸಿಲಿನ ಜತೆಗೆ ಕೊರೊನಾ ಬಿಸಿಯೂ ಇದೀಗ ಜನರನ್ನು ಕಾಡತೊಡಗಿದೆ.

ಎಲ್ಲ ಸರಿ ಹೋಯಿತು ನೆಮ್ಮದಿಯಾಗಿರೋಣ ಎಂದುಕೊಳ್ಳುವಾಗಲೇ ಬೇಸಿಗೆಯ ಬಿಸಿಲಿನ ಪ್ರಖರತೆ ಜತೆಗೆ ಕೊರೊನಾ ಭಯವೂ ಹೆಚ್ಚಾಗುತ್ತಿದೆ. ಹೀಗಾಗಿ ಕೊರೊನಾದ ಬಗ್ಗೆ ಹಾಗೂ ಬಿಸಿಲಿನ ಬಗ್ಗೆಯೂ ನಾವು ಎಚ್ಚರದಿಂದ ಇದ್ದು ಆರೋಗ್ಯ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ.

ಬೇಸಿಗೆಯಲ್ಲಿ ದೇಹಕ್ಕೆ ತಂಪನ್ನೀಯುವ ದಾಸವಾಳಬೇಸಿಗೆಯಲ್ಲಿ ದೇಹಕ್ಕೆ ತಂಪನ್ನೀಯುವ ದಾಸವಾಳ

 ಬೇಸಿಗೆಯನ್ನು ನುಂಗುವ ಕೊರೊನಾ

ಬೇಸಿಗೆಯನ್ನು ನುಂಗುವ ಕೊರೊನಾ

ಮೊದಲೆಲ್ಲ ಬೇಸಿಗೆಯಲ್ಲಿ ಬೇರೆ ಬೇರೆ ಸಾಂಕ್ರಾಮಿಕ ರೋಗಗಳು ಕಾಣಿಸುತ್ತಿದ್ದವು. ಆದರೆ ಕಳೆದ ಎರಡು ವರ್ಷಗಳಿಂದ ಕೊರೊನಾ ಬೇಸಿಗೆಯನ್ನು ನುಂಗಿಹಾಕಿದ್ದು, ಕೊರೊನಾ ನಡುವೆ ಬೇಸಿಗೆಯನ್ನು ಹೇಗೆ ಕಳೆಯಬಹುದು ಎಂಬುದು ಕೂಡ ಅಷ್ಟೇ ಮುಖ್ಯವಾಗಿದೆ.

ಈಗಿನ ಪರಿಸ್ಥಿತಿಯಲ್ಲಿ ನಾವು ನೆಮ್ಮದಿಯಿಂದ ಮತ್ತು ಆರೋಗ್ಯದಿಂದ ಇರಬೇಕಾದರೆ ಸುಖಾಸುಮ್ಮನೆ ಹೊರಗೆ ಹೋಗುವುದನ್ನು ಆದಷ್ಟು ಕಡಿಮೆ ಮಾಡುವುದು ಒಳಿತು. ಆದಷ್ಟು ಮನೆಯಲ್ಲಿಯೇ ಇರುವುದಕ್ಕೆ ಪ್ರಯತ್ನಿಸಬೇಕು. ಕೊರೊನಾ ಹರಡುತ್ತಿರುವ ಈ ಸಮಯದಲ್ಲಿ ಸಾರ್ವಜನಿಕ ಪ್ರದೇಶಗಳಿಂದ ದೂರವಿದ್ದು ಬದುಕುವುದನ್ನು ಕಲಿಯುವುದು ಅನಿವಾರ್ಯವಾಗಿದೆ.

