ಹುಷಾರ್..ಪಟಾಕಿ ಸಿಡಿಸುವ ಮುನ್ನ ಮುಂಜಾಗ್ರತೆ ವಹಿಸಿ!

ಬೆಳಕಿನ ಹಬ್ಬ ದೀಪಾವಳಿಯಂದು ಹಣತೆ ಬೆಳಗುವುದು ಮಾತ್ರವಲ್ಲದೆ ಪಟಾಕಿಯನ್ನು ಸಿಡಿಸಿ ಹಬ್ಬಾಚರಣೆ ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ದೀಪಾವಳಿ ಹಬ್ಬದ ಸಂದರ್ಭ ಪಟಾಕಿ ಸಿಡಿಸುವ ಮುನ್ನ ಒಂದಷ್ಟು ಮುನ್ನೆಚ್ಚರಿಕೆ ವಹಿಸದೆ ಇರುವುದರಿಂದ ಹಲವು ರೀತಿಯ ಅನಾಹುತಗಳು ಸೃಷ್ಟಿಯಾಗುತ್ತಿವೆ. ಇತ್ತೀಚೆಗಿನ ದಿನಗಳಲ್ಲಿ ರಾಸಾಯನಿಕ ಮುಕ್ತ ಮತ್ತು ಹಸಿರು ಪಟಾಕಿ ಕಡೆಗೆ ಸರ್ಕಾರಗಳು ಗಮನಹರಿಸುತ್ತಿವೆ. ಆರೋಗ್ಯಕ್ಕೆ ಮಾರಕ ಮತ್ತು ಪ್ರಾಣಕ್ಕೆ ಸಂಚಕಾರ ತರುವಂತಹ ಬಹುತೇಕ ಪಟಾಕಿಗಳನ್ನು ನಿಷೇಧಿಸಲಾಗಿದೆ.

ಹಿಂದಿನಿಂದಲೂ ದೀಪಾವಳಿ ಎಂದರೆ ಪಟಾಕಿ ಎಂಬಂತೆ ನಮ್ಮೊಂದಿಗೆ ಮಿಳಿತಗೊಂಡಿದೆ. ಹೀಗಾಗಿ ಪಟಾಕಿ ಹಚ್ಚಲೇ ಬೇಡಿ ಎಂದ ತಕ್ಷಣ ಅದು ಸಾಧ್ಯವಾಗುವುದಿಲ್ಲ. ಜತೆಗೆ ನಿರ್ಬಂಧ ಹೇರುವುದು ಕೂಡ ಜನರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಇದರ ಬಗ್ಗೆ ಪರ ವಿರೋಧಗಳು ಹಿಂದಿನಿಂದಲೂ ನಡೆದುಕೊಂಡು ಬಂದಿದ್ದು, ಸುಪ್ರೀಂಕೋರ್ಟ್ ಒಂದಷ್ಟು ಸಲಹೆ ಮತ್ತು ಸೂಚನೆಗಳನ್ನು ನೀಡಿದೆ. ಅದರಂತೆ ನಡೆದುಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

Diwali 2024 Be Careful Before Bursting Firecrackers During Deepavali Celebration

ಈಗಾಗಲೇ ಪಟಾಕಿ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜತೆಗೆ ಪಟಾಕಿ ಬೆಲೆ ಗಗನಕ್ಕೇರಿದ ಪರಿಣಾಮ ಕೊಂಡುಕೊಳ್ಳಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಮೊದಲಿನಂತೆ ಪಟಾಕಿ ಅಂಗಡಿಗಳು ಎಲ್ಲೆಂದರಲ್ಲಿ ಕಂಡು ಬರುತ್ತಿಲ್ಲ. ಇದೆಲ್ಲದರ ನಡುವೆ ಒಂದಷ್ಟು ಜನ ಪಟಾಕಿ ಹಚ್ಚೇ ಹಚ್ಚುತ್ತಾರೆ. ಅಂತಹವರಿಗೆ ಒಂದಷ್ಟು ಸಲಹೆಗಳಿದ್ದು ಅದನ್ನು ಪಾಲನೆ ಮಾಡಿದರೆ ಆಗುವ ಅನಾಹುತಗಳನ್ನು ತಡೆಯಲು ಸಾಧ್ಯವಾಗಲಿದೆ.

