ದೀಪಾವಳಿ ಹಬ್ಬ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿ ನಾಡಿನ ಗಣ್ಯರಿಂದ ಶುಭ ಸಂದೇಶ Deepavali 2025
Deepavali 2025: ದೀಪಾವಳಿ ಬೆಳಕಿನ ಹಬ್ಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಹಲವು ಗಣ್ಯರು ಶುಭಕೋರಿದ್ದಾರೆ. ದೀಪಾವಳಿ ಬೆಳಕಿನ ಹಬ್ಬದ ಸಂಭ್ರಮವನ್ನು ಗಣ್ಯರು ಇನ್ನಷ್ಟು ಹೆಚ್ಚಿಸಿದ್ದಾರೆ. ರಾಜಕಾರಣಿಗಳು ಮಾತ್ರವಲ್ಲದೇ ಹಲವು ಕ್ಷೇತ್ರಗಳ ಗಣ್ಯರು ದೀಪಾವಳಿ ಹಬ್ಬಕ್ಕೆ ಶುಭಕೋರಿದ್ದಾರೆ.
ನಾಡಬಂಧುಗಳಿಗೆ ದೀಪಾವಳಿ ಹಬ್ಬದ ಶುಭಾಶಯಗಳು. ಕತ್ತಲಿನಿಂದ ಬೆಳಕಿನ ಹಾದಿ ತೋರುವ ಈ ಹಬ್ಬವು ಸಮಾಜವನ್ನು ಬಾಧಿಸುತ್ತಿರುವ ದ್ವೇಷ, ಹಿಂಸೆ, ಅಸತ್ಯ, ಅಶಾಂತಿ, ಬಡತನ, ಅಜ್ಞಾನಗಳ ಅಂಧಕಾರವನ್ನು ಸರಿಸಿ, ಸ್ನೇಹ, ಸಹಬಾಳ್ವೆ, ಸತ್ಯ, ನೆಮ್ಮದಿ, ಸುಜ್ಞಾನದ ಬೆಳಕನ್ನು ಎಲ್ಲೆಡೆ ಬೆಳಗಿಸಲಿ ಎಂದು ಹಾರೈಸುತ್ತೇನೆ.

ಹಬ್ಬದ ಸಂಭ್ರಮದ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರಿ. ಹಸಿರು ಪಟಾಕಿಗಳನ್ನೇ ಬಳಸಿ, ಎಳೆಯ ಮಕ್ಕಳು ಪಟಾಕಿ ಸಿಡಿಸುವಾಗ ಹಿರಿಯರು ಅವರ ಬಗ್ಗೆ ಜಾಗೃತೆ ವಹಿಸಿ.
ದೀಪಾವಳಿಯನ್ನು ಸಂಭ್ರಮದಿಂದಲೂ, ಸುರಕ್ಷಿತವಾಗಿಯೂ ಆಚರಿಸಿ ಎಂದು ವಿನಂತಿಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ದೀಪಾವಳಿಯ ಶುಭಾಶಯಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಕೋರಿದ್ದಾರೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು, ದೀಪಾವಳಿ ಹಬ್ಬದ ಶುಭಾಶಯಗಳು. ಈ ಬೆಳಕಿನ ಹಬ್ಬವು ನಮ್ಮೆಲ್ಲರ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಿಸಲಿ. ಎಲ್ಲರಲ್ಲೂ ಸಕಾರಾತ್ಮಕತೆಯ ಮನೋಭಾವ ನೆಲೆಸಲಿ ಎಂದು ಶುಭಕೋರಿದ್ದಾರೆ. ನಟ ರಕ್ಷಿತ್ ಶೆಟ್ಟಿ ಅವರು, ಎಲ್ಲರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ♥️ ಎಂದಿದ್ದಾರೆ.
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು, ಎಲ್ಲರಿಗೂ ನರಕ ಚತುರ್ದಶಿಯ ಹಾರ್ದಿಕ ಶುಭಾಶಯಗಳು. ಕೆಡುಕನ್ನು ತೊಲಗಿಸುವ, ಒಳಿತನ್ನು ಬರಮಾಡಿಕೊಳ್ಳುವ ಹಾಗೂ ದುಷ್ಟ ಶಿಕ್ಷಣ, ಶಿಷ್ಟ ರಕ್ಷಣೆಯ ಸಂಕೇತವಾಗಿರುವ ನರಕ ಚತುರ್ದಶಿ ಹಬ್ಬವು ಪ್ರತಿಯೊಬ್ಬರಿಗೂ ಶುಭವನ್ನೇ ಉಂಟು ಮಾಡಲಿ. ಎಲ್ಲರ ಮನೆ ಮನಗಳಲ್ಲಿ ಬೆಳಕು ತುಂಬಿರಲಿ ಎಂದು ಹಾರೈಸುತ್ತೇನೆ ಎಂದು ಶುಭ ಸಂದೇಶ ಹಂಚಿಕೊಂಡಿದ್ದಾರೆ.
