• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದಲ್ಲಿ ಒಂದೇ ದಿನ 2062 ಕೊರೊನಾವೈರಸ್ ಸೋಂಕು ಪತ್ತೆ

|

ಭಾರತದಲ್ಲಿ 7,42,417 ಸೋಂಕಿತರು ಪತ್ತೆಯಾಗಿದ್ದಾರೆ. 4,39,948 ಜನರು ಗುಣಮುಖರಾಗಿದ್ದರೆ, 2,64,944 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ 482 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ದೇಶದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 20,642ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೂ 1,02,11,092 ಮಾದರಿಗಳನ್ನು ಪರೀಕ್ಷಿಸಲಾಗಿದೆ. ನಿನ್ನೆ ಒಂದೇ ದಿನ 2,41,430 ಜನರನ್ನು ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

      ಇಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಯಾರಿಗೂ ಹೊಟ್ಟೆಗೆ ಊಟ ಇಲ್ಲ..! | D V Sadananda Gowda | Krishna Byregowda

      ರಾಜ್ಯದಲ್ಲಿ ಒಂದೇ ದಿನ 2062 ಮಂದಿಗೆ ಕೊರೊನಾವೈರಸ್ ಪತ್ತೆಯಾಗಿದೆ. ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 28, 777ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 54 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾವೈರಸ್ ಗೆ ಒಟ್ಟು 416 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

      ಜುಲೈ 8ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 11,957,477 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 546,785ಕ್ಕೇರಿದೆ. ಒಟ್ಟಾರೆ, 6,904,004. ಮಂದಿ ಗುಣಮುಖರಾಗಿದ್ದಾರೆ. ಒಟ್ಟು 4,508,159 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 58,239 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ.

      ಮೆಕ್ಸಿಕೋದಲ್ಲಿ ಒಂದೇ ದಿನ 6,258 ಪ್ರಕರಣ ಕಾಣಿಸಿಕೊಂಡು ಟಾಪ್ 10 ಪಟ್ಟಿಯೊಳಗೆ ಮತ್ತೆ ಸೇರಿದೆ. ಇರಾನ್ ಮೇಲಕ್ಕೇರಿದ್ದರೆ, ಟಾಪ್ 11ಕ್ಕೆ ಇಟಲಿ ಕುಸಿದಿದ್ದು, ನಂತರ ಸ್ಥಾನದಲ್ಲಿ ಪಾಕಿಸ್ತಾನ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ 2 ಲಕ್ಷಕ್ಕೂ ಅಧಿಕ ಸೋಂಕಿತರನ್ನು ಹೊಂದಿವೆ.

      ಮೃತರ ಸಂಖ್ಯೆಯಲ್ಲಿ ಟಾಪ್ 10 ರಾಷ್ಟ್ರಗಳಲ್ಲದೆ 5 ಸಾವಿರಕ್ಕೂ ಅಧಿಕ ಸಾವು ಕಂಡಿರುವ ದೇಶಗಳ ಪೈಕಿ ರಷ್ಯಾ (10,667), ಬೆಲ್ಜಿಯಂ ( 9,776), ಜರ್ಮನಿ (9,103), ಕೆನಡಾ (8,711), ಚಿಲಿ (6,434), ನೆದರ್ಲೆಂಡ್ಸ್(6,132), ಸ್ವೀಡನ್ (5,447), ಟರ್ಕಿ(5,260) ಕಾಣಿಸಿಕೊಂಡಿವೆ.

      - ಕೇರಳದಲ್ಲೂ ಕೊರೊನಾವೈರಸ್ ಸೋಂಕು ಹರಡುವಿಕೆಯ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 272 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು, 111 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆ 5894ಕ್ಕೆ ಏರಿಕೆಯಾಗಿದೆ. 2411 ಸಕ್ರಿಯ ಪ್ರಕರಣಗಳಿದ್ದು, ಕೇರಳದಲ್ಲಿ 169 ಕೊರೊನಾವೈರಸ್ ಹಾಟ್ ಸ್ಪಾಟ್ ಗಳನ್ನು ಗುರುತಿಸಲಾಗಿದೆ.

      - ತಮಿಳುನಾಡಿನಲ್ಲಿ ಒಂದೇ ದಿನ 3616 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆಯು 1,18,594ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 65 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1636ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 45,839 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

      - ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಮಹಾಸ್ಫೋಟ ಸಂಭವಿಸಿದೆ. ಒಂದೇ ದಿನ ರಾಜ್ಯದಲ್ಲಿ 5134 ಮಂದಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿದ್ದು, 224 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆಯು 2,17,121ಕ್ಕೆ ಏರಿಕೆಯಾಗಿದ್ದು, ಈ ಪೈಕಿ 1,18,558 ಮಂದಿ ಗುಣಮುಖರಾಗಿದ್ದಾರೆ. ಬಾಕಿ ಉಳಿದ 89,294 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 9250ಕ್ಕೆ ಏರಿಕೆಯಾಗಿದೆ.

      - ಮಣಿಪುರದಲ್ಲೂ 40 ಹೊಸ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 771ಕ್ಕೆ ಏರಿಕೆಯಾಗಿದೆ.

      - ತೆಲಂಗಾಣದಲ್ಲಿ ಇಂದು 11 ಸಾವುಗಳು ಮತ್ತು 1831 ಹೊಸ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಒಟ್ಟು ಸಕಾರಾತ್ಮಕ ಪ್ರಕರಣಗಳ ಸಂಖ್ಯೆ 25,733 ಆಗಿದ್ದು, ಇದರಲ್ಲಿ 10,646 ಸಕ್ರಿಯ ಪ್ರಕರಣಗಳು, 14,781 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಮತ್ತು 306 ಮಂದಿ ಮೃತಪಟ್ಟಿದ್ದಾರೆ.

      - ಕಳೆದ 24 ಗಂಟೆಗಳಲ್ಲಿ ಬಿಎಸ್ಎಫ್‌ನಲ್ಲಿ 69 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಅವಧಿಯಲ್ಲಿ 29 ಮಂದಿ ಚೇತರಿಸಿಕೊಂಡಿದ್ದಾರೆ. 852 ಚೇತರಿಸಿಕೊಂಡ ಮತ್ತು 595 ಸಕ್ರಿಯ ಪ್ರಕರಣಗಳು ಸೇರಿದಂತೆ ಒಟ್ಟು ಸಕಾರಾತ್ಮಕ ಪ್ರಕರಣಗಳ ಸಂಖ್ಯೆ 1454 ಆಗಿದೆ: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್ಎಫ್)

      - ಮಿಜೋರಾಂ: ಒಟ್ಟು 197 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢವಾಗಿದ್ದು, 58 ಸಕ್ರಿಯ ಪ್ರಕರಣಗಳಿವೆ ಮತ್ತು 139 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

      - ಉತ್ತರ ಪ್ರದೇಶ: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,346 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳು 9,514ರಷ್ಟಿದೆ. ಜೊತೆಗೆ 19,626 ಮಂದಿ ಡಿಸ್ಚಾರ್ಜ್‌ ಆಗಿದ್ದಾರೆ.

      English summary
      Coronavirus Complete Report And Daily Roundup across India.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X
      We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more