ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

17 ಅನರ್ಹ ಶಾಸಕರಲ್ಲಿ ಉಪ ಚುನಾವಣೆ ಗೆದ್ದವರು, ಸೋತವರು

|
Google Oneindia Kannada News

ಬೆಂಗಳೂರು, ಡಿಸೆಂಬರ್ 9 : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಿದ್ದ ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿದ್ದರು. 17 ಶಾಸಕರು ಅನರ್ಹಗೊಂಡಿದ್ದು 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದೆ, ಫಲಿತಾಂಶವೂ ಪ್ರಕಟವಾಗಿದೆ.

ಸೋಮವಾರ 15 ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ 12 ಸ್ಥಾನಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್ 2 ಸ್ಥಾನದಲ್ಲಿ ಗೆದ್ದಿದ್ದು, ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಹೊಸಕೋಟೆ ಕ್ಷೇತ್ರದಲ್ಲಿ 81671 ಮತಗಳನ್ನು ಪಡೆದು ಜಯಭೇರಿ ಬಾರಿಸಿದರು.

ಉಪ ಚುನಾವಣೆ; ಜೆಡಿಎಸ್ ಸೋಲಿಗೆ ಕಾರಣಗಳೇನು? ಉಪ ಚುನಾವಣೆ; ಜೆಡಿಎಸ್ ಸೋಲಿಗೆ ಕಾರಣಗಳೇನು?

17 ಅನರ್ಹ ಶಾಸಕರ ಪೈಕಿ ರಾಜರಾಜೇಶ್ವರಿ ನಗರ ಮತ್ತು ಮುಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿಲ್ಲ. ಉಳಿದಂತೆ 15 ಕ್ಷೇತ್ರಗಳಲ್ಲಿ ಉಪ ಚುನಾವಣಾ ಕಣಕ್ಕಿಳಿದಿದ್ದ ಇಬ್ಬರು ಅನರ್ಹ ಶಾಸಕರು ಸೋಲು ಕಂಡಿದ್ದಾರೆ.

ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಯಾರು, ಏನು ಹೇಳಿದರು? ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಯಾರು, ಏನು ಹೇಳಿದರು?

2018ರಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಶಾಸಕರು ಈ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟವನ್ನು ಯಾರು ಸೇರಲಿದ್ದಾರೆ?, ಯಾವ ಶಾಸಕರಿಗೆ ಯಾವ ಖಾತೆ ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಉಪ ಚುನಾವಣೆ ಫಲಿತಾಂಶ; ಪ್ರಧಾನಿ ಮೋದಿ ಏನಂದ್ರು?ಉಪ ಚುನಾವಣೆ ಫಲಿತಾಂಶ; ಪ್ರಧಾನಿ ಮೋದಿ ಏನಂದ್ರು?

ರಮೇಶ್ ಜಾರಕಿಹೊಳಿಗೆ ಜಯ

ರಮೇಶ್ ಜಾರಕಿಹೊಳಿಗೆ ಜಯ

ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ 87,450 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 2018ರಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅನರ್ಹಗೊಂಡಿದ್ದರು. ಸುಪ್ರೀಂಕೋರ್ಟ್‌ ಉಪ ಚುನಾವಣಾ ಕಣಕ್ಕಿಳಿಯಲು ಅವರಿಗೆ ಅವಕಾಶ ನೀಡಿತ್ತು.

ಮಹೇಶ್ ಕುಮಟಳ್ಳಿ ಜಯ

ಮಹೇಶ್ ಕುಮಟಳ್ಳಿ ಜಯ

ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ 99,203 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 2018ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದರು.

ಶ್ರೀಮಂತ ಪಾಟೀಲ್ ಗೆಲುವು

ಶ್ರೀಮಂತ ಪಾಟೀಲ್ ಗೆಲುವು

ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್ 76952 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. 2018ರಲ್ಲಿಯೂ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಗೆಲುವು ಕಂಡಿದ್ದರು.

ಎಂಟಿಬಿ ನಾಗರಾಜ್ ಸೋಲು

ಎಂಟಿಬಿ ನಾಗರಾಜ್ ಸೋಲು

ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ 70185 ಮತಗಳನ್ನು ಪಡೆದು ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಎದುರು ಸೋಲು ಕಂಡಿದ್ದಾರೆ. 2018ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಎಂಟಿಬಿ ನಾಗರಾಜ್ ಶಾಸಕ ಸ್ಥಾನದಿಂದ ಅನರ್ಹಗೊಂಡ ಬಳಿಕ ಬಿಜೆಪಿಯಿಂದ ಕಣಕ್ಕಿಳಿದಿದ್ದರು.

ಶಿವರಾಮ್ ಹೆಬ್ಬಾರ್ ಗೆಲುವು

ಶಿವರಾಮ್ ಹೆಬ್ಬಾರ್ ಗೆಲುವು

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ 80442 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದರು.

ಗೆದ್ದು ಬೀಗಿದ ಕೌರವ ಬಿ. ಸಿ. ಪಾಟೀಲ್

ಗೆದ್ದು ಬೀಗಿದ ಕೌರವ ಬಿ. ಸಿ. ಪಾಟೀಲ್

ಹಾವೇರಿ ಜಿಲ್ಲೆಯ ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ. ಸಿ. ಪಾಟೀಲ್ 85,562 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದರು.

ಆನಂದ್ ಸಿಂಗ್ ಮತ್ತೆ ಗೆಲುವು

ಆನಂದ್ ಸಿಂಗ್ ಮತ್ತೆ ಗೆಲುವು

ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ 85,477 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 2018 ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಗೆದ್ದಿದ್ದ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದರು.

ಡಾ. ಕೆ. ಸುಧಾಕರ್ ಗೆಲುವು

ಡಾ. ಕೆ. ಸುಧಾಕರ್ ಗೆಲುವು

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ 84,389 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದರು.

ಎಚ್. ವಿಶ್ವನಾಥ್ ಸೋಲು

ಎಚ್. ವಿಶ್ವನಾಥ್ ಸೋಲು

ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ 52,998 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಚ್. ಪಿ. ಮಂಜುನಾಥ್ 92,725 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. 2018ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆದ್ದಿದ್ದ ವಿಶ್ವನಾಥ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದರು.

ಬೈರತಿ ಬಸವರಾಜ ಗೆಲುವು

ಬೈರತಿ ಬಸವರಾಜ ಗೆಲುವು

ಬೆಂಗಳೂರಿನ ಕೆ. ಆರ್. ಪುರ ಕ್ಷೇತ್ರದಲ್ಲಿ ಬಿಜೆಪಿ ಬೈರತಿ ಬಸವರಾಜ 1,31,319 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 2018ರಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದರು.

ಎಸ್. ಟಿ. ಸೋಮಶೇಖರ್ ಗೆಲುವು

ಎಸ್. ಟಿ. ಸೋಮಶೇಖರ್ ಗೆಲುವು

ಬೆಂಗಳೂರು ನಗರದ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿಯ ಎಸ್. ಟಿ. ಸೋಮಶೇಖರ್ 1,44,722 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 2018ರಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದರು.

ಕೆ. ಗೋಪಾಲಯ್ಯ ಗೆಲುವು

ಕೆ. ಗೋಪಾಲಯ್ಯ ಗೆಲುವು

ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ 85,889 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 2018ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆದ್ದಿದ್ದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದರು.

English summary
11 Disqualified MLA's won the by elections of Karnataka. Disqualified MLA H. Vishwanath and MTB Nagaraj lost the election. 15 seat by elections result announced on December 9
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X