ಪ್ರಜ್ವಲ್ ವಿದೇಶಕ್ಕೆ, ರಾಜತಾಂತ್ರಿಕ ಪಾಸ್‌ಪೋರ್ಟ್ ನಿಯಮಗಳು
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದು, ಅವರ ಪಾಸ್‌ಪೋರ್ಟ್ ತಕ್ಷಣ ರದ್ದುಗೊಳಿಸಲು ಕೋರಿ ಎಸ್‌ಐಟಿ ವಿದೇಶಾಂಗ ಇಲಾಖೆಗೆ ಪತ್ರವನ್ನು ಬರೆದಿತ್ತು.
ಏಪ್ರಿಲ್ 26ರಂದು ಲೋಸಕಭೆ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದಾರೆ. ಹಾಗಾದರೆ ಪಾಸ್‌ಪೋರ್ಟ್ ಮತ್ತು ವೀಸಾ ನಿಯಮಗಳೇನು? ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ಹೊಂದಿದ್ದಾರೆ. ಇವರು ಭಾರತ ಒಪ್ಪಂದ ಮಾಡಿಕೊಂಡಿರುವ 34 ದೇಶಗಳಿಗೆ ವಿದೇಶಾಂಗ ಇಲಾಖೆ ನೀಡುವ ವೀಸಾ ಇಲ್ಲದೇ ಪ್ರಯಾಣಿಸಬಹುದು ಮತ್ತು 30 ರಿಂದ 90 ದಿನಗಳ ತನಕ ಅಲ್ಲಿ ಇರಬಹುದು.
ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿ ಇದ್ದಾರೆ ಎಂದು ಅಂದಾಜಿಸಲಾಗಿದ್ದು, ಭಾರತದ ವೀಸಾ ಇಲ್ಲದೇ ಪ್ರಯಾಣಿಸಬಹುದಾದ ದೇಶದಲ್ಲಿ ಇದು ಸಹ ಒಂದು. ರಾಜತಾಂತ್ರಿಕ ಪಾಸ್‌ಪೋರ್ಟ್ ಮೂಲಕ ವೀಸಾ ಇಲ್ಲದೇ ಜರ್ಮನಿಗೆ ಹೋಗುವ ಭಾರತೀಯ 90 ದಿನಗಳ ತನಕ ಅಲ್ಲಿರಲು ಅವಕಾಶವಿದೆ. ವಿದೇಶಾಂಗ ಇಲಾಖೆ ಈಗಾಗಲೇ ರಾಜತಾಂತ್ರಿಕ ಪಾಸ್‌ಪೋರ್ಟ್ ಹೊಂದಿರುವ ಪ್ರಜ್ವಲ್ ರೇವಣ್ಣಗೆ ಪ್ರಯಾಣಕ್ಕೂ ಮುನ್ನ ಇಲಾಖೆಯಿಂದ ಯಾವುದೇ ವೀಸಾ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ.
ರಾಜತಾಂತ್ರಿಕ ಪಾಸ್‌ಪೋರ್ಟ್ ನಿಯಮಗಳು: ನಿಯಮಗಳ ಪ್ರಕಾರ ವ್ಯಕ್ತಿ ಸುಳ್ಳು ಮಾಹಿತಿ ನೀಡಿದ್ದರೆ, ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದರೆ, ಅವರ ಮೇಲೆ ಕ್ರಿಮಿನಲ್ ಪ್ರಕರಣಗಳು ಭಾರತದಲ್ಲಿ ಬಾಕಿ ಇದ್ದರೆ, ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ತರುವಂತಿದ್ದರೆ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಲು, ವಾಪಸ್ ಪಡೆಯಲು ಅವಕಾಶವಿದೆ. ಈ ಕುರಿತು ಪಾಸ್‌ಪೋರ್ಟ್ ಕಾಯ್ದೆ 1967ರ ಸೆಕ್ಷನ್ 10 (3)ರಲ್ಲಿ ವಿವರಿಸಲಾಗಿದೆ.