 ಒಂದಷ್ಟು ಎಚ್ಚರಿಕೆ ಕ್ರಮ ಅಳವಡಿಸಿಕೊಳ್ಳಿ

ಒಂದಷ್ಟು ಎಚ್ಚರಿಕೆ ಕ್ರಮ ಅಳವಡಿಸಿಕೊಳ್ಳಿ

ಬೇಸಿಗೆಯ ಸಮಯದಲ್ಲಿ ಒಂದಷ್ಟು ಎಚ್ಚರಿಕೆ ಮತ್ತು ಆರೋಗ್ಯವಾಗಿರಲು ಬೇಕಾಗುವಂತಹ ಕ್ರಮಗಳನ್ನು ಅಳವಡಿಸಿಕೊಂಡರೆ ನೆಮ್ಮದಿಯಾಗಿರಲು ಸಾಧ್ಯವಾಗಲಿದೆ. ಪ್ರತಿದಿನ ಕನಿಷ್ಟ ಎರಡು ಲೀಟರ್‌ನಷ್ಟು ನೀರನ್ನು ಕುಡಿಯಬೇಕು. ತಲೆ ಕೂದಲು ಕೂಡ ವಾಸನೆ ಬೀರುತ್ತದೆ. ಆದ್ದರಿಂದ ಯುವಕರಾದರೆ ಚಿಕ್ಕದಾಗಿ ಕ್ಷೌರ ಮಾಡಿ ತಲೆಯಲ್ಲಿನ ಹೊಟ್ಟನ್ನು ನಿಯಂತ್ರಿಸಲು ಮುಂದಾಗಬೇಕು. ಸ್ನಾನ ಮಾಡುವಾಗ ಕಂಕುಳ, ಕಿವಿ, ಸೇರಿದಂತೆ ಇನ್ನಿತರ ಭಾಗಗಳನ್ನು ಚೆನ್ನಾಗಿ ಸೋಪು ಬಳಸಿ ತೊಳೆಯಬೇಕು. ವ್ಯಾಯಾಮ, ಮುಂಜಾನೆ ವಾಕಿಂಗ್ ಮಾಡುವ ಅಭ್ಯಾಸ ರೂಢಿಸಿಕೊಳ್ಳಬೇಕು.

 ಗಾಳಿಯಾಡುವ ಹಾಗೂ ಹತ್ತಿಬಟ್ಟೆಗೆ ಆದ್ಯತೆ ನೀಡಿ

ಗಾಳಿಯಾಡುವ ಹಾಗೂ ಹತ್ತಿಬಟ್ಟೆಗೆ ಆದ್ಯತೆ ನೀಡಿ

ಬಿಗಿಯಾದ ಉಡುಪುಗಳನ್ನು ಧರಿಸದೆ, ಶರೀರಕ್ಕೆ ಗಾಳಿಯಾಡುವ ಹಾಗೂ ಹತ್ತಿಬಟ್ಟೆಗೆ ಆದ್ಯತೆ ನೀಡಬೇಕು. ಬೇರೆಯವರು ಬಳಸಿದ ಟವಲ್ ಬಳಸದೆ ಒಗೆದು ಒಣಗಿಸಿ ಬಳಸಬೇಕು. ಬೇರೆಯವರಿಗೆ ಅಸಹ್ಯ ಎನಿಸದ ಉತ್ತಮ ಸುವಾಸನೆ ಬೀರುವ ಸುಗಂಧ ದ್ರವ್ಯಗಳನ್ನು ಲೇಪಿಸಿಕೊಳ್ಳಬೇಕು. ಅವು ಶರೀರಕ್ಕೆ ಒಗ್ಗುವಂತಿದ್ದರೆ ಮಾತ್ರ ಬಳಸಬೇಕು. ವೈದ್ಯರ ಸಲಹೆಯೂ ಅಗತ್ಯವಾಗಿರುತ್ತದೆ. ಉರಿ ಬಿಸಿಲಿಗೆ ತಮ್ಮ ಮುಖ ಕಾಂತಿಹೀನವಾಗಿ ಬಿಡುತ್ತದೆ. ಹೀಗಾಗಿ ಬಿಸಿಲಿನ ಬೇಗೆಯಿಂದ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ತುಳಸಿ, ಬೇವಿನ ಫೇಸ್ ಪ್ಯಾಕ್ ಬಳಸುವುದು ಸೂಕ್ತ. ನಂತರ ತಣ್ಣೀರಿನಿಂದ ರೋಸ್ ವಾಟರ್‌ನಿಂದ ಮುಖ ತೊಳೆದುಕೊಳ್ಳುವುದನ್ನು ರೂಢಿಸಿಕೊಳ್ಳಬೇಕು.