ಬದುಕನ್ನು ಕತ್ತಲೆಗೆ ತಳ್ಳಿಕೊಳ್ಳಬೇಡಿ

ಪರಿಸರ ಸ್ನೇಹಿ ಪಟಾಕಿಗೆ ಒತ್ತು ನೀಡಿದರೆ ಉತ್ತಮ. ಹಬ್ಬದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿಯನ್ನು ಬೆಂಕಿಯಲ್ಲಿ ಸುಡುವುದನ್ನು ತಡೆಯಬೇಕಾಗಿದೆ. ಪಟಾಕಿ ಸಿಡಿಸುವುದರಿಂದ ಹಣ ವ್ಯಯ, ಪರಿಸರ ಮಾಲಿನ್ಯ ಜತೆಗೆ ಎಚ್ಚರ ತಪ್ಪಿದರೆ ದೇಹಕ್ಕೆ, ಜೀವಕ್ಕೆ ಕುತ್ತು ಬರುವುದಂತು ಖಚಿತ. ಆದುದರಿಂದ ಪಟಾಕಿ ಸಿಡಿಸುವುದರಿಂದ ಆಗುವ ಅನಾನುಕೂಲ ಮತ್ತು ದುರಂತದ ಬಗ್ಗೆ ಅರಿತುಕೊಳ್ಳುವುದು ಒಳ್ಳೆಯದು. ಹಬ್ಬದ ಸಂಭ್ರಮದಲ್ಲಿ ಪಟಾಕಿ ಹಚ್ಚುವಾಗ ಎಚ್ಚರ ತಪ್ಪಿ ತಮ್ಮ ಬದುಕನ್ನು ಕತ್ತಲೆಗೆ ತಳ್ಳಿಕೊಳ್ಳುವ ಮುನ್ನ ಎಚ್ಚರವಾಗಿರುವುದು ಅಗತ್ಯ.

Diwali 2024 Be Careful Before Bursting Firecrackers During Deepavali Celebration

ಪಟಾಕಿಗಳನ್ನು ಗುಣಮಟ್ಟದ ಹಾಗೂ ಪರವಾನಗಿ ಹೊಂದಿದವರಿಂದಲೇ ಖರೀದಿಸಬೇಕಾಗುತ್ತದೆ. ಪಟಾಕಿ ಸಿಡಿಸಲು ಹೊರಡುವವರು ಹತ್ತಿ ಬಟ್ಟೆಯನ್ನು ಧರಿಸಿಕೊಂಡರೆ ಸಹಕಾರಿ. ಜೊತೆಗೆ ಹಬ್ಬದ ಜೋಶ್ ನಲ್ಲಿ ಪಟಾಕಿಯನ್ನು ಕೈಯ್ಯಲ್ಲಿಡಿದು ಬೆಂಕಿ ಹಚ್ಚುವ, ಬೇರೆಯವರ ಮೇಲೆ ಎಸೆಯುವ ಪ್ರಯತ್ನ ಮಾಡಬೇಡಿ.

ಪಟಾಕಿ ಸಿಡಿಯಲಿಲ್ಲವೆಂದು ಅದನ್ನು ಕೈಯ್ಯಲ್ಲಿಡಿದು ಮೇಲಿನ ಪೇಪರ್ ಸುಲಿದು ಬೆಂಕಿ ಹಚ್ಚುವ ಯತ್ನ ಮಾಡಬೇಡಿ. ಕೆಲವೊಮ್ಮೆ ತಡವಾಗಿ ಸಿಡಿಯುವ ಸಾಧ್ಯತೆಯೂ ಇರುತ್ತದೆ. ಪಟಾಕಿ ಸಿಡಿಸುವಾಗ ಕಿವಿಗೆ ಹತ್ತಿ ಹಾಗೂ ಮೂಗಿಗೆ ಮಾಸ್ಕ್ ಹಾಕಿಕೊಳ್ಳಿ. ಭಾರೀ ಸದ್ದು ಮಾಡುವ ಪಟಾಕಿಗಳಿಂದ ದೂರ ಸರಿಯಿರಿ ಇಲ್ಲಾಂದ್ರೆ ಕಿವಿಯ ತಮಟೆಗೆ ಹಾನಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇದೆಲ್ಲದರ ನಡುವೆ ಪಟಾಕಿ ಸಿಡಿಸುವಾಗ ಕಣ್ಣಿಗೆ ಕನ್ನಡಕ ಧರಿಸಿಕೊಳ್ಳುವ ಮೂಲಕ ರಕ್ಷಣೆ ಮಾಡಿಕೊಳ್ಳಿ.

