ದೆಹಲಿ ಅಬಕಾರಿ ನೀತಿ ಪ್ರಕರಣ: ವಿಜಯ್ ನಾಯರ್ ಯಾರು?
ನವದೆಹಲಿ ಆಗಸ್ಟ್ 22: ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೆಲವು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಪ್ರಸ್ತುತ ತನಿಖೆ ನಡೆಸುತ್ತಿದೆ. ಎಫ್‌ಐಆರ್ ಮತ್ತು ಲುಕ್‌ಔಟ್ ನೋಟಿಸ್‌ನಲ್ಲಿ ಉಲ್ಲೇಖಿಸಲಾದ ವ್ಯಕ್ತಿಗಳಲ್ಲಿ ವಿಜಯ್ ನಾಯರ್ ಒಬ್ಬರು.
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದ್ದು, ಹಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ವಿಜಯ್ ನಾಯರ್ ಪ್ರಮುಖ ಹೆಸರಾಗಿದೆ. ಅಷ್ಟಕ್ಕೂ ಈ ವಿಜಯ್ ನಾಯರ್ ಯಾರು..? ಈತನಿಗೂ ಎಎಪಿಗೂ ಏನ್ ಸಂಬಂಧ? ಮನೀಶ್ ಸಿಸೋಡಿಯಾ ಹಾಗೂ ವಿಜಯ್ ನಾಯರ್ ಸಂಬಂಧ ಇದಿಯೇ? ಎನ್ನುವುದಕ್ಕೆ ಉತ್ತರ ಇಲ್ಲಿದೆ.
ಸಿಬಿಐ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಸಿಸೋಡಿಯಾ ಮತ್ತು ನಾಯರ್ ಹೊರತುಪಡಿಸಿ ಇತರ 13 ಮಂದಿಯನ್ನು ಹೆಸರಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ ದೆಹಲಿ ಅಬಕಾರಿ ನೀತಿ ಪ್ರಕರಣದ ಆರೋಪಿಗಳ ಪಟ್ಟಿಯಲ್ಲಿ ಅಬಕಾರಿ ಅಧಿಕಾರಿಗಳು, ವಿತರಕರು, ಸಾರ್ವಜನಿಕ ಸೇವಕರು, ಮದ್ಯದ ಕಂಪನಿ ಅಧಿಕಾರಿಗಳು ಮತ್ತು ಖಾಸಗಿ ವ್ಯಕ್ತಿಗಳು ಸೇರಿದ್ದಾರೆ.

ಅಬಕಾರಿ ನೀತಿಯ ರಚನೆಯ ಅಕ್ರಮದಲ್ಲಿ ಭಾಗಿ
ಅಬಕಾರಿ ನೀತಿ ಪ್ರಕರಣದ 15 ಆರೋಪಿಗಳ ಪೈಕಿ ಅತ್ಯಂತ ವಿವಾದಾತ್ಮಕ ಹೆಸರುಗಳಲ್ಲಿ ಒಬ್ಬರು ವಿಜಯ್ ನಾಯರ್. ಎಫ್‌ಐಆರ್‌ನ ಪ್ರಕಾರ "ದಿಲ್ಲಿಯ ಜಿಎನ್‌ಸಿಟಿಡಿಯ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದ ಅಕ್ರಮಗಳಲ್ಲಿ ನಾಯರ್ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಎಫ್‌ಐಆರ್ ತಿಳಿಸಿದೆ.
ಸಿಬಿಐ ದಾಖಲಿಸಿರುವ ಎಫ್‌ಐಆರ್‌ನ ಪ್ರಕಾರ, ಆರೋಪಿಗಳ ಪಟ್ಟಿಯಲ್ಲಿ ರಾಜಕೀಯ, ಅಧಿಕಾರಿಯಲ್ಲದ ಮತ್ತು ಮದ್ಯದ ವ್ಯಾಪಾರ ಮಾಲೀಕರಲ್ಲದ ಏಕೈಕ ವ್ಯಕ್ತಿ ವಿಜಯ್ ನಾಯರ್. ನಾಯರ್ ಒಬ್ಬ ಉದ್ಯಮಿ ಮತ್ತು ಓನ್ಲಿ ಮಚ್ ಲೌಡರ್ (OML) ಹೆಸರಿನ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯ ಮಾಜಿ ಸಿಇಒ.

