ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರವಾಡ ಲೋಕಸಭಾ ಕ್ಷೇತ್ರದ ಪರಿಚಯ

|
Google Oneindia Kannada News

Recommended Video

Lok Sabha Election 2019 : ಧಾರವಾಡ ಲೋಕಸಭಾ ಕ್ಷೇತ್ರದ ಪರಿಚಯ | Oneindia Kannada

ಸಾಹಿತ್ಯ, ಸಂಗೀತ, ಹೋರಾಟ, ಶಿಕ್ಷಣದ ತವರು ಕ್ಷೇತ್ರ ಧಾರವಾಡ. ಧಾರವಾಡ ವಿಶ್ವವಿದ್ಯಾನಿಲಯ, ಕೃಷಿ ವಿಶ್ವವಿದ್ಯಾನಿಲಯ, ಐಐಟಿಗಳಿಂದಾಗಿ ಶಿಕ್ಷಣ ಕಾಶಿ ಎಂಬ ಕಿರೀಟವನ್ನು ಧಾರವಾಡ ಪಡೆದಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳು.

ಕರ್ನಾಟಕ ಹೈಕೋರ್ಟ್ ಸಂಚಾರಿ ಪೀಠ, ನೈಋತ್ಯ ರೈಲ್ವೆ ವಲಯ, ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ತನ್ನ ಒಡಲಲ್ಲಿ ಹೊಂದಿರುವ ಕ್ಷೇತ್ರ ಧಾರವಾಡ. ಏಷ್ಯಾ ಖಂಡದಲ್ಲಿಯೇ ಮಾದರಿಯಾದ ತಾಲೂಕು ನ್ಯಾಯಾಲಯ ಹುಬ್ಬಳ್ಳಿಯಲ್ಲಿದೆ.

'ಭತ್ತದ ಕಣಜ' ಕೊಪ್ಪಳ ಲೋಕಸಭಾ ಕ್ಷೇತ್ರದ ಪರಿಚಯ 'ಭತ್ತದ ಕಣಜ' ಕೊಪ್ಪಳ ಲೋಕಸಭಾ ಕ್ಷೇತ್ರದ ಪರಿಚಯ

2008ರ ಕ್ಷೇತ್ರ ಪುನರ್‌ ವಿಂಗಡನೆಗಿಂತ ಮೊದಲು ಧಾರವಾಡ ಉತ್ತರ ಕ್ಷೇತ್ರವೆಂದು ಇದನ್ನು ಕರೆಯಲಾಗುತ್ತಿತ್ತು. ಧಾರವಾಡ ಜಿಲ್ಲೆಯ 7, ಹಾವೇರಿ ಜಿಲ್ಲೆಯ 1 ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿ ಧಾರವಾಡ ಲೋಕಸಭಾ ಕ್ಷೇತ್ರ ರಚನೆ ಮಾಡಲಾಗಿದೆ.

Dharwad Lok Sabha constituency profile

ಧಾರವಾಡ ಲೋಕಸಭಾ ಕ್ಷೇತ್ರದ ಒಟ್ಟು ಜನಸಂಖ್ಯೆ 21,29,560. ಗ್ರಾಮೀಣ ಪ್ರದೇಶದಲ್ಲಿ ಶೇ 46.43ರಷ್ಟು, ನಗರ ಪ್ರದೇಶದಲ್ಲಿ ಶೇ 53.57ರಷ್ಟು ಜನರಿದ್ದಾರೆ. ಶೇ 10.11ರಷ್ಟು ಎಸ್‌ಸಿ, ಶೇ 4.90ರಷ್ಟು ಎಸ್‌ಟಿ ಸಮುದಾಯದ ಜನರಿದ್ದಾರೆ.

ಹಾವೇರಿ-ಗದಗ ಲೋಕಸಭಾ ಕ್ಷೇತ್ರ ಪರಿಚಯಹಾವೇರಿ-ಗದಗ ಲೋಕಸಭಾ ಕ್ಷೇತ್ರ ಪರಿಚಯ

90ರ ದಶಕದ ಮೊದಲಾರ್ಧದಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣಕ್ಕೆ ಬಿಜೆಪಿ ನಡೆಸಿದ ಪ್ರಯತ್ನ ಈ ಕ್ಷೇತ್ರದಲ್ಲಿ ಪಕ್ಷಕ್ಕೆ ಭದ್ರ ರಾಜಕೀಯ ನೆಲೆ ಒದಗಿಸಿಕೊಟ್ಟಿದೆ. ಪ್ರಸ್ತುತ ಸಹ ಬಿಜೆಪಿಯ ವಶದಲ್ಲಿದೆ ಧಾರವಾಡ ಕ್ಷೇತ್ರ. 2009 ಮತ್ತು 2014ರ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ ಅವರು ಗೆಲುವು ಸಾಧಿಸಿದ್ದಾರೆ.

Dharwad Lok Sabha

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ದಿ.ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್, ಕರ್ನಾಟಕ ಬಿಜೆಪಿಯ ಮಾಜಿ ಅಧ್ಯಕ್ಷ ಪ್ರಹ್ಲಾದ್ ಜೋಶಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಮುಂತಾದವರು ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರಮುಖ ನಾಯಕರು.

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ, ಮಹದಾಯಿ ಹೋರಾಟದ ಮೂಲಕ ರಾಜ್ಯದ ಗಮನವನ್ನು ಸೆಳೆದ ಕ್ಷೇತ್ರವಿದು. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಲಿಂಗಾಯತ-ವಿರಶೈವರೇ ನಿರ್ಣಾಯಕರು. ಕುರುಬ ಮತ್ತು ಮುಸ್ಲಿಂ ಮತಗಳು ನಿರ್ಣಾಯಕವಾಗಲಿವೆ.

