ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download
LIVE

ದಕ್ಷಿಣ ಆಫ್ರಿಕಾದಿಂದ ಮುಂಬೈಗೆ ಆಗಮಿಸಿದ ವ್ಯಕ್ತಿಯಲ್ಲಿ ಓಮಿಕ್ರಾನ್ ಪತ್ತೆ

|
Google Oneindia Kannada News

ಭಾರತದಲ್ಲಿ ಒಂದೇ ದಿನ 8603 ಮಂದಿ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 415 ಮಂದಿ ಪ್ರಾಣ ಬಿಟ್ಟಿದ್ದು, ದೇಶದಲ್ಲಿ 99,974 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕೊರೊನಾವೈರಸ್ ಹೊಸ ರೂಪಾಂತರ ಓಮಿಕ್ರಾನ್ ಬಗ್ಗೆ ಜಾಗತಿಕ ಮಟ್ಟದಲ್ಲಿ ಆತಂಕವನ್ನು ಹುಟ್ಟು ಹಾಕುತ್ತಿದೆ. ಜಗತ್ತಿನ 38 ರಾಷ್ಟ್ರಗಳಲ್ಲಿ ಈವರೆಗೂ 674 ಓಮಿಕ್ರಾನ್ ಸೋಂಕಿತ ಪ್ರಕರಣಗಳು ವರದಿಯಾಗಿದೆ. ಈ ಹಿಂದೆ ಅಪಾಯಕಾರಿ ಎಂದು ತಜ್ಞರು ಹೇಳಿದ್ದ ಡೆಲ್ಟಾ ರೂಪಾಂತರ ರೋಗಾಣುವಿಗಿಂತ ಓಮಿಕ್ರಾನ್ ಡೇಂಜರ್ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಇಸ್ರೇಲ್ ನಲ್ಲಿ 7 ಓಮಿಕ್ರಾನ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 27 ಮಂದಿ ಶಂಕಿತ ಸೋಂಕಿತರಿದ್ದಾರೆ.

Recommended Video

ಇಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಯಾರಿಗೂ ಹೊಟ್ಟೆಗೆ ಊಟ ಇಲ್ಲ..! | D V Sadananda Gowda | Krishna Byregowda
Coronavirus daily roundup : Complete Report of India and the world

ದಕ್ಷಿಣ ಆಫ್ರಿಕಾದಲ್ಲಿ ಓಮಿಕ್ರಾನ್ ರೂಪಾಂತರಿ ಹೆಚ್ಚಳವಾಗಿದ್ದು, ಮಕ್ಕಳ ಆರೋಗ್ಯದ ಚಿಂತೆ ಕಾಡುತ್ತಿದೆ. ಕೋವಿಡ್ 3ನೇ ಅಲೆಯ ಸಂದರ್ಭದಲ್ಲಿ ಓಮಿಕ್ರಾನ್ ರೂಪಾಂತರಿ ಕಂಡುಬಂದಿದ್ದು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವುದು ದಕ್ಷಿಣ ಆಫ್ರಿಕಾ ತಜ್ಞರಲ್ಲಿ ಆತಂಕವನ್ನುಂಟುಮಾಡಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 16 ಸಾವಿರದ 55 ಮಂದಿಯಲ್ಲಿ ಸೋಂಕು ವಕ್ಕರಿಸಿದ್ದು 25 ಮಂದಿ ಮೃತಪಟ್ಟಿದ್ದಾರೆ.

