ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಮ್ಮೆ ಕೊರೊನಾ ಲಸಿಕೆ ಪಡೆದ ನಂತರ ಮುಂದೆ ಏನು ಮಾಡಬೇಕು?

|
Google Oneindia Kannada News

ನವದೆಹಲಿ, ಜನವರಿ.21: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾಗಿ ಆರು ದಿನಗಳಲ್ಲಿ 8 ಲಕ್ಷಕ್ಕಿಂತ ಹೆಚ್ಚು ವೈದ್ಯಕೀಯ ಸಿಬ್ಬಂದಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.

ಕಳೆದ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೊರೊನಾ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಮೊದಲ ಹಂತದಲ್ಲಿ ದೇಶದ 3 ಕೋಟಿ ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕೊವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡುವ ಗುರಿ ಹೊಂದಲಾಗಿದೆ. ಎರಡನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟ 27 ಕೋಟಿ ಜನರಿಗೆ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದೆ.

ಬೇಡಪ್ಪಾ ಬೇಡ ಲಸಿಕೆ: ಕೊವ್ಯಾಕ್ಸಿನ್ ಬಗ್ಗೆ ಜನರಲ್ಲಿ ಭಯವೇಕೆ? ಬೇಡಪ್ಪಾ ಬೇಡ ಲಸಿಕೆ: ಕೊವ್ಯಾಕ್ಸಿನ್ ಬಗ್ಗೆ ಜನರಲ್ಲಿ ಭಯವೇಕೆ?

ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾಗಿ ಐದು ದಿನಗಳಲ್ಲಿ ದೇಶಾದ್ಯಂತ 7.86 ಲಕ್ಷ ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕೊರೊನಾ ಲಸಿಕೆ ಪಡೆದ ನಂತರದಲ್ಲಿ ಏನೆಲ್ಲ ಕ್ರಮಗಳನ್ನು ಅನುಸರಿಸಬೇಕು. ಲಸಿಕೆ ನಂತರ ಮುಂದೆ ಏನು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

28 ದಿನಗಳ ನಂತರದ 2ನೇ ಬಾರಿ ಕೊರೊನಾ ಲಸಿಕೆ

28 ದಿನಗಳ ನಂತರದ 2ನೇ ಬಾರಿ ಕೊರೊನಾ ಲಸಿಕೆ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾರ್ಗಸೂಚಿ ಪ್ರಕಾರ, ಒಂದು ಬಾರಿ ಕೊರೊನಾ ಲಸಿಕೆಯನ್ನು ಪಡೆದ ವೈದ್ಯಕೀಯ ಸಿಬ್ಬಂದಿಗೆ ನಾಲ್ಕು ವಾರಗಳ ನಂತರದಲ್ಲಿ 2ನೇ ಬಾರಿ ಲಸಿಕೆಯನ್ನು ನೀಡಲಾಗುತ್ತದೆ. ಮೊದಲ ಬಾರಿ ನೀಡಿದ ಕಂಪನಿಯ ಲಸಿಕೆಯನ್ನೇ 2ನೇ ಬಾರಿಯೂ ನೀಡಬೇಕಾಗುತ್ತದೆ. ಮೊದಲ ಬಾರಿ ಕೊವಿಶೀಲ್ಡ್ ಹಾಗೂ 2ನೇ ಬಾರಿ ಕೊವ್ಯಾಕ್ಸಿನ್ ಲಸಿಕೆಯನ್ನು ಪಡೆದುಕೊಳ್ಳುವ ಹಾಕಿಲ್ಲ. ವೈದ್ಯಕೀಯ ಸಿಬ್ಬಂದಿಗೆ ನೀಡುವ ಲಸಿಕೆಯ ಮಾದರಿಯಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ.

ಲಸಿಕೆ ಹಾಕಿಸಿಕೊಂಡವರಿಗೆ ಡಿಜಿಟಲ್ ಪ್ರಮಾಣಪತ್ರ

ಲಸಿಕೆ ಹಾಕಿಸಿಕೊಂಡವರಿಗೆ ಡಿಜಿಟಲ್ ಪ್ರಮಾಣಪತ್ರ

ಕೊವಿಡ್-19 ಲಸಿಕೆ ಪಡೆಯುವ ವೈದ್ಯಕೀಯ ಸಿಬ್ಬಂದಿಯು ಕೇಂದ್ರ ಸರ್ಕಾರದ ಅಧಿಕೃತ ಕೊ-ವಿನ್ ಅಪ್ಲಿಕೇಷನ್ ನಲ್ಲಿ ಹೆಸರು ನೋಂದಾಯಿಸಬೇಕು. ಈ ಅಪ್ಲಿಕೇಷನ್ ಮೂಲಕ ಲಸಿಕೆ ಲಭ್ಯವಿರುವ ಪ್ರಮಾಣದ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಮೊದಲ ಬಾರಿ ಲಸಿಕೆ ಪಡೆದ ಫಲಾನುಭವಿಗಳು ಎಲ್ಲಿದ್ದಾರೆ ಎಂದು ಹುಡುಕುವುದಕ್ಕೂ ಅಪ್ಲಿಕೇಷನ್ ನೆರವಾಗುತ್ತದೆ. ಅಲ್ಲದೇ, ಮೊದಲ ಬಾರಿಗೆ ಲಸಿಕೆ ಹಾಕಿಸಿಕೊಂಡವರಿಗೆ ಆನ್ ಲೈನ್ ಸರ್ಟಿಫಿಕೇಟ್ ನೀಡಲಾಗುತ್ತದೆ. ಇದರ ಜೊತೆಗೆ ಎರಡನೇ ಬಾರಿಗೆ ಲಸಿಕೆ ಹಾಕಿಸಿಕೊಳ್ಳುವ ದಿನಾಂಕವನ್ನು ತೋರಿಸಲಾಗುತ್ತದೆ. ಎರಡನೇ ಬಾರಿ ಲಸಿಕೆ ಹಾಕಿಸಿಕೊಂಡ ಬಳಿಕ ಪೂರ್ಣ ಪ್ರಮಾಣದ ಸರ್ಟಿಫಿಕೇಟ್ ನೀಡಲಾಗುತ್ತದೆ.

ಇಲ್ಲಿದೆ ಉತ್ತರ: ಕೊರೊನಾ ಲಸಿಕೆ ಮತ್ತು ನಾಲ್ಕು ಸಾವಿನ ಹಿಂದಿನ ಸತ್ಯವೇನು?ಇಲ್ಲಿದೆ ಉತ್ತರ: ಕೊರೊನಾ ಲಸಿಕೆ ಮತ್ತು ನಾಲ್ಕು ಸಾವಿನ ಹಿಂದಿನ ಸತ್ಯವೇನು?

ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಅಡ್ಡಪರಿಣಾಮ

ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಅಡ್ಡಪರಿಣಾಮ

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಪಡೆದ ನಂತರದಲ್ಲಿ ಶೇ0.18ರಷ್ಟು ವೈದ್ಯಕೀಯ ಸಿಬ್ಬಂದಿ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಈ ಪೈಕಿ ಕೇವಲ ಶೇ.0.02ರಷ್ಟು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿತ್ತು. ಇದೇ ವಾರದಲ್ಲಿ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳನ್ನು ಯಾರು ತೆಗೆದುಕೊಳ್ಳಬೇಕು, ಯಾರು ತೆಗೆದುಕೊಳ್ಳಬಾರದು ಎಂಬ ಬಗ್ಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳು ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ್ದವು.

ಈ ಆರೋಗ್ಯ ಸಮಸ್ಯೆಗಳಿದ್ದರೆ ಲಸಿಕೆ ಹಾಕಿಸಿಕೊಳ್ಳಬೇಡಿ

ಈ ಆರೋಗ್ಯ ಸಮಸ್ಯೆಗಳಿದ್ದರೆ ಲಸಿಕೆ ಹಾಕಿಸಿಕೊಳ್ಳಬೇಡಿ

- ದೈಹಿಕ ಅಲರ್ಜಿ ಹೊಂದಿರುವವರು ಲಸಿಕೆ ತೆಗೆದುಕೊಳ್ಳಬೇಡಿ

- ಜ್ವರದಿಂದ ಬಳಲುತ್ತಿರುವವರಿಗೆ ಲಸಿಕೆಯು ಸೂಕ್ತವಲ್ಲ

- ರಕ್ತಸ್ರಾವ ಮತ್ತು ತಿಳಿಯಾದ ರಕ್ತವನ್ನು ಹೊಂದಿರುವವರು ಲಸಿಕೆ ಪಡೆದುಕೊಳ್ಳಬಾರದು

- ರೋಗ ನಿರೋಧಕ ಶಕ್ತಿ ಮತ್ತು ರೋಗ ನಿರೋಧಕ ವ್ಯವಸ್ಥೆಯಲ್ಲಿ ಲೋಪಗಳಿದ್ದಲ್ಲಿ ಲಸಿಕೆ ಹಾಕಿಸಿಕೊಳ್ಳಬೇಡಿ

- ಗರ್ಭಿಣಿಯರು ಲಸಿಕೆ ಹಾಕಿಸಿಕೊಳ್ಳುವುದು ಬೇಡ

- ಸ್ತನ್ಯಪಾನ ಮಾಡುವ ಮಹಿಳೆಯರು

- ಕೊವಿಡ್-19 ಸೋಂಕಿಗೆ ಬೇರೆ ಲಸಿಕೆ ಹಾಕಿಸಿಕೊಂಡವರು ಕೊವ್ಯಾಕ್ಸಿನ್ ಲಸಿಕೆ ಪಡೆಯಬೇಡಿ

- ಇತರೆ ಯಾವುದೇ ರೀತಿ ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ಕೊವ್ಯಾಕ್ಸಿನ್ ಲಸಿಕೆ ಉತ್ತಮವಲ್ಲ

ಸಾಮಾನ್ಯವಾಗಿ ಲಸಿಕೆ ಹಾಕಿಸಿಕೊಂಡ ಬಳಿಕ ಆರೋಗ್ಯ ಸಮಸ್ಯೆ

ಸಾಮಾನ್ಯವಾಗಿ ಲಸಿಕೆ ಹಾಕಿಸಿಕೊಂಡ ಬಳಿಕ ಆರೋಗ್ಯ ಸಮಸ್ಯೆ

- ಲಸಿಕೆ ಹಾಕಿಸಿಕೊಂಡ ಭಾಗದಲ್ಲಿ ಬಾವು ಅಥವಾ ಊತ

- ಲಸಿಕೆ ಪಡೆದ ತೋಳಿನ ದೌರ್ಬಲ್ಯ,

- ಮೈನೋವು,

- ತಲೆನೋವು,

- ಜ್ವರ,

- ಅಸ್ವಸ್ಥತೆ,

- ನಿಶಕ್ತಿ,

- ವಾಕರಿಕೆ ಮತ್ತು ವಾಂತಿ

ಲಸಿಕೆ ನಂತರ ಅಡ್ಡಪರಿಣಾಮ ಪ್ರಕರಣಗಳು

ಲಸಿಕೆ ನಂತರ ಅಡ್ಡಪರಿಣಾಮ ಪ್ರಕರಣಗಳು

ಬುಧವಾರ ಒಂದೇ ದಿನ ದೇಶಾದ್ಯಂತ 82 ಅಡ್ಡಪರಿಣಾಮದ ಪ್ರಕರಣಗಳು (ಲಸಿಕೆ ಹಾಕಿಸಿಕೊಂಡವರ ಆರೋಗ್ಯದಲ್ಲಿ ವ್ಯತ್ಯಾಸ) ಪತ್ತೆಯಾಗಿವೆ. ದೆಹಲಿಯಲ್ಲಿ 4, ಕರ್ನಾಟಕದಲ್ಲಿ 2, ಉತ್ತರಾಖಂಡ್, ರಾಜಸ್ಥಾನ್, ಛತ್ತೀಸ್ ಗಢ, ಪಶ್ಚಿಮ ಬಂಗಾಳದಲ್ಲಿ ಲಸಿಕೆ ಅಡ್ಡಪರಿಣಾಮಗಳಿಂದ ಒಬ್ಬೊಬ್ಬ ವೈದ್ಯಕೀಯ ಸಿಬ್ಬಂದಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

English summary
Coronavirus Vaccination In India: What Next After Getting The First Shot?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X