Dharwad Lok Sabha constituency profile

ಕ್ಷೇತ್ರದ ಒಟ್ಟು ಮತದಾರರು 15,79,024. ಪುರುಷರು 8,09,468, ಮಹಿಳೆಯರು 7,69,538. 2014ರ ಚುನಾವಣೆಯಲ್ಲಿ 10,41,226 ಜನರು ಮತದಾನ ಮಾಡಿದ್ದಾರೆ. ಇವರಲ್ಲಿ 5,62,991 ಪುರುಷರು ಮತ್ತು 4,78,235 ಮಹಿಳೆಯರು.

ತುಮಕೂರು ಲೋಕಸಭೆ: ಕಾಂಗ್ರೆಸ್ ಕೋಟೆಯಲ್ಲಿ ಬಿಜೆಪಿಗೊಂದು ಭರವಸೆಯ ಚುಕ್ಕಿ ತುಮಕೂರು ಲೋಕಸಭೆ: ಕಾಂಗ್ರೆಸ್ ಕೋಟೆಯಲ್ಲಿ ಬಿಜೆಪಿಗೊಂದು ಭರವಸೆಯ ಚುಕ್ಕಿ

ಕಳೆದ ಚುನಾವಣೆಯಲ್ಲಿ ಬಿಜೆಪಿಯ ಪ್ರಹ್ಲಾದ್ ಜೋಶಿ ಅವರು 545395 ಮತಗಳನ್ನು ಪಡೆದು 2ನೇ ಬಾರಿಗೆ ಸಂಸತ್ ಪ್ರವೇಶಿಸಿದ್ದರು. ಜೋಶಿ ಅವರ ಎದುರಾಳಿಯಾಗಿದ್ದು ಕಾಂಗ್ರೆಸ್‌ನ ವಿನಯ್ ಕುಲಕರ್ಣಿ 431738 ಮತಗಳನ್ನು ಪಡೆದು ಅವರು ಸೋಲು ಕಂಡಿದ್ದರು.

ಧಾರವಾಡ ಕ್ಷೇತ್ರಕ್ಕೆ 27.5 ಕೋಟಿ ಅನುದಾನ ನಿಗದಿ ಮಾಡಲಾಗಿತ್ತು. ಜಿಲ್ಲಾಡಳಿತ 17.92 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. 15.19 ಕೋಟಿ ಅನುದಾನವನ್ನು ಕ್ಷೇತ್ರದ ಅಭಿವೃದ್ಧಿಗೆ ಖರ್ಚು ಮಾಡಲಾಗಿದೆ.

Dharwad Lok Sabha constituency profile

ಸಂಸದ ಪ್ರಹ್ಲಾದ್ ಜೋಶಿ ಅವರು ಸಂಸತ್‌ನಲ್ಲಿ ಶೇ 85ರಷ್ಟು ಹಾಜರಾತಿ ಹೊಂದಿದ್ದಾರೆ. 79 ವಿವಿಧ ಚರ್ಚೆಗಳಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದಂತೆ ಸುಮಾರು 350 ಪ್ರಶ್ನೆಗಳನ್ನು ಕೇಳಿದ್ದಾರೆ.

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಾಗಿದ್ದು ವಾಣಿಜ್ಯ ನಗರಿಯಾದ ಹುಬ್ಬಳ್ಳಿಯಲ್ಲಿ ಮೂಲಭೂತ ಸೌಕರ್ಯಗಳು ಮತ್ತಷ್ಟು ಅಭಿವೃದ್ಧಿಯಾಗಬೇಕಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣ ಉಡಾನ್ ಯೋಜನೆಗೆ ಸೇರ್ಪಡೆಗೊಂಡಿದ್ದು, ದೇಶಧ ವಿವಿಧ ನಗರಗಳಿಗೆ ವಿಮಾನ ಸೇವೆ ಆರಂಭವಾಗಬೇಕು.

ಬಸ್ ರಾಪಿಡ್ ಟ್ರಾನ್ಸಿಟ್‌ ಸಿಸ್ಟಂ ನಡಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ನಡುವೆ ಸರ್ಕಾರಿ ಬಸ್ ಸಂಚಾರ ಆರಂಭವಾಗಿದೆ. ಹಂತ-ಹಂತವಾಗಿ ಅವಳಿ ನಗರದ ನಡುವೆ ಖಾಸಗಿ ಬಸ್‌ಗಳ ಸಂಚಾರಕ್ಕೆ ಕಡಿವಾಣ ಬೀಳಲಿದೆ.

ಕಳಸಾ-ಬಂಡೂರಿ ಹೋರಾಟ ವರ್ಷಗಳ ಕಾಲ ನಡೆದರೂ ಕೇಂದ್ರ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಲಿಲ್ಲ ಎಂಬ ಅಸಮಾಧಾನ ಜನರಲ್ಲಿದೆ. ಯೋಜನೆ ಜಾರಿಗೊಂಡರೆ ಕ್ಷೇತ್ರದ ವ್ಯಾಪ್ತಿಯ ಹಲವು ತಾಲೂಕುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಆಗಲಿದೆ.

English summary
Lok Sabha Elections 2019 : Dharwad Lok Sabha constituency is one of the 28 Lok Sabha constituencies in Karnataka. BJP's Prahlad Joshi sitting MP of the constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X