ಮಕ್ಕಳ ಬಗ್ಗೆ ಪೋಷಕರು ನಿಗಾ ವಹಿಸಿ

ಮನೆಯ ಹಿರಿಯರು ಮಕ್ಕಳನ್ನು ಅವರಿಷ್ಟದಂತೆ ಪಟಾಕಿ ಸಿಡಿಸಲು ಬಿಡಬೇಡಿ. ನೀವು ಕೂಡ ಜೊತೆಗಿದ್ದು ಅವರ ಬಗ್ಗೆ ನಿಗಾ ವಹಿಸಿ. ಜೊತೆಗೆ ಸಲಹೆ ನೀಡಿ. ಮಕ್ಕಳ ವಯಸ್ಸಿಗೆ ತಕ್ಕದಾದ ಪಟಾಕಿಗಳನ್ನೇ ಖರೀದಿಸಿ ತನ್ನಿ. ಭಾರೀ ಶಬ್ದ ಬರುವ ಪಟಾಕಿಗಳನ್ನು ನೀಡಬೇಡಿ. ಹೂಕುಂಡ(ಫ್ಲವರ್ ಪಾಟ್)ಗಳಿಗೆ ಬೆಂಕಿ ಹಚ್ಚುವಾಗ ಅಂತರ ಕಾಪಾಡಿ. ಕೈಯ್ಯಿಂದ ಹಚ್ಚುವುದು ಒಳ್ಳೆಯದಲ್ಲ. ಹೂಕುಂಡಗಳು ಸಿಡಿದು ಕೈ, ಕಣ್ಣು ಕಳೆದುಕೊಂಡಿರುವ ಉದಾಹರಣೆಗಳು ಬಹಳಷ್ಟಿವೆ.

ಇನ್ನು ಎಲ್ಲೋ ಗಮನಹರಿಸುತ್ತಾ ಪಟಾಕಿಗೆ ಬೆಂಕಿ ಹಚ್ಚುವುದು ಅಪಾಯಕಾರಿ. ಫೋನ್ನಲ್ಲಿ ಮಾತನಾಡುತ್ತಲೋ, ಮತ್ತೇನೋ ಮಾಡುತ್ತಾ ಬೆಂಕಿ ಹಚ್ಚುವವರು ಇದ್ದಾರೆ. ಅಂತಹವರು ದಯವಿಟ್ಟು ಪಟಾಕಿಯತ್ತ ಗಮನವಿಟ್ಟು ಬೆಂಕಿ ಹಚ್ಚಿ. ರಾಕೆಟ್ ಬಿಡುವಾಗ ಬಾಟಲಿಯನ್ನು ಉಪಯೋಗಿಸಿ. ಅಷ್ಟೇ ಅಲ್ಲ ಆಕಾಶದ ಕಡೆಗೆ ಚಿಮ್ಮುವಂತೆ ನೋಡಿಕೊಳ್ಳಿ. ಇಲ್ಲದಿದ್ದರೆ ಕೆಲವೊಮ್ಮೆ ತಮ್ಮತ್ತಲೋ, ಪಕ್ಕದ ಮನೆಗೋ ನುಗ್ಗುವ ಸಾಧ್ಯತೆಯಿರುತ್ತದೆ. ಇನ್ನು ಪ್ರಾಣಿಗಳ ಬಾಲಕ್ಕೆ ಪಟಾಕಿ ಕಟ್ಟಿ ಬೆಂಕಿ ಹಚ್ಚುವ ವಿಕೃತ ಕೆಲಸವನ್ನು ದಯವಿಟ್ಟು ಮಾಡಬೇಡಿ. ಪಟಾಕಿಯ ಹೊಗೆಯಲ್ಲಿ ಹೆಚ್ಚು ಹೊತ್ತು ಇರಬೇಡಿ. ಪಟಾಕಿ ಹಚ್ಚಿದ ಕೈಯ್ಯನ್ನು ಚೆನ್ನಾಗಿ ತೊಳೆದು ಆಹಾರ ಸೇವಿಸುವುದನ್ನು ಮರೆಯಬೇಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+