"ಅರೆಕಾಲಿಕ ಸ್ವಯಂಸೇವಕ" ಆಗಿ ಸೇವೆ
ನಾಯರ್ ಯಾವುದೇ ರಾಜಕೀಯ ಪಕ್ಷದ ಸದಸ್ಯರಲ್ಲದಿದ್ದರೂ, ಅವರು ದೆಹಲಿಯಲ್ಲಿ ಸರ್ಕಾರ ರಚಿಸಿದಾಗಿನಿಂದ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗುತ್ತದೆ. ಮಾಧ್ಯಮ ವರದಿಗಳ ಪ್ರಕಾರ, 2019 ರಲ್ಲಿ ಮಾಜಿ OML CEO ನಾಯರ್ 2020 ರ ದೆಹಲಿ ಚುನಾವಣಾ ಪ್ರಚಾರದ ಸಮಯದಲ್ಲಿ AAP ನಲ್ಲಿ "ಅರೆಕಾಲಿಕ ಸ್ವಯಂಸೇವಕ" ಆಗಿ ಸೇವೆ ಸಲ್ಲಿಸಿದರು.
ಸ್ವಯಂಸೇವಕರಾಗಿದ್ದ ಸಮಯದಲ್ಲಿ, ಅವರು ಪಕ್ಷದ ಕಾರ್ಯಕ್ರಮಗಳನ್ನು ಆಯೋಜಿಸಲು ಮತ್ತು AAP ಗೆ ಸಂಬಂಧಿಸಿದ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳನ್ನು ನಿರ್ವಹಿಸಲು ಸಹಾಯ ಮಾಡಿದರು. ಇದಕ್ಕೂ ಮೊದಲು, ಎಎಪಿ ಶಾಸಕ ಅತಿಶಿ ಮರ್ಲೆನಾ ಅವರು ಕಾರವಾನ್‌ಗೆ ನಾಯರ್ ಒಬ್ಬ 'ತಾತ್ಕಾಲಿಕ ಕೆಲಸಗಾರ' ಎಂದು ಹೇಳಿದ್ದರು, ಇದನ್ನು ಪಕ್ಷ ನಿರಾಕರಿಸಿತ್ತು. ಅಬಕಾರಿ ನೀತಿ ತನಿಖೆಯ ಸಮಯದಲ್ಲಿ ಎಎಪಿಯೊಂದಿಗೆ ವಿಜಯ್ ನಾಯರ್ ಅವರ ವಿವಾದವನ್ನು ಹುಟ್ಟುಹಾಕಿತು.

14 ಜನರ ವಿರುದ್ಧ ಎಫ್‌ಐಆರ್
ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ತನಿಖೆ ನಡೆಸುತ್ತಿರುವ ಸಿಬಿಐ, ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 14 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ಶುಕ್ರವಾರ ಮನೀಷ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಡೆಸಿತ್ತು.‘ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಅಂದಿನ ಅಬಕಾರಿ ಆಯುಕ್ತ ಅರ್ವಾ ಗೋಪಿ ಕೃಷ್ಣ, ಅಬಕಾರಿ ಇಲಾಖೆಯ ಅಂದಿನ ಉಪ ಆಯುಕ್ತ ಆನಂದ್ ತಿವಾರಿ ಮತ್ತು ಅಬಕಾರಿ ಇಲಾಖೆ ಸಹಾಯಕ ಆಯುಕ್ತ ಪಂಕಜ್ ಭಟ್ನಾಗರ್ 2021-22ನೇ ಸಾಲಿನ ಅಬಕಾರಿ ನೀತಿಗೆ ಸಂಬಂಧಿಸಿದ ಶಿಫಾರಸು ಮಾಡುವಲ್ಲಿ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ಸಿಬಿಐ ಆರೋಪಿಸಿದೆ.

ಆಪ್ ತೊರೆದರೆ ಬಿಜೆಪಿಯಿಂದ ಬಿಗ್ ಆಫರ್
ಇನ್ನೂ ಕಳೆದ ವರ್ಷ ನವೆಂಬರ್‌ನಲ್ಲಿ ಜಾರಿಗೆ ತಂದಿದ್ದ ಹೊಸ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐನಿಂದ ತನಿಖೆಯನ್ನು ಎದುರಿಸುತ್ತಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ, ಆಮ್ ಆದ್ಮಿ ಪಕ್ಷವನ್ನು ತೊರೆದು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಬಿಜೆಪಿಯಿಂದ ಸಂದೇಶ ಬಂದಿದೆ. ಒಂದು ವೇಳೆ ಪಕ್ಷಕ್ಕೆ ಸೇರಿಕೊಂಡರೆ, ಅವರ ವಿರುದ್ಧದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಎಲ್ಲಾ ಪ್ರಕರಣಗಳನ್ನು ತೆಗೆದುಹಾಕುವುದಾಗಿ ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.
'ನನಗೆ ಬಿಜೆಪಿಯಿಂದ ಸಂದೇಶ ಬಂದಿದೆ- ಆಪ್ ಅನ್ನು ತೊರೆದು ಬಿಜೆಪಿಗೆ ಸೇರಿಕೊಳ್ಳಿ. ಆಗ ಎಲ್ಲಾ ಸಿಬಿಐ ಮತ್ತು ಇ.ಡಿ ಪ್ರಕರಣಗಳನ್ನು ಮುಚ್ಚಲಾಗುವುದು' ಎಂದಿರುವುದಾಗಿ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು ಎಂದು ಒತ್ತಿ ಹೇಳಿದ ಅವರು, ನೀವು ಏನು ಬೇಕಾದರೂ ಮಾಡಿಕೊಳ್ಳಿ ಎಂದು ಬಿಜೆಪಿಗೆ ಸವಾಲು ಎಸೆದಿದ್ದಾರೆ.
Recommended Video
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications