ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2ನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸಲಿರುವ ಸಿಪಿ ಯೋಗೇಶ್ವರ್ ವ್ಯಕ್ತಿಚಿತ್ರಣ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜನವರಿ 13: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟವು ಬುಧವಾರ (13) ವಿಸ್ತರಣೆಯಾಗುತ್ತಿದ್ದು, ಇದರಲ್ಲಿ ನೂತನ ಸಚಿವರಾಗಿ ಸಿಪಿ ಯೋಗೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ವೈಯಕ್ತಿಕ ಹಾಗೂ ರಾಜಕೀಯ ಜೀವನದ ಕಿರು ಪರಿಚಯ ಇಲ್ಲದೆ.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದ ಸಿಪಿ ಯೋಗೇಶ್ವರ್ ಅವರು ಪ್ರಸ್ತುತ ಬಿಜೆಪಿ ಸರ್ಕಾರ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಿ, ಅವರನ್ನು ಮುಂಬೈಗೆ ಕರೆದೊಯ್ಯುವಲ್ಲಿ ಮುಂದಾಳತ್ವ ವಹಿಸಿದ ಕೆಲವರಲ್ಲಿ ಸಿಪಿ ಯೋಗೇಶ್ವರ್ ಕೂಡಾ ಒಬ್ಬರು.

ಸಿನಿಮಾ ಜಗತ್ತಿನಿಂದ ರಾಜಕೀಯಕ್ಕೆ ಧುಮುಕಿದ ಸಿಪಿ ಯೋಗೇಶ್ವರ್ ಅವರು ಹುಟ್ಟಿದ್ದು ಆಗಸ್ಟ್ 29, 1963 ರಲ್ಲಿ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಕ್ಕರೆ ಗ್ರಾಮದಲ್ಲಿ ಜನಿಸಿದರು.

ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಶಿಕ್ಷಣ

ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಶಿಕ್ಷಣ

ಸಿ.ಪಿ ಯೋಗೇಶ್ವರ್ ಅವರು ಪುಟ್ಟಮಾದೇಗೌಡ ಹಾಗೂ ತಾಯಿ ನಾಗರತ್ನಮ್ಮ ಅವರ ಪುತ್ರನಾಗಿ ಜನಿಸಿದರು. ಚನ್ನಪಟ್ಟಣ ತಾಲೂಕಿನ ಚಕ್ಕರೆ ಗ್ರಾಮದಲ್ಲಿಯೇ ಪ್ರಾಥಮಿಕ ಶಿಕ್ಷಣ ಮುಗಿಸಿದ ಯೋಗೇಶ್ವರ್, ಪ್ರೌಢ ಶಿಕ್ಷಣವನ್ನು ಮತ್ತಿಕೆರೆ ಗ್ರಾಮದಲ್ಲಿ ಮುಗಿಸಿದರು. ಪಿಯುಸಿ ವಿದ್ಯಾಭ್ಯಾಸವನ್ನು ಚನ್ನಪಟ್ಟಣ ಸರ್ಕಾರಿ ಬಾಲಕರ ಕಾಲೇಜಿನಲ್ಲಿ ಹಾಗೂ ಬಿ.ಎಸ್ಸಿ ಪದವಿ ಶಿಕ್ಷಣವನ್ನು ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪೂರೈಸಿದರು.

"ನಾಲಿಗೆ, ಮಾತು ಎರಡೂ ಕಳೆದುಕೊಂಡ ಸಿಎಂ ಯಡಿಯೂರಪ್ಪ''

1999ರಲ್ಲಿ ಮೊದಲ ಬಾರಿಗೆ ಶಾಸಕ

1999ರಲ್ಲಿ ಮೊದಲ ಬಾರಿಗೆ ಶಾಸಕ

ಸಿಪಿ ಯೋಗೇಶ್ವರ್ ಅವರು ಶೀಲಾ ಎಂಬುವರನ್ನು ಮದುವೆಯಾಗಿದ್ದಾರೆ. ಯೋಗೇಶ್ವರ್ ದಂಪತಿಗಳಿಗೆ ನಿಶಾ, ಶ್ರವಣ್, ಧ್ಯಾನ್ ಎಮಬ ಮೂವರು ಮಕ್ಕಳಿದ್ದಾರೆ. ಇವರು ರಾಜಕೀಯಕ್ಕೆ ಬರುವ ಮೊದಲು ಸಿನಿಮಾ ಕ್ಷೇತ್ರದಲ್ಲಿದ್ದರು. ಇವರು 10ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. 1999ರಲ್ಲಿ ಮೊದಲ ಬಾರಿಗೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದಿಂದ ಪಕ್ಷೇತರ ಶಾಸಕರಾಗಿ ಆಯ್ಕೆಯಾದರು. ನಂತರ 2004ರಲ್ಲಿ ಎರಡನೆ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಪುನಃ ಚನ್ನಪಟ್ಟಣ ಕ್ಷೇತ್ರದಿಂದ ಜಯಗಳಿಸಿದರು.

ಬಿಜೆಪಿ ಪಕ್ಷದಿಂದ ಗೆದ್ದು ಶಾಸಕರಾದರು

ಬಿಜೆಪಿ ಪಕ್ಷದಿಂದ ಗೆದ್ದು ಶಾಸಕರಾದರು

2008ರಲ್ಲಿ ಮೂರನೇ ಬಾರಿಗೆ ಅದೇ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ರಾಜೀನಾಮೆ ನೀಡಿದ್ದರು. 2009ರಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಪಕ್ಷದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಸೋತಿದ್ದರು. 2011ರ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಗೆದ್ದು ಶಾಸಕರಾಗಿ, ಅರಣ್ಯ ಇಲಾಖೆ ಸಚಿವರಾಗಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಆಗ ಸದಾನಂದಗೌಡ ಅವರು ಮುಖ್ಯಮಂತ್ರಿಯಾಗಿದ್ದರು.

8 ಬಾರಿ ಗೆದ್ದಿರುವ ಶಾಸಕ ಉಮೇಶ್ ಕತ್ತಿ ಪರಿಚಯ8 ಬಾರಿ ಗೆದ್ದಿರುವ ಶಾಸಕ ಉಮೇಶ್ ಕತ್ತಿ ಪರಿಚಯ

ಎಚ್.ಡಿ ಕುಮಾರಸ್ವಾಮಿ ವಿರುದ್ಧ ಸೋತಿದ್ದರು

ಎಚ್.ಡಿ ಕುಮಾರಸ್ವಾಮಿ ವಿರುದ್ಧ ಸೋತಿದ್ದರು

2013ರಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧೆ ಮಾಡಿ ಅನಿತಾ ಕುಮಾರಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದರು. ಮತ್ತೆ ಬಿಜೆಪಿಗೆ ಮರಳಿದ ಸಿಪಿ ಯೋಗೇಶ್ವರ್ ಅವರು 2018ರಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಚನ್ನಪಟ್ಟಣ ಕ್ಷೇತ್ರದಲ್ಲಿ ಸೋತಿದ್ದರು. ಆದರೆ ಅವರನ್ನು ಕಳೆದ 2020ರಲ್ಲಿ ಸಿನಿಮಾ ಕ್ಷೇತ್ರದಲ್ಲಿ ಸೇವೆ ಪರಿಗಣಿಸಿ ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

English summary
Here is the biography of CP Yogeshwara, he becomes minister for 2nd term. Read on to know about his family, political career, net worth and more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X