* ದಕ್ಷಿಣ ಆಫ್ರಿಕಾದ ಕೇಪ್ ಟೌನ್ ನಿಂದ ದುಬೈ ಮಾರ್ಗವಾಗಿ ಮುಂಬೈಗೆ ಆಗಮಿಸಿದ 33 ವರ್ಷದ ವ್ಯಕ್ತಿಯಲ್ಲಿ ಓಮಿಕ್ರಾನ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ವ್ಯಕ್ತಿಯು ಮುಂಬೈನ ದೊಂಬಿವಾಲಿ ನಿವಾಸಿ ಎಂದು ತಿಳಿದು ಬಂದಿದೆ.
* ಜಾಂಬಿಯಾದಿಂದ ಆಗಮಿಸಿದ 60 ವರ್ಷದ ಪ್ರಯಾಣಿಕರ ಮಾದರಿಯ ಜೀನೋಮಿಕ್ ಸೀಕ್ವೆನ್ಸಿಂಗ್ ನಡೆಸಲು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ವ್ಯಕ್ತಿಯಲ್ಲಿ ಓಮಿಕ್ರಾನ್ ರೋಗಾಣು ಪತ್ತೆಯಾಗಿಲ್ಲ, ಅದರ ಬದಲಿಗೆ ಡೆಲ್ಟಾ ರೂಪಾಂತರದ ಉಪ-ವಂಶಾವಳಿಯು ಪತ್ತೆಯಾಗಿದೆ.
* ಗುಜರಾತ್‌ನಲ್ಲಿ ಓಮಿಕ್ರಾನ್ ರೂಪಾಂತರದ ಮೊದಲ ಪ್ರಕರಣವು ಜಾಮ್‌ನಗರದಲ್ಲಿ ವರದಿಯಾಗಿದೆ. ಇದು ದೇಶದಲ್ಲಿ ಒಮಿಕ್ರಾನ್ ರೂಪಾಂತರದ ಮೂರನೇ ಪ್ರಕರಣವಾಗಿದೆ. ಜಿಂಬಾಬ್ವೆಯಿಂದ ಬಂದ ವ್ಯಕ್ತಿಯೊಬ್ಬರು ಈ ರೂಪಾಂತರದಿಂದ ಸೋಂಕಿಗೆ ಒಳಗಾಗಿದ್ದರು. ಅವರ ಮಾದರಿಯನ್ನು ಪುಣೆಗೆ ಕಳುಹಿಸಲಾಗಿದೆ.
* ಮೆಕ್ಸಿಕೋದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.
* ಕೆನಡಾದಲ್ಲಿ ಒಟ್ಟು 11 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.
* ದೆಹಲಿಯಲ್ಲಿ ಒಂದೇ ದಿನ 51 ಕೊವಿಡ್-19 ಹೊಸ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 322ಕ್ಕೆ ಏರಿಕೆಯಾಗಿದೆ.
* ಓಮಿಕ್ರಾನ್ ಸೋಂಕಿತನೊಬ್ಬ ವಿದೇಶಕ್ಕೆ ಎಸ್ಕೇಪ್ ಆಗಿರುವ ವಿಚಾರಕ್ಕೆ ಸಂಬಂಧಿಸಿ ಶಾಂಗ್ರೀಲಾ ಹೋಟೆಲ್ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ನೀಡಿದೆ.
* ಭಾರತದಲ್ಲಿ ಕೊರೊನಾವೈರಸ್ ಹೊಸ ರೂಪಾಂತರ ಓಮಿಕ್ರಾನ್ ಹಾವಳಿ ಹೆಚ್ಚಾಗುತ್ತಿದೆ. ದೇಶದ ನಾಲ್ಕನೇ ಓಮಿಕ್ರಾನ್ ರೂಪಾಂತರ ಸೋಂಕಿತ ಪ್ರಕರಣವು ಮುಂಬೈನಲ್ಲಿ ಶನಿವಾರ ವರದಿಯಾಗಿದೆ.
* ಶನಿವಾರ ಬೆಳಿಗ್ಗೆಯವರೆಗೆ, ಮುಂಬೈ ವಿಮಾನ ನಿಲ್ದಾಣದಲ್ಲಿ ಓಮಿಕ್ರಾನ್ ಅಪಾಯದಲ್ಲಿರುವ ದೇಶಗಳಿಂದ ಆಗಮಿಸಿದ ಒಟ್ಟು 3,839 ಪ್ರಯಾಣಿಕರನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇತರೆ ದೇಶಗಳಿಂದ ಆಗಮಿಸಿದ 17,107 ಪ್ರಯಾಣಿಕರಲ್ಲಿ 344 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

English summary
Coronavirus Complete Report And Daily Roundup across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X