ಡಿ.ಕೆ ಶಿವಕುಮಾರ್ ಅವರು, ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬೆಳಕಿನ ಹಬ್ಬ ದೀಪಾವಳಿಯು ಪ್ರತಿಯೊಬ್ಬರ ಬದುಕಿನ ಸಂಕಷ್ಟಗಳನ್ನು ಕಳೆದು, ಪ್ರಗತಿಯ ಬೆಳಕು ಬದುಕಿನಲ್ಲಿ ಪಸರಿಸಲಿ. ದೀಪಗಳ ಹಬ್ಬವು ತಮ್ಮೆಲ್ಲರ ಜೀವನದಲ್ಲಿ ಯಶಸ್ಸು, ಸಮೃದ್ಧಿ, ಐಶ್ವರ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ತಮಸೋಮಾ ಜ್ಯೋತಿರ್ಗಮಯ! ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ಈ ಪವಿತ್ರ ದೀಪಾವಳಿ ಹಬ್ಬವು, ನಿಮ್ಮ ಬದುಕಿನಲ್ಲಿ ಅನಂತ ಜ್ಞಾನ ಮತ್ತು ಸಂತಸವನ್ನು ತುಂಬಲಿ. ಸಕಲ ಸಂಪತ್ತು, ಸುಖ ಹಾಗೂ ಉತ್ತಮ ಆರೋಗ್ಯ ನಿಮ್ಮದಾಗಲಿ. ಸತ್ಯದ ಹಾದಿಯಲ್ಲಿ ನಿಮ್ಮ ಪ್ರತಿ ಹೆಜ್ಜೆಯೂ ಯಶಸ್ವಿಯಾಗಿ ಸಾಗಲಿ. ನಿಮಗೂ ಮತ್ತು ನಿಮ್ಮ ಕುಟುಂಬದವರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಶುಭಕೋರಿದ್ದಾರೆ.
ಇನ್ನು ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಕನ್ನಡದಲ್ಲೇ ದೀಪಾವಳಿ ಹಬ್ಬಕ್ಕೆ ಕನ್ನಡಿಗರಿಗೆ ಶುಭಕೋರಿದ್ದಾರೆ. ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು 🪔 ಸಂದೇಶವನ್ನು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ.
ಎಲ್ಲರಿಗೂ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು 🎇🪔🏵️🧨🎆 ಎಂದು ಶುಭಕೋರಿದ್ದಾರೆ.
ಆರ್‌ಸಿಬಿ ತಂಡವು, ಬೆಳಕಿನ ಹಬ್ಬದ ಬೆಳಕು ನಿಮ್ಮ ಜೀವನದಲ್ಲಿ ಸಂತೋಷ, ನೆಮ್ಮದಿ ತರಲಿ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು! 🎆😊 ಎಂದು ಶುಭಕೋರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬೆಳಕಿನ ಹಬ್ಬವಾದ ಸಂಭ್ರಮದ ದೀಪಾವಳಿಯು ರಾಜ್ಯದ ಪ್ರತಿ ಕುಟುಂಬಗಳನ್ನು ಜ್ಞಾನ, ಸತ್ ಚಿಂತನೆಗಳಿಂದ ಬೆಳಗಿಸಲಿ. ಬದುಕಿನ ಎಲ್ಲಾ ಸಂಕಷ್ಟ, ಅಂಧಕಾರ ನಿವಾರಣೆಯಾಗಿ ಎಲ್ಲೆಡೆ ಸಂತಸ, ಸಂಭ್ರಮ ನೆಲೆಗೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಶುಭ ಸಂದೇಶ ಹಂಚಿಕೊಂಡಿದ್ದಾರೆ.
ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು, ದಯವಿಟ್ಟು ದಿವಾಳಿ ಅಂದ್ರೆ ಹಿಂದಿಯವರು ಹೇಳೋದು ಕನ್ನಡಿಗರಿಗೆ ಅದು ದೀಪಾವಳಿ.. ದಿವಾಳಿ ಅಂದ್ರೆ ನಮ್ಮ ಭಾಷೆಯಲ್ಲಿ ಹಾಳಾಗೋದು ಎಕ್ಕುಟ್ಟಿ ಹೋಗೋದು ಅಂತ. ದಯವಿಟ್ಟು ಅದನ್ನ ದೀಪಾವಳಿ ಮಾಡಿ. ನಮ್ಮದು ಕನ್ನಡದ ಹಬ್ಬವಾಗಿರಲಿ ಎನ್ನುವ ಸಂದೇಶವನ್ನು ಹಂಚಿಕೊಂಡಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications