ಕೊರೊನಾದಿಂದ ರಕ್ಷಿಸಿಕೊಳ್ಳಲು 6-12 ವರ್ಷದ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ
ನವದೆಹಲಿ, ಏಪ್ರಿಲ್ 26: ಭಾರತದಲ್ಲಿ 6 ರಿಂದ 12 ವರ್ಷದ ಮಕ್ಕಳಿಗೆ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ವಿತರಿಸುವುದಕ್ಕೆ ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರ ಮಂಗಳವಾರ ಅನುಮೋದನೆ ನೀಡಿದೆ.
ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಇದರ ಮಧ್ಯೆ 6 ರಿಂದ 12 ವರ್ಷ ಮಕ್ಕಳನ್ನು ಕೋವಿಡ್-19 ಸೋಂಕಿನಿಂದ ರಕ್ಷಿಸವುದಕ್ಕಾಗಿ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ.
ಒಂದು ದಿಕ್ಕಿನಲ್ಲಿ ಮಕ್ಕಳ ಆರೋಗ್ಯ ದೃಷ್ಟಿಯಿಂದ 6 ರಿಂದ 12 ವಯೋಮಾನದ ಮಕ್ಕಳಿಗೆ ಕೋವಿಡ್-19 ಲಸಿಕೆ ವಿತರಿಸಲು ಅನುಮೋದಿಸಲಾಗುತ್ತಿದೆ. ಇನ್ನೊಂದು ದಿಕ್ಕಿನಲ್ಲಿ ಬೂಸ್ಟರ್ ಡೋಸ್ ಲಸಿಕೆ ವಿತರಣೆಯು ವೇಗ ಪಡೆದುಕೊಳ್ಳುತ್ತಿದೆ. ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ವಿತರಿಸುವುದರ ಹಿಂದಿನ ಉದ್ದೇಶವೇನು?, ಭಾರತ್ ಬಯೋಟೆಕ್ ಸಂಸ್ಥೆಗೆ ಡಿಸಿಜಿಐ ವಿಧಿಸಿರುವ ಷರತ್ತುಗಳೇನು? ವಾಸ್ತವದಲ್ಲಿ ಈ ವಯೋಮಾನದ ಮಕ್ಕಳಿಗೆ ಯಾವ ಯಾವ ಲಸಿಕೆಯನ್ನು ವಿತರಣೆ ಮಾಡಲಾಗುತ್ತಿದೆ ಎನ್ನುವುದರ ಕುರಿತು ಒಂದು ವರದಿ ಇಲ್ಲಿದೆ ಓದಿ.

ಕೊವ್ಯಾಕ್ಸಿನ್ ಲಸಿಕೆ ಸುರಕ್ಷತೆ ಬಗ್ಗೆ ವರದಿ ಸಲ್ಲಿಸಲು ಸೂಚನೆ:
ದೇಶದಲ್ಲಿ 6 ರಿಂದ 12 ವರ್ಷದ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯು ಎಷ್ಟು ಸುರಕ್ಷಿತವಾಗಿದೆ ಎನ್ನುವುದರ ಕುರಿತು ಅಂಕಿ-ಅಂಶಗಳ ಸಹಿತ ವರದಿ ಸಲ್ಲಿಸುವಂತೆ ಭಾರತ್ ಬಯೋಟೆಕ್ ಸಂಸ್ಥೆಗೆ ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರವು ಸೂಚನೆ ನೀಡಿದೆ. ಮೊದಲ ಎರಡು ತಿಂಗಳ ಅವಧಿಯಲ್ಲಿ ಪ್ರತಿ 15 ದಿನಗಳಿಗೊಮ್ಮೆ ಅಂಕಿ-ಅಂಶಗಳನ್ನೊಳಗೊಂಡ ವರದಿಯನ್ನು ಸಲ್ಲಿಸಬೇಕು. ತದಂನತರದ ಐದು ತಿಂಗಳ ಅವಧಿಯವರೆಗೂ ಪ್ರತಿ ತಿಂಗಳಿಗೊಮ್ಮೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಕಳೆದ ಏಪ್ರಿಲ್ 21ರಂದು, ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರದ ವಿಷಯ ತಜ್ಞರ ಸಮಿತಿ (SEC) 2-12 ವರ್ಷ ವಯಸ್ಸಿನ ಮಕ್ಕಳಿಗೆ ಕೊವಾಕ್ಸಿನ್ ಕುರಿತು ಹೆಚ್ಚುವರಿ ಡೇಟಾವನ್ನು ಒದಗಿಸಲು ಭಾರತ್ ಬಯೋಟೆಕ್ ಅನ್ನು ಕೇಳಿತ್ತು.

ಭಾರತ್ ಬಯೋಟೆಕ್ ಸಂಸ್ಥೆಗೆ ಸೂಚನೆ ನೀಡಿರುವ ಡಿಸಿಜಿಐ
ದೇಶದಲ್ಲಿ 6 ರಿಂದ 12 ವರ್ಷದ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯು ಎಷ್ಟು ಸುರಕ್ಷಿತವಾಗಿದೆ ಎನ್ನುವುದರ ಕುರಿತು ಅಂಕಿ-ಅಂಶಗಳ ಸಹಿತ ವರದಿ ಸಲ್ಲಿಸುವಂತೆ ಭಾರತ್ ಬಯೋಟೆಕ್ ಸಂಸ್ಥೆಗೆ ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರವು ಸೂಚನೆ ನೀಡಿದೆ. ಮೊದಲ ಎರಡು ತಿಂಗಳ ಅವಧಿಯಲ್ಲಿ ಪ್ರತಿ 15 ದಿನಗಳಿಗೊಮ್ಮೆ ಅಂಕಿ-ಅಂಶಗಳನ್ನೊಳಗೊಂಡ ವರದಿಯನ್ನು ಸಲ್ಲಿಸಬೇಕು. ತದಂನತರದ ಐದು ತಿಂಗಳ ಅವಧಿಯವರೆಗೂ ಪ್ರತಿ ತಿಂಗಳಿಗೊಮ್ಮೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಕಳೆದ ಏಪ್ರಿಲ್ 21ರಂದು, ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರದ ವಿಷಯ ತಜ್ಞರ ಸಮಿತಿ (SEC) 2-12 ವರ್ಷ ವಯಸ್ಸಿನ ಮಕ್ಕಳಿಗೆ ಕೊವಾಕ್ಸಿನ್ ಕುರಿತು ಹೆಚ್ಚುವರಿ ಡೇಟಾವನ್ನು ಒದಗಿಸಲು ಭಾರತ್ ಬಯೋಟೆಕ್ ಅನ್ನು ಕೇಳಿತ್ತು.

5-11 ವರ್ಷದ ಮಕ್ಕಳಿಗೆ ಕೊರ್ಬೆವ್ಯಾಕ್ಸ್ ಲಸಿಕೆ
ಕೊವ್ಯಾಕ್ಸಿನ್ ಲಸಿಕೆಯ ಜೊತೆಗೆ ಮತ್ತೊಂದು ಲಸಿಕೆಗೂ ಅನುಮೋದನೆ ನೀಡಲಾಗಿದೆ. ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರದ ವಿಷಯ ತಜ್ಞರ ಸಮಿತಿಯು ಬಯೋಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆಯನ್ನು 5 ರಿಂದ 11 ವರ್ಷದ ಮಕ್ಕಳ ಮೇಲೆ ತುರ್ತು ಬಳಸುವುದಕ್ಕೆ ಅನುಮೋದನೆ ನೀಡಲಾಗಿದೆ. ಆ ಮೂಲಕ 5 ವರ್ಷ ಮೇಲ್ಪಟ್ಟ ಮಕ್ಕಳಿಗೂ ಕೋವಿಡ್-19 ಲಸಿಕೆಯನ್ನು ಸಮರೋಪಾದಿಯಲ್ಲಿ ನೀಡುವುದಕ್ಕೆ ಯೋಜನೆ ರೂಪಿಸಿಕೊಳ್ಳಲಾಗುತ್ತಿದೆ.
ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ಹಾಕಿಸುವಂತೆ ಪೋಷಕರಲ್ಲಿ ಮನವಿ
6-12 ವರ್ಷ ವಯಸ್ಸಿನವರಿಗೆ ನೀಡಲು ಉದ್ದೇಶಿಸಿರುವ ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಲಸಿಕೆಯನ್ನು ಡಿಸಿಜಿಐ ಅನುಮೋದಿಸಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಕೂ ಮಾಡಿದ್ದಾರೆ. 'ಕೋವಿಡ್ -19 ವಿರುದ್ಧದ ಭಾರತದ ಯುದ್ಧಕ್ಕೆ ಇದು ದೊಡ್ಡ ಉತ್ತೇಜನ ನೀಡಲಿದೆ. ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕುವಂತೆ ಮತ್ತು ಸಾಂಕ್ರಾಮಿಕ ರೋಗದ ವಿರುದ್ಧ ನಮ್ಮ ಸಾಮೂಹಿಕ ಹೋರಾಟವನ್ನು ಬಲಪಡಿಸಲು ಕೈಜೋಡಿಸುವಂತೆ ಕೋರುತ್ತೇನೆ' ಎಂದಿದ್ದಾರೆ.

ವಿವಿಧ ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ
ಕಳೆದ 2021ರ ಜನವರಿ 16ರಂದು ಮೊದಲ ಬಾರಿಗೆ ಕೋವಿಡ್-19 ಲಸಿಕೆಯ ವಿತರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ಫೆಬ್ರವರಿ 2ರಂದು ಎರಡನೇ ಹಂತದಲ್ಲಿ ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಿಸಲಾಯಿತು. ಮಾರ್ಚ್ 1ರಿಂದ ಮೂರನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ 45 ವರ್ಷ ಮೇಲ್ಪಟ್ಟ ಅಸ್ವಸ್ಥತೆಯನ್ನು ಹೊಂದಿರುವವರಿಗೆ ಕೋವಿಡ್-19 ಲಸಿಕೆ ವಿತರಿಸಲು ಶುರು ಮಾಡಲಾಯಿತು. ತದನಂತರ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ವಿತರಿಸಲು ಅನುಮತಿ ನೀಡಲಾಗಿತ್ತು. ಮೇ 1ರ ನಂತರದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾವೈರಸ್ ಲಸಿಕೆ ವಿತರಿಸುವುದಕ್ಕೆ ಅನುಮತಿಸಲಾಗಿತ್ತು.
2022ರ ಜನವರಿ 3ರಂದು 15 ರಿಂದ 18 ವಯೋಮಾನದವರಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡುವುದಕ್ಕೆ ಕೇಂದ್ರ ಸರ್ಕಾರವು ಅನುಮೋದನೆಯನ್ನು ನೀಡಿತು. ಇದರ ಬೆನ್ನಲ್ಲೇ ಮಾರ್ಚ್ 16ರಂದು 12 ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ವಿತರಿಸುವುದಕ್ಕೆ ಅನುಮತಿ ನೀಡಲಾಯಿತು. ಹೀಗೆ ಹಂತ-ಹಂತವಾಗಿ ಲಸಿಕೆ ವಿತರಣೆಗೆ ದೇಶದಲ್ಲಿ ಅನುಮತಿಯನ್ನು ನೀಡಲಾಗಿದೆ.

ಬೂಸ್ಟರ್ ಡೋಸ್ ತೆಗೆದುಕೊಳ್ಳುವುದಕ್ಕೆ ಕೇಂದ್ರದ ಅನುಮತಿ
ದೇಶದ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಏಪ್ರಿಲ್ 10 ರಿಂದ ಕೋವಿಡ್-19 ಬೂಸ್ಟರ್ ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈಗಾಗಲೇ ಘೋಷಿಸಿದೆ. ಮೊದಲ ಎರಡು ಅಲೆಗಳ ನಂತರ ಆರಂಭಿಸಲಾದ ಲಸಿಕೆ ವಿತರಣೆ ಅಭಿಯಾನದಿಂದ ಸಾವಿನ ಪ್ರಕರಣಗಳು ಮತ್ತು ತೀವ್ರ ಅಸ್ವಸ್ಥತೆಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಎರಡು ಡೋಸ್ ಲಸಿಕೆ ಪಡೆದುಕೊಂಡವರು ಮೂರನೇ ಡೋಸ್ ಲಸಿಕೆ ಪಡೆದುಕೊಳ್ಳುವುದಕ್ಕೂ ಅನುಮತಿ ನೀಡಲಾಗಿದೆ. ಈ ಹಂತದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ತಾವು ಎರಡನೇ ಡೋಸ್ ಪಡೆದುಕೊಂಡು 9 ತಿಂಗಳು ಕಳೆದಿದ್ದರೆ ಮೂರನೇ ಡೋಸ್ ಲಸಿಕೆಯನ್ನೂ ಪಡೆದುಕೊಳ್ಳಬಹುದು.












Click it and Unblock the Notifications