 ಕೈಗೆಟಕುವಂತೆ ನೀರು ಇರಲಿ

ಕೈಗೆಟಕುವಂತೆ ನೀರು ಇರಲಿ

ಬಿಸಿಲಿನ ತಾಪಕ್ಕೆ ಸುಸ್ತು, ನೀರಡಿಕೆ, ತಲೆಸುತ್ತು ಮೊದಲಾದವುಗಳು ಬಾಧಿಸುವುದು ಸಾಮಾನ್ಯವಾಗಿದ್ದು, ತಲೆನೋವು ಕಾಡುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಬಿಸಿಲಿನಿಂದಾಗುವ ಕೆಲವು ತೊಂದರೆಗಳನ್ನು ತಪ್ಪಿಸುವ ಸಲುವಾಗಿ ತೆಳು ಬಣ್ಣದ ಸಡಿಲವಾದ ಹತ್ತಿಯ ಬಟ್ಟೆ ಧರಿಸಿದರೆ ಒಳ್ಳೆಯದು ಜತೆಗೆ ಕೈಗೆಟಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಬೇಕು. ಆಗಾಗ್ಗೆ ಧಾರಾಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರು, ಹಣ್ಣಿನ ರಸ ಪಾನಕ ಸೇವಿಸಬೇಕು. ಶುದ್ಧ ಆಹಾರ ಸೇವಿಸಬೇಕು. ಗಾಳಿಯಾಡುವಂತಹ ಪಾದರಕ್ಷೆ ಧರಿಸಬೇಕು.

ಬಿಸಿಲಲ್ಲಿ ಓಡಾಡಿ ಬಂದವರು ನಿಂಬೆ ರಸವನ್ನು ಸೇವಿಸಿದರೆ ವಿಟಮಿನ್ 'ಸಿ' ಅಂಶ ಇರುವುದರಿಂದ ಡಿಹೈಡ್ರೇಷನ್ ಸಮಸ್ಯೆ ಉಂಟಾಗುವುದಿಲ್ಲ. ಪ್ರತಿದಿನ ಒಂದು ಬಟ್ಟಲು ಬೀಟ್ರೋಟಿನ ರಸವನ್ನು ಸೇವಿಸಿದರೆ ರಕ್ತದೊತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು. ದೇಹದ ಉಷ್ಣಾಂಶವನ್ನು ತಂಪುಗೊಳಿಸಬೇಕಾದರೆ ಎಳನೀರು ಸೇವಿಸಿ.

 ಮನೆಯಲ್ಲಿ ಸ್ವಯಂ ಚಿಕಿತ್ಸೆಗೆ ಮುಂದಾಗುವುದು ಅಪಾಯಕಾರಿ

ಮನೆಯಲ್ಲಿ ಸ್ವಯಂ ಚಿಕಿತ್ಸೆಗೆ ಮುಂದಾಗುವುದು ಅಪಾಯಕಾರಿ

ಕೊರೊನಾದ ಭಯದಲ್ಲಿರುವ ನಮಗೆ ಇತರೆ ಸಾಂಕ್ರಾಮಿಕ ರೋಗಗಳು ಕಾಡಿದರೂ ಗೊತ್ತಾಗುವುದಿಲ್ಲ. ಜ್ವರ ಬಂದರೆ ಆಸ್ಪತ್ರೆಗೆ ಹೋದರೆ ಕೋವಿಡ್ ಪಾಸಿಟಿವ್ ಬಂದು ಬಿಡುತ್ತೋ ಎಂಬ ಭಯದಲ್ಲಿ ಮನೆಯಲ್ಲಿ ಸ್ವಯಂ ಚಿಕಿತ್ಸೆಗೆ ಮುಂದಾಗುವುದು ಅಪಾಯಕಾರಿ. ವೈದ್ಯರ ಸಲಹೆ ಬಹುಮುಖ್ಯವಾಗಿದೆ. ಈಗಿನ ಪರಿಸ್ಥಿತಿಯಲ್ಲಿ ಜೀವ ಮತ್ತು ಜೀವನ ಎರಡು ಮುಖ್ಯವಾಗಿರುವುದರಿಂದ ಸಮತೋಲನ ಕಾಪಾಡಿಕೊಂಡು ಜೀವನ ನಡೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆದ್ದರಿಂದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಕೊರೊನಾದಿಂದ ದೂರ ಇದ್ದು, ಬೇಸಿಗೆಯ ದಿನಗಳನ್ನು ಕಳೆಯಲು ನಾವು ಪ್ರಯತ್ನಿಸಬೇಕಾಗಿದೆ.

English summary
Summer Health Tips: During the summer, be careful and take Precautions to stay healthy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X