ಪಾಸ್‌ಪೋರ್ಟ್ ಪಡೆಯಲು ಪ್ರಾಧಿಕಾರಕ್ಕೆ ತಪ್ಪಾದ ಮಾಹಿತಿಯನ್ನು ಒದಗಿಸಿದ್ದರೆ ಪಾಸ್‌ಪೋರ್ಟ್ ಅನ್ನು ವಶಪಡಿಸಿಕೊಳ್ಳಬಹುದು ಅಥವಾ ಹಿಂಪಡೆಯಬಹುದು. ರಾಜತಾಂತ್ರಿಕ ಪಾಸ್‌ಪೋರ್ಟ್ ವಶಪಡಿಸಿಕೊಳ್ಳುವುದು ಅಥವಾ ಹಿಂಪಡೆಯುವುದು ದೇಶದ ಸಾರ್ವಭೌಮತೆ, ಸಮಗ್ರತೆ, ಭದ್ರತೆ, ವಿದೇಶಗಳ ಜೊತೆಗಿನ ಸ್ನೇಹ ಸಂಬಂಧವನ್ನು ಕಾಪಾಡಿಕೊಳ್ಳುವುದು, ಸಾಮಾನ್ಯ ಜನರ ಹಿತಾಸಕ್ತಿಗೆ ಪೂರಕವಾಗಿದೆ ಅನ್ನಿಸಿದರೆ ಕ್ರಮ ಕೈಗೊಳ್ಳಬಹುದು.
ರಾಜತಾಂತ್ರಿಕ ಪಾಸ್‌ಪೋರ್ಟ್ ನೀಡಿದ ಬಳಿಕ ಅದನ್ನು ಹೊಂದಿರುವ ವ್ಯಕ್ತಿ ಭಾರತೀಯ ಕೋರ್ಟ್‌ನಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದರೆ ಅದನ್ನು ವಾಪಸ್ ಪಡೆಯಬಹುದು. ಕ್ರಿಮಿನಲ್ ಪ್ರಕರಣದಲ್ಲಿ ವ್ಯಕ್ತಿಯ ವಿರುದ್ಧ ವಾರೆಂಟ್ ಜಾರಿಯಾದರೆ, ಹಾಜರಾಗಲು ಕೋರ್ಟ್ ಸೂಚಿಸಿದರೆ, ದೇಶ ಬಿಟ್ಟು ಹೋಗದಂತೆ ಷರತ್ತು ಹಾಕಿದರೆ ಪಾಸ್‌ಪೋರ್ಟ್ ರದ್ದು, ವಾಪಸ್ ಪಡೆಯಲು ಅವಕಾಶವಿದೆ.
ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಮತ್ತು ಬಂಧನದ ವಾರೆಂಟ್ ಜಾರಿಯಾಗಿದೆ. ಇದನ್ನು ಉಲ್ಲೇಖ ಮಾಡಿಯೇ ಎಸ್‌ಐಟಿ ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ಬರೆದಿದೆ. ತಕ್ಷಣ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಬೇಕು ಎಂದು ಮನವಿ ಮಾಡಿದೆ.
ರಾಜತಾಂತ್ರಿಕ ಪಾಸ್‌ಪೋರ್ಟ್ ಅಥವಾ ಟೈಪ್ 'ಡಿ' ಪಾಸ್‌ಪೋರ್ಟ್ ಅನ್ನು ದೇಶವನ್ನು ಪ್ರತಿನಿಧಿಸಲು ಕೇಂದ್ರದಿಂದ ಅಧಿಕಾರ ಪಡೆದ ಗೊತ್ತುಪಡಿಸಿದ ಸದಸ್ಯರಿಗೆ ನೀಡಲಾಗುತ್ತದೆ. ಇವರಲ್ಲಿ ಹಿರಿಯ ಸರ್ಕಾರಿ ಅಧಿಕಾರಿಗಳು, ಸಂಸತ್ ಸದಸ್ಯರು ಸೇರುತ್ತಾರೆ. ಈ ಪಾಸ್‌ಪೋರ್ಟ್‌ಗಳ ಮಾನ್ಯತೆ ಐದು ವರ್ಷಗಳ ಅಥವಾ ಅದಕ್ಕಿಂತ ಕಡಿಮೆ ಅವಧಿಯದ್ದಾಗಿರುತ್ತದೆ.
ಪಾಸ್‌ಪೋರ್ಟ್ ಹೊಂದಿರುವ ವ್ಯಕ್ತಿಯ ಸ್ಥಾನ ಮತ್ತು ಅವರ ನಿಯೋಜನೆ ಮತ್ತು ಭೇಟಿಯ ಸ್ವರೂಪವನ್ನು ಅವಲಂಬಿಸಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ಗಳನ್ನು ದೇಶಾದ್ಯಂತ ಪಾಸ್‌ಪೋರ್ಟ್ ಕಛೇರಿಗಳ ಜಾಲದ ಮೂಲಕ ವಿತರಣೆ ಮಾಡಲಾಗುತ್ತದೆ. ಆದರೆ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್ ಮತ್ತು ವೀಸಾ ವಿಭಾಗವು ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳ ವಿತರಣೆಯನ್ನು ನೋಡಿಕೊಳ್ಳುತ್ತದೆ.
-
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್












Click it and Unblock the Notifications